Headlines

nagaraj11081993

Donald Trump: 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ.. ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಮಾರ್ಚ್​ 22: ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗದಷ್ಟು ತೈಲವನ್ನು ಸಾಗಿಸುವ ಹಾರ್ಮುಜ್(Hormuz) ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಟೆಹ್ರಾನ್ ಮತ್ತೆ ತೆರೆಯದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ, ಅಮೆರಿಕವು ತನ್ನ ಹಲವಾರು ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿರಿಸಿ ಸಂಪೂರ್ಣವಾಗಿ ನಾಶಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ…

Read More

ಕರ್ನಾಟಕ ಹವಾಮಾನ ವರದಿ: ಕೊಡಗು, ಮೈಸೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಮಾರ್ಚ್​ 22: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು  (Weather Forecast) ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ…

Read More

ಸೇತುವೆ ಮೇಲೆ ನಿಂತಿದ್ದ ಈಚರ್​ ವಾಹನಕ್ಕೆ ಗೂಡ್ಸ್ ಆಟೋ ಡಿಕ್ಕಿ: ಮೂವರು ದಾರುಣ ಸಾವು

ಬೆಂಗಳೂರು, ಮಾರ್ಚ್​​ 22: ನಿಂತಿದ್ದ ಈಚರ್​ ವಾಹನಕ್ಕೆ ಗೂಡ್ಸ್ ಆಟೋ ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಆರ್​​.ಪುರಂ ಸಂಚಾರ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಮೇಲೆ ನಡೆದಿದೆ. ಅಪಘಾತದ ತೀವ್ರತೆಗೆ ಗೂಡ್ಸ್ ಆಟೋದಲ್ಲಿದ್ದ ಮಣಿಕಂಠ, ಸುರೇಶ್, ಶ್ರೀನಿವಾಸ್ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ವೈಟ್ ಫೀಲ್ಡ್ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬರ್ತಿದ್ದ ಕ್ಯಾಂಟರ್ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಟೈರ್ ಬ್ಲ್ಯಾಸ್ಟ್​​​ ಆಗಿ ನಿಂತಿತ್ತು. ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿ…

Read More

Daily Devotional: ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯೋದಯವು ದಿನದ ಪ್ರಾರಂಭವನ್ನು ಸೂಚಿಸುತ್ತದೆ. ನಮ್ಮ ಜೀವನದಲ್ಲಿ ಎದುರಾಗುವ ಎಲ್ಲಾ ಕಷ್ಟ ಮತ್ತು ಸಂಕಷ್ಟಗಳಿಗೆ ದೇವರ ಮೊರೆ ಹೋಗುವಾಗ, ಸೂರ್ಯ ಭಗವಾನ್ ಸಾಕ್ಷಾತ್ ಕಣ್ಣಿಗೆ ಕಾಣುವ ದೇವರಾಗಿದ್ದಾರೆ. ಸೂರ್ಯನು ಗ್ರಹಗಳ ರಾಜನಾಗಿ, ಇಡೀ ಭೂಮಂಡಲವನ್ನು ಬೆಳಗುವ ಶಕ್ತಿಯಾಗಿದ್ದಾನೆ. ಬೆಳಗ್ಗೆ ಎದ್ದ ತಕ್ಷಣ ಸೂರ್ಯ ನಮಸ್ಕಾರ ಮಾಡುವ ಪದ್ಧತಿ ಹಲವರಿಗೆ ಇದ್ದರೂ, ಅದಕ್ಕಿಂತಲೂ ಸರಳವಾದ ಮತ್ತು ಪರಿಣಾಮಕಾರಿ ವಿಧಾನವೆಂದರೆ ಸೂರ್ಯನಿಗೆ…

Read More

ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ.. ಮಾರ್ಚ್…

Read More

Horoscope Today 22nd​​ March​: ಇಂದು ಈ ರಾಶಿಯವರ ವಿವಾಹದಲ್ಲಿ ಅಡ್ಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರಮಾಸ, ವಸಂತಋತು, ಶುಕ್ಲಪಕ್ಷದ ಶುಭ ದಿನವಾಗಿದೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದ್ದು, ಆರ್ಥಿಕವಾಗಿ ಉತ್ತಮವಾಗಿರುತ್ತದೆ. ಯೋಜನೆಗಳು ಯಶಸ್ವಿಯಾಗುತ್ತವೆ ಮತ್ತು ಹಳೆಯ ಉಳಿತಾಯದಿಂದ ಲಾಭವಿರುತ್ತದೆ. ವೃಷಭ ರಾಶಿಯವರಿಗೆ ಮಾನಸಿಕ ನೆಮ್ಮದಿ, ಹೊಸ ಯೋಜನೆಗಳಿಗೆ ಮನ್ನಣೆ ಮತ್ತು ಗೃಹ ನಿರ್ಮಾಣ ಯೋಗವಿದೆ. ಆದಾಗ್ಯೂ,…

Read More

ಡಿಆರ್​ಐನಿಂದ ಭರ್ಜರಿ ಕಾರ್ಯಾಚರಣೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು, ಮಾರ್ಚ್​​ 22: ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. DRI ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನಾಯಿಗೆ ನೀಡುವ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಇವನ್ನು ಸಾಗಿಸಲು ಪ್ರಯತ್ನಿಸಲಾಗಿತ್ತು. ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಡಿಆರ್​ಐ ಅಧಿಕಾರಿಗಳು ರೈಲಿನಲ್ಲಿಯೇ ಈ ದಂಧೆಯನ್ನು ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ…

Read More

ಮಧ್ಯರಾತ್ರಿ ಜವರಾಯನ ಅಟ್ಟಹಾಸ: ಕಾಶಿಗೆಂದು ಹೊರಟಿದ್ದ ಮೂವರು ಮಹಿಳೆಯರು ಭೀಕರ ಅಪಘಾತಕ್ಕೆ ಬಲಿ

ದೇವನಹಳ್ಳಿ, ಮಾರ್ಚ್​​ 22: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತರು. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಎಂಬುವವರಿಗೆ ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಹಳದಿ ಬಣ್ಣದ ಕರವಸ್ತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ, ಹೀಗೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಹಣಕಾಸನ್ನು ಹೊಂದಾಣಿಕೆ ಮಾಡುವ ಬಗ್ಗೆ ಸಂಗಾತಿ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ದಿನ ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆಯನ್ನು ವಹಿಸಿ. ಇಲ್ಲದಿದ್ದರೆ ಬೆನ್ನು ಹಿಡಿದುಕೊಳ್ಳುವಂತೆ ಆಗುವುದು ಅಥವಾ ಉಳುಕುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಬಾಡಿಗೆ ಮನೆಯಲ್ಲಿದ್ದು,…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸ- ಕಾರ್ಯ, ಹಣಕಾಸಿನ ಮಾತುಕತೆ ಮಾಡಬೇಕು ಎಂದಿದ್ದಲ್ಲಿ ರಾಘವೇಂದ್ರ ಸ್ವಾಮಿಗಳು ಅಥವಾ ಸಾಯಿಬಾಬಾರವರನ್ನು ಸ್ಮರಿಸಿ ಮುಂದುವರಿಯಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಮೇಲಿಂದ ಮೇಲೆ ಭಾವನಾತ್ಮಕವಾಗಿ ಭಾರವಾದ ಮಾತುಗಳನ್ನು ಕೇಳಿಸಿಕೊಳ್ಳುವ ಸನ್ನಿವೇಶಗಳು ಉದ್ಭವ ಆಗಲಿವೆ. ನಾಲ್ಕು ಗೋಡೆಯ ಮಧ್ಯೆ ಮಾತನಾಡಿ ಮುಗಿಸಿಕೊಳ್ಳಬೇಕಾದ ವಿಷಯಗಳನ್ನು ಅದೇ ರೀತಿ ಮಾತಾಡಿ ಮುಗಿಸಿಕೊಳ್ಳಿ. ಹೆಚ್ಚು ಕಷ್ಟ ಆಗಬಹುದಾದಂಥ ವಿಷಯಗಳು ಅಥವಾ ವಿಚಾರಗಳನ್ನು ಪ್ರಭಾವ ಬಳಸಿಕೊಂಡು…

Read More