BESCOM Power Cut: ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ, ವಿವರ ಇಲ್ಲಿದೆ
ಬೆಂಗಳೂರು, ಮಾರ್ಚ್ 21: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ (BESCOM) ವ್ಯಾಪ್ತಿಯ ಹಲವು ಕಡೆಗಳಲ್ಲಿ ಮಾರ್ಚ್ 22 ರಿಂದ 25 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಮಾರ್ಚ್ 22ರಂದು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಮತ್ತು ಲೈನ್ ಅಪ್‌ಗ್ರೇಡ್ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ. ಇದರ ಪರಿಣಾಮವಾಗಿ ಅನೇಕ ಬಡಾವಣೆಗಳು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ….