All posts by nagaraj11081993

ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಯಾವುದು? ಆರ್​ಸಿಬಿಗೆ ಯಾವ ಸ್ಥಾನ?

Source link

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

ದೆಹಲಿ, ಮಾ.21: ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಾಡ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ.

ಈ ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ (Community Kitchens) ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಗ್ಯಾಸ್ ಟ್ರಬಲ್: ಹೋಟೆಲ್ ಮಾಲೀಕರು ವಿಲ ವಿಲ; ಸೌದೆ ಒಲೆ ದರ ದುಪ್ಪಟ್ಟು

ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ 5 ಕೆಜಿ ಸಣ್ಣ ಸಿಲಿಂಡರ್ (FTL) ಒದಗಿಸುವ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಹೆಚ್ಚುವರಿ ಅನುದಾನವು ಕೇವಲ ನಿಗದಿಪಡಿಸಿದ ವಲಯಗಳಿಗೆ ತಲುಪುವಂತೆ ನೋಡಿಕೊಳ್ಳಲು ಮತ್ತು ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು, ಮಾ.21: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ ಸಚಿವರು, ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಂತರೆ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ, ಹಿಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಜನರಿಗೆ ಯಾವುದೇ ಪ್ರಯೋಜನವನ್ನು ತಲುಪಿಸಲಿಲ್ಲ ಎಂದು ಆರೋಪಿಸಿದರು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 100-130 ಡಾಲರ್ ಇದ್ದ ಕಚ್ಚಾ ತೈಲಕ್ಕೆ ಸಬ್ಸಿಡಿ ನೀಡಲಾಗಿತ್ತು. ಆದರೆ, ಆ ನಂತರದ 10-12 ವರ್ಷಗಳ ಕಾಲ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಲಾಭ ಮಾಡಿಕೊಂಡಿತೇ ಹೊರತು ಜನರಿಗೆ ಇದರ ಲಾಭ ಸಿಗಲಿಲ್ಲ ಎಂದು ಹೇಳಿದರು. ರಾಜ್ಯ ಸರ್ಕಾರ ಬಸ್ ದರ ಹೆಚ್ಚಿಸುವುದಿಲ್ಲ, ಕೇಂದ್ರ ಸರ್ಕಾರ ಇಂಧನ ಬೆಲೆ ಹೆಚ್ಚಳ ಮಾಡಬಹುದು ಎಂದು ಅವರು ಪುನರುಚ್ಚರಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಗಾಯಾಳುಗಳ ಕೂಪವಾದ ಕೆಕೆಆರ್; ಲೀಗ್​ನಿಂದ ತಂಡದ ಮೂರನೇ ಬೌಲರ್​ ಔಟ್

Source link

ಸಿನಿಮಾ ಸ್ಟೈಲ್​​ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್: ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ

ಬೆಂಗಳೂರು, ಮಾರ್ಚ್​ 21: ಹೈಫೈ ಲೈಫ್​ ಹೊಂದಿರುವ ಕೆಲವರ ಶೋಕಿ ಬೇರೆನೇ ಇರುತ್ತೆ. ಅದರಲ್ಲೂ ಕಾರುಗಳಿರುವ ಕೆಲವರು ಓವರ್​ ಮಾಡುತ್ತಾರೆ. ಕಳೆದ ಎರಡು ತಿಂಗಳ‌ ಹಿಂದೆ ಗ್ರೀನ್ ಕಲರ್ ಲ್ಯಾಂಬೋರ್ಗಿನಿ (Lamborghini) ಜಿಗ್ ಜಾಗ್ ಜರ್ನಿ ಮಾಡಿ ಸುದ್ದಿಯಾಗಿತ್ತು. ಇದೀಗ ವೈಟ್ ಕಲರ್ ಲ್ಯಾಂಬೋರ್ಗಿನಿ ಕಾರವೊಂದು ಸದ್ದು ಮಾಡುತ್ತಿದೆ. ಸರ್ಕಲ್ ನಡುವೆಯೇ ರಾಜಾ ರೋಷವಾಗಿ ಡ್ರಿಫ್ಟಿಂಗ್ ಮಾಡಲಾಗಿದೆ. ಪೊಲೀಸರ ಬಗ್ಗೆ ಗೊತ್ತಿದ್ದೂ, ಸಿನಿಮಾ ಸ್ಟೈಲ್​​ನಲ್ಲಿ ಶೋಕಿ ಮಾಡಲಾಗಿದೆ.

ಸರ್ಕಲ್ ನಡುವೆಯೇ ಡ್ರಿಫ್ಟಿಂಗ್

ಬೆಂಗಳೂರಿನ ಪ್ರಸಿದ್ಧ ಅನಿಲ್ ಕುಂಬ್ಳೆ ಸರ್ಕಲ್​​ನ ಮಧ್ಯೆದಲ್ಲಿ ಹೀಗೆ ರಾಜಾರೋಷವಾಗಿ ಕಾರಿನ ಡ್ರಿಫ್ಟಿಂಗ್​​ ಮಾಡಲಾಗಿದೆ. ಲ್ಯಾಂಬೋರ್ಗಿನಿ ಕಾರು ಚಾಲಕನೊಬ್ಬ ಸಿನಿಮಾ ಸ್ಟೈಲ್​ನಲ್ಲಿ ಡ್ರಿಫ್ಟಿಂಗ್ ಮಾಡಿ ಸುದ್ದಿಯಾಗಿದ್ದಾನೆ. ಇಂದು ಬೆಳಗಿನ ಜಾವ 2 ಅಥವಾ 3ಗಂಟೆ ಸುಮಾರಿಗೆ ಈ ರೀತಿಯಾಗಿ ಕಾರು ಸ್ಟಂಟ್ ಮಾಡಲಾಗಿದೆ. ಸುತ್ತಮುತ್ತ ಸಿಸಿಟಿವಿ, ಪೊಲೀಸ್​ ಕಣ್ಗಾವಲು, ಎಂಜಿ ರೋಡ್ ಆಗಿರುವುದರಿಂದ ರಾತ್ರಿಯಾದರೂ ವಾಹನಗಳು ಸಂಚರಿಸುತ್ತಿರುತ್ತವೆ. ಈ ಮಧ್ಯೆ ಬಳಿ ಬಣ್ಣದ ಲ್ಯಾಂಬೋರ್ಗಿನಿ ಕಾರು ಮಾಲೀಕ ಹೀಗೆ ಸಿನಿಮಾ ಸ್ಟೈಲ್​ನಲ್ಲಿ ಸರ್ಕಲ್ ನಡುವೆಯೇ ಡ್ರಿಫ್ಟಿಂಗ್ ಮಾಡಿದ್ದಾನೆ. ಅಲ್ಲದೆ ಜೋರಾಗಿ ಕೂಗಾಡುತ್ತಾ ಎಂಜಾಯ್ ಮಾಡಿದ್ದಾನೆ.

ಇದನ್ನೂ ಓದಿ: ಕಾರು ಖರೀದಿಸಿದ್ದು ಯಾರೋ, ನೋಂದಣಿ ಮಾಡಿಸಿದ್ದು ಇನ್ಯಾರದೋ ಹೆಸರಿಗೆ: ಲ್ಯಾಂಬೋರ್ಗಿನಿ ರಹಸ್ಯ ಬಯಲು

ಚಾಲಕನ ಈ ಸಾಹಸವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದು, ಪೊಲೀಸರಿಗೂ ರವಾನಿಸಿದ್ದಾರೆ. ಮಾಹಿತಿ ಬಂದ ಕೂಡಲೇ ಎಫ್​ಐಆರ್ ದಾಖಲಿಸಿಕೊಂಡಿ ಪರಿಶೀಲನೆ ಮಾಡಿದ್ದು, ಸದ್ಯ KA-05 NR 0009 ಕಾರು ನಂಬರ್​​ ಪತ್ತೆಯಾಗಿದೆ. ಆದರೆ ಮಾಲೀಕ ಯಾರು? ರಸ್ತೆಯುದ್ದಕ್ಕೂ ಈ ರೀತಿ ಜಾಲಿ ರೈಡ್ ಮಾಡಲಾಗಿದೆ, ಹೀಗೆ ಹಲವು ಆಯಾಮಗಳಲ್ಲಿ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ತನಿಖೆ ನಡೆಸಿದ್ದಾರೆ. ಚಾಲಕನನ್ನ ಪತ್ತೆ ಮಾಡಿ ಆರ್.ಸಿ ರದ್ದು ಮಾಡಿ ಕಾರು ವಶಪಡೆಯುವುದುಕ್ಕೆ ಖಾಕಿ ಮುಂದಾಗಿದೆ.

ಡಿಸಿಪಿ ಸಾಹಿಲ್ ಬಾಗ್ಲಾ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಪಶ್ಚಿಮ ವಿಭಾಗದ ಸಂಚಾರ ಪ್ರಭಾರ ಡಿಸಿಪಿ ಸಾಹಿಲ್ ಬಾಗ್ಲಾ ಪ್ರತಿಕ್ರಿಯಿಸಿದ್ದು, ಬೆಳಗಿನಜಾವ 2-3 ಗಂಟೆ ಸುಮಾರಿಗೆ ಈ ರೀತಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡು ಮಾಲೀಕನ ಪತ್ತೆ ಕಾರ್ಯ ನಡೆಸುತ್ತಿದ್ದೇವೆ. ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಯನ್ನು ಪತ್ತೆ ಹಚ್ಚುತ್ತೇವೆ. ಘಟನೆ ಸಂಬಂಧ ಆರ್​ಸಿ ಕೂಡ ಕ್ಯಾನ್ಸಲ್ ಮಾಡಲು ನಿರ್ಧರಿಸಿದ್ದೇವೆ. ಈ ರೀತಿ ರಸ್ತೆಯಲ್ಲಿ ಯಾರೂ ಕೂಡ ಸ್ಟಂಟ್ ಮಾಡಲು ಅವಕಾಶ ಇಲ್ಲ, ಹೀಗೆ ಮಾಡಿದರೆ ಆರ್​ಸಿ ರದ್ದುಗೊಳಿಸಿ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ಆಧರಿಸಿ ಚಾಲಕನ ವಿರುದ್ಧ ಎಫ್‌ಐಆರ್

ಪೊಲೀಸರು ಕೇಸ್ ಹಾಕಿ ವಾರ್ನ್ ಮಾಡಿದರೂ ಕೆಲವರು ಹಣವಿದೆ ಅಂತಾ ಈ ರೀತಿ ಶೋಕಿ ಮಾಡುವುದು ಮಾತ್ರ ನಿಲ್ಲುತ್ತಿಲ್ಲ. ಆದರೆ ಶೋಕಿಗೆ ಬೇರೆಯವರ ಪ್ರಾಣಕ್ಕೆ ತೊಂದರೆ ಆದರೆ ಯಾರು ಹೊಣೆ?

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇರಾನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ನೌರುಜ್​ನಲ್ಲಿ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ

ನವದೆಹಲಿ, ಮಾರ್ಚ್ 21: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್‌ ಅವರೊಂದಿಗೆ ಮಾತನಾಡಿದ್ದಾರೆ. ಇರಾನ್‌ನಾದ್ಯಂತ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಮೋದಿ ಖಂಡಿಸಿದ್ದು, ಇದು ಪ್ರಾದೇಶಿಕ ಸ್ಥಿರತೆಗೆ ಬೆದರಿಕೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಎಕ್ಸ್​​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್‌ ಅವರೊಂದಿಗೆ ಮಾತನಾಡಿದೆ. ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಬರೆದಿದ್ದಾರೆ.

ಇದೇವೇಳೆ ಪ್ರಧಾನಿ ಮೋದಿ ಸಂಚಾರದ ಸ್ವಾತಂತ್ರ್ಯವನ್ನು ರಕ್ಷಿಸುವ ಮಹತ್ವವನ್ನು ಪುನರುಚ್ಚರಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನದ ಮಧ್ಯೆ ಹಡಗು ಮಾರ್ಗಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅವರು ಕರೆ ನೀಡಿದ್ದಾರೆ. ಇದು ವಿಶ್ವದ ತೈಲ ಮತ್ತು ಗ್ಯಾಸ್ ವ್ಯಾಪಾರದ ಐದನೇ ಒಂದು ಭಾಗವನ್ನು ಹೊಂದಿರುವ ಪ್ರಮುಖ ಕಡಲ ಚಾಕ್‌ಪಾಯಿಂಟ್ ಜಾಗತಿಕವಾಗಿ ಇಂಧನ ಪೂರೈಕೆಯ ಮೇಲೆ ಪರಿಣಾಮ ಬೀರಿತು.

ಇದನ್ನೂ ಓದಿ: ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಬ್ರೇಕ್? ಟ್ರಂಪ್ ಆ ಸಂದೇಶದಲ್ಲಿದೆ ಮಹತ್ವದ ಸುಳಿವು!

“ಪ್ರಾದೇಶಿಕ ಸ್ಥಿರತೆಗೆ ಬೆದರಿಕೆ ಹಾಕುವ ಮತ್ತು ಜಾಗತಿಕ ಪೂರೈಕೆ ಸರಪಳಿಗಳನ್ನು ಅಡ್ಡಿಪಡಿಸುವ ಈ ಪ್ರದೇಶದಲ್ಲಿನ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಖಂಡಿಸಲಾಯಿತು. ಸಂಚಾರದ ಸ್ವಾತಂತ್ರ್ಯವನ್ನು ಕಾಪಾಡುವ, ಹಡಗು ಮಾರ್ಗಗಳು ಮುಕ್ತ ಮತ್ತು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಅವರು ಪುನರುಚ್ಚರಿಸಿದರು. ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಇರಾನ್‌ನ ನಿರಂತರ ಬೆಂಬಲವನ್ನು ಶ್ಲಾಘಿಸಿದರು” ಎಂದು ಮೋದಿ ಹೇಳಿದ್ದಾರೆ.

ಫೆಬ್ರವರಿ 28ರಂದು ಅಮೆರಿಕ-ಇಸ್ರೇಲ್ ಜಂಟಿ ದಾಳಿಯೊಂದಿಗೆ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಪ್ರಾರಂಭವಾದ ನಂತರ ಇದು ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷರಿಗೆ ಮಾಡಿದ ಎರಡನೇ ದೂರವಾಣಿ ಕರೆಯಾಗಿದೆ.

ಇದನ್ನೂ ಓದಿ: ನೀವು ಹೇಡಿಗಳು; ಇರಾನ್ ಮೇಲಿನ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ವಿರುದ್ಧ ಟ್ರಂಪ್ ಆಕ್ರೋಶ

ಮಾರ್ಚ್ 12ರಂದು ಪ್ರಧಾನಿ ಮೋದಿ ಅವರು ಪೆಜೆಶ್ಕಿಯನ್ ಅವರೊಂದಿಗೆ ಮಾತನಾಡಿದ್ದರು. ಪ್ರಾದೇಶಿಕ ಸಂಘರ್ಷದ ಬಗ್ಗೆ ತಮ್ಮ ಕಳವಳಗಳನ್ನು ತಿಳಿಸಿದ್ದರು. “ಪ್ರದೇಶದಲ್ಲಿನ ಗಂಭೀರ ಪರಿಸ್ಥಿತಿಯನ್ನು ಚರ್ಚಿಸಲು ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯನ್ ಅವರೊಂದಿಗೆ ಮಾತುಕತೆ ನಡೆಸಿದೆ. ಉದ್ವಿಗ್ನತೆಗಳ ಉಲ್ಬಣ, ಜನರ ಜೀವಹಾನಿ ಹಾಗೂ ನಾಗರಿಕ ಮೂಲಸೌಕರ್ಯಕ್ಕೆ ಹಾನಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ” ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಹೇಳಿದ್ದರು.

ಯುದ್ಧಪೀಡಿತ ಪ್ರದೇಶದಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯು ಭಾರತದ ಪ್ರಮುಖ ಆದ್ಯತೆಯಾಗಿ ಉಳಿದಿದೆ ಎಂದು ಪ್ರಧಾನಿ ಮೋದಿ ದೃಢಪಡಿಸಿದ್ದರು. ಇದರ ಜೊತೆಗೆ ಸರಕು ಮತ್ತು ಇಂಧನದ ಅಡೆತಡೆಯಿಲ್ಲದ ಸಾಗಣೆಯ ಅಗತ್ಯವೂ ಭಾರತದ ಪ್ರಮುಖ ಆದ್ಯತೆಗಳಾಗಿವೆ. ಶಾಂತಿ ಮತ್ತು ಸ್ಥಿರತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ; ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು, ಮಾ.21: ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕೋರಮಂಗಲದ ಕಸ-ರಸ ಘಟಕದಲ್ಲಿ ಹಸಿ ಕಸದಿಂದ ಬಯೋಗ್ಯಾಸ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಲಾಗಿದೆ. ಹಿಂದೆ ತ್ಯಾಜ್ಯ ವಿಲೇವಾರಿ ಸಮಸ್ಯೆಯಾಗಿದ್ದ ಈ ಸ್ಥಳದಲ್ಲಿ ಈಗ ಪ್ರತಿದಿನ 13 ಟನ್ ಹಸಿ ಕಸದಿಂದ ಗ್ಯಾಸ್ ಉತ್ಪಾದಿಸಲಾಗುತ್ತಿದೆ. 2018ರಲ್ಲಿ ಕಾರ್ಬನ್ ಮಾಸ್ಟರ್ಸ್ ಕಂಪನಿಯು 4 ಕೋಟಿ ರೂಪಾಯಿ ವೆಚ್ಚದಲ್ಲಿ ದಿನಕ್ಕೆ 8 ಟನ್ ಸಾಮರ್ಥ್ಯದ ಘಟಕವನ್ನು ಪ್ರಾರಂಭಿಸಿತ್ತು. ಇದೀಗ ಹೆಚ್ಚುವರಿ 5 ಟನ್ ಸಾಮರ್ಥ್ಯಕ್ಕೆ ಚಾಲನೆ ನೀಡಲಾಗಿದ್ದು, ಒಟ್ಟು 13 ಟನ್ ಹಸಿ ಕಸದಿಂದ ಗ್ಯಾಸ್ ಉತ್ಪಾದಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಪ್ರತಿದಿನ 2,500 ರಿಂದ 3,000 ಟನ್ ಹಸಿ ಕಸ ಉತ್ಪಾದನೆಯಾಗುತ್ತಿದ್ದು, ಅದರಲ್ಲಿ ಅರ್ಧದಷ್ಟು ಹಸಿ ಕಸವೇ ಇರುತ್ತದೆ. ಹಸಿ ಕಸವನ್ನು ಡಂಪಿಂಗ್ ಯಾರ್ಡ್‌ಗಳಿಗೆ ಸುರಿಯುವುದರಿಂದ ವಾಸನೆ, ಸೊಳ್ಳೆ ಮತ್ತು ಜಲಮೂಲಗಳ ಮಾಲಿನ್ಯದಂತಹ ಸಮಸ್ಯೆಗಳು ಉಂಟಾಗುತ್ತವೆ. ಬಯೋಗ್ಯಾಸ್ ಉತ್ಪಾದನೆಯಿಂದ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಗುರಿ ಇದೆ. ಈ ಯೋಜನೆಯು ಇತರ ಕ್ಷೇತ್ರಗಳಿಗೂ ಮಾದರಿಯಾಗಲಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

UPSC CMS 2026: 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಂಬಿಬಿಎಸ್ ಪದವೀಧರರಿಗೆ ಸುವರ್ಣಾವಕಾಶ!

ಕೇಂದ್ರ ಲೋಕಸೇವಾ ಆಯೋಗವು (UPSC) ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ (CMS) 2026ರ ಅಡಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31.

ಹುದ್ದೆಗಳ ವಿವರ ಮತ್ತು ಹಂಚಿಕೆ:

ಒಟ್ಟು 1,300ಕ್ಕೂ ಅಧಿಕ ಹುದ್ದೆಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ:

  • ವೈದ್ಯಕೀಯ ಅಧಿಕಾರಿ ದರ್ಜೆ (ಸಾಮಾನ್ಯ ಕರ್ತವ್ಯ): 864 ಹುದ್ದೆಗಳು
  • ಸಹಾಯಕ ವಿಭಾಗೀಯ ವೈದ್ಯಕೀಯ ಅಧಿಕಾರಿ: 450 ಹುದ್ದೆಗಳು
  • ದೆಹಲಿ ಮಹಾನಗರ ಪಾಲಿಕೆ (GDMO Grade-II): 30 ಹುದ್ದೆಗಳು
  • ನವದೆಹಲಿ ಮುನ್ಸಿಪಲ್ ಕೌನ್ಸಿಲ್ (MO): 14 ಹುದ್ದೆಗಳು

ಅರ್ಹತಾ ಮಾನದಂಡಗಳು:

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಭಾರತೀಯ ವೈದ್ಯಕೀಯ ಮಂಡಳಿಯಿಂದ (NMC/MCI) ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಕಡ್ಡಾಯವಾಗಿ MBBS ಪದವಿ ಪಡೆದಿರಬೇಕು.
  • ವಯೋಮಿತಿ: ಆಗಸ್ಟ್ 1, 2026ಕ್ಕೆ ಅಭ್ಯರ್ಥಿಯ ವಯಸ್ಸು 32 ವರ್ಷ ಮೀರಿರಬಾರದು (ಅಂದರೆ ಆಗಸ್ಟ್ 2, 1994ಕ್ಕಿಂತ ಮೊದಲು ಜನಿಸಿರಬಾರದು). ಮೀಸಲಾತಿ ವರ್ಗದವರಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಪರೀಕ್ಷಾ ಮಾದರಿ ಮತ್ತು ಆಯ್ಕೆ ಪ್ರಕ್ರಿಯೆ:

UPSC CMS ಆಯ್ಕೆ ಪ್ರಕ್ರಿಯೆಯು ಎರಡು ಮುಖ್ಯ ಹಂತಗಳನ್ನು ಒಳಗೊಂಡಿದೆ:

  • ಹಂತ 1 (ಕಂಪ್ಯೂಟರ್ ಆಧಾರಿತ ಪರೀಕ್ಷೆ): ತಲಾ 250 ಅಂಕಗಳ ಎರಡು ಪತ್ರಿಕೆಗಳಿರುತ್ತವೆ. ಇದರಲ್ಲಿ ಜನರಲ್ ಮೆಡಿಸಿನ್, ಸರ್ಜರಿ, ಗೈನೆಕಾಲಜಿ, ಪೀಡಿಯಾಟ್ರಿಕ್ಸ್ ಮತ್ತು ಸೋಶಿಯಲ್ ಮೆಡಿಸಿನ್ ವಿಷಯಗಳ ಮೇಲೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.
  • ಹಂತ 2 (ವ್ಯಕ್ತಿತ್ವ ಪರೀಕ್ಷೆ/ಸಂದರ್ಶನ): ಮೊದಲ ಹಂತದಲ್ಲಿ ಉತ್ತೀರ್ಣರಾದವರನ್ನು 100 ಅಂಕಗಳ ಸಂದರ್ಶನಕ್ಕೆ ಕರೆಯಲಾಗುತ್ತದೆ.

ಅಂತಿಮವಾಗಿ ಆಯ್ಕೆಯಾದ ವೈದ್ಯರನ್ನು ಭಾರತೀಯ ರೈಲ್ವೆ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಸೇರಿದಂತೆ ವಿವಿಧ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 200ರೂ.  ಶುಲ್ಕವಿರುತ್ತದೆ. ಆದರೆ ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ (PwD) ಅಭ್ಯರ್ಥಿಗಳಿಗೆ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಜೀವನದ ಈ ಪ್ರಮುಖ ವಿಷಯಗಳ ಬಗ್ಗೆ ಎಂದಿಗೂ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಜೀವನದಲ್ಲಿ ತಾಳ್ಮೆ ಎನ್ನುವಂತಹದ್ದು ತುಂಬಾನೇ ಮುಖ್ಯ. ಈ ತಾಳ್ಮೆ ಮತ್ತು ಸಹನೆ ಯಶಸ್ವಿ ಜೀವನಕ್ಕೆ ದಾರಿಮಾಡಿಕೊಡುತ್ತದೆ. ಹೀಗಿದ್ದರೂ ಸಹ ಅನೇಕರು ತಾಳ್ಮೆಯನ್ನು ಕಳೆದುಕೊಂಡು ಆತುರದ ನಿರ್ಧಾರಗಳನ್ನು (hasty decisions) ತೆಗೆದುಕೊಳ್ಳುತ್ತಾರೆ. ಈ ಆತುರದ ನಿರ್ಧಾರಗಳಿಂದ ಒಳ್ಳೆಯದಕ್ಕಿಂತ ಕೆಟ್ಟದ್ದು ಸಂಭವಿಸುವುದೇ ಹೆಚ್ಚು. ಹಾಗಾಗಿ ಯಾವುದೇ ವಿಚಾರದಲ್ಲೂ ಸಹ ಆತುರ ಪಡಬಾರದು ಎಂದು ಹಿರಿಯರು ಕಿವಿ ಮಾತು ಹೇಳುವುದು. ಅದರಲ್ಲೂ ಯಶಸ್ವಿ, ಸಮೃದ್ಧ ಜೀವನವನ್ನು ಬಯಸುವವರು ಜೀವನಕ್ಕೆ ಸಂಬಂಧಿಸಿದ ಈ ಐದು ವಿಚಾರಗಳ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗಲೂ ಆತುರ ಪಡಲೇಬಾರದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಹಾಗಿದ್ರೆ ಚಾಣಕ್ಯರ ಪ್ರಕಾರ ಯಶಸ್ವಿ ಜೀವನಕ್ಕಾಗಿ ಯಾವ ವಿಚಾರಗಳ ಬಗ್ಗೆ ಆತುರ ಪಡಬಾರದು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯೋಣ.

ಜೀವನದಲ್ಲಿ ಎಂದಿಗೂ ಈ ವಿಚಾರಗಳಲ್ಲಿ ಆತುರ ಪಡಬಾರದು:

ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಬೇಡ: ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಮನುಷ್ಯನಾದವನು ತನ್ನ ಜೀವನದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಲೇಬಾರದು ಎಂದು ಹೇಳಿದ್ದಾರೆ. ಮುಖ್ಯವಾಗಿ  ಉದ್ಯೋಗ, ಅಥವಾ ಹೊಸ ಉದ್ಯಮವನ್ನು ಪ್ರಾರಂಭಿಸುವಂತಹ ಪ್ರಮುಖ ಸಂಗತಿಗಳ ಬಗ್ಗೆ ಆತುರಪಡಬಾರದು ಎಂದು ಹೇಳುತ್ತಾರೆ. ಸಂಪೂರ್ಣ ಮಾಹಿತಿಯನ್ನು ತಿಳಿಯದೆ ಮತ್ತು ಮುಂದೆ ಅದರಿಂದ ಏನೆಲ್ಲಾ ತೊಂದರೆಗಳು ಎದುರಾಗಬಹುದು ಎಂಬುದನ್ನು ತಿಳಿಯದೆ ತೆಗೆದುಕೊಳ್ಳುವ ನಿರ್ಧಾರಗಳು ನಂತರದ ಜೀವನದಲ್ಲಿ ಗಮನಾರ್ಹ ಸಮಸ್ಯೆಗಳನ್ನು ಉಂಟುಮಾಡಬಹುದು. ಆದ್ದರಿಂದ ಜೀವನದ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗಲೂ ತಾಳ್ಮೆಯಿಂದ ವರ್ತಿಸುವುದು ಅತ್ಯಗತ್ಯ.

ಸಂಬಂಧಗಳನ್ನು ಬೆಳೆಸುವುದು ಮತ್ತು ಮುರಿಯುವುದು: ಚಾಣಕ್ಯ ನೀತಿಯ ಪ್ರಕಾರ, ಯಾರೊಂದಿಗಾದರೂ ಸ್ನೇಹ, ಸಂಬಂಧ ಬೆಳೆಸುವುದು ಅಥವಾ ಸಂಬಂಧವನ್ನು ಮುರಿಯುವುದು ಎರಡೂ ಬಹಳ ಸೂಕ್ಷ್ಮ ವಿಷಯಗಳು. ಕೆಲವೊಮ್ಮೆ, ಜನರು ಕೋಪದಿಂದ ಸಂಬಂಧವನ್ನು ಮುರಿಯುತ್ತಾರೆ, ಭಾವನೆಗಳಿಗೆ ಒಳಗಾಗಿ ಸಂಬಂಧವನ್ನು ಬೆಳೆಸುತ್ತಾರೆ. ಸಂಬಂಧಕ್ಕೆ ಸಂಬಂಧಿಸಿದ ಈ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದರಿಂದ ಮುಂದೊಂದು ದಿನ ಪಶ್ಚಾತಾಪ ಪಡಬೇಕಾಗುತ್ತದೆ, ಹಾಗಾಗಿ ಸಂಬಂಧಗಳ ವಿಷಯಕ್ಕೆ ಬಂದಾಗ, ನೀವು ಯಾವಾಗಲೂ ತಾಳ್ಮೆ ಮತ್ತು ಬುದ್ಧಿವಂತಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.

ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ: ಹಣದ ವಿಚಾರಗಳಲ್ಲಿ  ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಆರ್ಥಿಕ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ ಚಾಣಕ್ಯ.  ಹೂಡಿಕೆ ಮಾಡುವಾಗ, ಆಸ್ತಿ-ಬಂಗಾರದಂತಹ ಮೌಲ್ಯಯುತ ವಸ್ತುಗಳನ್ನು ಖರೀದಿಸುವಾಗ ನೂರು ಬಾರಿ ಯೋಚನೆ ಮಾಡಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.

ಇದನ್ನೂ ಓದಿ: ಜೀವನದಲ್ಲಿ ಮೂರು ವಿಷಯಗಳ ನಿರ್ಲಕ್ಷ್ಯ ಸಲ್ಲದು ಎನ್ನುತ್ತಾರೆ ಚಾಣಕ್ಯ

ಕೋಪದಲ್ಲಿರುವಾಗ ನಿರ್ಧಾಗಳನ್ನು ತೆಗೆದುಕೊಳ್ಳಬೇಡಿ: ಚಾಣಕ್ಯ ಹೇಳುವಂತೆ ಕೋಪವು ವ್ಯಕ್ತಿಯ ಬಹುದೊಡ್ಡ ಶತ್ರುವಾಗಿದ್ದು, ಇದು ಒಬ್ಬ ವ್ಯಕ್ತಿಯನ್ನು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ  ಮಾಡುತ್ತದೆ. ಕೋಪದ ಸಮಯದಲ್ಲಿ ತೆಗೆದುಕೊಳ್ಳುವ ಮಾತುಗಳು ಮತ್ತು ಕ್ರಿಯೆಗಳು ನಿಮ್ಮ ಸಂಬಂಧಗಳಿಗೆ ಮಾತ್ರವಲ್ಲದೆ ನಿಮ್ಮ ಖ್ಯಾತಿಗೂ ತೀವ್ರ ಹಾನಿಯನ್ನುಂಟುಮಾಡುತ್ತವೆ. ಹಾಗಾಗಿ ಕೋಪಗೊಂಡ ಸಂದರ್ಭದಲ್ಲಿ ಪ್ರತಿಕ್ರಿಯಿಸುವ ಮೊದಲು ಸ್ವಲ್ಪ ಸಮಯ ತೆಗೆದುಕೊಳ್ಳಿ ಮತ್ತು ನಂತರ ಶಾಂತವಾಗಿ ವಿಷಯಗಳ ಬಗ್ಗೆ ಯೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳಿ.

ಯಾರನ್ನಾದರೂ ತಕ್ಷಣವೇ ನಂಬಲು ಹೋಗಬೇಡಿ: ಕೆಲವರು ತಮಗೆ ಯಾರೇ ಪರಿಚಯವಾದರೂ ಅವರನ್ನು ಬಹುಬೇಗನೆ ನಂಬುತ್ತಾರೆ. ಹೀಗೆ ನೀವು ಭೇಟಿಯಾಗುವ ಪ್ರತಿಯೊಬ್ಬರೂ ವಿಶ್ವಾಸಾರ್ಹರಲ್ಲ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಏನು ಯೋಚಿಸದೆ ಯಾರನ್ನಾದರೂ ಕುರುಡಾಗಿ ನಂಬುವುದರಿಂದ ನೀವು ನಂಬಿಕೆ ದ್ರೋಹಗಳಿಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಯಾರನ್ನೂ ಸಹ ಆತುರದಲ್ಲಿ ನಂಬಲು ಹೋಗಬೇಡಿ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಇತ್ತೀಚೆಗಷ್ಟೆ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ಶೋನಲ್ಲಿ ಪವನ್ ಕಲ್ಯಾಣ್, ಚಿರಂಜೀವಿ, ಪವನ್ ಕಲ್ಯಾಣ್ ಪತ್ನಿ, ಚಿರಂಜೀವಿ ಪತ್ನಿ, ನಿರ್ದೇಶಕ ಹರೀಶ್ ಶಂಕರ್, ನಟಿ ಶ್ರೀಲೀಲಾ ಇನ್ನೂ ಹಲವರು ಭಾಗಿ ಆಗಿದ್ದರು. ನಟ ಚಿರಂಜೀವಿ ಅವರು, ಶ್ರೀಲೀಲಾ ಪಕ್ಕದಲ್ಲೇ ಕೂತು ಇಡೀ ಸಿನಿಮಾ ನೋಡಿದರು. ಸಿನಿಮಾ ನೋಡುವಾಗ ನಗುತ್ತಾ, ಕುಳಿತಿದ್ದ ಸೀಟಿನಲ್ಲೇ ಡ್ಯಾನ್ಸ್ ಮಾಡುತ್ತಾ ಸಖತ್ ಎಂಜಾಯ್ ಮಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link