SSB Recruitment 2026: ಸಶಸ್ತ್ರ ಸೀಮಾ ಬಲದಲ್ಲಿ 404 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; ಕ್ರೀಡಾಪಟುಗಳಿಗೆ ಸುವರ್ಣಾವಕಾಶ!
ಪೊಲೀಸ್ ಮತ್ತು ರಕ್ಷಣಾ ಇಲಾಖೆಯ ಉದ್ಯೋಗಗಳಿಗಾಗಿ ಕಾಯುತ್ತಿರುವ ದೇಶದ ಯುವಕ-ಯುವತಿಯರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಶಸ್ತ್ರ ಸೀಮಾ ಬಲ್ (SSB), ಕ್ರೀಡಾ ಕೋಟಾದಡಿಯಲ್ಲಿ (Sports Quota) ಹೆಚ್ಚಿನ ಸಂಖ್ಯೆಯ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 404 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ ಅರ್ಹ ಕ್ರೀಡಾಪಟುಗಳು ಈ ಉತ್ತಮ ಅವಕಾಶವನ್ನು…