Headlines

nagaraj11081993

World Forest Day 2026: ಹಸಿರೇ ಉಸಿರು… ಕಾಡನ್ನು ಬೆಳೆಸಿ ನಾಡನ್ನು ಉಳಿಸೋಣ

ಅರಣ್ಯಗಳು (Forest) ಭೂಮಿಯ ಜೀವಾಳವಾಗಿದ್ದು, ಈ ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜೀವರಾಶಿಗಳಿಗೂ ಆಮ್ಲಜನಕ, ಆಹಾರ, ಔಷಧ ಮತ್ತು ಜೀವನೋಪಾಯವನ್ನು ಒದಗಿಸುತ್ತಿವೆ. ಜೊತೆಗೆ ಪರಿಸರವನ್ನು ಸಮತೋಲನದಲ್ಲಿಡುವ ಮಹತ್ತರ ಕಾರ್ಯವನ್ನೂ ಮಾಡುತ್ತಿವೆ.  ವಿಶ್ವಸಂಸ್ಥೆಯ ಪ್ರಕಾರ, ವಿಶ್ವಾದ್ಯಂತ ಸುಮಾರು 1.6 ಶತಕೋಟಿ ಜನರು ತಮ್ಮ ಆಹಾರ, ಆಶ್ರಯ, ಔಷಧ ಮತ್ತು ಜೀವನೋಪಾಯಕ್ಕಾಗಿ ನೇರವಾಗಿ ಕಾಡುಗಳನ್ನು ಅವಲಂಬಿಸಿದ್ದಾರೆ. ನಾವು ಬಳಸುವ ಔಷಧಿಗಳಲ್ಲಿ ಶೇ. 25 ರಷ್ಟು ಈ ಕಾಡುಗಳಿಂದಲೇ ಬರುತ್ತವೆ. ಇಂದು ಕೈಗಾರಿಕೀಕರಣ, ನಗರೀಕರಣದ ಹೆಸರಿನಲ್ಲಿ ಕಾಡುಗಳನ್ನು ನಾಶಪಡಿಸಲಾಗುತ್ತಿದೆ. ಇದು ನೇರವಾಗಿ ಹವಮಾನ…

Read More

ಉದ್ಯೋಗ ನೇಮಕಾತಿಗೂ AI ಸಂಕಷ್ಟ! ಕಾಪಿ ಪೇಸ್ಟ್ ಅರ್ಜಿಗಳಿಂದ ರಿಕ್ರೂಟರ್​ಗೆ ತಲೆನೋವು

ಬೆಂಗಳೂರು, ಮಾರ್ಚ್​ 21: ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಎಐ (AI) ಅಂದರೆ ಕೃತಕ ಬುದ್ಧಿಮತ್ತೆ ಕಂಟಕ ತರಬಹುದು ಎಂಬ ಆತಂಕದ ಜೊತೆಗೆ ಉದ್ಯೋಗಿಗಳ ಕೆಲಸವನ್ನೂ ಕಸಿದುಕೊಳ್ಳಬಹುದೆಂಬ ಭಯ ಈಗಾಗಲೇ ಸೃಷ್ಟಿಯಾಗಿದೆ. ಇದರ ಜೊತೆಗೆ ಎಐನಿಂದ ನೇಮಕಾತಿ ಪ್ರಕ್ರಿಯೆಯೂ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂಬ ಅಭಿಪ್ರಾಯಗಳು ಹರಿದಾಡಿದ್ದು, ಈ ಬಗ್ಗೆ ಬೆಂಗಳೂರು ಮೂಲದ ಟೇಕ್ ಯು ಫಾರ್ವರ್ಡ್​ ಸಂಸ್ಥೆಯ ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕಾಪಿ ಪೇಸ್ಟ್ ಅರ್ಜಿಗಳೇ ಹೆಚ್ಚು…

Read More

ಪೆಟ್ರೋಲ್, ಡೀಸೆಲ್ ಖಾಲಿ ವದಂತಿ: ಚಾಮರಾಜನಗರ, ಕೊಳ್ಳೇಗಾಲದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು

ಚಾಮರಾಜನಗರ, ಮಾರ್ಚ್ 21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದ ಆತಂಕ ನಡುವೆ ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್ ಕೊರತೆ ವದಂತಿ ಭಾರೀ ಗೊಂದಲಕ್ಕೆ ಕಾರಣವಾಗಿದೆ. ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ಪಟ್ಟಣಗಳಲ್ಲಿ ಪೆಟ್ರೋಲ್ ಸಿಗುವುದಿಲ್ಲ ಎಂಬ ವದಂತಿ ಹಬ್ಬಿದ್ದು, ವಾಹನ ಸವಾರರು ಏಕಾಏಕಿ ಪೆಟ್ರೋಲ್ ಬಂಕ್‌ಗಳತ್ತ ಮುಗಿಬಿದ್ದರು. ಇದರಿಂದ ಹಲವು ಬಂಕ್‌ಗಳಲ್ಲಿ ಉದ್ದ ಸಾಲುಗಳು ಕಂಡುಬಂದವು. ಗ್ಯಾಸ್ ಕೊರತೆಯಂತೆಯೇ ಪೆಟ್ರೋಲ್ ಹಾಗೂ ಡೀಸೆಲ್‌ಗೂ ಸಮಸ್ಯೆ ಉಂಟಾಗಬಹುದು ಎಂಬ ಭಯ ಜನರಲ್ಲಿ ಹೆಚ್ಚಾಗಿದ್ದು, ಮುಂಜಾಗ್ರತೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಖರೀದಿಸಲು…

Read More

ತೀವ್ರ ಗತಿಯಲ್ಲಿ ಕುಸಿದ ‘ಉಸ್ತಾದ್ ಭಗತ್ ಸಿಂಗ್’ ಕಲೆಕ್ಷನ್; ಒಂದಕಿಂಗೆ ಬಂದ ಗಳಿಕೆ

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಯಿತು. ಆದರೆ, ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡಿತ್ತು. ಈ ಚಿತ್ರದ ಮೊದಲ ದಿನದ ಕಲೆಕ್ಷನ್ 34.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ, ಎರಡನೇ ದಿನ ಚಿತ್ರದ ಗಳಿಕೆ ತೀವ್ರವಾಗಿ ಕುಸಿದಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಮುಂದಿನ ದಿನಗಳ ಕಲೆಕ್ಷನ್ ಆಧಾರದ ಮೇಲೆ ಸಿನಿಮಾದ ಭವಿಷ್ಯ ನಿರ್ಧಾರ ಆಗಲಿದೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗೆ ಪವನ್ ಕಲ್ಯಾಣ್ ಹೀರೋ. ಅವರು ರಾಜಕೀಯಕ್ಕೆ ಸೇರಿದ್ದರಿಂದ…

Read More

ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ಸಂದರ್ಭದ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!

ನವದೆಹಲಿ, ಮಾರ್ಚ್ 21: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಎದುರಾದ ತುರ್ತು ಪರಿಸ್ಥಿತಿ ಮತ್ತೆ ಸೃಷ್ಟಿಯಾಗುತ್ತದೆಯಾ? ಇಂಥದ್ದೊಂದು ಪ್ರಶ್ನೆಗೆ ಇದೀಗ ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ಮಾಡಿರುವ ಶಿಫಾರಸುಗಳು ಕಾರಣವಾಗಿದೆ. ಸದ್ಯ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಬಿಕ್ಕಟ್ಟಿನ ಸನ್ನಿವೇಶ ಸೃಷ್ಟಿಯಾಗಿದೆ. ಇದನ್ನು ನಿರ್ವಹಿಸಲು ಇಂಧನ ಮತ್ತು ಗ್ಯಾಸ್ ಬಳಕೆ ಕಡಿತಗೊಳಿಸುವಂತೆ ಐಇಎ ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಜಗತ್ತಿನಲ್ಲಿ ಲಾಕ್‌ಡೌನ್ ಪರಿಸ್ಥಿತಿ ಸೃಷ್ಟಿಯಾಗಬಹುದು ಎಂಬ ಕಳವಳಗಳ ನಡುವೆ ಈ ಕ್ರಮಗಳನ್ನು ಸೂಚಿಸಲಾಗಿದೆ. ಪೆಟ್ರೋಲ್ ಉಳಿಸುವುದಕ್ಕಾಗಿ…

Read More

ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?

ತುಮಕೂರು, ಮಾರ್ಚ್​ 21: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59) ಆತ್ಮಹತ್ಯೆ (suicide) ಮಾಡಿಕೊಂಡ ಘಟನೆ ಭಾರಿ ವಿವಾದ ಎಬ್ಬಿಸಿದೆ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ. ಮೇಲಾಧಿಕಾರಿ ಕಿರುಕುಳದಿಂದ ಬೇಸತ್ತಿದ್ದ ಮಲ್ಲಿಕಾರ್ಜುನ ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ….

Read More

‘ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ’; ರವಿಚಂದ್ರನ್

ನಟ ರವಿಚಂದ್ರನ್ ಅವರು ‘ಕ್ರೇಜಿ ಬ್ರಹ್ಮ’ ಈವೆಂಟ್ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಅವರು ಹಳೆದ ದಿನಗಳನ್ನು ನೆನಪಿಸಿಕೊಂಡರು. ರವಿಚಂದ್ರನ್ ಅವರು ರಾಜ್​​ಕುಮಾರ್, ಅಂಬರೀಷ್ ಮೊದಲಾದವರ ಜೊತೆ ಬೆಳೆದವರು. ಹೀಗಾಗಿ, ಅವರು ತಮ್ಮನ್ನು ತಾವು ಲಕ್ಕಿ ಎಂದು ಕರೆದುಕೊಂಡಿದ್ದಾರೆ. ಅವರಿಂದಾಗಿಯೇ ಇಲ್ಲಿರೋದಾಗಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇರಾನ್​ನ 140 ಮಿಲಿಯನ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಂತೆ ಅಮೆರಿಕ!

ವಾಷಿಂಗ್ಟನ್, ಮಾರ್ಚ್ 21: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಾದ್ಯಂತ ಕಚ್ಚಾ ತೈಲ, ಅಡುಗೆ ಅನಿಲ ಸೇರಿದಂತೆ ತೀವ್ರ ಇಂಧನ ಬಿಕ್ಕಟ್ಟು ಎದುರಾಗಿದೆ. ಇಂಥ ಸನ್ನಿವೇಶದಲ್ಲಿ ಇದೀಗ ಅಮೆರಿಕ ಮಹತ್ವದ ಹೇಳಿಕೆ ನೀಡಿದೆ. ಸಮುದ್ರದಲ್ಲಿ ಸಿಲುಕಿರುವ, ಇರಾನ್‌ಗೆ ಸೇರಿದ 140 ಮಿಲಿಯನ್ ಬ್ಯಾರೆಲ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡಿ ಇಂಧನ ಪೂರೈಕೆಯನ್ನು ಸುಗಮಗೊಳಿಸುವುದಾಗಿ ಅಮೆರಿಕದ ಖಜಾನೆ ಸಚಿವ ಸ್ಕಾಟ್ ಬೆಸೆಂಟ್ (Scott Bessent) ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಸಂದೇಶದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಅಷ್ಟೇ ಅಲ್ಲದೆ…

Read More

Daily Devotional: ಪೂಜೆಯ ಫಲ ಸಿಗಬೇಕೆ? ಹಾಗಾದರೆ ಮಡಿ ಮತ್ತು ಶಿಸ್ತಿನ ಈ ರಹಸ್ಯಗಳನ್ನು ತಿಳಿಯಿರಿ

ನಮ್ಮ ಜೀವನ ನಿರ್ವಹಣೆಯಲ್ಲಿ ಭಗವಂತನ ಆಶ್ರಯವನ್ನು ಪಡೆಯುವುದು ಅತ್ಯಗತ್ಯ. ಇದಕ್ಕಾಗಿ ಪೂಜೆ, ಪುನಸ್ಕಾರ, ಹವನ, ಯಜ್ಞ, ಯಾಗಾದಿಗಳು, ಮತ್ತು ಜಪ-ತಪಗಳಂತಹ ವಿವಿಧ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ ನಮ್ಮ ಭಾವನೆಗಳಿಗೆ ಅನುಗುಣವಾಗಿ ಭಗವಂತನನ್ನು ಆರಾಧಿಸುತ್ತೇವೆ. ಭಗವಂತನು ಸರ್ವಾಂತರ್ಯಾಮಿ, ಸರ್ವವ್ಯಾಪಿ ಮತ್ತು ಸರ್ವಶಕ್ತನಾಗಿರುತ್ತಾನೆ. ಆದರೆ, ಇಂತಹ ಆರಾಧನೆಯಲ್ಲಿ ಮಡಿಯ ಅಗತ್ಯವಿದೆಯೇ ಎಂಬ ಪ್ರಶ್ನೆ ಹಲವು ಬಾರಿ ಉದ್ಭವಿಸುತ್ತದೆ. ಮಡಿಯಿಂದಲೇ ಪೂಜೆ ಮಾಡಬೇಕಾ ಎಂಬುದು ಹಲವರ ಅನುಮಾನ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ…

Read More

‘ಧುರಂಧರ್ 2’ ಸಿನಿಮಾ ತಿರಸ್ಕರಿಸಿದ ಆ ಸ್ಟಾರ್ ನಟನಿಗೆ ಈಗ ಬೇಸರ

ಧುರಂಧರ್ 2 ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಮೊದಲ ಎರಡು ದಿನಗಳಲ್ಲಿ, ಈ ಚಿತ್ರವು ವಿಶ್ವಾದ್ಯಂತ 240 ಕೋಟಿ ಗಳಿಸಿದೆ. ಭಾರತದಲ್ಲಿ, ಈ ಚಿತ್ರವು 100 ಕೋಟಿ ಗಡಿ ದಾಟಿದೆ. ಮುಂದಿನ ಕೆಲವು ದಿನಗಳಲ್ಲಿ, ಧುರಂಧರ್ 2 ಭಾರತೀಯ ಚಿತ್ರರಂಗದಲ್ಲಿ ಹೊಸ ಗಳಿಕೆಯ ಇತಿಹಾಸವನ್ನು ಸೃಷ್ಟಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಈ ಚಿತ್ರವನ್ನು ನೋಡಿದ ನಂತರ ಚಿತ್ರಮಂದಿರದಿಂದ ಹೊರಬರುವ ಪ್ರತಿಯೊಬ್ಬರೂ ಈ ಚಿತ್ರವನ್ನು ಹೊಗಳುತ್ತಿದ್ದಾರೆ. ಏಕೆಂದರೆ ಧುರಂಧರ್‌ನ ಮೊದಲ ಭಾಗವು ಕೊನೆಗೊಂಡ ತಿರುವು ಅನೇಕ ಪ್ರಶ್ನೆಗಳಿಗೆ ಉತ್ತರಿಸದೆ…

Read More