ಪಿರಿಯಡ್ಸ್ ಸಮಯದಲ್ಲಿ ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಎಷ್ಟು ಮುಖ್ಯ ಗೊತ್ತಾ?
ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಪಿರಿಯಡ್ಸ್ (Periods) ಹೈಜೀನ್ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಈಗ ಮಹಿಳೆಯರು ತಾವು ಬಳಸುವ ಪ್ಯಾಡ್‌ನ ಗುಣಮಟ್ಟ ಮತ್ತು ಅದು ಚರ್ಮದ ಮೇಲೆ ಬೀರುವ ಪರಿಣಾಮಗಳತ್ತವೂ ಹೆಚ್ಚು ಗಮನ ಹರಿಸುತ್ತಿದ್ದಾರೆ. ತಜ್ಞರ ಪ್ರಕಾರ, ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡದಿದ್ದರೆ ಚರ್ಮದ ಸಮಸ್ಯೆಗಳು ಮತ್ತು ಸೋಂಕಿನ ಅಪಾಯ ಹೆಚ್ಚಾಗಬಹುದು. ವೈದ್ಯರು ನೀಡುವ ಮಾಹಿತಿ ಪ್ರಕಾರ, ಸ್ಯಾನಿಟರಿ ಪ್ಯಾಡ್‌ನ ಮೇಲಿನ ಪದರ ದೇಹದ ಸೂಕ್ಷ್ಮ ಭಾಗದೊಂದಿಗೆ ನೇರ ಸಂಪರ್ಕದಲ್ಲಿರುತ್ತದೆ. ಪ್ಯಾಡ್‌ನಲ್ಲಿ ಹೆಚ್ಚು ಸುಗಂಧ ದ್ರವ್ಯಗಳು ಅಥವಾ…