Headlines

nagaraj11081993

ಬೆಂಗಳೂರು: ಹಣದ ಮಳೆ ಸುರಿಸ್ತೀವಿ ಅಂದೋರು ಮಾಡಿದ್ರು ಚೀಟಿಂಗ್; ಲಕ್ಷ ಲಕ್ಷ ಪಂಗನಾಮ

ಬೆಂಗಳೂರು, ಮಾರ್ಚ್​ 24: ಹಣ ಅಂದರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೋ ಮಾತು ನೂರಕ್ಕೆ ನೂರರಷ್ಟು ಸತ್ಯ. ರೊಕ್ಕದ ಲಾಭ ಆಗುತ್ತೆ ಅಂದರೆ ಕೆಲ ಜನ ಏನು ಬೇಕಾದರು ಮಾಡುತ್ತಾರೆ. ಕೆಲವರು ಮೂರ್ಖರು ಕೂಡ ಆಗುತ್ತಾರೆ. ಈಗಿನ ಕಾಲದಲ್ಲಿ ಲಕ್ಷಕ್ಕೆ ಮೂರು ಲಕ್ಷ ರೂ ಕೊಡ್ತೀವಿ ಅಂದರೆ ಯಾರು ನಂಬ್ತಾರೆ ಹೇಳಿ. ಹೀಗೆ ಡಬಲ್, ತ್ರಿಬಲ್ ಹಣ (money doubling) ಸಿಗುತ್ತೆ ಅಂತಾ ಆಸೆ ಬಿದ್ದವರು ಲಕ್ಷ ಲಕ್ಷ ಕಳ್ಕೊಂಡಿದ್ದಾರೆ. ಮೂವರ ಬಂಧನ ಜಗತ್ತಿನಲ್ಲಿ ಮೋಸ…

Read More

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್; ಇರಾನ್ ಮೇಲಿನ ಯುದ್ಧ, ಹಾರ್ಮುಜ್ ಜಲಸಂಧಿಯ ಬಗ್ಗೆ ಚರ್ಚೆ

ನವದೆಹಲಿ, ಮಾರ್ಚ್ 24: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ವಿಧಿಸಿರುವ ನಿರ್ಬಂಧಗಳ ನಡುವೆಯೂ ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿಡುವ ಮಹತ್ವದ ಕುರಿತು ಚರ್ಚಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಕರೆ ಮಾಡಿದ್ದರು. ಈ ದೂರವಾಣಿ ಕರೆಯ ಸಮಯದಲ್ಲಿ ಈ ಪ್ರದೇಶದಲ್ಲಿ ಶಾಂತಿ ಮರುಸ್ಥಾಪನೆ ಮತ್ತು ಹಾರ್ಮುಜ್ ಜಲಸಂಧಿಯನ್ನು ತೈಲ ಮತ್ತು ಇಂಧನ ವ್ಯಾಪಾರಕ್ಕೆ ಮುಕ್ತವಾಗಿಸುವುದಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ…

Read More

‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ ನಾಯ್ಕ್

ಡಾರ್ಲಿಂಗ್ ಕೃಷ್ಣ ನಟನೆ, ನಿರ್ದೇಶನದ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಎದುರಾಗಿದೆ. ರಾಘವೇಂದ್ರ ನಾಯ್ಕ್ ಅವರು ಈ ಕಥೆ ತಮ್ಮದು ಎಂದು ಹೇಳಿದ್ದಾರೆ. ಈ ಕಥೆಯನ್ನು2023ರಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಲಾಗಿತ್ತು. ಆದರೆ ಡಾರ್ಲಿಂಗ್ ಕೃಷ್ಣ (Darling Krishna) ಅವರು ಆ ಕಥೆಯನ್ನು ಒಪ್ಪಿಕೊಂಡಿರಲಿಲ್ಲ. ಆದರೆ ಈಗ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ಅದೇ ಕಥೆ ಇರುವುದು ನೋಡಿ ರಾಘವೇಂದ್ರ ನಾಯ್ಕ್ ಅವರಿಗೆ ಶಾಕ್ ಆಗಿದೆ. ‘ಈ…

Read More

ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ತಯಾರಿಸಬಹುದು ಬಗೆ ಬಗೆಯ ತಿನಿಸು

ಈ ಸುಡು ಬೇಸಿಗೆಯಲ್ಲಿ ಆರೋಗ್ಯಕರವಾದದ್ದು ಏನಾದ್ರೂ ತಿನ್ಬೇಕು ಅಂದಾಗ ಪ್ರತಿಯೊಬ್ಬರು ಕೂಡ ಕಲ್ಲಂಗಡಿ ಹಣ್ಣನ್ನೇ (watermelon) ಆಯ್ಕೆ ಮಾಡೋದು. ಬೇಸಿಗೆಯಲ್ಲಿ ಹೇರಳವಾಗಿ ಸಿಗುವಂತಹ ಈ ಹಣ್ಣು ದೇಹವನ್ನು ತಂಪಾಗಿರಿಸುವುದಲ್ಲದೇ ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಹಾಗಾಗಿ ಹೆಚ್ಚಿನವರು ಈ ಬೇಸಿಗೆಯಲ್ಲಿ ಮಾರುಕಟ್ಟೆಯಿಂದ ನಿತ್ಯವೂ ಕಲ್ಲಂಗಡಿ ಹಣ್ಣನ್ನು ಖರೀದಿಸುತ್ತಾರೆ.  ಈ ಕಲ್ಲಂಗಡಿ ಹಣ್ಣನ್ನು ತಿಂದ ಬಳಿದ ಅದರ ಸಿಪ್ಪೆಯನ್ನು  ನಿಷ್ಪ್ರಯೋಜಕವೆಂದು ಬಹುತೇಕ ಎಲ್ಲರೂ ಸಹ ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ.  ನಾವು ವೇಸ್ಟ್‌ ಎಂದು ಎಸೆಯುವ ಬದಲು ಈ  ಕೆಲವು …

Read More

ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವು ಪ್ರಕರಣ: ಸ್ಫೋಟಕ ವಿಷ್ಯ ಹೇಳಿದ ಪಶುವೈದ್ಯಕೀಯ ಸಂಘದ ಸದಸ್ಯ

ಅನೇಕಲ್, ಮಾ.24: ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ಕರ್ನಾಟಕ ಪಶುವೈದ್ಯಕ ಸಂಘವು ಗಂಭೀರ ಆರೋಪಗಳನ್ನು ಮಾಡಿದೆ. ಸಂಘದ ಅಧ್ಯಕ್ಷ ಡಾ. ಶಿವಶರಣಪ್ಪ ಎಲ್ಗೊಡ್ ಮಾತನಾಡಿ, ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಡಿಸಿಎಫ್ ಅವರ ಸಂಪೂರ್ಣ ತಪ್ಪಿದೆ ಎಂದು ಹೇಳಿದ್ದಾರೆ. ಮಧ್ಯರಾತ್ರಿಯಲ್ಲಿ ಯಾವುದೇ ರಕ್ಷಣೆ ಇಲ್ಲದೆ ವನ್ಯಜೀವಿ ಚಿಕಿತ್ಸೆಗೆ ಕಳುಹಿಸಿದ್ದು ದೊಡ್ಡ ತಪ್ಪು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಡಿಸಿಎಫ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಸಂಘ ಆಗ್ರಹಿಸಿದೆ. ಅಲ್ಲದೆ, ಪಶುವೈದ್ಯರನ್ನು…

Read More

Karnataka Rain: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಅಲರ್ಟ್

ಬೆಂಗಳೂರು, ಮಾರ್ಚ್​​ 24: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಜೊತೆಗೆ ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಬೆಂಗಳೂರಿನಲ್ಲಿ ಭಾರೀ ಮಳೆಯ ನಿರೀಕ್ಷೆ ಇಲ್ಲದಿದ್ದರೂ, ಹೆಚ್ಚುತ್ತಿರುವ ಬಿಸಿಗಾಳಿಯಿಂದ ತಾತ್ಕಾಲಿಕ ಪರಿಹಾರ ಸಿಗಲಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಉಷ್ಣತೆ…

Read More

ದಾವಣಗೆರೆಯಲ್ಲಿ ಬಿಜೆಪಿಗೆ ಮುಸ್ಲಿಂ ಸಾಥ್! ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮಹಿಳೆಯರು

ದಾವಣಗೆರೆ, ಮಾ.24: ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಕುಟುಂಬದವರು ಪ್ರಚಾರ ನಡೆಸುತ್ತಿದ್ದಾರೆ. ಮತ ಯಾಚಿಸಲು ತೆರಳಿದಾಗ ಮುಸ್ಲಿಂ ಸಮುದಾಯದವರು ಅಭ್ಯರ್ಥಿ ಪತ್ನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ಉಡಿ ತುಂಬುವ ಮೂಲಕ ತಮ್ಮ ಬೆಂಬಲ ಸೂಚಿಸಿದರು. ಪ್ರಚಾರದ ವೇಳೆ ಮಾತನಾಡಿದ ಅಭ್ಯರ್ಥಿಯ ಪ್ರತಿನಿಧಿಗಳು, ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ನಿಮ್ಮ ಮನೆಯ ಮಗ ಎಂದು ಪರಿಚಯಿಸಿದರು. ನೀರಿನ ವ್ಯವಸ್ಥೆ, ಚರಂಡಿ, ಮನೆ ಇಲ್ಲದವರಿಗೆ ಸೂರಿನ ವ್ಯವಸ್ಥೆ ಮತ್ತು ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಕ್ಷೇತ್ರದ…

Read More

WITT Summit 2026: ಬಂಗಾಳದಲ್ಲಿ ಡಬಲ್ ಎಂಜಿನ್ ಸರ್ಕಾರ ರಚನೆ ಖಚಿತ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭವಿಷ್ಯ

ನವದೆಹಲಿ, ಮಾರ್ಚ್ 24: ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ (WITT Summit 2026)ಯಲ್ಲಿ ಮಾತನಾಡಿದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ, ಮುಂದಿನ ತಿಂಗಳು 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ಬಂಗಾಳದಲ್ಲಿ ಮತ್ತೆ ಟಿಎಂಸಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಅಲ್ಲಿನ ಜನರು ಬೇಸತ್ತಿದ್ದಾರೆ. ಕೊಲೆಗಳು ಬಹಿರಂಗವಾಗಿ ನಡೆಯುತ್ತಿವೆ. ಬಂಗಾಳವು ಪ್ರತಿಯೊಂದು ಕ್ಷೇತ್ರದಲ್ಲೂ ಹಿಂದುಳಿದಿದೆ. ಅಲ್ಲಿನ ಜನರು ಡಬಲ್ ಎಂಜಿನ್ ಸರ್ಕಾರವನ್ನು ಬಯಸುತ್ತಿದ್ದಾರೆ. ಅಲ್ಲಿ ಈ ಬಾರಿ…

Read More

ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳ ವರದಿ ನಾರ್ಮಲ್ ಇದ್ದರೂ ದಿನಪೂರ್ತಿ ದಣಿವೇ? ಈ 4 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಗಮನ

ತುಂಬಾ ಸುಸ್ತು (fatigue) ಎನ್ನುವುದು ಇತ್ತೀಚೆಗೆ ಸಾಮಾನ್ಯವಾಗಿ ಪ್ರತಿಯೊಬ್ಬರ ಬಾಯಲ್ಲೂ ಕೇಳಿಬರುವ ಮಾತು. ಬಹುತೇಕ ಜನರಿಗೆ ದಿನಪೂರ್ತಿ ದಣಿವು ಕಾಣಿಸಿಕೊಂಡರೆ, ಇನ್ನು ಕೆಲ ಮಂದಿಗೆ ಇದು ಅಲ್ಪಕಾಲಿಕವಾಗಿ ಅನುಭವಕ್ಕೆ ಬಂದಿರುತ್ತದೆ. ಹೀಗಾಗಿ ಕೆಲಸ ಮಾಡಲು ಮನಸ್ಸಾಗುವುದಿಲ್ಲ ಮತ್ತು ಸಣ್ಣ ಕೆಲಸಗಳೂ ಕಷ್ಟವಾಗುತ್ತವೆ ಎಂಬ ಕಾರಣಕ್ಕೆ ಜನರು ಬ್ಲಡ್ ಟೆಸ್ಟ್, ಥೈರಾಯ್ಡ್, ಶುಗರ್ ಹಾಗೂ ವಿಟಮಿನ್ B12 ಮತ್ತು D ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅವುಗಳ ವರದಿ ನಾರ್ಮಲ್ ಬಂದರೂ ದಣಿವು ಕಡಿಮೆಯಾಗುವುದಿಲ್ಲ. ಬಹುಪಾಲು ಜನರು ಇದನ್ನು ಸಾಮಾನ್ಯ…

Read More

ಚಾವುಂಡಿ ದೇವಾಲಯದಲ್ಲಿ ರಣವೀರ್ ಸಿಂಗ್ ಕ್ಷಮೆ ಕೇಳಬೇಕು: ದೂರುದಾರರ ಒತ್ತಾಯ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಈಗಾಗಲೇ ಕ್ಷಮೆ ಕೇಳಿದ್ದಾರೆ. ಆದರೂ ದೂರುದಾರರು ಕಾನೂನು ಹೋರಾಟ ಮುಂದುವರಿಸಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದು ಕೋರಿ ರಣವೀರ್ ಸಿಂಗ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ನಡೆಯುತ್ತಿದೆ. ‘ಚಾವುಂಡಿ ದೇವಾಲಯಕ್ಕೆ ರಣವೀರ್ ಸಿಂಗ್ (Ranveer Singh) ಭೇಟಿ ನೀಡಲೇಬೇಕು’ ಎಂದು ದೂರುದಾರರು…

Read More