ರೋಗಿ ಜೊತೆ ಅನೈತಿಕ ಸಂಬಂಧ; ಭಾರತ ಮೂಲದ ಇಂಗ್ಲೆಂಡ್ ವೈದ್ಯನ ಲೈಸೆನ್ಸ್ ರದ್ದು!
ನವದೆಹಲಿ, ಮೇ 27: ಯುನೈಟೆಡ್ ಕಿಂಗ್ಡಮ್ (ಇಂಗ್ಲೆಂಡ್)ನಲ್ಲಿ ಭಾರತೀಯ ಮೂಲದ ವೈದ್ಯರೊಬ್ಬರು ರೋಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಲ್ಲದೆ ಆಕೆಗೆ ಕಾನೂನುಬಾಹಿರವಾಗಿ ಅಫೀಮು ಆಧಾರಿತ ಮಾದಕ ದ್ರವ್ಯಗಳನ್ನು ನೀಡಿದ ಗಂಭೀರ ಆರೋಪದ ಮೇಲೆ ಅವರ ವೈದ್ಯಕೀಯ ಲೈಸೆನ್ಸ್ ಅನ್ನು ರದ್ದುಗೊಳಿಸಲಾಗಿದೆ. ಆರೋಪಿ ವೈದ್ಯರ ಹೆಸರು ಡಾ. ಚಿರಾಗ್ ಪಟೇಲ್. ಇವರು ಕಾರ್ಡಿಫ್‌ನ ‘ಯೂನಿವರ್ಸಿಟಿ ಹಾಸ್ಪಿಟಲ್ ಆಫ್ ವೇಲ್ಸ್’ನಲ್ಲಿ ಕನ್ಸಲ್ಟೆಂಟ್ ನ್ಯೂರೋಸರ್ಜನ್ ಆಗಿ 2018ರಿಂದ ಸೇವೆ ಸಲ್ಲಿಸುತ್ತಿದ್ದರು. ಇಡೀ ವೇಲ್ಸ್ ಭಾಗದಲ್ಲಿ ಈ ನಿರ್ದಿಷ್ಟ ಬೆನ್ನುಮೂಳೆಯ ಕಾಯಿಲೆಗೆ ಚಿಕಿತ್ಸೆ ನೀಡಬಲ್ಲ…