All posts by nagaraj11081993

RR vs GT: ಕ್ವಾಲಿಫೈಯರ್ 2 ರದ್ದಾದರೆ ಯಾರಿಗೆ ಫೈನಲ್‌ ಟಿಕೆಟ್?

2026 ರ ಐಪಿಎಲ್ (IPL 2026) ಇದೀಗ ಅಂತಿಮ ಹಂತವನ್ನು ತಲುಪಿದೆ. ಈ ವರ್ಷದ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಯಾರು ಎದುರಿಸುತ್ತಾರೆ ಎಂಬುದು ಕ್ವಾಲಿಫೈಯರ್ 2 ಪಂದ್ಯ ಮುಗಿದ ಬಳಿಕ ಗೊತ್ತಾಗಲಿದೆ. ಅದರಂತೆ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇತ್ತ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಆದರೆ ಈ ಪಂದ್ಯ ಮಳೆಯಿಂದಾಗಿ ಅಥವಾ ಇನ್ನೀತರೆ ಕಾರಣಗಳಿಂದ ರದ್ದಾದರೆ, ಯಾವ ತಂಡ ಫೈನಲ್‌ ಟಿಕೆಟ್ ಸಿಗುತ್ತದೆ ಎಂಬುದು ಪ್ರಶ್ನೆಯಾಗಿದೆ.

ಪಂದ್ಯ ರದ್ದಾದರೆ, ಯಾರಿಗೆ ಫೈನಲ್‌ ಟಿಕೆಟ್?

ಐಪಿಎಲ್ ಫೈನಲ್ ಪಂದ್ಯವು ಮೇ 31 ರ ಭಾನುವಾರ ನಡೆಯಲಿದ್ದು, ಬೆಂಗಳೂರು ತಂಡವು ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು ನೋಡುತ್ತಿದೆ. ಗುಜರಾತ್ ಹಾಗೂ ರಾಜಸ್ಥಾನ ತಂಡಗಳು ಫೈನಲ್ ಟಿಕೆಟ್​ಗಾಗಿ ಮೇ 29 ರಂದು ಕ್ವಾಲಿಫೈಯರ್ 2 ರಲ್ಲಿ ಮುಖಾಮುಖಿಯಾಗಲಿವೆ. ಮಳೆ ಅಥವಾ ಯಾವುದೇ ಇತರ ಕಾರಣದಿಂದಾಗಿ ಪಂದ್ಯ ರದ್ದಾದರೆ, ಯಾವುದೇ ಮೀಸಲು ದಿನವಿರುವುದಿಲ್ಲ. ಅಂತಹ ಸಂದರ್ಭದಲ್ಲಿ, ಐಪಿಎಲ್ ನಿಯಮಗಳ ಆಧಾರದ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತದೆ.

ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳಲ್ಲಿ ಮಳೆ ಬಂದರೆ, ಅದೇ ದಿನ ಪಂದ್ಯವನ್ನು ಮುಗಿಸಲು ಪ್ರಯತ್ನಿಸಲಾಗುತ್ತದೆ. ಪಂದ್ಯದ ಆರಂಭ ವಿಳಂಬವಾದರೆ, ಕನಿಷ್ಠ ಐದು ಓವರ್‌ಗಳ ಪಂದ್ಯವನ್ನು ಆಡಿಸಲು ಪ್ರಯತ್ನಿಸಲಾಗುತ್ತದೆ. ಇದಕ್ಕಾಗಿ, 120 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. ಆದರೆ ಹೆಚ್ಚುವರಿ ಸಮಯದ 120 ನಿಮಿಷಗಳಲ್ಲೂ ಪಂದ್ಯ ಮುಗಿಯದಿದ್ದರೆ, ಆಗ ಪಾಯಿಂಟ್‌ ಪಟ್ಟಿ ಪ್ರಮುಖ ಪಾತ್ರವಹಿಸುತ್ತದೆ. ಅಂದರೆ ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡ ಮೇಲುಗೈ ಸಾಧಿಸಿರುತ್ತದೋ ಆ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಇದರರ್ಥ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರವ ಗುಜರಾತ್ ಟೈಟಾನ್ಸ್ ಫೈನಲ್‌ಗೆ ಅರ್ಹತೆ ಪಡೆಯುತ್ತದೆ.

IPL: ಅತಿ ಹೆಚ್ಚು ಬಾರಿ ಐಪಿಎಲ್ ಫೈನಲ್ಸ್ ಆಡಿದ ತಂಡ ಯಾವುದು? ಆರ್​ಸಿಬಿಗೆ ಎಷ್ಟನೇ ಸ್ಥಾನ?

ಚಂಡೀಗಢದ ಹವಾಮಾನ ಹೇಗಿರಲಿದೆ?

ಮೇ 28, ಗುರುವಾರ ಮತ್ತು ಮೇ 29, ಶುಕ್ರವಾರ ಬೆಳಿಗ್ಗೆ ನಡುವೆ ಚಂಡೀಗಢ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕಾಗಿ ಆರೆಂಜ್ ಅಲರ್ಟ್​ ನೀಡಲಾಗಿದೆ. ಆದಾಗ್ಯೂ, ಶುಕ್ರವಾರ ಸಂಜೆ ವೇಳೆ ಮಳೆಯ ನಿರೀಕ್ಷೆಯಿಲ್ಲ. ಹೀಗಾಗಿ ಅಭಿಮಾನಿಗಳು ಯಾವುದೇ ಆತಂಕವಲ್ಲಿದೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Netrasemi Chip: ಭಾರತದ ನೇತ್ರಸೆಮಿಯಿಂದ ದೇಶೀಯ ವಿನ್ಯಾಸದ ಎಐ ಪ್ರೋಸಸರ್ A2000 ಅನಾವರಣ

ಸೆಮಿಕಂಡಕ್ಟರ್ ಸಾಂದರ್ಭಿಕ ಚಿತ್ರImage Credit source: Shutterstock

ನವದೆಹಲಿ, ಮೇ 28: ದೇಶೀಯ ಸೆಮಿಕಂಡಕ್ಟರ್ ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವಲಯದಲ್ಲಿ ಭಾರತವು ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಭಾರತದ ಪ್ರಮುಖ ಸೆಮಿಕಂಡಕ್ಟರ್ ನವೋದ್ಯಮವಾದ ನೇತ್ರಸೆಮಿ ಪ್ರೈವೇಟ್ ಲಿಮಿಟೆಡ್ (NetraSemi), ತನ್ನ ಅತ್ಯಂತ ಮಹತ್ವಾಕಾಂಕ್ಷೆಯ ಎಡ್ಜ್ AI ಸಿಸ್ಟಮ್-ಆನ್-ಚಿಪ್ (SoC) ಆಗಿರುವ ‘A2000’ ಪ್ರೊಸೆಸರ್ ಅನ್ನು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಭಾರತದಲ್ಲೇ ಸಂಪೂರ್ಣವಾಗಿ ವಿನ್ಯಾಸಗೊಳಿಸಲಾದ ಈ ಚಿಪ್, ಜಾಗತಿಕ ಮಟ್ಟದಲ್ಲಿ ಎಡ್ಜ್ ಕಂಪ್ಯೂಟಿಂಗ್ ಮತ್ತು ಕೃತಕ ಬುದ್ಧಿಮತ್ತೆಯ ಅಗತ್ಯತೆಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ.

ಏನಿದು ‘A2000’ ಎಡ್ಜ್ AI ಪ್ರೊಸೆಸರ್?

ಸಾಮಾನ್ಯವಾಗಿ ದೊಡ್ಡ AI ಅಪ್ಲಿಕೇಶನ್‌ಗಳು ಮತ್ತು ಡೇಟಾ ಸಂಸ್ಕರಣೆಗಾಗಿ ಕ್ಲೌಡ್ ಸರ್ವರ್‌ಗಳ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಆದರೆ ‘A2000’ ಒಂದು ಎಡ್ಜ್ AI (Edge AI) ಪ್ರೊಸೆಸರ್ ಆಗಿದ್ದು, ಇದು ಡೇಟಾವನ್ನು ಕ್ಲೌಡ್‌ಗೆ ಕಳುಹಿಸದೆ, ಸಾಧನದಲ್ಲಿಯೇ (Device) ಅತ್ಯಂತ ವೇಗವಾಗಿ ಮತ್ತು ಸುರಕ್ಷಿತವಾಗಿ ಸಂಸ್ಕರಿಸುತ್ತದೆ.

ಈ ಚಿಪ್ ಅತ್ಯಾಧುನಿಕ ನ್ಯೂರಲ್ ಪ್ರೊಸೆಸಿಂಗ್ ಯೂನಿಟ್ (NPU), ಮಲ್ಟಿ-ಕೋರ್ ಸಿಪಿಯು (CPU) ಮತ್ತು ಇಮೇಜ್ ಸಿಗ್ನಲ್ ಪ್ರೊಸೆಸರ್ (ISP) ತಂತ್ರಜ್ಞಾನಗಳನ್ನು ಒಳಗೊಂಡಿದೆ.

ಇದು ಅತ್ಯಂತ ಕಡಿಮೆ ಬ್ಯಾಟರಿ ಅಥವಾ ವಿದ್ಯುತ್ ಬಳಕೆಯೊಂದಿಗೆ ಗರಿಷ್ಠ ಮಟ್ಟದ AI ಲೆಕ್ಕಾಚಾರಗಳನ್ನು (Deep Learning) ಅತ್ಯಂತ ನಿಖರವಾಗಿ ಮಾಡಬಲ್ಲದು.

ಈ ಪ್ರೊಸೆಸರ್ ಅನ್ನು ಸಿಸಿಟಿವಿ ಕ್ಯಾಮೆರಾಗಳು (Smart Surveillance), ಇಂಟರ್ನೆಟ್ ಆಫ್ ಥಿಂಗ್ಸ್ (IoT) ಸಾಧನಗಳು, ಕೈಗಾರಿಕಾ ಆಟೊಮೇಷನ್ (Industrial Automation) ಮತ್ತು ಡ್ರೋನ್‌ಗಳಲ್ಲಿ ವ್ಯಾಪಕವಾಗಿ ಬಳಸಬಹುದಾಗಿದೆ.

ಇದನ್ನೂ ಓದಿ: ಮಾರುಕಟ್ಟೆ ಕುಸಿದಾಗ ಹೆದರಿಬಿಟ್ಟರೆ ಲಕ್ಷ್ಮೀಕಟಾಕ್ಷ ತಪ್ಪಿ ಹೋದೀತು ಜೋಕೆ..! ಶೆಲ್ಬಿ ಡೇವಿಸ್ ಸಲಹೆ ಕೇಳಿ

ನೇತ್ರಸೆಮಿ ಎಐ ಚಿಪ್ ತೈವಾನ್​ನಲ್ಲಿ ತಯಾರಿಕೆ

ಜೋಹೋ ಕಾರ್ಪೊರೇಶನ್ ಬೆಂಬಲಿತವಾಗಿರುವ ನೇತ್ರಸೆಮಿ ಸಂಸ್ಥೆ ಎಐ ಚಿಪ್ ಅನ್ನು ಅಭಿವೃದ್ಧಿಪಡಿಸಿದೆಯಾದರೂ ಅದನ್ನು ತೈವಾನ್​ನ ಟಿಎಸ್​ಎಂಸಿಯ ಘಟಕದಲ್ಲಿ ಫ್ಯಾಬ್ರಿಕೇಟ್ ಮಾಡಲಾಗಿದೆ. ಚಿಪ್ ಡಿಸೈನ್ ಅನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಜಂಟಿ ಆರ್ ಅಂಡ್ ಡಿ ಕೈಗೊಳ್ಳಲು ಈ ಚಿಪ್ ಡಿಸೈನ್ ಅನ್ನು ಕೆಲ ಆಯ್ದ ಮೂಲ ಉಪಕರಣ ತಯಾರಕರಿಗೆ (ಒಇಎಂ) ಹಂಚಿಕೊಳ್ಳುತ್ತಿದೆ ನೇತ್ರಸೆಮಿ. ವರದಿ ಪ್ರಕಾರ, ಮುಂದಿನ ವರ್ಷ ತೈವಾನ್​ನಲ್ಲಿನ ಟಿಎಸ್​ಎಂಸಿ ಘಟಕದಲ್ಲಿ ಚಿಪ್​ನ ಕಮರ್ಷಿಯಲ್ ಉತ್ಪಾದನೆ ಶುರುವಾಗುವ ನಿರೀಕ್ಷೆ ಇದೆ.

ಭಾರತದ ಸೆಮಿಕಂಡಕ್ಟರ್ ಮಿಷನ್‌ಗೆ ಬಿಗ್ ಬೂಸ್ಟ್

ಈ ಬಿಡುಗಡೆಯು ಭಾರತ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಮತ್ತು ‘ಇಂಡಿಯಾ ಸೆಮಿಕಂಡಕ್ಟರ್ ಮಿಷನ್’ (ISM) ಆಶಯಗಳಿಗೆ ದೊಡ್ಡ ಬಲವನ್ನು ನೀಡಿದೆ. ಜಾಗತಿಕವಾಗಿ ಸೆಮಿಕಂಡಕ್ಟರ್ ಮತ್ತು ಚಿಪ್ ವಿನ್ಯಾಸದಲ್ಲಿ ಅಮೆರಿಕ ಮತ್ತು ಚೀನಾ ದೇಶಗಳದ್ದೇ ಮೇಲುಗೈ ಇರುವೆಡೆ, ಭಾರತೀಯ ಕಂಪನಿಯೊಂದು ಜಾಗತಿಕ ಗುಣಮಟ್ಟದ AI ಚಿಪ್ ಅನ್ನು ಯಶಸ್ವಿಯಾಗಿ ವಿನ್ಯಾಸಗೊಳಿಸಿರುವುದು ತಂತ್ರಜ್ಞಾನ ವಲಯದ ಗಮನ ಸೆಳೆದಿದೆ.

ಇದನ್ನೂ ಓದಿ: ವಿಚಿತ್ರ ಕಾರಣ..! ಅನುಭವಿ ಗೂಗಲ್ ಉದ್ಯೋಗಿಯ ಅರ್ಜಿ ತಿರಸ್ಕಾರ; ಕಾಲೇಜು ಗ್ರೇಡ್ ಕಡಿಮೆ ಬಂದಿದ್ದಕ್ಕೆ ರಿಜೆಕ್ಟ್

“A2000 ಬಿಡುಗಡೆಯು ನೆಟ್ರಾಸೆಮಿ ಸಂಸ್ಥೆಗೆ ಮಾತ್ರವಲ್ಲದೆ, ಇಡೀ ಭಾರತೀಯ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಗೆ ಹೆಮ್ಮೆಯ ಕ್ಷಣವಾಗಿದೆ. ಇದು ಭಾರತದಲ್ಲೂ ಜಾಗತಿಕ ಮಟ್ಟದ ಅತ್ಯಾಧುನಿಕ AI ಚಿಪ್‌ಗಳನ್ನು ವಿನ್ಯಾಸಗೊಳಿಸಲು ಸಾಧ್ಯ ಎಂಬುದನ್ನು ಸಾಬೀತುಪಡಿಸಿದೆ,” ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮಾರುಕಟ್ಟೆಯಲ್ಲಿ ಇದರ ಪ್ರಭಾವವೇನು?

ನೆಟ್ರಾಸೆಮಿ ಸಂಸ್ಥೆಯ ಈ ಎಡ್ಜ್ AI ಚಿಪ್ ಮಾರುಕಟ್ಟೆಗೆ ಬರುವುದರಿಂದ, ಸ್ಮಾರ್ಟ್ ಸಾಧನಗಳನ್ನು ತಯಾರಿಸುವ ದೇಶೀಯ ಮತ್ತು ಅಂತರರಾಷ್ಟ್ರೀಯ ಕಂಪನಿಗಳಿಗೆ ಕೈಗೆಟುಕುವ ದರದಲ್ಲಿ ಮತ್ತು ಹೆಚ್ಚಿನ ಸುರಕ್ಷತೆಯೊಂದಿಗೆ ಸ್ಥಳೀಯವಾಗಿಯೇ ಪ್ರೊಸೆಸರ್‌ಗಳು ಲಭ್ಯವಾಗಲಿವೆ. ಇದು ಡೇಟಾ ಪ್ರೈವಸಿ (ಮಾಹಿತಿ ಸುರಕ್ಷತೆ) ಮತ್ತು ಪ್ರೊಸೆಸಿಂಗ್ ವೇಗವನ್ನು ಗಣನೀಯವಾಗಿ ಹೆಚ್ಚಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್​: ಇಡಿ ಇಲಾಖೆಯಲ್ಲಿ ಹುದ್ದೆಗಳ ಭಾರಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್​​

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್​Image Credit source: Pinterest

ಭಾರತ ಸರ್ಕಾರದ ಅತ್ಯಂತ ಪ್ರಭಾವಶಾಲಿ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯ (ED)ವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಪರಾಧಗಳು ಮತ್ತು ಹಣ ವರ್ಗಾವಣೆ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿತ್ತು. ಹೀಗಾಗಿ, ಹೆಚ್ಚುತ್ತಿರುವ ಪ್ರಕರಣಗಳ ತ್ವರಿತ ತನಿಖೆ ಮತ್ತು ಕಲಾಪಗಳನ್ನು ವೇಗಗೊಳಿಸುವ ಉದ್ದೇಶದಿಂದ ಇಲಾಖೆಯಲ್ಲಿನ ಹುದ್ದೆಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ. ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ವಿವಿಧ ವಿಭಾಗಗಳಲ್ಲಿ ಹೊಸ ನೇಮಕಾತಿಗಳು ಮತ್ತು ಹುದ್ದೆಗಳ ಸೃಷ್ಟಿಗೆ ಅನುಮೋದನೆ ನೀಡಿದೆ.

ತನಿಖಾ ಮತ್ತು ಕಾನೂನು ವಿಭಾಗದಲ್ಲಿ ಹುದ್ದೆಗಳ ಭಾರಿ ಏರಿಕೆ:

ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ, ಇಡಿಯ ತನಿಖಾ ವಿಭಾಗದಲ್ಲಿ ಅತಿ ದೊಡ್ಡ ಮಟ್ಟದ ಹುದ್ದೆಗಳ ಹೆಚ್ಚಳವನ್ನು ಮಾಡಲಾಗಿದೆ. ಹಿರಿಯ ಅಧಿಕಾರಿಗಳ ಮಟ್ಟದಲ್ಲಿ, ಹೆಚ್ಚುವರಿ ನಿರ್ದೇಶಕ ಹುದ್ದೆಗಳನ್ನು 10 ರಿಂದ 24 ಕ್ಕೆ ಹಾಗೂ ಜಂಟಿ ನಿರ್ದೇಶಕ ಹುದ್ದೆಗಳನ್ನು 28 ರಿಂದ 49 ಕ್ಕೆ ಏರಿಸಲಾಗಿದೆ. ಇದೇ ವೇಳೆ ಉಪ ನಿರ್ದೇಶಕ ಹುದ್ದೆಗಳನ್ನು 148 ರಿಂದ 267 ಕ್ಕೆ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳನ್ನು 255 ರಿಂದ 531 ಕ್ಕೆ ಹೆಚ್ಚಿಸಲಾಗಿದೆ. ಇನ್ನು ತಳಮಟ್ಟದಲ್ಲಿ ತನಿಖೆ ನಡೆಸುವ ಜಾರಿ ಅಧಿಕಾರಿ ಹುದ್ದೆಗಳನ್ನು 355 ರಿಂದ 606 ಕ್ಕೆ ಹಾಗೂ ಸಹಾಯಕ ಜಾರಿ ಅಧಿಕಾರಿ (AEO) ಹುದ್ದೆಗಳನ್ನು 425 ರಿಂದ 803 ಕ್ಕೆ ಬಲವರ್ಧನೆಗೊಳಿಸಲಾಗಿದೆ. ಕೇವಲ ತನಿಖೆ ಮಾತ್ರವಲ್ಲದೆ, ಪ್ರಕರಣಗಳ ಕಾನೂನು ಹೋರಾಟವನ್ನು ಚುರುಕುಗೊಳಿಸಲು ಕಾನೂನು ವಿಭಾಗ, ತೀರ್ಪು ವಿಭಾಗ, ವ್ಯವಸ್ಥೆಗಳ ಇಲಾಖೆ ಹಾಗೂ ಭದ್ರತಾ ಇಲಾಖೆಯಲ್ಲೂ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದ್ದು, ಭದ್ರತಾ ವಿಭಾಗದ ಹಿರಿಯ ಕಾನ್‌ಸ್ಟೆಬಲ್ ಹುದ್ದೆಗಳನ್ನು 209 ರಿಂದ 273 ಕ್ಕೆ ಹೆಚ್ಚಿಸಲಾಗಿದೆ.

ಜಾರಿ ನಿರ್ದೇಶನಾಲಯ (ED)ದ ಪ್ರಮುಖ ಜವಾಬ್ದಾರಿಗಳು:

ಜಾರಿ ನಿರ್ದೇಶನಾಲಯವು ಕೇಂದ್ರ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾಗಿದೆ. ಈ ಸಂಸ್ಥೆಯ ಪ್ರಾಥಮಿಕ ಕೆಲಸವೆಂದರೆ ದೇಶದಲ್ಲಿ ನಡೆಯುವ ಕಪ್ಪುಹಣ ಬಿಳುಪುಗೊಳಿಸುವಿಕೆ (Money Laundering) ತಡೆ ಕಾಯ್ದೆಯಡಿ ತನಿಖೆ ನಡೆಸುವುದು. ಇದರೊಂದಿಗೆ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆ (FEMA) ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಮಟ್ಟದಲ್ಲಿ ಧಕ್ಕೆ ತರುವ ಆರ್ಥಿಕ ಅಪರಾಧಗಳನ್ನು ಪತ್ತೆ ಹಚ್ಚಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಈ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಸಹಾಯಕ ಜಾರಿ ಅಧಿಕಾರಿ (AEO) ಹುದ್ದೆಯ ನೇಮಕಾತಿ ಮತ್ತು ಅರ್ಹತೆ:

ಇಡಿ ಇಲಾಖೆಯಲ್ಲಿ ಯುವಕರು ಹೆಚ್ಚು ಇಷ್ಟಪಡುವ ಮತ್ತು ಅತ್ಯಂತ ಜನಪ್ರಿಯ ಹುದ್ದೆಯೆಂದರೆ ಅದು ಸಹಾಯಕ ಜಾರಿ ಅಧಿಕಾರಿ (AEO) ಹುದ್ದೆ. ಈ ಹುದ್ದೆಗಳ ನೇಮಕಾತಿಯನ್ನು ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ SSC CGL ಪರೀಕ್ಷೆಯ ಮೂಲಕ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Degree) ಪಡೆದಿರಬೇಕು ಮತ್ತು 18 ರಿಂದ 30 ವರ್ಷ ವಯೋಮಿತಿಯೊಳಗಿರಬೇಕು (ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ). ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆಯನ್ನು ಪ್ರಮುಖವಾಗಿ ಶ್ರೇಣಿ 1 (Tier-1), ಶ್ರೇಣಿ 2 (Tier-2) ಪರೀಕ್ಷೆಗಳು ಮತ್ತು ದಾಖಲೆ ಪರಿಶೀಲನೆ ಎಂಬ ಮೂರು ಹಂತಗಳಲ್ಲಿ ನಡೆಸಲಾಗುತ್ತದೆ.

ಉನ್ನತ ಮಟ್ಟದಲ್ಲಿ ಅಧಿಕಾರಿಗಳ ನಿಯೋಜನೆ (ಡೆಪ್ಯುಟೇಶನ್):

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮೂಲಕ ನಡೆಯುವ ನೇರ ನೇಮಕಾತಿಯ ಹೊರತಾಗಿ, ಇಲಾಖೆಯ ಉನ್ನತ ಮತ್ತು ನಿರ್ಧಾರ ಕೈಗೊಳ್ಳುವ ಹಿರಿಯ ಹುದ್ದೆಗಳಿಗೆ ಅನುಭವಿ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತದೆ. ದೇಶದ ಪ್ರತಿಷ್ಠಿತ ನಾಗರಿಕ ಸೇವೆಗಳಾದ IAS, IPS ಮತ್ತು IRS ಅಧಿಕಾರಿಗಳನ್ನು ಇತರ ಕೇಂದ್ರ ಇಲಾಖೆಗಳಿಂದ ಇಡಿಗೆ ನಿಯೋಜನೆ (ಡೆಪ್ಯುಟೇಶನ್) ಮೇರೆಗೆ ಕಳುಹಿಸಲಾಗುತ್ತದೆ. ಇಂತಹ ಅಧಿಕಾರಿಗಳನ್ನು ಸಾಮಾನ್ಯವಾಗಿ ಇಡಿಯ ಸಹಾಯಕ ನಿರ್ದೇಶಕರು, ಉಪ ನಿರ್ದೇಶಕರು ಮತ್ತು ಜಂಟಿ ನಿರ್ದೇಶಕರಂತಹ ಪ್ರಮುಖ ಜವಾಬ್ದಾರಿಯುತ ಹುದ್ದೆಗಳಿಗೆ ನೇಮಕ ಮಾಡಿ ತನಿಖೆಯ ಉಸ್ತುವಾರಿಯನ್ನು ವಹಿಸಲಾಗುತ್ತದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ, ಹೇಳಿದ್ದೇನು?

ಬೆಂಗಳೂರು, (ಮೇ 28): ಸಿದ್ದರಾಮಯ್ಯನವರು ಇಂದು (ಮೇ 28) ಅಧಿಕೃತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್​​ ಹುಲಿಯಾನ ಮೂರು ವರ್ಷದ ರಾಜ್ಯಭಾರ ಅಂತ್ಯವಾಗಿದೆ. ಇನ್ನು ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯನವರು ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುಟುಕಾಗಿ ತಮ್ಮ ರಾಜಕೀಯ ಹಾದಿ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮೆಲುಕು ಹಾಕಿದರು. ಇನ್ನು ಇದೇ ವೇಳೆ ಸಿದ್ದರಾಮಯ್ಯನವರು ನಟ ರಾಜಕುಮಾರ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷ.

ನಟ ರಾಜಕುಮಾರ್ ಅಭಿಮಾನಿ ದೇವರು ಅಂತಾ ಕರೀತಿದ್ರು, ನಾನು ರಾಜಕಾರಣಿ, ಸಂವಿಧಾನವನ್ನೇ ನಮ್ಮ ಧರ್ಮ ಎಂದು ತಿಳಿದಿದ್ದೇನೆ. ಮತದಾರರೇ ನಮ್ಮ ಅಭಿಮಾನಿ ದೇವರು. ಕನ್ನಡ ನಾಡಿನ ಕರ್ನಾಟಕದ 7 ಕೋಟಿ ಕೋಟಿ ಜನಸಂಖ್ಯೆ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತ್ತು, ಎರಡು ಬಾರಿ ವಿಪಕ್ಷ ನಾಯಕನಾಗುವ ಅವಕಾಶ ಸಿಕ್ಕಿತ್ತು ಎಂದರು.

ಇದನ್ನೂ ಓದಿ: Karnataka Politics Live: ರಾಜೀನಾಮೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ

Source link

ಹಿಂದಿನ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ‘ಕೈ’ ಕಮಾಂಡ್​​: ಕರ್ನಾಟಕ ವಿಷಯದಲ್ಲಿ ಎಚ್ಚರಿಕೆಯ ನಡೆ

ಬೆಂಗಳೂರು, ಮೇ 28: ವಿವಿಧ ರಾಜ್ಯಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಎಡವಿದ್ದ ಕಾಂಗ್ರೆಸ್​​ (Congress) ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್​​ನಲ್ಲಿ ತಲೆದೋರಿದ್ದ ಅಧಿಕಾರ ಹಂಚಿಕೆಯ ಕಗ್ಗಂಟನ್ನು ಯಶಸ್ವಿಯಾಗಿ ಬಿಡಿಸಿದೆ. ಸಿಎಂ‌ ಬದಲಾವಣೆ ಎಂಬ ಬೆಟ್ಟದಂತ ಸಮಸ್ಯೆ ಯನ್ನು ವರಿಷ್ಠರು ಯಶ್ವಸಿಯಾಗಿ ನಿರ್ವಹಿಸಿದೆ. ಈ ಹಿಂದೆ ವಿವಿಧ ರಾಜ್ಯ್ಲಲ್ಲಿ ನಾಯಕರ ತಪ್ಪು ನಿರ್ಧಾರದಿಂದ ಪಕ್ಷಕ್ಕೆ ಭಾರಿ ನಷ್ಟ ಉಂಟಾಗಿತ್ತು. ಹಲವು ರಾಜ್ಯಗಳೇ ಕಾಂಗ್ರೆಸ್​​ ಕೈತಪ್ಪಿ ಹೋಗಿತ್ತು ಎನ್ನುವುದು ಇತಿಹಾಸ.

ಪಂಜಾಬ್​​ನಲ್ಲಿ ಅಮರಿಂದರ್ ಸಿಂಗ್ vs ಸಿಧು

ಪಂಜಾಬ್​​ನಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವಿನ ಭಿನ್ನಾಭಿಪ್ರಾಯದ ಹಿನ್ನೆಲೆ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಬದಲಾವಣೆ ಮಾಡಲಾಗಿತ್ತು.ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ಕ್ಯಾಪ್ಟರನ್ನು ಇಳಿಸಿ ಚರಣ್‌ಜಿತ್ ಸಿಂಗ್ ಚನ್ನಿಗೆ ವರಿಷ್ಠರು ಪಟ್ಟ ಕಟ್ಟಿದ್ದರು. ಆದರೆ ಸಿಧು ಮತ್ತು ಚನ್ನಿ ನಡುವಿನ ಆಂತರಿಕ ಕಲಹ ಬೀದಿಗೆ ಬಂದ ಪರಿಣಾಮ 2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿತ್ತು.

ಇದನ್ನೂ ಓದಿ: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಮಧ್ಯಪ್ರದೇಶದಲ್ಲಿ ಕಮಲ್​​ನಾಥ್ vs ಸಿಂಧಿಯಾ

ಮಧ್ಯಪ್ರದೇಶದಲ್ಲಿ 2018ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿರಿಯ ನಾಯಕ ಕಮಲ್​​ನಾಥ್ ಅವರಿಗೆ ಸಿಎಂ ಪಟ್ಟ ನೀಡಲಾಗಿತ್ತು. ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಹೈಕಮಾಂಡ್ ಸಂಪೂರ್ಣವಾಗಿ ನಿರ್ಲಕ್ಷಿಸಿದ ಪರಿಣಾಮ ಭಿನ್ನಮತ ತಾರಕಕ್ಕೇರಿ ಸಿಂಧಿಯಾ ತಮ್ಮ ಬೆಂಬಲಿಗ 22 ಶಾಸಕರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಆ ಬಳಿಕ ಕಮಲನಾಥ್​​ ನೇತೃತ್ವದ ಸರ್ಕಾರ ಪತನಗೊಂಡು, ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ ಬಿಜೆಪಿ ಮತ್ತೆ ಅಧಿಕಾರ ಹಿಡಿದಿತ್ತು.

ರಾಜಸ್ಥಾನದಲ್ಲಿ ಗೆಹ್ಲೋಟ್ vs ಪೈಲಟ್

ರಾಜಸ್ಥಾನದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದ ಸಚಿನ್ ಪೈಲಟ್​​ಗೆ ಸಿಎಂ ಸ್ಥಾನ ನೀಡದೆ ಹಿರಿಯ ನಾಯಕ ಅಶೋಕ್ ಗೆಹ್ಲೋಟ್​​ಗೆ ಹೈಕಮಾಂಡ್ ಮಣೆ ಹಾಕಿತ್ತು. ಅಧಿಕಾರ ಹಂಚಿಕೆಯ ಸೂತ್ರದ ಗೊಂದಲದಿಂದಾಗಿ ಇಬ್ಬರ ನಡುವೆ ನಿರಂತರ ಶೀತಲ ಸಮರ ನಡೆಯುತ್ತಿತ್ತು. ಸಚಿನ್ ಪೈಲಟ್ ಬಂಡಾಯವೆದ್ದಾಗ ಹೈಕಮಾಂಡ್ ಮಧ್ಯಪ್ರವೇಶಿಸಿ ಡಿಸಿಎಂ ಸ್ಥಾನದಿಂದ ಅವರನ್ನು ವಜಾಗೊಳಿಸಿತ್ತು. ಐದು ವರ್ಷಗಳ ಕಾಲ ಸರಿಪಡಿಸಲಾಗದ ಆಂತರಿಕ ಭಿನ್ನಮತದಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬೇಕಾಯಿತು.

ಅಸ್ಸಾಂನಲ್ಲಿ ಗೊಗೊಯ್ vs ಹಿಮಂತ್​​

ಅಸ್ಸಾಂ ಕಾಂಗ್ರೆಸ್​​ನಲ್ಲಿ ಈ ಹಿಂದೆ ಭಿನ್ನಮತ ಎದುರಾಗಿದ್ದಾಗ ಅಂದಿನ ಸಿಎಂ ತರುಣ್ ಗೊಗೊಯ್ ವಿರುದ್ಧ ಅಂದು ಕಾಂಗ್ರೆಸ್​​ನಲ್ಲಿದ್ದ ಹಿಮಂತ್​​ ಬಿಸ್ವಾ ಶರ್ಮಾ ಬಂಡಾಯವೆದ್ದಿದ್ದರು. ಆದರೆ ಹೈಕಮಾಂಡ್​​ ಭೇಟಿಗೆ ಬಂದ ಹಿಮಂತ್​​ರನ್ನು ವರಿಷ್ಠರು ನಿರಾಕರಿಸಿದ ಕಾರಣ ತೀವ್ರ ಅಸಮಾಧಾನಗೊಂಡ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದರ ಪರಿಣಾಮವಾಗಿ ಅಸ್ಸಾಂನಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ.

ಛತ್ತೀಸ್‌ಗಢದಲ್ಲಿ ಬಘೇಲ್ vs ಸಿಂಗ್ ದೇವ್

2018ರಲ್ಲಿ ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ಬಳಿಕ ಎರಡುವರೆ ವರ್ಷಗಳ ನಂತರ ಸಿಎಂ ಬದಲಾವಣೆ ಎಂಬ ಸೂತ್ರ ಹೆಣೆಯಲಾಗಿತ್ತು. ಆದರೆ ಭೂಪೇಶ್ ಬಘೇಲ್ ಅವಧಿ ಮುಗಿದ ನಂತರವೂ ಹೈಕಮಾಂಡ್ ಸಿಎಂ ಬದಲಾವಣೆ ಮಾಡಲು ಧೈರ್ಯ ತೋರಲಿಲ್ಲ. ಟಿ.ಎಸ್.ಸಿಂಗ್ ದೇವ್ ಕಡೆಗಣಿಸಿದ ಪರಿಣಾಮ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತ್ತು.

ಈ ಎಲ್ಲ ರಾಜ್ಯಗಳಲ್ಲಿ ತನ್ನ ನಿರ್ಧಾರದಿಂದ ಭಾರಿ ನಷ್ಟ ಅನುಭವಿಸಿರುವ ಹಿನ್ನೆಲೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವೇಳೆ ಚಾಣಾಕ್ಷತೆ ಮೆರೆದಿದೆ. ಸಿದ್ದರಾಮಯ್ಯನವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜೊತೆ ಜೊತೆಗೆ, ಎಲ್ಲ ಸಮುದಾಯಗಳಿಗೂ ಸರ್ಕಾರದಲ್ಲಿ ಪ್ರಾಮುಖ್ಯತೆ ನೀಡುವ ನಿರ್ಧಾರ ಮಾಡಿದೆ. ಯಾವುದೇ ರೀತಿಯಲ್ಲಿಯೂ ತಮ್ಮ ನಿರ್ಧಾರ ವೋಟ್​​ ಬ್ಯಾಂಕ್​​ ಅಥವಾ ಪಕ್ಷ ನಾಯಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರದ ರೀತಿಯಲ್ಲಿ ತಂತ್ರ ರೂಪಿಸಿಯೇ ಅಂತಿಮ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:20 pm, Thu, 28 May 26

Source link

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ

ಬೆಂಗಳೂರು, (ಮೇ 28): ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ  (Siddaramaiah) ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದು, ಇನ್ನು ಒಂದು ಪುಟದ ರಾಜೀನಾಮೆ ಪತ್ರವನ್ನು ಪ್ರಭುಶಂಕರ್ ಅವರು ಸ್ವೀಕರಿಸಿದ್ದಾರೆ. ಇದರೊಂದಿಗೆ  ಸಿದ್ದರಾಮಯ್ಯನವರ ಮೂರು ವರ್ಷದ ಆಡಳಿತ ಅಂತ್ಯವಾಗಿದೆ.

ಈ ವೇಳೆ ಪ್ರಭುಶಂಕರ್ ಅವರು ರಾಜೀನಾಮೆ ಪತ್ರ ಸ್ವೀಕಾರ ಶಿಷ್ಟಾಚಾರದ ಬಗ್ಗೆ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಿಕೊಟ್ಟರು. ನಾಳೆ (ಮೇ 29) ಸಂಜೆ ವೇಳೆಗೆ ರಾಜ್ಯಪಾಲರು ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಹೀಗಾಗಿ ತಾವು ಮತ್ತೊಮ್ಮೆ ಬಂದು ರಾಜ್ಯಪಾಲರನ್ನು ಭೇಟಿಯಾಗಬೇಕು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಣ್ವೀರ್ ಸಿಂಗ್​​ಗೆ ಮುಂಚೆ ಬಾಲಿವುಡ್​​ನಲ್ಲಿ ನಿಷೇಧಕ್ಕೊಳಗಾಗಿದ್ದ ನಟರಿವರು

Source link

ಮೊದಲ ಬಾರಿ ಮಗನನ್ನು ಪರಿಚಯಿಸಿದ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್: ಆದರೆ ಒಂದು ಷರತ್ತು

ಬಾಲಿವುಡ್‌ನ ಸ್ಟಾರ್ ಜೋಡಿ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ ತಮ್ಮ ಮುದ್ದಾದ ಮಗನ ಪ್ರೈವೆಸಿ ವಿಷಯದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ, ಸಿದ್ದಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿಯ ಹಾದಿಯನ್ನೇ ತುಳಿದಿದ್ದಾರೆ. ಇತ್ತೀಚೆಗಷ್ಟೇ ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ನವಜಾತ ಶಿಶು ವಿಹಾನ್​ನನ್ನು (Vihaan Kaushal) ಪಾಪರಾಜಿಗಳಿಗೆ ಪರಿಚಯಿಸಿರುವ ಈ ದಂಪತಿ, ಮಗನ ಫೋಟೋಗಳನ್ನು ಕ್ಲಿಕ್ಕಿಸದಂತೆ ಮತ್ತು ಸಾರ್ವಜನಿಕವಾಗಿ ಹಂಚಿಕೊಳ್ಳದಂತೆ ಮನವಿ ಮಾಡಿದ್ದಾರೆ.

ಏರ್‌ಪೋರ್ಟ್‌ನಲ್ಲಿ ವಿಕ್ಕಿ ಕೌಶಲ್ ಫೋಟೋಗಳಿಗೆ ಪೋಸ್ ನೀಡಿದರು. ಮಗ ವಿಹಾನ್‌ನನ್ನು ಎದೆಗೆ ಅಪ್ಪಿಕೊಂಡಿದ್ದ ಕತ್ರಿನಾ ಕೈಫ್ ಮಾತ್ರ ತಮ್ಮ ಹಾಗೂ ಮಗನ ಫೋಟೋ ಕ್ಲಿಕ್ಕಿಸದಂತೆ ವಿನಂತಿಸಿದರು. ಫೋಟೋ ತೆಗೆಯಲು ನಿರಾಕರಿಸಿದರೂ, ಈ ತಾರಾ ದಂಪತಿ ತಮ್ಮ ಮಗನನ್ನು ಮೊದಲ ಬಾರಿಗೆ ಮಾಧ್ಯಮದವರಿಗೆ ಹತ್ತಿರದಿಂದ ತೋರಿಸಿ ಪರಿಚಯಿಸಿದರು. ‘ಕತ್ರಿನಾ ಅವರು ವಿಕ್ಕಿ ಜೊತೆಯಲ್ಲೇ ಇದ್ದರು. ಆದರೆ ಮಗನೊಂದಿಗೆ ಫೋಟೋ ತೆಗೆಯದಂತೆ ವಿನಂತಿಸಿದರು. ಇದೇ ವೇಳೆ ಅವರು ಮಗನನ್ನು ನಮಗೆ ಪರಿಚಯಿಸಿದರು’ ಎಂದು ಏರ್‌ಪೋರ್ಟ್‌ನಲ್ಲಿದ್ದ ಪಾಪರಾಜಿಗಳು ತಿಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಯಾವಾಗಲೂ ತಮ್ಮ ವೈಯಕ್ತಿಕ ಜೀವನವನ್ನುಮಾಧ್ಯಮದ ಕ್ಯಾಮೆರಾಗಳಿಂದ ದೂರ ಇಡಲು ಇಷ್ಟಪಡುವ ಕತ್ರಿನಾ ಮತ್ತು ವಿಕ್ಕಿ, ಈ ಬಾರಿ ಮಗನನ್ನು ಮಾಧ್ಯಮಗಳಿಗೆ ಪರಿಚಯಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜೊತೆಗೆ ವಿಹಾನ್ ಫೋಟೋಗಳನ್ನು ಎಲ್ಲೂ ಪ್ರಕಟಿಸಬಾರದು ಎಂಬ ಸ್ಪಷ್ಟ ನಿಯಮವನ್ನು ತಿಳಿಸುವ ಮೂಲಕ ಮಗನ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಮುಂದಾಗಿದ್ದಾರೆ.

ಕಳೆದ ವರ್ಷದ ನವೆಂಬರ್‌ನಲ್ಲಿ ಕತ್ರಿನಾ ಮತ್ತು ವಿಕ್ಕಿ ದಂಪತಿ ಗಂಡು ಮಗುವನ್ನು ಬರಮಾಡಿಕೊಂಡಿದ್ದರು. ‘ನಮ್ಮ ಸಂತೋಷದ ಗುಚ್ಛ ಬಂದಿದೆ. ಅಪಾರ ಪ್ರೀತಿ ಮತ್ತು ಕೃತಜ್ಞತೆಯೊಂದಿಗೆ ನಮ್ಮ ಮುದ್ದಾದ ಮಗನನ್ನು ಸ್ವಾಗತಿಸುತ್ತಿದ್ದೇವೆ’ ಎಂದು ಪೋಸ್ಟ್‌ ಹಂಚಿಕೊಂಡಿದ್ದರು. ತದನಂತರ ಜನವರಿ 7ರಂದು ತಮ್ಮ ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರಿಟ್ಟಿರುವುದಾಗಿ ಅಧಿಕೃತವಾಗಿ ತಿಳಿಸಿದ್ದರು.

ಇದನ್ನೂ ಓದಿ: ಕತ್ರಿನಾ ಕೈಫ್ ಜತೆಗಿನ ಸಂಸಾರ ವಿಕ್ಕಿ ಕೌಶಲ್​ಗೆ ಬೋರ್ ಆಯ್ತಾ? ವಿಡಿಯೋ ವೈರಲ್

ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ 2021ರ ಡಿಸೆಂಬರ್ 9ರಂದು ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಬರ್ವಾರಾದಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಮದುವೆಯಾಗುವವರೆಗೂ ತಮ್ಮ ಪ್ರೀತಿಯ ವಿಚಾರವನ್ನು ಈ ಜೋಡಿ ರಹಸ್ಯವಾಗಿಟ್ಟಿತ್ತು. ಅದೇ ರೀತಿ ಈಗ ಮಗನ ಫೋಟೋವನ್ನು ಕೂಡ ಅವರು ಬಹಿರಂಗಪಡಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 4:04 pm, Thu, 28 May 26

Source link

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ ಭಾರತ ತಂಡ, ಇಂಗ್ಲೆಂಡ್‌ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ತನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಂಡು ಚುಟುಕು ವಿಶ್ವಸಮರಕ್ಕೆ ಕಾಲಿಡಬೇಕಿದೆ.

ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ 4 ಪಂದ್ಯಗಳ ಟಿ20 ಸರಣಿ ಮತ್ತು ಒಂದು ಟೆಸ್ಟ್ ಪಂದ್ಯವನ್ನು ಆಡಲಿದೆ. ಟೀಂ ಇಂಡಿಯಾದ ಪ್ರವಾಸವು ಮೇ 28 ರ ಗುರುವಾರದಿಂದ ಪ್ರಾರಂಭವಾಗಲಿದೆ. ಈ ಟಿ2 ಸರಣಿಯಲ್ಲಿ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿರುತ್ತಾರೆ. ಅಲ್ಲದೆ, ಷಾರ್ಲೆಟ್ ಡೀನ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದು, ಈ ಸರಣಿಯ ಮೊದಲ ಟಿ20 ಪಂದ್ಯದ ಪೂರ್ಣ ವಿವರ ಇಂತಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡಗಳ ನಡುವಿನ ಮೊದಲ ಟಿ20 ಪಂದ್ಯವು ಮೇ 28 ರ ಗುರುವಾರ ನಡೆಯಲಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯುತ್ತದೆ?

ಚೆಲ್ಮ್ಸ್‌ಫೋರ್ಡ್‌ನ ಕೌಂಟಿ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ನಡೆಯುತ್ತಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವು ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ಪ್ರಾರಂಭವಾಗಲಿದೆ.

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ ಮೊದಲ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯವನ್ನು ನೇರಪ್ರಸಾರ ವೀಕ್ಷಿಸಬಹುದು.

Womens T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ

ಹೆಡ್ ಟು ಹೆಡ್ ದಾಖಲೆ

ಇಲ್ಲಿಯವರೆಗೆ, ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ 35 ಟಿ20 ಪಂದ್ಯಗಳು ನಡೆದಿವೆ. ಈ 35 ಪಂದ್ಯಗಳಲ್ಲಿ ಇಂಗ್ಲೆಂಡ್ ಮಹಿಳಾ ತಂಡವು 24 ಪಂದ್ಯಗಳನ್ನು ಗೆದ್ದಿದ್ದರೆ, ಟೀಂ ಇಂಡಿಯಾ ಕೇವಲ 11 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆದಾಗ್ಯೂ ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ ಟಿ20 ಸರಣಿಯನ್ನು ಗೆದ್ದುಕೊಂಡಿರುವುದು ತಂಡದ ಮನೋಬಲವನ್ನು ಹೆಚ್ಚಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:56 pm, Thu, 28 May 26

Source link

ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್; ಇಲ್ಲಿದೆ ಮಾಹಿತಿ

ಬೆಂಗಳೂರು, ಮೇ 28: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಿದ್ದೇನೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಬೆಂಗಳೂರಿನಲ್ಲಿ ಇಲ್ಲ. ಹಾಗಾಗಿ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಮೊನ್ನೆ ಹೈಕಮಾಂಡ್​ನವರು ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಹೈಕಮಾಂಡ್​ ಸೂಚಿಸಿದಾಗ ಅದಕ್ಕೆ ಸಮ್ಮತಿ ಸೂಚಿಸಿದ್ದೆ. ನಾಡಿದ್ದು ರಾಜೀನಾಮೆ ಕೊಡುತ್ತೇನೆ ಎಂದು ಅವರಿಗೆ ತಿಳಿಸಿದ್ದೆ. ಹಾಗಾಗಿ ಇಂದು ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link