ಬರೋಬ್ಬರಿ 21 ಸಿಕ್ಸ್..! 69 ಎಸೆತಗಳಲ್ಲಿ 195 ರನ್ ಚಚ್ಚಿದ ಆರ್ಸಿಬಿ ಕೈಬಿಟ್ಟ ಸ್ವಸ್ತಿಕ್ ಚಿಕಾರ
ಕೆಲವೇ ತಿಂಗಳ ಹಿಂದೆ ನಡೆದಿದ್ದ ಐಪಿಎಲ್ ಮಿನಿ ಹರಾಜಿನಲ್ಲಿ ಯಾವ ತಂಡಕ್ಕೂ ಬೇಡವಾಗಿದ್ದ ಯುವ ಬ್ಯಾಟ್ಸ್‌ಮನ್ ಇದೀಗ ದೇಶಿ ಲೀಗ್ನಲ್ಲಿ ಸಿಡಿಲಬ್ಬರದ ಇನ್ನಿಂಗ್ಸ್ ಆಡುವ ಮೂಲಕ ತನ್ನನ್ನು ತಿರಸ್ಕರಿಸಿದ ಎಲ್ಲಾ ಫ್ರಾಂಚೈಸಿಗಳಿಗೆ ಸರಿಯಾದ ತಿರುಗೇಟು ನೀಡಿದ್ದಾನೆ. ಅದರಲ್ಲೂ ತಂಡಕ್ಕೆ ಸೇರಿಸಿಕೊಂಡು ಒಂದೇ ಒಂದು ಪಂದ್ಯದಲ್ಲಿ ಆಡಲು ಅವಕಾಶ ಕೊಡದ ಆರ್ಸಿಬಿ ತಂಡಕ್ಕೆ ತೀವ್ರ ಮುಖಭಂಗವಾದ್ದಂತ್ತಾಗಿದೆ. ಅಷ್ಟಕ್ಕೂ ನಾವು ಇಷ್ಟೆಲ್ಲ ಮಾತನಾಡುವ ಆಟಗಾರ ಯಾರೆಂದರೆ, ಉತ್ತರ ಪ್ರದೇಶ ಮೂಲದ ಸ್ವಸ್ತಿಕ್ ಚಿಕಾರ. ಯಾವ ಐಪಿಎಲ್ ತಂಡಕ್ಕೂ ಬೇಡವಾದ ಸ್ವಸ್ತಿಕ್…