ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ? ಸಿಎಂ ಮುಂದೆ ಇದೆ ಈ ಒಂದು ಆಯ್ಕೆ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆ ಸಲ್ಲಿಕೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಜ್ಯಪಾಲ (Karnataka Governor) ಥಾವರ್ ಚಂದ್ ಗೆಹ್ಲೋಟ್ ದಿಢೀರನೆ ಬೆಂಗಳೂರು ತೊರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜಕೀಯ ವರ್ತುಲಗಳಲ್ಲಿ ಮೂಡಿದ್ದ ಈ ಗೊಂದಲಗಳ ನಡುವೆಯೇ, ರಾಜ್ಯಪಾಲರು ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದರೂ ಮುಖ್ಯಮಂತ್ರಿಗಳು ರಾಜೀನಾಮೆ…