ಯಾವುದೇ ಕಟ್ ಇಲ್ಲದೇ ಯು/ಎ ಪ್ರಮಾಣಪತ್ರ ಪಡೆದ ಕ್ರೈಂ ಥ್ರಿಲ್ಲರ್ ಸಿನಿಮಾ ‘ಚಾರ್ಜ್‌ಶೀಟ್ 03-08’
ಕನ್ನಡದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ಸಿನಿಮಾ ‘ಚಾರ್ಜ್‌ಶೀಟ್ 03-08’ (Chargesheet 03-08) ಈಗ ಸೆನ್ಸಾರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸೆನ್ಸಾರ್ ಮಂಡಳಿಯಿಂದ ಯಾವುದೇ ವಿಡಿಯೋ ಕಟ್ ಇಲ್ಲದೆ U/A ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಚಿತ್ರದ ನಿರೂಪಣೆ ಹಾಗೂ ಕಥೆಯ ನಿರ್ವಹಣೆಯನ್ನು ನೋಡಿ ಸೆನ್ಸಾರ್ ಮಂಡಳಿ (CBFC) ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಚಿತ್ರತಂಡ ಹೇಳಿದೆ. ಯಾವುದೇ ಕಟ್ ಇಲ್ಲದೇ ಯು/ಎ ಪ್ರಮಾಣಪತ್ರ ಸಿಕ್ಕಿರುವುದರಿಂದ ಚಿತ್ರತಂಡಕ್ಕೆ ಸಂತಸ ಆಗಿದೆ. ‘ಎಂ.ಎಸ್ ಅರ್ಜುನ್ ಫಿಲ್ಮ್ಸ್’ ಬ್ಯಾನರ್ ಮೂಲಕ ನಿರ್ಮಾಣ ಆಗಿರುವ ಈ ಸಿನಿಮಾಗೆ ದಿನೇಶ್…