ಆರ್ಥಿಕ ಬಿಕ್ಕಟ್ಟನ್ನು ಅವಕಾಶವಾಗಿ ಪರಿವರ್ತಿಸಿಕೊಳ್ಳಬೇಕು; ದಿಟ್ಟ ಸುಧಾರಣೆ ಕ್ರಮ ಕೈಗೊಳ್ಳಬೇಕು: ನಿಲೇಶ್ ಶಾ – Kannada News | Nilesh Shah calls for bold economic reforms seizing global crisis as opportunity for growth
ನಿಲೇಶ್ ಶಾ ಅವರ ಫೈಲ್ ಚಿತ್ರImage Credit source: TV9 Network ನವದೆಹಲಿ, ಮೇ 26: ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಹಾಗೂ ಸವಾಲುಗಳು ಎದುರಾಗಿರುವ ಈ ಸಮಯದಲ್ಲಿ, ಭಾರತವು ಈ ಬಿಕ್ಕಟ್ಟನ್ನು ಕೇವಲ ಒಂದು ಸಮಸ್ಯೆಯಾಗಿ ನೋಡಬಾರದು. ಬದಲಿಗೆ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸಲು ಪ್ರಮುಖ ಮತ್ತು ದಿಟ್ಟ ಸುಧಾರಣೆಗಳನ್ನು (Bold Reforms) ಜಾರಿಗೆ ತರಲು ಇದೊಂದು ಅತ್ಯುತ್ತಮ ಅವಕಾಶ ಎಂದು ಖ್ಯಾತ ಆರ್ಥಿಕ ತಜ್ಞ ನಿಲೇಶ್ ಶಾ (Nilesh Shah) ಅಭಿಪ್ರಾಯಪಟ್ಟಿದ್ದಾರೆ. ಸಿಎನ್ಬಿಸಿ ಆವಾಜ್…