ಮುನಿಸಿಕೊಂಡ ಬಾಲಕಿಯನ್ನು ಮನೆಗೆ ಕರೆಸಿ ಊಟ ಬಡಿಸಿದ ರಶ್ಮಿಕಾ ಮಂದಣ್ಣ, ವಿಜಯ್
ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ದಂಪತಿಯು ತಮ್ಮ ಪುಟ್ಟ ಅಭಿಮಾನಿಯೊಬ್ಬಳ ಆಸೆಯನ್ನು ಈಡೇರಿಸುವ ಮೂಲಕ ಫ್ಯಾನ್ಸ್ ಮನ ಗೆದ್ದಿದ್ದಾರೆ. ತನ್ನನ್ನು ಮದುವೆಗೆ ಆಹ್ವಾನಿಸಿಲ್ಲ ಎಂದು ಮುನಿಸಿಕೊಂಡಿದ್ದ ಬಾಲಕಿಯನ್ನು ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿಕೊಂಡು ಪ್ರೀತಿಯಿಂದ ಆತಿಥ್ಯ ನೀಡಿದ್ದಾರೆ. ಈ ವಿಡಿಯೋವನ್ನು ಬಾಲಕಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಫೆಬ್ರವರಿ 28ರಂದು ರಶ್ಮಿಕಾ ಮತ್ತು ವಿಜಯ್ ಅದ್ದೂರಿಯಾಗಿ ವಿವಾಹವಾಗಿದ್ದರು. ಈ ಸಂದರ್ಭದಲ್ಲಿ…