All posts by nagaraj11081993

ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ನವದೆಹಲಿ, ಮಾರ್ಚ್ 20: ಸರ್ಕಾರಿ ಸ್ವಾಮ್ಯದ ಮೂರು ತೈಲ ಮಾರುಕಟ್ಟೆ ಕಂಪನಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಿರುವ ಬೆನ್ನಲ್ಲೇ ಇಂಡಿಯನ್ ಆಯಿಲ್ ಸಂಸ್ಥೆಯು ಕೈಗಾರಿಕಾ ಡೀಸಲ್ ಬೆಲೆಯನ್ನು (Industrial Diesel prices) ಹೆಚ್ಚಿಸಿದೆ. ಒಂದು ಲೀಟರ್​ಗೆ 87.57 ರೂ ಇದ್ದ ಡೀಸಲ್ ಬೆಲೆ 109.59 ರೂಗೆ ಏರಿಸಲಾಗಿದೆ. ಬೆಲೆಯಲ್ಲಿ ಬರೋಬ್ಬರಿ ಶೇ. 25ರಷ್ಟು ಹೆಚ್ಚಳ ಆಗಿದೆ.

ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಮತ್ತು ಅನಿಲಗಳ ಹಡಗುಗಳ ಸಾಗಣೆಗೆ ನಿರ್ಬಂಧ ಇರುವುದರಿಂದ ಜಾಗತಿಕವಾಗಿ ಇವುಗಳ ಸರಬರಾಜು ಕುಂಠಿತಗೊಂಡಿದೆ. ಭಾರತಕ್ಕೂ ಇವುಗಳ ಕೊರತೆ ಕಾಡುತ್ತಿದೆ. ಜನಸಾಮಾನ್ಯರಿಗೆ ಬಾಧೆಯಾಗುವುದನ್ನು ತಪ್ಪಿಸಲು ಸರ್ಕಾರ ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡದಂತೆ ಎಚ್ಚರ ವಹಿಸುತ್ತಿದೆ.

ಇದನ್ನೂ ಓದಿ: ಜೊಮಾಟೊದಲ್ಲಿ ಫುಡ್ ಆರ್ಡರ್ ಮತ್ತಷ್ಟು ದುಬಾರಿ; ಪ್ಲಾಟ್​ಫಾರ್ಮ್ ಶುಲ್ಕ ಶೇ 19ರಷ್ಟು ಏರಿಕೆ

ಈಗ ಇರಾನ್ ಯುದ್ಧದ ಅವಧಿ ನಿರೀಕ್ಷೆಮೀರಿ ಹಿಗ್ಗುತ್ತಿರುವುದರಿಂದ ತೈಲ ಪೂರೈಕೆ ಮತ್ತಷ್ಟು ಕಠಿಣಗೊಂಡಿದೆ. ಈ ಕಾರಣಕ್ಕೆ ಸರ್ಕಾರಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಬಹುದು. ಹೀಗಾಗಿ, ಪ್ರೀಮಿಯಮ್ ಪೆಟ್ರೋಲ್, ಔದ್ಯಮಿಕ ಡೀಸಲ್ ಬೆಲೆಗಳನ್ನು ಸದ್ಯಕ್ಕೆ ಹೆಚ್ಚಿಸಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಮಾಮೂಲಿಯ ಪೆಟ್ರೋಲ್, ಡೀಸಲ್ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇದ್ದೇ ಇದೆ.

ಈಗ ಕೈಗಾರಿಕಾ ಡೀಸಲ್ ಅನ್ನು ವಿವಿಧ ಕೈಗಾರಿಕೆಗಳು ಬಳಸುತ್ತವೆ. ವಿದ್ಯುತ್ ಉತ್ಪಾದನೆ, ಮ್ಯಾನುಫ್ಯಾಕ್ಚರಿಂಗ್ ಇತ್ಯಾದಿ ಕ್ಷೇತ್ರದ ಕಂಪನಿಗಳು ಈ ಡೀಸಲ್ ಅನ್ನು ಬಳಸುತ್ತವೆ. ಈಗ ಭಾರೀ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿರುವುದರಿಂದ ಕೈಗಾರಿಕಾ ಉತ್ಪಾದನಾ ವೆಚ್ಚ ಮತ್ತು ಸಾರಿಗೆ ವೆಚ್ಚ ಹೆಚ್ಚಲಿದೆ.

ಇದನ್ನೂ ಓದಿ: ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ಪ್ರೀಮಿಯಮ್ ಪೆಟ್ರೋಲ್ ಬೆಲೆ ಏರಿಕೆ

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳ ಪ್ರೀಮಿಯಮ್ ಪೆಟ್ರೋಲ್ ಬೆಲೆ ಲೀಟರ್​ಗೆ 2.05 ರೂನಿಂದ 2.30 ರೂವರೆಗೆ ಏರಿಕೆ ಮಾಡಲಾಗಿದೆ. ಆದರೆ, ಮಾಮೂಲಿಯ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್​ನಲ್ಲಿ ಕನ್ನಡಿಗರ ಕಾರುಬಾರು; ಯಾರು ಯಾವ ತಂಡದ ಪರ ಆಡುತ್ತಾರೆ?

Source link

ನಿಮ್ಮ ಮಕ್ಕಳು ಕೂಡ ಎಸಿ ಕೊಠಡಿಯಲ್ಲಿ ಮಲಗುತ್ತಾರಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಹವಾಮಾನ ಬದಲಾಗುತ್ತಿರುವುದರಿಂದ ಮನೆಗಳಲ್ಲಿ ಎಸಿ (AC) ಬಳಕೆ ಆರಂಭ ಹೆಚ್ಚಾಗಿದೆ. ಆದರೆ ಮನೆಯಲ್ಲಿ ಮಕ್ಕಳಿದ್ದಾಗ, ಎಸಿ ಬಳಸುವಾಗ ವಿಶೇಷ ಜಾಗ್ರತೆ ಅಗತ್ಯವಾಗಿದೆ. ಸರಿಯಾದ ರೀತಿಯಲ್ಲಿ ಬಳಸದೇ ಇದ್ದರೆ, ಇದು ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ವೈದ್ಯರ ಪ್ರಕಾರ, ಅನೇಕ ಬಾರಿ ಪಾಲಕರು ಅರಿವಿಲ್ಲದೆ ಕೆಲವು ತಪ್ಪುಗಳನ್ನು ಮಾಡುತ್ತಾರೆ, ಇದು ಮಕ್ಕಳ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹಾಗಾಗಿ, ಎಸಿ ಬಳಸುವಾಗ ಯಾವ ವಿಷಯಗಳನ್ನು ಗಮನಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.

ಮಕ್ಕಳ ಕೋಣೆಯಲ್ಲಿ ತಾಪಮಾನ ಎಷ್ಟಿರಬೇಕು?

ತಜ್ಞರ ಪ್ರಕಾರ, ಮಗು ಮಲಗುವ ಕೊಠಡಿಯಲ್ಲಿ ಎಸಿ ತಾಪಮಾನ 23ರಿಂದ 27 ಡಿಗ್ರಿ ಸೆಲ್ಸಿಯಸ್ ನಡುವೆ ಇಡಬೇಕು. ಇದಕ್ಕಿಂತ ಕಡಿಮೆ ತಾಪಮಾನ ಇದ್ದಲ್ಲಿ, ಅದು ಯಾವುದೇ ಋತುವಾಗಿರಲಿ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬಿರುತ್ತದೆ. ತಂಪಾದ ವಾತಾವರಣದಿಂದ ಮಕ್ಕಳಿಗೆ ಕೆಮ್ಮು, ಶೀತ ಅಥವಾ ಅಲರ್ಜಿ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಅದರಲ್ಲಿಯೂ ಎಸಿ ಗಾಳಿಯು ನೇರವಾಗಿ ಮಗುವಿನ ಮೇಲೆ ಬೀಳದಂತೆ ನೋಡಿಕೊಳ್ಳುವುದು ಅತ್ಯಂತ ಮುಖ್ಯ. ನೇರ ಗಾಳಿಯ ಪರಿಣಾಮವಾಗಿ ಮಗುವಿನ ಚರ್ಮದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುತ್ತದೆ. ಜೊತೆಗೆ ಎಸಿ ಇರುವ ಕೊಠಡಿಯಲ್ಲಿ ಮಲಗುವ ಮಗುವಿಗೆ ಸರಿಯಾದ ಬಟ್ಟೆಗಳನ್ನು ಹಾಕಬೇಕು. ಬಟ್ಟೆಗಳು ಮಗುವಿನ ದೇಹವನ್ನು ಸಂಪೂರ್ಣವಾಗಿ ಮುಚ್ಚುವಂತಿರಬೇಕು. ಆದರೆ, ಅಗತ್ಯಕ್ಕಿಂತ ಹೆಚ್ಚು ಬಟ್ಟೆ ಹಾಕಬಾರದು, ಏಕೆಂದರೆ ಇದರಿಂದ ದೇಹದ ತಾಪಮಾನ ಹೆಚ್ಚಾಗಿ ಹೊರಗಿನ ತಣ್ಣನೆಯ ವಾತಾವರಣದೊಂದಿಗೆ ವ್ಯತ್ಯಾಸ ಉಂಟಾಗಿ ಆರೋಗ್ಯ ಸಮಸ್ಯೆಗಳು ಬರಬಹುದು. ಹಾಗಾಗಿ ಹಗುರವಾಗಿರುವ ಮತ್ತು ಆರಾಮದಾಯಕವಾಗಿರುವ ಬಟ್ಟೆಗಳನ್ನು ಆಯ್ಕೆ ಮಾಡುವುದು ಬಹಳ ಉತ್ತಮ.

ಇದನ್ನೂ ಓದಿ: ಎಸಿಯಲ್ಲಿ ಗಂಟೆಗಟ್ಟಲೆ ಸಮಯ ಕಳೆಯುವವರಿಗೆ ಈ ಸಮಸ್ಯೆ ತಪ್ಪಿದ್ದಲ್ಲ

ಆದರೆ ನೆನೆಪಿರಲಿ, ಎಸಿಯನ್ನು ನಿರಂತರವಾಗಿ ಬಳಸುವುದು ಸರಿಯಲ್ಲ. ಪ್ರತಿ 3ರಿಂದ 4 ಗಂಟೆಗೆ ಒಂದು ಬಾರಿ ಎಸಿಯನ್ನು ಸ್ವಲ್ಪ ಸಮಯ ಆಫ್ ಮಾಡಿ, ಸುಮಾರು ಅರ್ಧ ಗಂಟೆಯ ನಂತರ ಮತ್ತೆ ಆನ್ ಮಾಡುವುದು ಉತ್ತಮ. ಇದರಿಂದ ಕೊಠಡಿಯ ವಾತಾವರಣ ಸಮತೋಲನದಲ್ಲಿರುತ್ತದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಎಸಿ ಬಳಕೆ ಮಾಡುವಾಗ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ. ಸರಿಯಾದ ತಾಪಮಾನ, ಗಾಳಿಯ ನಿಯಂತ್ರಣ ಮತ್ತು ಬಟ್ಟೆಗಳ ಆಯ್ಕೆ ಮೂಲಕ ಮಕ್ಕಳು ಆರೋಗ್ಯವಾಗಿರುವಂತೆ ನೋಡಿಕೊಳ್ಳಬಹುದು.

ಎಸಿ ಯಾವ ರೀತಿಯ ಮಕ್ಕಳಿಗೆ ಒಳ್ಳೆಯದಲ್ಲ?

  • ಅಸ್ತಮಾ ಇರುವವರು
  • ಉಸಿರಾಟ ಸಂಬಂಧಿತ ಸಮಸ್ಯೆಗಳಿರುವವರು
  • ತೀವ್ರ ಚರ್ಮದ ರೋಗ ಅಥವಾ ಅಲರ್ಜಿ ಇರುವವರು
  • ಸೋಂಕಿಗೆ ಒಳಗಾದವರು ಬಳಸುವುದು ಒಳ್ಳೆಯದಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್​ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್​​ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್​ಕುಮಾರ್. ‘ನಮ್ಮ‌ನೆಚ್ಚಿನ ನಟ ಪುನೀತ್ ರಾಜ್‍ಕುಮಾರ್ (Puneeth Rajkumar). ಅವರ ಮೆಚ್ಚಿನ ಸ್ಥಳ ಸದಾಶಿವ ನಗರ. ಇಲ್ಲಿ ಅವರ ಪ್ರತಿಮೆ ಆಗಬೇಕು ಎಂಬ ಬೇಡಿಕೆ ಇತ್ತು. ಇದಕ್ಕೆ ಸ್ಫೂರ್ತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಎಲ್ಲರ ಸಲಹೆ ಪಡೆದು ಪ್ರತಿಮೆ ಮಾಡಲಾಗಿದೆ. ಯುಗಾದಿ ಹಬ್ಬದ ಸಂಧರ್ಭದಲ್ಲಿ ಉದ್ಘಾಟನೆ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ, ಅಭಿಮಾನಿಗಳಿಗೆ, ಪುನೀತ್ ಕುಟುಂಬಕ್ಕೆ ಧನ್ಯವಾದಗಳು’ ಎಂದು ಅಶ್ವತ್ಥ್​​ ನಾರಾಯಣ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜೊಮಾಟೊದಲ್ಲಿ ಫುಡ್ ಆರ್ಡರ್ ಮತ್ತಷ್ಟು ದುಬಾರಿ; ಪ್ಲಾಟ್​ಫಾರ್ಮ್ ಶುಲ್ಕ ಶೇ 19ರಷ್ಟು ಏರಿಕೆ

ನವದೆಹಲಿ, ಮಾರ್ಚ್ 20: ಫುಡ್ ಡೆಲಿವರಿ ಕಂಪನಿಯಾದ ಜೊಮಾಟೊ ತನ್ನ ಪ್ಲಾಟ್​​ಫಾರ್ಮ್ ಶುಲ್ಕವನ್ನು (Zomato platform fee) ಏರಿಸಿದೆ. 12.50 ರೂ ಇದ್ದ ಜೊಮಾಟೊ ಪ್ಲಾಟ್​ಫಾರ್ಮ್ ಫೀ ಅನ್ನು 14.90 ರೂಗೆ ಏರಿಸಲಾಗಿದೆ. ಒಬ್ಬ ಗ್ರಾಹಕ ನೀಡುವ ಪ್ರತೀ ಆರ್ಡರ್​ಗೆ ಪ್ಲಾಟ್​ಫಾರ್ಮ್ ಫೀ ಅನ್ವಯ ಆಗುತ್ತದೆ. ಇದರಲ್ಲಿ 2.40 ರೂ ಅಥವಾ ಶೇ. 19.2ರಷ್ಟು ಶುಲ್ಕ ಏರಿಕೆ ಆಗಿದೆ.

ಒಂದು ವರ್ಷದೊಳಗೆ ಜೊಮಾಟೊ ಎರಡನೇ ಬಾರಿ ತನ್ನ ಪ್ಲಾಟ್​ಫಾರ್ಮ್ ಫೀ ಏರಿಸಿರುವುದು. 2025ರ ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಳ ಮಾಡಲಾಗಿತ್ತು. ಈ ಪ್ಲಾಟ್​ಫಾರ್ಮ್ ಫೀ ಮೇಲೆ ಜಿಎಸ್​ಟಿ ಕೂಡ ಅನ್ವಯ ಆಗುತ್ತದೆ. ಎಲ್​ಪಿಜಿ ಬೆಲೆ ಏರಿಕೆಯ ಬಿಸಿಯಲ್ಲಿರುವ ಗ್ರಾಹಕರಿಗೆ ಈಗ ಫುಡ್ ಡೆಲಿವರಿ ಪ್ಲಾಟ್​ಫಾರ್ಮ್​ನಲ್ಲೂ ದರ ಏರಿಕೆಯ ಶಾಕ್ ಸಿಗಲಿದೆ.

ಇದನ್ನೂ ಓದಿ: ಆಫೀಸ್ ಕಾರ್ಡ್ ಬಳಕೆ, ಪ್ಯಾನ್ ಕಡ್ಡಾಯ, ಅಡ್ರೆಸ್ ಪ್ರೂಫ್ ಇತ್ಯಾದಿ ಗಮನಿಸಬೇಕಾದ ಹೊಸ ಕ್ರೆಡಿಟ್ ಕಾರ್ಡ್ ನಿಯಮಗಳು

ಎರಡನೇ ಅತಿದೊಡ್ಡ ಫುಡ್ ಡೆಲಿವರಿ ಆ್ಯಪ್ ಆಗಿರುವ ಸ್ವಿಗ್ಗಿಯಲ್ಲಿ ಪ್ಲಾಟ್​ಫಾರ್ಮ್ ಫೀ 14.99 ರೂ ಇದೆ. ಮೂರನೇ ಅತಿದೊಡ್ಡ ಫುಡ್ ಡೆಲಿವರಿ ಆ್ಯಪ್ ಆದ ಮ್ಯಾಜಿಕ್​ಪಿನ್​ನ ಪ್ಲಾಟ್​ಫಾರ್ಮ್ ಫೀ 14.20 ರೂ ಇದೆ. ಸ್ವಿಗ್ಗಿ ಮತ್ತು ಜೊಮಾಟೊ ಬಹುತೇಕ ಸಮಾನ ಪ್ಲಾಟ್​ಫಾರ್ಮ್ ಫೀ ಹೊಂದಿವೆ. ಮ್ಯಾಜಿಕ್​ಪಿನ್ ಸ್ವಲ್ಪ ಕಡಿಮೆ ಶುಲ್ಕವನ್ನು ವಿಧಿಸುತ್ತಿದೆ.

ಫುಡ್ ಡೆಲಿವರಿ ಪ್ಲಾಟ್​ಫಾರ್ಮ್​ಗಳು ಗ್ರಾಹಕರಿಗೆ ಯಾವೆಲ್ಲಾ ಶುಲ್ಕ ವಿಧಿಸುತ್ತವೆ?

  • ಪ್ಲಾಟ್​ಫಾರ್ಮ್ ಫೀ
  • ಡೆಲಿವರಿ ಪಾರ್ಟ್ನರ್ ಫೀ
  • ಜಿಎಸ್​ಟಿ
  • ರೆಸ್ಟೋರೆಂಟ್ ಪ್ಯಾಕಿಂಗ್ ಚಾರ್ಜಸ್

ಕೆಲ ಪ್ಲಾಟ್​ಫಾರ್ಮ್​ಗಳು ಬೇರೆ ಶುಲ್ಕ ಹಾಕಬಹುದು. ಉದಾಹರಣೆಗೆ, ಜೊಮಾಟೊ ಸಂಸ್ಥೆ ಫೀಡಿಂಗ್ ಇಂಡಿಯಾ ಸ್ಕೀಮ್​ಗೆ ಡೊನೇಶನ್ ಆಗಿ ಪ್ರತೀ ಆರ್ಡರ್​ಗೆ 4 ರೂ ಸಂಗ್ರಹಿಸುತ್ತದೆ. ಹಾಗೆಯೇ, ಸರ್ಜಿಂಗ್ ಪ್ರೈಸ್ ಅನ್ನೂ ವಿಧಿಸುತ್ತವೆ. ಮೇಲೆ ತಿಳಿಸಿದ ನಾಲ್ಕು ಶುಲ್ಕಗಳಲ್ಲಿ ಜಿಎಸ್​ಟಿಯು ಸರ್ಕಾರಕ್ಕೆ ಹೋಗುತ್ತದೆ. ರೆಸ್ಟೋರೆಂಟ್ ಪ್ಯಾಕಿಂಗ್ ಶುಲ್ಕವು ಆಯಾ ರೆಸ್ಟೋರೆಂಟ್​ಗೆ ಸಂದಾಯವಾಗುತ್ತದೆ.

ಇದನ್ನೂ ಓದಿ: ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ಇದರ ಜೊತೆಗೆ ಫುಡ್ ಡೆಲಿವರಿ ಆ್ಯಪ್​ಗಳು ತಮ್ಮ ರೆಸ್ಟೋರೆಂಟ್ ಪಾರ್ಟ್ನರ್​ಗಳಿಂದ ಕಮಿಷನ್ ಫೀಸ್ ಕೂಡ ಸಂಗ್ರಹಿಸುತ್ತವೆ. ಶೇ. 30ಕ್ಕಿಂತಲೂ ಹೆಚ್ಚಿನ ಕಮಿಷನ್ ಅನ್ನು ರೆಸ್ಟೋರೆಂಟ್​ಗಳು ನೀಡುತ್ತವೆ. ರೆಸ್ಟೋರೆಂಟ್​ಗೆ ಹೋಗಿ ನೀವು 250 ರೂ ಮೊತ್ತದ ತಿಂಡಿಯನ್ನು ಪ್ಯಾಕ್ ಮಾಡಿ ತರಲು ಆಗುವ ವೆಚ್ಚಕ್ಕೆ ಹೋಲಿಸಿದರೆ ಅದೇ ತಿಂಡಿಯನ್ನು ಆ್ಯಪ್ ಮೂಲಕ ತರಿಸಿಕೊಂಡರೆ 350 ರೂಗಿಂತಲೂ ಹೆಚ್ಚು ವೆಚ್ಚವಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಕ್ಕರೆ ಕಡಿಮೆ ತಿನ್ನಿ, ದಿನವೂ ಯೋಗ ಮಾಡಿ; ಭಾರತೀಯರಿಗೆ ಆರೋಗ್ಯದ ರಹಸ್ಯ ಹೇಳಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 20: ಪ್ರಧಾನಿ ನರೇಂದ್ರ ಮೋದಿ (PM Narendra Modi) ಯೋಗ, ಫಿಟ್​ನೆಸ್​, ಉತ್ತಮ ಆಹಾರ ಸೇವನೆಗೆ ಸದಾ ಆದ್ಯತೆ ನೀಡುತ್ತಾರೆ. ಅವರು ಯಾವ ರಾಜ್ಯ, ಯಾವ ದೇಶಕ್ಕೇ ಪ್ರಯಾಣಿಸಲಿ ತಮ್ಮ ಯೋಗ ದಿನಚರಿ, ತಾವು ಸೇವಿಸುವ ಆಹಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರತಿದಿನ ಯೋಗಾಭ್ಯಾಸ, ಧ್ಯಾನ ಮಾಡುವ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೂ ದಿನವೂ ಯೋಗ ಮಾಡಲು ಸಲಹೆ ನೀಡಿದ್ದಾರೆ.

ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಆರೋಗ್ಯವಾಗಿರಿ, ಸಂತೋಷವಾಗಿರಿ. ಚೆನ್ನಾಗಿ ತಿನ್ನಿ, ಆರೋಗ್ಯವಾದುದನ್ನೇ ತಿನ್ನಿ. ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿ. ಯೋಗವನ್ನು ದೈನಂದಿನ ಜೀವನದ ಭಾಗವಾಗಿಸಿಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಕ್ಕಳಲ್ಲಿ ಪ್ರೋಟೀನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ? ಯಾವ ರೀತಿಯ ಲಕ್ಷಣ ಕಂಡುಬರುತ್ತವೆ?

ಅತಿಯಾದ ಸಕ್ಕರೆ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಎಲ್ಲರೂ ಚೆನ್ನಾಗಿ ತಿನ್ನಿರಿ ಮತ್ತು ಆರೋಗ್ಯವಾಗಿರಿ ಎಂದು ಸಲಹೆ ನೀಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಜನರು ತಮ್ಮ ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿ ಎಂದು ಒತ್ತಾಯಿಸಿದ್ದಾರೆ.

PM Modi Instagram Story

ಅತಿಯಾದ ಸಕ್ಕರೆಯ ದುಷ್ಪರಿಣಾಮಗಳನ್ನು ಎತ್ತಿ ತೋರಿಸುತ್ತಾ, ಇದು ಹಲವಾರು ರೋಗಗಳನ್ನು ಆಹ್ವಾನಿಸುತ್ತದೆ. ಇದರಿಂದ ಸಹಜವಾಗಿಯೇ ಬೊಜ್ಜಿನ ಸಮಸ್ಯೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಹಾಗೇ, ಯೋಗವನ್ನು ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಳ್ಳುವಂತೆ ಅವರು ಜನರಿಗೆ ಸಲಹೆ ನೀಡಿದ್ದಾರೆ. ಇದು ನೀವು ಫಿಟ್ ಮತ್ತು ಆ್ಯಕ್ಟಿವ್ ಆಗಿರಲು ಉತ್ತಮ ಮಾರ್ಗವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ಸೋಷಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್ ಯುವರಾಜ್ ದುವಾ ಅವರ ರೀಲ್‌ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ತಂದೆಗೆ ಸಕ್ಕರೆ ಸೇವನೆಯನ್ನು ಕಡಿಮೆ ಮಾಡಲು ಸಲಹೆ ನೀಡಿ ಎಂದು ಇನ್​ಸ್ಟಾಗ್ರಾಂನಲ್ಲಿ ತಮಾಷೆಯಾಗಿ ಪ್ರಧಾನಿ ಮೋದಿಗೆ ಮನವಿ ಮಾಡಿದ್ದರು. “ಯುವರಾಜ್ ಅವರ ಕೋರಿಕೆಯ ಮೇರೆಗೆ ನಾನು ಅವರ ತಂದೆಗೆ ಮತ್ತು ಎಲ್ಲರಿಗೂ ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸುತ್ತೇನೆ. ಆರೋಗ್ಯವಾಗಿರಿ, ಸಂತೋಷವಾಗಿರಿ!” ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತ್ಯೇಕ ರಸ್ತೆ ಅಪಘಾತಗಳು: ಐವರು ಸಾವು, ಓರ್ವನ ಕಾಲು ಮುರಿತ

ತುಮಕೂರು, ಮಾರ್ಚ್​ 20: ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸಾವರರು ಸಾವನ್ನಪ್ಪಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಮಧ್ಯೆ ನಡೆದಿದೆ. ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತ‌ರು. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದಿದ್ದೇನು?

ನರಸಿಂಹಮೂರ್ತಿ ಮತ್ತು ನವೀನ್​ ಇಬ್ಬರು ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಬಸ್​ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. KSRTC ಬಸ್ ಡಿಕ್ಕಿ ರಭಸಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೆಟ್ಟಕೋಟೆ‌ ಗ್ರಾಮದಲ್ಲಿ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ಬೈಕ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ವೆಂಕಟೇಗೌಡ(45) ಮೃತ ವ್ಯಕ್ತಿ.

ಇದನ್ನೂ ಓದಿ: ಕೋತಿ ಕಿತಾಪತಿಗೆ ಹೆಜ್ಜೇನು ದಾಳಿ: ಜೀವ ಬಿಟ್ಟ ಕಾರು ಶೋರೂಂ ಮೇಲ್ವಿಚಾರಕ!

ಆಕಾಶ್ ಕಾಲೇಜಿನ ಮೆಡಿಕಲ್ ವಿದ್ಯಾರ್ಥಿ ಆನಂದ್​ಗೆ ಸೇರಿದ ಕಾರು. ಅತಿವೇಗ ಹಾಗೂ ಅಜಾಗರೂಕತೆಯ ಡ್ರೈವಿಂಗ್​ನಿಂದ ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದೆ. ಇನ್ನು ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರಸ್ತೆ ಬದಿ ನಿಂತಿದ್ದ ಟಿಪ್ಪರ್​ಗೆ ಕ್ಯಾಂಟರ್ ಡಿಕ್ಕಿ: ಇಬ್ಬರು ಸಾವು

ಕೊಪ್ಪಳ ಜಿಲ್ಲೆಯ ಕುಷ್ಟಗಿ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ನಿಂತಿದ್ದ ಟಿಪ್ಪರ್​​​ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆ ಯಲಬುರ್ಗಾ ತಾಲೂಕಿನ ಕಟಿಗೆಹಳ್ಳಿ ಗ್ರಾಮದ ಹುಚ್ಚಪ್ಪ ಹಾಗೂ ಗೋವಿಂದ್ ಮೃತರು.

ಕ್ಯಾಂಟರ್ ಸೊಲ್ಲಾಪುರದಿಂದ ಹೊಸಪೇಟೆ ಕಡೆ ಹೊರಟಿತ್ತು. ಈ ವೇಳೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಟಿಪ್ಪರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಕ್ಯಾಂಟರ್​ನಲ್ಲಿದ್ದ ಡಿಸೇಲ್ ಸೋರಿಕೆಯಾಗಿ ರಸ್ತೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬುಲೆರೋ ವಾಹನ ಡಿಕ್ಕಿ: ಗ್ರಾ. ಪಂ ಮಾಜಿ ಅಧ್ಯಕ್ಷನ ಕಾಲು ಮುರಿತ

ಬೈಕ್​ಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಕಾಲು ಮುರಿದಿರುವಂತಹ ಘಟನೆ ರಾಯಚೂರು ತಾಲ್ಲೂಕಿನ ಕಲ್ಮಲಾ ಬಳಿ ನಡೆದಿದೆ. ಮುರಾಂಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಪ್ಪರ ಕಾಲು ಮುರಿದಿದೆ.

ಇದನ್ನೂ ಓದಿ: ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು: ಕೇಸ್​​ ತನಿಖೆ ಹೊಣೆ ಸಿಐಡಿಗೆ

ಬೈಕ್​ನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಆಂಬ್ಯುಲೆನ್ಸ್ ಕರೆಸಿ ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮುಂದಕ್ಕೆ ಹೋಗುತ್ತಾ ‘ಪೆದ್ದಿ’ ಸಿನಿಮಾ? ಉತ್ತರಕ್ಕೆ ಕಾದಿರುವ ರಾಮ್ ಚರಣ್ ಫ್ಯಾನ್ಸ್

‘ಮೆಗಾ ಪವರ್ ಸ್ಟಾರ್’ ರಾಮ್ ಚರಣ್ ಮತ್ತು ‘ಉಪ್ಪೇನ’ ಖ್ಯಾತಿಯ ನಿರ್ದೇಶಕ ಬುಚ್ಚಿ ಬಾಬು ಸನಾ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾ ಬಗ್ಗೆ ಕಳೆದ ಕೆಲವು ದಿನಗಳಿಂದ ವದಂತಿಗಳು ಹರಿದಾಡುತ್ತಿವೆ. ಈ ಪ್ಯಾನ್ ಇಂಡಿಯಾ ಚಿತ್ರವು ನಿಗದಿತ ಸಮಯಕ್ಕೆ ಬಿಡುಗಡೆಯಾಗುವುದಿಲ್ಲ ಎಂಬ ಗಾಳಿಸುದ್ದಿಯಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದರೆ ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಗುವ ನಿರೀಕ್ಷೆ ಇದೆ. ಅದಕ್ಕಾಗಿ ರಾಮ್ ಚರಣ್ (Ram Charan) ಫ್ಯಾನ್ಸ್ ಕಾದಿದ್ದಾರೆ.

‘ಪೆದ್ದಿ’ ಸಿನಿಮಾದ ಕೆಲಸಗಳು ಬಾಕಿ ಇರುವುದರಿಂದ ಸಿನಿಮಾ ಬಿಡುಗಡೆ ಮುಂದೂಡಿಕೆಯಾಗಲಿದೆ ಎಂಬ ವದಂತಿಗಳು ಚಿತ್ರರಂಗದಲ್ಲಿ ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಚರ್ಚೆಗಳು ನಡೆದು ರಾಮ್ ಚರಣ್ ಅವರ ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿ ಆಗಿದೆ. ಆದರೆ, ಚಿತ್ರತಂಡದ ಆಪ್ತ ಮೂಲಗಳ ಪ್ರಕಾರ, ಈ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಈ ಹಿಂದೆ ಯೋಜಿಸಿದಂತೆಯೇ ಏಪ್ರಿಲ್ 30ರಂದು ಚಿತ್ರವು ವಿಶ್ವಾದ್ಯಂತ ತೆರೆಕಾಣಲಿದೆ.

ರಾಮ್ ಚರಣ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪಷ್ಟನೆ ಸಿಗಲಿದೆ. ಕೇಳಿಬಂದಿರುವ ವದಂತಿಗಳಿಗೆ ಖಡಕ್ ಉತ್ತರ ನೀಡಲು ಚಿತ್ರತಂಡ ಸಜ್ಜಾಗಿದೆ. ಈ ವಾರ, ಅಂದರೆ ಮಾರ್ಚ್ 27ರಂದು ರಾಮ್ ಚರಣ್ ಅವರ ಜನ್ಮದಿನದ ಪ್ರಯುಕ್ತ ಚಿತ್ರದ ಗ್ಲಿಂಪ್ಸ್ ಬಿಡುಗಡೆ ಆಗಲಿದೆ. ಈ ವಿಡಿಯೋ ಮೂಲಕ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಮರುಖಚಿತಪಡಿಸಲಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಒಮ್ಮೆ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಮಾರ್ಚ್ 27ರಿಂದ ಏಪ್ರಿಲ್ 30ಕ್ಕೆ ಮುಂದೂಡಲಾಗಿತ್ತು. ಹಾಗಾಗಿ ಮತ್ತೊಮ್ಮೆ ದಿನಾಂಕ ಬದಲಾಯಿಸುವ ಉದ್ದೇಶ ಚಿತ್ರತಂಡಕ್ಕಿಲ್ಲ. ಸಿನಿಮಾ ತಂಡವು ಹಗಲಿರುಳು ಶ್ರಮಿಸುತ್ತಿದ್ದು, ನಿಗದಿತ ಸಮಯಕ್ಕೆ ಚಿತ್ರವನ್ನು ಥಿಯೇಟರ್‌ಗೆ ತರಲು ಸಿದ್ಧತೆ ನಡೆಸುತ್ತಿದೆ. ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಸಂಗೀತ ನೀಡುತ್ತಿದ್ದು, ಈಗಾಗಲೇ ಬಿಡುಗಡೆಯಾಗಿರುವ ಎರಡು ಹಾಡುಗಳು ಸೂಪರ್ ಹಿಟ್ ಆಗಿವೆ. ವೃದ್ಧಿ ಸಿನಿಮಾಸ್ ಸಂಸ್ಥೆ ಈ ಬೃಹತ್ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಇದನ್ನೂ ಓದಿ: ಚಿಕ್ಕಪ್ಪನಿಗಾಗಿ ‘ಪೆದ್ದಿ’ ಸಿನಿಮಾ ಬಿಡುಗಡೆ ಮುಂದೂಡಿದರೇ ರಾಮ್ ಚರಣ್?

‘ಪೆದ್ದಿ’ ಚಿತ್ರದಲ್ಲಿ ಬಾಲಿವುಡ್ ಸುಂದರಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿಶೇಷವೆಂದರೆ, ಕನ್ನಡದ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅವರು ಈ ಚಿತ್ರದಲ್ಲಿ ಅತ್ಯಂತ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು ಕನ್ನಡಿಗರಲ್ಲಿ ಕುತೂಹಲ ಮೂಡಿಸಿದೆ. ಇವರ ಜೊತೆಗೆ ದಿವ್ಯೇಂದು ಶರ್ಮಾ, ಜಗಪತಿ ಬಾಬು ಮತ್ತು ಬೋಮನ್ ಇರಾನಿ ಕೂಡ ತಾರಾಗಣದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟ್ರಂಪ್​ಗೆ ಮುಖಭಂಗ; ಅಮೆರಿಕದ ಯುದ್ಧವಿಮಾನಕ್ಕೆ ನೋ ಎಂಟ್ರಿ ಎಂದ ಶ್ರೀಲಂಕಾ

ಕೊಲಂಬೊ, ಮಾರ್ಚ್ 20: ಶ್ರೀಲಂಕಾ ಮಾರ್ಚ್ ಆರಂಭದಲ್ಲಿ ದ್ವೀಪ ರಾಷ್ಟ್ರದ ಮಟ್ಟಾಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕ (United States) ತನ್ನ 2 ಯುದ್ಧ ವಿಮಾನಗಳನ್ನು ಇಳಿಸಲು ಅನುಮತಿ ನಿರಾಕರಿಸಿದೆ. ಈ ಬಗ್ಗೆ ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶ್ರೀಲಂಕಾದ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಜಿಬೌಟಿಯಲ್ಲಿ ಬೀಡುಬಿಟ್ಟಿದ್ದ ಅಮೆರಿಕದ ಯುದ್ಧವಿಮಾನಗಳು ಮಾರ್ಚ್‌ನಲ್ಲಿ 2 ಬಾರಿ ಇಳಿಯಲು ಅನುಮತಿ ಕೋರಿದ್ದವು. ಆದರೆ ಎರಡೂ ಮನವಿಗಳನ್ನು ತಿರಸ್ಕರಿಸಲಾಯಿತು.

“ಹಲವು ಒತ್ತಡಗಳ ಹೊರತಾಗಿಯೂ ನಾವು ನಮ್ಮ ತಟಸ್ಥತೆಯನ್ನು ಕಾಪಾಡಿಕೊಳ್ಳಲು ಬಯಸುತ್ತೇವೆ. ನಾವು ಯಾವುದಕ್ಕೂ ಮಣಿಯುವುದಿಲ್ಲ. ಮಧ್ಯಪ್ರಾಚ್ಯ ಯುದ್ಧವು ಸವಾಲುಗಳನ್ನು ಒಡ್ಡುತ್ತದೆ. ಆದರೆ ಈ ವಿಷಯದಲ್ಲಿ ತಟಸ್ಥವಾಗಿರಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನವನ್ನೂ ಮಾಡುತ್ತೇವೆ” ಎಂದು ಶ್ರೀಲಂಕಾದ ಅಧ್ಯಕ್ಷ ಹೇಳಿದ್ದಾರೆ.

ಇದನ್ನೂ ಓದಿ: ಇರಾನ್​ಗೆ ಮತ್ತೊಂದು ಹೊಡೆತ; ಅಮೆರಿಕ- ಇಸ್ರೇಲ್ ದಾಳಿಯಲ್ಲಿ ಐಆರ್‌ಜಿಸಿ ವಕ್ತಾರ ಅಲಿ ನೈನಿ ಹತ್ಯೆ

ಅಮೆರಿಕದ ವಿಮಾನವು ತಲಾ 8 ಹಡಗು ವಿರೋಧಿ ಕ್ಷಿಪಣಿಗಳನ್ನು ಹೊಂದಿರುವ 2 ಯುದ್ಧವಿಮಾನಗಳನ್ನು ತರಲು ಪ್ರಯತ್ನಿಸಿದೆ. ದಕ್ಷಿಣ ಮತ್ತು ಮಧ್ಯ ಏಷ್ಯಾದ ಅಮೆರಿಕದ ವಿಶೇಷ ರಾಯಭಾರಿ ಸೆರ್ಗಿಯೊ ಗೋರ್ ಅವರೊಂದಿಗಿನ ಅನುರ ಕುಮಾರ ದಿಸಾನಾಯಕೆ ಅವರ ಸಭೆಯ ನಂತರ ಈ ಘೋಷಣೆ ಮಾಡಲಾಯಿತು. ಪ್ರಮುಖ ಸಮುದ್ರ ಮಾರ್ಗಗಳನ್ನು ರಕ್ಷಿಸುವುದು, ಬಂದರು ಭದ್ರತೆಯನ್ನು ಬಲಪಡಿಸುವುದು, ವ್ಯಾಪಾರ ಸಹಕಾರವನ್ನು ಹೆಚ್ಚಿಸುವುದು ಮತ್ತು ಮುಕ್ತ ಇಂಡೋ-ಪೆಸಿಫಿಕ್ ಅನ್ನು ಮುನ್ನಡೆಸುವುದರ ಮೇಲೆ ಈ ಚರ್ಚೆಗಳು ಕೇಂದ್ರೀಕೃತವಾಗಿತ್ತು.

ಇದನ್ನೂ ಓದಿ: ನೀವಾಗೇ ಅಮೆರಿಕ ಬಿಟ್ಟು ಹೋಗಿ; ಫ್ಲೈಟ್ ಟಿಕೆಟ್ ಕೊಡ್ತೀವಿ, ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್

ಮಾರ್ಚ್ 4 ಮತ್ತು 8ರಂದು ಕೆಂಪು ಸಮುದ್ರ ಮತ್ತು ಅಡೆನ್ ಕೊಲ್ಲಿಯ ನಡುವಿನ ನಿರ್ಣಾಯಕ ಸಮುದ್ರ ದ್ವಾರವಾದ ಜಿಬೌಟಿಯಲ್ಲಿ ಅಮೆರಿಕದ ಯುದ್ಧವಿಮಾನಗಳನ್ನು ಇಳಿಸಲು ಮನವಿ ಮಾಡಲಾಗಿತ್ತು. ಆದರೆ, ಇವೆರಡನ್ನೂ ನಿರಾಕರಿಸಲಾಯಿತು. ಅಮೆರಿಕಾದ ಮಿಲಿಟರಿ ವಿಮಾನಗಳಿಗೆ ಆತಿಥ್ಯ ವಹಿಸದಿರುವ ಶ್ರೀಲಂಕಾದ ನಿರ್ಧಾರವು ಮಿಲಿಟರಿ ಕಾರ್ಯಾಚರಣೆಗಳಲ್ಲಿ ಸಿಲುಕಿಕೊಳ್ಳುವ ಅಥವಾ ಅಮೆರಿಕದ ಕೆಂಗಣ್ಣಿಗೆ ತುತ್ತಾಗುವ ಅಪಾಯವನ್ನು ಪ್ರತಿಬಿಂಬಿಸುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಆಫೀಸ್ ಕಾರ್ಡ್ ಬಳಕೆ, ಪ್ಯಾನ್ ಕಡ್ಡಾಯ, ಅಡ್ರೆಸ್ ಪ್ರೂಫ್ ಇತ್ಯಾದಿ ಗಮನಿಸಬೇಕಾದ ಹೊಸ ಕ್ರೆಡಿಟ್ ಕಾರ್ಡ್ ನಿಯಮಗಳು

ನವದೆಹಲಿ, ಮಾರ್ಚ್ 20: ಹೊಸ ಆದಾಯ ತೆರಿಗೆ ಕಾಯ್ದೆ (New Income Tax Rules) ಮುಂಬರುವ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಏಪ್ರಿಲ್ 1ರಿಂದ ಬರುವ ಈ ಕಾಯ್ದೆಯಿಂದಾಗಿ ಕ್ರೆಡಿಟ್ ಕಾರ್ಡ್ ಕ್ಷೇತ್ರದಲ್ಲಿ ಕೆಲ ನಿಯಮಗಳ ಬದಲಾವಣೆ ಆಗಲಿದೆ. ಕಾರ್ಡ್ ಸ್ವೈಪ್ ಮೂಲಕ ಅಧಿಕ ಮೌಲ್ಯದ ವಹಿವಾಟುಗಳಿಗೆ (High value transactions) ಮಾಡುವ ಪಾವತಿ ಮೇಲೆ ಆದಾಯ ತೆರಿಗೆ ಇಲಾಖೆ ಗಮನ ಹರಿಸುವುದರಿಂದ ಹಿಡಿದು, ತೆರಿಗೆ ಅನ್ವಯ ಆಗುವವರೆಗೂ ಕೆಲ ಹೊಸ ನಿಯಮಗಳು ಜಾರಿಗೆ ಬರಲಿವೆ. ತೆರಿಗೆ ವಂಚನೆ ತಪ್ಪಿಸಲು ಮತ್ತು ಕ್ರೆಡಿಟ್ ಕಾರ್ಡ್ ಬಳಕೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಅನುವು ಮಾಡಿಕೊಡುವಂತಹ ಕೆಲ ನಿಯಮಗಳು ಇದರಲ್ಲಿ ಒಳಗೊಂಡಿರುತ್ತವೆ.

ಅಧಿಕ ಮೌಲ್ಯದ ವಹಿವಾಟುಗಳ ಮೇಲೆ ಕಣ್ಣು

ಕ್ರೆಡಿಟ್ ಕಾರ್ಡ್ ಮೂಲಕ ಅಧಿಕ ಮೊತ್ತದ ಪಾವತಿ ಮಾಡಿದರೆ ಅದು ಆದಾಯ ಇಲಾಖೆ ಗಮನಕ್ಕೆ ಹೋಗುತ್ತದೆ. ಒಂದು ವರ್ಷದಲ್ಲಿ 10 ಲಕ್ಷ ರೂಗಿಂತ ಹೆಚ್ಚಿನ ಮೊತ್ತವನ್ನು ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡಿದ್ದರೆ, ಅದರ ವಿವರವನ್ನು ಬ್ಯಾಂಕ್ ಅಥವಾ ಕ್ರೆಡಿಟ್ ಕಾರ್ಡ್ ಸಂಸ್ಥೆ ಆದಾಯ ತೆರಿಗೆ ಇಲಾಖೆಗೆ ಕೊಡಬಹುದು.

ಇದನ್ನೂ ಓದಿ: ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿರುವುದು ಯಾಕೆ? ಮತ್ತೆ ಯಾವಾಗ ಏರಿಕೆಯಾಗುತ್ತೆ?

ಒಂದು ಲಕ್ಷ ರೂಗಿಂತ ಹೆಚ್ಚಿನ ಮೊತ್ತದ ಕ್ಯಾಷ್ ಪಾವತಿಯಾದಾಗಲೂ ಬ್ಯಾಂಕುಗಳು ಅದನ್ನು ಐಟಿ ಇಲಾಖೆಯ ಗಮನಕ್ಕೆ ತರುತ್ತದೆ. ಹಿಂದೆಯೂ ಇಂಥ ನಿಯಮ ಇತ್ತಾದರೂ ಈಗ ಈ ನಿಯಮವನ್ನು ಬಿಗಿಗೊಳಿಸಲಾಗಿದೆ, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ.

ಪ್ಯಾನ್​ಗೆ ಅಡ್ರೆಸ್ ಪ್ರೂಫ್ ಆಗಿ ಕ್ರೆಡಿಟ್ ಕಾರ್ಡ್ ಸ್ಟೇಟ್ಮೆಂಟ್

ಪ್ಯಾನ್ ಕಾರ್ಡ್ ಮಾಡಿಸಲು ಆಧಾರ್ ಜೊತೆಗೆ ಬೇರೆ ಕೆಲ ದಾಖಲೆಗಳನ್ನು ಕೊಡಬೇಕು. ಅಡ್ರೆಸ್ ಪ್ರೂಫ್ ದಾಖಲೆಯಾಗಿ ಇತ್ತೀಚಿನ ಕ್ರೆಡಿಟ್ ಕಾರ್ಡ್ ಸ್ಟೇಟ್ಮೆಂಟ್ ಅನ್ನು ಕೊಡಲು ಅನುಮತಿಸಲಾಗಿದೆ.

ಕ್ರೆಡಿಟ್ ಕಾರ್ಡ್ ಮೂಲಕ ಆದಾಯ ತೆರಿಗೆ ಪಾವತಿ

ಆದಾಯ ತೆರಿಗೆ ಪಾವತಿಯನ್ನು ಕ್ರೆಡಿಟ್ ಕಾರ್ಡ್ ಮೂಲಕ ಮಾಡಲು ಅನುಮತಿಸಲಾಗಿದೆ. ಸದ್ಯ ನೆಟ್ ಬ್ಯಾಂಕಿಂಗ್ ಮತ್ತು ಡೆಬಿಟ್ ಕಾರ್ಡ್ ಮೂಲಕ ತೆರಿಗೆ ಪಾವತಿಗೆ ಅವಕಾಶ ಇತ್ತು. ಏಪ್ರಿಲ್ 1ರಿಂದ ಕ್ರೆಡಿಟ್ ಕಾರ್ಡ್ ಮೂಲಕವೂ ಪಾವತಿ ಮಾಡಬಹುದು.

ಇದನ್ನೂ ಓದಿ: ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

ಕಂಪನಿ ಕ್ರೆಡಿಟ್ ಕಾರ್ಡ್ ಅನ್ನು ವೈಯಕ್ತಿಕ ಉದ್ದೇಶಕ್ಕೆ ಬಳಸಿದರೆ ಟ್ಯಾಕ್ಸ್

ಕೆಲ ಕಂಪನಿಗಳು ಉದ್ಯೋಗಿಗಳಿಗೆ ಅಧಿಕೃತ ಕೆಲಸಗಳಿಗೆ ಬಳಕೆ ಮಾಡಲು ಕ್ರೆಡಿಟ್ ಕಾರ್ಡ್ ನೀಡುತ್ತವೆ. ಇದನ್ನು ವೈಯಕ್ತಿಕ ವೆಚ್ಚಕ್ಕೆ ಬಳಸಿದರೆ ಅದಕ್ಕೆ ಟ್ಯಾಕ್ಸ್ ಹಾಕಲಾಗುತ್ತದೆ. ಇಂಥ ಆಫೀಸ್ ಕ್ರೆಡಿಟ್ ಕಾರ್ಡ್​ಗಳನ್ನು ಬ್ಯುಸಿನೆಸ್ ಟ್ರಾವಲ್, ಕ್ಲಯಂಟ್ ಮೀಟಿಂಗ್ ಇತ್ಯಾದಿ ಕಂಪನಿ ಸಂಬಂಧಿಸಿದ ವೆಚ್ಚಗಳಿಗೆ ಮಾತ್ರ ಉಪಯೋಗಿಸಬೇಕು.

ಕ್ರೆಡಿಟ್ ಕಾರ್ಡ್​ಗೆ ಅರ್ಜಿ ಸಲ್ಲಿಸುವಾಗ ಪ್ಯಾನ್ ಕಡ್ಡಾಯ

ಕ್ರೆಡಿಟ್ ಕಾರ್ಡ್​ಗೆ ಅರ್ಜಿ ಸಲ್ಲಿಸುವಾಗ ಪ್ಯಾನ್ ಅನ್ನು ನೀಡುವುದು ಕಡ್ಡಾಯ ಎನ್ನುವ ನಿಯಮ ಮಾಡಲಾಗುತ್ತಿದೆ. ನೀವು ಪ್ಯಾನ್ ನೀಡದಿದ್ದರೆ ಕ್ರೆಡಿಟ್ ಕಾರ್ಡ್ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link