ಕರ್ನಾಟಕ ಹವಾಮಾನ ವರದಿ: ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ವರುಣಾರ್ಭಟ ಸಾಧ್ಯತೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಮಾರ್ಚ್ 24: ನಿನ್ನೆ ಒಣಹವೆಯಿಂದ ಕೂಡಿದ್ದ ರಾಜ್ಯದ ಹವಾಮಾನ (Weather Forecast)ಇಂದು ಹಠಾತ್ತನೆ ಬದಲಾಗಿದೆ. ಕರಾವಳಿಯೂ ಸೇರಿದಂತೆ ರಾಜ್ಯದ ಹತ್ತಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಲ್ಲೆಲ್ಲಿ ಮಳೆಯಾಗುವ…