ಮುಂದಕ್ಕೆ ಹೋಗುತ್ತಾ ‘ಪೆದ್ದಿ’ ಸಿನಿಮಾ? ಉತ್ತರಕ್ಕೆ ಕಾದಿರುವ ರಾಮ್ ಚರಣ್ ಫ್ಯಾನ್ಸ್
‘ಮೆಗಾ ಪವರ್ ಸ್ಟಾರ್’ ರಾಮ್ ಚರಣ್ ಮತ್ತು ‘ಉಪ್ಪೇನ’ ಖ್ಯಾತಿಯ ನಿರ್ದೇಶಕ ಬುಚ್ಚಿ ಬಾಬು ಸನಾ ಕಾಂಬಿನೇಶನ್ನ ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾ ಬಗ್ಗೆ ಕಳೆದ ಕೆಲವು ದಿನಗಳಿಂದ ವದಂತಿಗಳು ಹರಿದಾಡುತ್ತಿವೆ. ಈ ಪ್ಯಾನ್ ಇಂಡಿಯಾ ಚಿತ್ರವು ನಿಗದಿತ ಸಮಯಕ್ಕೆ ಬಿಡುಗಡೆಯಾಗುವುದಿಲ್ಲ ಎಂಬ ಗಾಳಿಸುದ್ದಿಯಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದರೆ ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಗುವ ನಿರೀಕ್ಷೆ ಇದೆ. ಅದಕ್ಕಾಗಿ ರಾಮ್ ಚರಣ್ (Ram Charan) ಫ್ಯಾನ್ಸ್ ಕಾದಿದ್ದಾರೆ. ‘ಪೆದ್ದಿ’ ಸಿನಿಮಾದ ಕೆಲಸಗಳು ಬಾಕಿ ಇರುವುದರಿಂದ…