ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ: 5 ಬೃಹತ್ ಫ್ಲೈಓವರ್‌ಗಳ ನಿರ್ಮಾಣಕ್ಕೆ ಜಿಬಿಎ ಅಧಿಕೃತ ಟೆಂಡರ್ ಆಹ್ವಾನ
ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 28: ಸಿಲಿಕಾನ್ ಸಿಟಿ ಬೆಂಗಳೂರಿನ ದೈನಂದಿನ ಟ್ರಾಫಿಕ್ ಕಿರಿಕಿರಿ ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೊನೆಗೂ ಅಧಿಕೃತವಾಗಿ ಅಖಾಡಕ್ಕಿಳಿದಿದೆ. ಹಲವು ವರ್ಷಗಳಿಂದ ಕಾಗದದ ಮೇಲೆಯೇ ನೆನಗುದಿಗೆ ಬಿದ್ದಿದ್ದ ಪ್ರಮುಖ ಮೇಲ್ಸೇತುವೆ ಯೋಜನೆಗಳಿಗೆ ಜಿಬಿಎ ಈಗ ಮರುಜೀವ ನೀಡಿದೆ. ನಗರದ ಅತ್ಯಂತ ದಟ್ಟಣೆಯ ಮತ್ತು ಪ್ರಮುಖ 5 ಭಾಗಗಳಲ್ಲಿ ಹೊಸ ಫ್ಲೈಓವರ್‌ಗಳನ್ನು ನಿರ್ಮಾಣ ಮಾಡಲು ಪ್ರಾಧಿಕಾರವು ಭರ್ಜರಿ ತಯಾರಿ ನಡೆಸಿದ್ದು, ಇದಕ್ಕಾಗಿ ಅಧಿಕೃತವಾಗಿ…