ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ
ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್ಕುಮಾರ್….