ನಮ್ಮ ಮೆಟ್ರೋ ರೆಡ್ ಲೈನ್ ವೆಚ್ಚ ಕಡಿತಕ್ಕೆ ಒಂದು ಸ್ಟೇಷನನ್ನೇ ಕೈಬಿಡಲು ನಿರ್ಧರಿಸಿದ ಬಿಎಂಆರ್‌ಸಿಎಲ್! – Kannada News | Bengaluru Metro Red Line: BMRCL Drops One Underground Station to Cut Costs by Rs 2,920 Crore for Central Approval
ರೆಡ್ ಲೈನ್ ಮೆಟ್ರೋ ಮಾರ್ಗImage Credit source: tv9 ಬೆಂಗಳೂರು, ಜೂನ್ 19: ಬೆಂಗಳೂರಿನ ಸಂಚಾರ ದಟ್ಟಣೆಗೆ ದೊಡ್ಡ ಮಟ್ಟದ ಪರಿಹಾರ ನೀಡಲಿರುವ ಬಹುನಿರೀಕ್ಷಿತ ಸರ್ಜಾಪುರ-ಹೆಬ್ಬಾಳ ಮೆಟ್ರೋ ‘ರೆಡ್ ಲೈನ್’ (Red Line Metro) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ಪಡೆದುಕೊಳ್ಳಲು ಬಿಎಂಆರ್‌ಸಿಎಲ್ (BMRCL) ಮಹತ್ವದ ಹೆಜ್ಜೆ ಇಟ್ಟಿದೆ. ಈ ಕಾರಿಡಾರ್‌ನ ವಿಸ್ತೃತ ಯೋಜನಾ ವರದಿಯ (DPR) ಅಂದಾಜು ವೆಚ್ಚ ಅತಿ ಹೆಚ್ಚಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಎರಡು ಬಾರಿ ಆಕ್ಷೇಪ…