ಇಂಧನ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ
ನವದೆಹಲಿ, ಮಾರ್ಚ್ 22: ಇರಾನ್ ಯುದ್ಧ ಮುಂದುವರಿಯುತ್ತಲೇ ಇರುವುದರಿಂದ ಜಾಗತಿಕ ತೈಲ ಬಿಕ್ಕಟ್ಟು (Oil crisis) ತೀವ್ರಗೊಳ್ಳುತ್ತಿದೆ. ಭಾರತದಲ್ಲಿ ಸರ್ಕಾರವು ಇಂಧನ ಪೂರೈಕೆಗೆ ಹರಸಾಹಸ ಮಾಡುತ್ತಿದೆ. ಈ ಮುಂದುವರಿದ ಸಂಕಷ್ಟ ಎದುರಿಸಲು ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿಗಳು ಉನ್ನತ ಮಟ್ಟದ ಸಭೆ ನಡೆಸಿದರು. ಪೆಟ್ರೋಲಿಯಂ, ಕಚ್ಚಾ ತೈಲ, ನೈಸರ್ಗಿಕ ಅನಿಲ್, ವಿದ್ಯುತ್, ರಸಗೊಬ್ಬರ ಸೆಕ್ಟರ್ಗಳಲ್ಲಿ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆ ಮಾಡಿದರು. ಅತಿರೇಕದ ಸ್ಥಿತಿ ಬಂದರೆ ದೇಶದಲ್ಲಿ ಈ ವಿವಿಧ ಇಂಧನ…