GT vs RR: ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಯಶಸ್ವಿ ಜೈಸ್ವಾಲ್ ಅವರ ಸಾಮರ್ಥ್ಯ ಇಡೀ ಜಗತ್ತಿಗೆ ತಿಳಿದಿದೆ. ಆದರೆ ಈ ಬಾರಿಯ ಐಪಿಎಲ್ನಲ್ಲಿ ಜೈಸ್ವಾಲ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಆದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಜೈಸ್ವಾಲ್ ಅವರಿಂದ ಒಂದೊಳ್ಳೆ ಇನ್ನಿಂಗ್ಸ್ನ ನಿರೀಕ್ಷೆ ಇತ್ತು. ಆದರೆ ಆ ಪಂದ್ಯದಲ್ಲೂ ನಿರಾಸೆ ಮೂಡಿಸಿದ ಜೈಸ್ವಾಲ್ ಕೇವಲ ಎರಡು ಎಸೆತಗಳನ್ನು ಎದುರಿಸಿ ಒಂದು ರನ್ ಗಳಿಸಿ ಔಟಾದರು. ಮೊಹಮ್ಮದ್ ಸಿರಾಜ್ ಎಸೆದ ಬೌನ್ಸರ್ ಎಸೆತವನ್ನು ಸಿಕ್ಸರ್ಗಟ್ಟುವ ಯತ್ನದಲ್ಲಿ ಜೈಸ್ವಾಲ್ ಕ್ಯಾಚ್ ನೀಡಿದರು. ಈ ಮೂಲಕ ಪ್ಲೇಆಫ್ನಲ್ಲಿ…