ಇನ್ಸ್ಪೆಕ್ಟರ್ ಸಂದೇಶ್ ಕಾಮಕಾಂಡ ಕೇಸ್ಗೆ ಬಿಗ್ ಟ್ವಿಸ್ಟ್: ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು
ಮಂಗಳೂರು, ಮಾರ್ಚ್ 21: ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ (Police inspector Sandesh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಹಾಗೂ ಪ್ರೇರಿತ ಎಂಬುದು ಸಾಬೀತಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್…