ಹಿಂದುಳಿದ ವರ್ಗದ ನಾಯಕತ್ವಕ್ಕೆ ಕೊಡಲಿ ಪೆಟ್ಟು: ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬೊಮ್ಮಾಯಿ
ಹಾವೇರಿ, (ಮೇ 29): ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದ ಅವರ ಆಪ್ತರಿಗೆ ಹಾಗು ಅಭಿಮಾನಿಗಳಿಗೆ ಬೇಸರ ತರಿಸಿದೆ. ಅದರಲ್ಲೂ ಮುಖ್ಯವಾಗಿ ಪಕ್ಷ ಬೇರೆ ಇದ್ದರೂ ಸಹ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿದ್ದರಾಮಯ್ಯನವರ ರಾಜೀನಾಮೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅವರ ಜೊತೆಗಿನ ರಾಜಕೀಯ ಹಳೇ ನೆನಪುಗಳನ್ನ ಮೆಲುಕು ಹಾಕಿದ್ದಾರೆ. ಅದರಂತೆ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ (Basavaraj bommai) ಸಹ ಸಿದ್ದರಾಮಯ್ಯ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ನಾಲ್ಕು…