ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?
ತುಮಕೂರು, ಮಾರ್ಚ್ 21: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59) ಆತ್ಮಹತ್ಯೆ (suicide) ಮಾಡಿಕೊಂಡ ಘಟನೆ ಭಾರಿ ವಿವಾದ ಎಬ್ಬಿಸಿದೆ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ. ಮೇಲಾಧಿಕಾರಿ ಕಿರುಕುಳದಿಂದ ಬೇಸತ್ತಿದ್ದ ಮಲ್ಲಿಕಾರ್ಜುನ ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ….