All posts by nagaraj11081993

ಮಗಳಾಗಿ ಬಂದೆ, ಸೊಸೆಯಾಗಿದ್ದೀನಿ: ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ರಶ್ಮಿಕಾ

ಮಗಳಾಗಿ ಬಂದೆ, ಸೊಸೆಯಾಗಿದ್ದೀನಿ: ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ರಶ್ಮಿಕಾ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಅವರೊಟ್ಟಿಗೆ ಬಲು ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಆದ ಬಳಿಕ ಇದು ಅವರಿಗೆ ಮೊದಲ ಹಬ್ಬ. ಆದರೆ ಈ ಯುಗಾದಿ ಹಬ್ಬ ಅವರಿಗೆ ಬಹು ವಿಶೇಷವೂ ಹೌದು. ರಶ್ಮಿಕಾ ಮಂದಣ್ಣ ಅವರು ನಟನೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ರಶ್ಮಿಕಾ ಅವರಿಗೆ ತೆಲಂಗಾಣ ಸರ್ಕಾರ ನೀಡುವ ಗದರ್ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿ ಭಾವುಕರಾಗಿ ಮಾತನಾಡಿದ್ದಾರೆ.

ಸಿಎಂ ರೇವಂತ್ ರೆಡ್ಡಿ ಮತ್ತು ರಾಮ್ ಚರಣ್ ಅವರು ಜಂಟಿಯಾಗಿ ರಶ್ಮಿಕಾ ಅವರಿಗೆ ಗದರ್ ಅವಾರ್ಡ್ ಅನ್ನು ನೀಡಿದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಖುದ್ದು ಸಿಎಂ ರೇವಂತ್ ರೆಡ್ಡಿ ಅವರು ರಶ್ಮಿಕಾರನ್ನು ತಮ್ಮ ಊರಿನ ಸೊಸೆ ಎಂದರು. ಇದು ರಶ್ಮಿಕಾಗೆ ಸಖತ್ ಖುಷಿ ಕೊಟ್ಟಿತು. ಬಳಿಕ ಮಾತನಾಡಿದ ರಶ್ಮಿಕಾ ಮಂದಣ್ಣ, ‘ಒಂದು ಸಮಯದಲ್ಲಿ ನನ್ನ ನಟನೆಯನ್ನು ಟ್ರೋಲ್ ಮಾಡಿದ್ದರು ಆದರೆ ಈಗ ಸರ್ಕಾರವೊಂದು ನನ್ನ ನಟನೆ ಮೆಚ್ಚಿ ಪ್ರಶಸ್ತಿ ನೀಡಿದೆ’ ಎಂದರು.

ಮುಂದುವರೆದು ಮಾತನಾಡಿ, ‘ಗರ್ಲ್​​ಫ್ರೆಂಡ್’ ಸಿನಿಮಾಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಹೆಚ್ಚು ಖುಷಿ ಕೊಟ್ಟಿದೆ. ‘ಗರ್ಲ್​​ಫ್ರೆಂಡ್’ ಸಿನಿಮಾ ನನ್ನ ಪಾಲಿಗೆ ಬಹಳ ವಿಶೇಷ ಸಿನಿಮಾ. ಈ ಸಿನಿಮಾಕ್ಕೆ ಪ್ರಶಸ್ತಿ ನೀಡಿರುವುದು ಇಂಥಹಾ ಇನ್ನೂ ಹಲವು ಸಿನಿಮಾಗಳನ್ನು ಮಾಡಲು, ಪ್ರಯೋಗಗಳನ್ನು ಮಾಡಲು ಸ್ಪೂರ್ತಿ ನೀಡಿದೆ. ದಿಲ್ ರಾಜು ಸೇರಿದಂತೆ ಈ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿರುವ ಎಲ್ಲರಿಗೂ ನನ್ನ ಧನ್ಯವಾದಗಳು ಎಂದರು. ‘ಗರ್ಲ್​​ಫ್ರೆಂಡ್’ ಸಿನಿಮಾದ ನಿರ್ದೇಶಕ ರಾಹುಲ್ ರವೀಂದ್ರನ್, ಸಹ ನಟ ದೀಕ್ಷಿತ್, ನಿರ್ಮಾಪಕರಾದ ವಿದ್ಯಾ ಮತ್ತು ಧೀರಜ್ ಇನ್ನೂ ಹಲವರಿಗೆ ಧನ್ಯವಾದ ಹೇಳಿದರು ರಶ್ಮಿಕಾ.

ಇದನ್ನೂ ಓದಿ:ಮದುವೆ ಮುಗಿಸಿ ಕೆಲವೇ ದಿನಗಳಲ್ಲಿ ಕೆಲಸಕ್ಕೆ ಮರಳಿದ ರಶ್ಮಿಕಾ ಮಂದಣ್ಣ

ಬಳಿಕ ತುಸು ಭಾವುಕರಾದ ನಟಿ ರಶ್ಮಿಕಾ, ‘ನಾನು ಕೆಲವು ವರ್ಷಗಳ ಹಿಂದೆ ಮಗಳಾಗಿ ಬಂದಿದ್ದೆ, ಈಗ ಸೊಸೆಯಾಗಿ ಎದುರಿಗೆ ನಿಂತಿದ್ದೀನಿ, ಆ ಬಗ್ಗೆ ನನಗೆ ಹೆಮ್ಮೆಯಿದೆ, ನನ್ನನ್ನು ಸ್ವೀಕರಿಸಿದ್ದಕ್ಕೆ ಬಹಳ ಧನ್ಯವಾದಗಳು. ನನಗೆ ಈಗ ಇರುವ ಆಸೆಯೆಂದರೆ ನನ್ನ ಕುಟುಂಬಕ್ಕೆ ಇದೇ ಪ್ರೀತಿ ಕೊಡಿ, ನನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದರು ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಅವರು ಪ್ರಶಸ್ತಿ ಸ್ವೀಕರಿಸುವಾಗ ಅವರ ಅತ್ತೆ ಸಮಾರಂಭದಲ್ಲಿ ಹಾಜರಿದ್ದರು. ಜೋರಾಗಿ ಚಪ್ಪಾಳೆ ತಟ್ಟುತ್ತಾ ಸೊಸೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಒಂದೇ ದಿನ ಮೂವರು ಸ್ಟಾರ್ ಆಟಗಾರರು ಐಪಿಎಲ್​ನಿಂದ ಔಟ್

ಐಪಿಎಲ್ (IPL 2026) ಸೀಸನ್ ಇನ್ನೂ ಆರಂಭವಾಗಿಲ್ಲ. ಆದಾಗ್ಯೂ ಹಲವು ತಂಡಗಳಿಗೆ ದೊಡ್ಡ ಆಘಾತ ಎದುರಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತಮ್ಮ ಸ್ಟಾರ್ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಇಲ್ಲದೆ ಈ ಆವೃತ್ತಿಯನ್ನು ಆರಂಭಿಸಲಿದ್ದು, ಸನ್‌ರೈಸರ್ಸ್ ಹೈದರಾಬಾದ್ ತಂಡವು ತಮ್ಮ ನಾಯಕ ಪ್ಯಾಟ್ ಕಮ್ಮಿನ್ಸ್ ಇಲ್ಲದೆ ಈ ಪಂದ್ಯಾವಳಿಯ ಮೊದಲ ಕೆಲವು ಪಂದ್ಯಗಳನ್ನು ಆಡಲಿದೆ. ಈ ಇಬ್ಬರು ಅನುಭವಿ ಆಟಗಾರರು ತಂಡಕ್ಕೆ ಮರಳುವ ಸಾಧ್ಯತೆ ಇದ್ದರೂ, ಇತರ ಕೆಲವು ತಂಡಗಳ ಪರಿಸ್ಥಿತಿ ಗಂಭೀರವಾಗಿದೆ. ಏಕೆಂದರೆ ಆ ತಂಡಗಳ ಆಟಗಾರರು ಇಡೀ ಸೀಸನ್​ನಿಂದಲೇ ಹೊರಬಿದಿದ್ದಾರೆ. ವಾಸ್ತವವಾಗಿ, ಒಂದೇ ದಿನದಲ್ಲಿ ಮೂವರು ಆಟಗಾರರು ಐಪಿಎಲ್​ನಿಂದ ಹೊರಬಿದಿದ್ದಾರೆ.

ಸಿಎಸ್​ಕೆ ವೇಗಿಗೆ ಇಂಜುರಿ

ಮಾರ್ಚ್ 28 ರಂದು 19 ನೇ ಐಪಿಎಲ್ ಸೀಸನ್ ಆರಂಭವಾಗುವುದಕ್ಕೆ ಕೇವಲ ಒಂಬತ್ತು ದಿನಗಳ ಮೊದಲು , ಚೆನ್ನೈ ಸೂಪರ್ ಕಿಂಗ್ಸ್ , ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳಿಗೆ ಬಿಗ್ ಶಾಕ್ ಎದುರಾಗಿದೆ. ಮೊದಲನೆಯದಾಗಿ ಚೆನ್ನೈ ಸೂಪರ್ ಕಿಂಗ್ಸ್ ವೇಗಿ ನಾಥನ್ ಎಲಿಸ್ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಫ್ರಾಂಚೈಸಿ ಇದನ್ನು ಅಧಿಕೃತವಾಗಿ ಘೋಷಿಸದಿದ್ದರೂ, ಸಿಎಸ್‌ಕೆ ಸಿಇಒ ಕಾಸಿ ವಿಶ್ವನಾಥನ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ರಾಜಸ್ಥಾನ್ ತಂಡಕ್ಕೂ ಆಘಾತ

ಇಎಸ್‌ಪಿಎನ್-ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಕೂಡ ಗಾಯದಿಂದಾಗಿ ಈ ಆವೃತ್ತಿಯಲ್ಲಿ ಆಡಲು ಸಾಧ್ಯವಿಲ್ಲ ಎಂದು ವರದಿಯಾಗಿದೆ. ಕರನ್ ತೊಡೆಸಂದು ಗಾಯದಿಂದ ಬಳಲುತ್ತಿದ್ದು, ಅವರು ಸಕಾಲದಲ್ಲಿ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಸೀಸನ್ ಆರಂಭಕ್ಕೂ ಮುನ್ನ ಸಿಎಸ್‌ಕೆಯಿಂದ ಕರನ್ ಅವರನ್ನು 2.4 ಕೋಟಿಗೆ ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ಟ್ರೇಡ್ ವಿಂಡ್ ಮೂಲಕ ಖರೀದಿಸಲಾಯಿತು. ಆದಾಗ್ಯೂ, ಅವರು ತಮ್ಮ ಹೊಸ ಫ್ರಾಂಚೈಸಿಗಾಗಿ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ.

ಕೆಕೆಆರ್ ತಂಡಕ್ಕೆ ಮತ್ತೊಂದು ಕೆಟ್ಟ ಸುದ್ದಿ

ಈಗಾಗಲೇ ವೇಗದ ಬೌಲರ್‌ಗಳ ಕೊರತೆಯಿಂದ ಬಳಲುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಶ್ರೀಲಂಕಾದ ಮಾಧ್ಯಮ ವರದಿಗಳ ಪ್ರಕಾರ, ಕೆಕೆಆರ್ 18 ಕೋಟಿಗೆ ರೂಗೆ ಖರೀದಿಸಿರುವ ವೇಗಿ ಮಥಿಶಾ ಪತಿರಾನಗೆ ಶ್ರೀಲಂಕಾ ಕ್ರಿಕೆಟ್‌ ಎನ್‌ಒಸಿ ನೀಡಿಲ್ಲ ಎಂದು ವರದಿಯಾಗಿದೆ. ಪತಿರಾನ ತಮ್ಮ ಫಿಟ್ನೆಸ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಕಾರಣ ಮಂಡಳಿ ಎನ್​ಒಸಿ ನೀಡಿಲ್ಲ. ಪರಿಣಾಮವಾಗಿ, ಅವರು ಈಗ ಪಂದ್ಯಾವಳಿಯಲ್ಲಿ ಭಾಗವಹಿಸುವುದು ಅಸಂಭವವಾಗಿದೆ.

IPL 2026: ಯುವರಾಜ್ ಗರಡಿಯಲ್ಲಿ ಪಳಗಿದ 7 ಆಟಗಾರರು ಅಬ್ಬರಿಸಲು ರೆಡಿ

ಸಿಎಸ್​ಕೆ ಪರ ಆಡಿದ್ದರು

ಈ ಮೂವರು ಆಟಗಾರರಿಗೆ ಸಂಬಂಧಿಸಿದ ಒಂದು ಕುತೂಹಲಕಾರಿ ಕಾಕತಾಳೀಯವೆಂದರೆ, ಈ ಮೂವರೂ ಕಳೆದ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿದ್ದರು. ಈ ವರ್ಷ ಸ್ಯಾಮ್ ಕರನ್ ಅವರನ್ನು ಸಿಎಸ್‌ಕೆ ರಾಜಸ್ಥಾನಕ್ಕೆ ವಿನಿಮಯ ಮಾಡಿಕೊಂಡರೆ, ಪತಿರಾನ ಅವರನ್ನು ಕೆಕೆಆರ್ ಖರೀದಿ ಮಾಡಿತ್ತು. ಈ ಪೈಕಿ, ಪ್ರಸ್ತುತ ಚೆನ್ನೈ ತಂಡದಲ್ಲಿ ಉಳಿದಿರುವ ಏಕೈಕ ಆಟಗಾರ ಎಲಿಸ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ

ಯಾದಗಿರಿ, (ಮಾರ್ಚ್ 19):  ಜಿಲ್ಲೆಯ ಗೋನಾಳ ಗ್ರಾಮದ ಮಗನಿಂದಲೇ ತಂದೆ ಕೊಲೆ ಪ್ರಕರಣಕ್ಕೆ (Gonal Pampanna Murder Case) ಟ್ವಿಸ್ಟ್ ಸಿಕ್ಕಿದೆ. 75 ವಯಸ್ಸಾಗಿದ್ರೂ ಕಾಮದಾಟಕ್ಕಾಗಿ ಮಹಿಳೆಯರ ಜೊತೆ ಸಂಬಂಧ (illicit relationship )ಇಟ್ಟುಕೊಂಡು, ಸೊಸೆಯನ್ನೂ ಬಿಡದ ತಂದೆಯನ್ನು ಕಂಡು ಮಾರ್ಯಾದೆಗೆ ಹೆದರಿ ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಹೌದು… ಗೋನಾಳ ಗ್ರಾಮದಲ್ಲಿ 6 ದಿನಗಳ ಹಿಂದೆ ಅಂದ್ರೆ ಮಾರ್ಚ್ 12 ರ ರಾತ್ರಿ 74 ವರ್ಷದ ಪಂಪಣ್ಣ ಸಜ್ಜನ ಎಂಬಾತನ ಕೊಲೆಯಾಗಿತ್ತು. ಕೊಲೆ ನಡೆದ ಬಳಿಕ ಈ ಹಂಪಣ್ಣ ಸಜ್ಜನ ಪುತ್ರ ಶರಣಬಸಪ್ಪ ವಡಗೇರ ಪೊಲೀಸ್ ಠಾಣೆಗೆ ದೂರು ನೀಡಿದ್ದ.ಬಳಿಕ ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಆರಂಭದಲ್ಲಿ ಕೊಲೆ ಯಾರು ಮಾಡಿದ್ದಾರೆ ಎಂದು ಗೊತ್ತಾಗದ ಸ್ಥಿತಿ ನಿರ್ಮಾಣವಾಗಿತ್ತು. ಆದ್ರೆ ಕೊಲೆ ನಡೆದ ನಾಲ್ಕು ದಿನಗಳ ಬಳಿಕ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು. ಮೃತ ತಂದೆಯನ್ನು 75 ವರ್ಷದ ಹಂಪಣ್ಣ ಸಜ್ಜನ್ ಹಾಗೂ ಸುಪಾರಿ ಕೊಟ್ಟ ಮಗನನ್ನು ನರಸರೆಡ್ಡಿ, ಹಂತಕರಾದ ರಮೇಶ್, ಜಿ.ವಿರೇಶ್, ಎಂ.ವಿರೇಶ್ ಹಾಗೂ ಕೃಷ್ಟನನ್ನು ವಡಗೇರಾ ಪೊಲೀಸರು ಬಂಧಿಸಿದ್ದಾರೆ.

ಮಗನೇ ತಂದೆ ಹತ್ಯೆಗೆ ಸುಪಾರಿ

ಪೊಲೀಸರು ಆರೋಪಿಗಳನ್ನ ಅರೆಸ್ಟ್ ಮಾಡಿದ ಬಳಿಕ 74 ವರ್ಷ ವೃದ್ದ ಹಂಪಣ್ಣನ ಕೊಲೆ ಹಿಂದಿನ ರಹಸ್ಯ ಬಯಲಿಗೆ ಬಂದಿದೆ. ಕೊಲೆ ಮಾಡಿದ್ದು ಮಾತ್ರ ತಿರುಪತಿ ಮೂಲದ ನಾಲ್ಕು ಜನರು. ಆದ್ರೆ, ಕೊಲೆಗೆ ಸುಪಾರಿ ಕೊಟ್ಟಿದ್ದು ಮಾತ್ರ ಹಂಪಣ್ಣ ಸಜ್ಜನ ಪುತ್ರ ನರಸರೆಡ್ಡಿ. ಮಗನೇ ತಂದೆಯನ್ನ ಸುಪಾರಿ ಕೊಟ್ಟು ಕೊಲೆ ಮಾಡಿಸಿದರ ಹಿಂದೆ ಒಂದು ಕಾರಣವೂ ಸಹ ಇದೆ. ಅದನ್ನೂ ಪೊಲೀಸರು ಹಂತಕರಿಂದ ಕಕ್ಕಿಸಿದ್ದಾರೆ. ಮೊದಲು  ಆಸ್ತಿಗಾಗಿ ಕೊಲೆ ಮಾಡಿರುವುದಾಗಿ ಶಂಕಿಸಿದ್ದರು. ಆದರೆ ತನಿಖೆ ವೇಳೆ, ಕೊಲೆಯಾದ ತಂದೆಯ ಮೊಬೈಲ್‌ನಲ್ಲಿ ಇಂಟರೆಸ್ಟಿಂಗ್ ಫೋಟೋಗಳು ಸಿಕ್ಕಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಇದನ್ನೂ ಓದಿ: 76ರ ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿದ್ದ ವೃದ್ಧನ ಭೀಕರ ಹತ್ಯೆ

ಮೊಬೈಲ್‌ನಲ್ಲಿ ಸಿಕ್ಕಿದ್ದೇನು?

ಮೃತನ ಮೊಬೈಲ್‌ನಲ್ಲಿ ಹಲವು ಮಹಿಳೆಯರ ಜೊತೆ ತೆಗೆದುಕೊಂಡ ಫೋಟೋ ಸಿಕ್ಕಿದ್ದು, ಅನೈತಿಕ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿದೆ. ಕೊಲೆಯಾದ ವ್ಯಕ್ತಿ ತನ್ನ ಮಕ್ಕಳ ಜೊತೆ ಊರಲ್ಲಿ ಇರದೇ ಕಾಮದಾಟಕ್ಕಾಗಿ ಹೊಲದಲ್ಲಿ ವಾಸವಾಗಿದ್ದ. 48 ಎಕರೆ ಜಮೀನು ಹೊಂದಿದ್ದು, ಇದರಲ್ಲಿ  ತನ್ನ ಮೂರು ಜನ ಮಕ್ಕಳಿಗೆ ತಲಾ 4 ಎಕರೆ ಎಂಬಂತೆ 12 ಎಕರೆ ಜಮೀನು ನೀಡಿದ್ದ. ಇನ್ನುಳಿದ 36 ಎಕರೆ ಜಮೀನು ತನ್ನ ಹೆಸರಿಗೆ ಇಟ್ಟುಕೊಂಡು ಬಂದ ಆದಾಯದಲ್ಲಿ ಶೋಕಿ ಮಾಡುತ್ತಿದ್ದ.

ಸೊಸೆಯನ್ನೂ ಬಿಡದೇ ಸಿಕ್ಕ ಸಿಕ್ಕ ಮಹಿಳೆಯರ ಜತೆ ಕಾಮದಾಟ

ಊರಲ್ಲಿ ಮೂರ ಜನ ಮಕ್ಕಳ ಮನೆ ಇದ್ದರೂ ಸಹ ಕಳೆದ 15 ವರ್ಷಗಳಿಂದ ಜಮೀನಲ್ಲಿ ಶೆಡ್ ಹಾಕಿಕೊಂಡು ಪತ್ನಿ ಜೊತೆ ವಾಸವಾಗಿದ್ದ. ಆದ್ರೆ,  ಕಳೆದ 8 ವರ್ಷಗಳ ಹಿಂದೆ ಪತ್ನಿ ಸಾವನ್ನಪ್ಪಿದ್ದ ಬಳಿಕವೂ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದ. ಅಲ್ಲದೇ ಮದ್ಯವ್ಯಸನಿಯೂ ಕೂಡ ಆಗಿದ್ದ. ತನ್ನ ಕಾಮತೃಷೆ ಈಡೇರಿಸಿಕೊಳ್ಳಲು ದುಡ್ಡು ಕೊಟ್ಟು ಬೇರೆ ಮಹಿಳೆಯರನ್ನು ಶೆಡ್​​ಗೆ ಕರೆಸಿಕೊಳ್ಳುತ್ತಿದ್ದ. ಅದೇ ರೀತಿ ಮಗನ ಹೆಂಡ್ತಿ ಅಂದರೆ ಸೊಸೆ, ಜಮೀನಿಗೆ ಕೆಲಸಕ್ಕೆ ಬಂದವರನ್ನೂ ಬಿಡುತ್ತಿರಲಿಲ್ಲ.  ಕೊನೆಗೆ ತನ್ನ ಪತ್ನಿಯ ಜೊತೆಗೆ ತಂದೆ ಅನೈತಿಕ ಸಂಬಂಧ ಹೊಂದಿರುವ ವಿಚಾರ ಗೊತ್ತಾಗಿದ್ದೇ ತಡ ನರಸರೆಡ್ಡಿ ರೊಚ್ಚಿಗೆದ್ದಿದ್ದು, ತಂದೆಯನ್ನೇ ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದ. ಕಾಮಿಷ್ಟ ತಂದೆಯಿಂದ ಬೇಸತ್ತು ಹೋಗಿದ್ದ ಮಗ ನಾಲ್ವರನ್ನು ಕರೆಸಿ, 2 ಲಕ್ಷ ರೂ. ನೀಡಿ ಕೊಲೆ ಮಾಡುವಂತೆ ಸುಪಾರಿ ಕೊಟ್ಟಿದ್ದ ಎಂದು ತನಿಖೆ ವೇಳೆ ಬಯಲಿಗೆ ಬಂದಿದೆ.

ಒಟ್ಟಿನಲ್ಲಿ 74 ವಯಸ್ಸಾಗಿದ್ದರೂ ಸಹ ಹಂಪಣ್ಣ ತನ್ನ ಕಾಮದಾಹ ತೀರಿಸಿಕೊಳ್ಳಲು ಹಣದ ಆಮೀಷ ತೋರಿಸಿ ಅನೇಕ ಮಹಿಳೆಯರ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಸಾಲದಕ್ಕೆ ತನ್ನ ಮಗನ ಪತ್ನಿಯನ್ನೂ ಸಹ ತನ್ನ ಕಾಮದಾಟಕ್ಕೆ ಬಳಸಿಕೊಂಡು ಕೊಲೆಯಾಗಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!

ನವದೆಹಲಿ, ಮಾರ್ಚ್ 19: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಮಗಳನ್ನು ಶಾಲಾ ಬಸ್​​ಗೆ ಹತ್ತಿಸಲು ಸ್ಕೂಟಿಯಲ್ಲಿ ಬಂದಿದ್ದ ಮಹಿಳೆ ಇನ್ನೇನು ಹೊರಡಬೇಕೆನ್ನುವಷ್ಟರಲ್ಲಿ ಯುವಕರು ಬೈಕ್​ಗಳಲ್ಲಿ ಬಂದು ಆಕೆಯನ್ನು ಅಡ್ಡಹಾಕಿದರು. ಆಕೆಯ ಕುತ್ತಿಗೆಯಲ್ಲಿದ್ದ ಸರ, ಕೈಯಲ್ಲಿದ್ದ ಬ್ಯಾಗ್ ಕಸಿದುಕೊಳ್ಳಲು ಪ್ರಯತ್ನಿಸಿದರು. ಅವರಿಂದ ಆಕೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಯುಧಗಳನ್ನು ತೆಗೆದು ಆಕೆಯ ಮೇಲೆ ದಾಳಿ ನಡೆಸಿದರು. ಇಷ್ಟೆಲ್ಲ ನಡೆದಿದ್ದು ಬೆಳಗ್ಗೆ ಜನರೆಲ್ಲ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗಲೇ. ಆದರೂ ಯಾರಿಗೂ ಹೆದರದ ಕಳ್ಳರು ಆಕೆಯನ್ನು ಲೂಟಿ ಮಾಡಿದ್ದಾರೆ. ಅಲ್ಲೇ ಬೈಕ್​ನಲ್ಲಿ ಹೋಗುತ್ತಿದ್ದವರು ಇದನ್ನು ನೋಡಿದರೂ ನೋಡದಂತೆ ತಮ್ಮಷ್ಟಕ್ಕೆ ಮುಂದೆ ಹೋಗಿದ್ದಾರೆ. ಇಡೀ ಘಟನೆ ಅಲ್ಲಿದ್ದ ರಸ್ತೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ದೆಹಲಿಯಲ್ಲಿ ಹಗಲು ಹೊತ್ತಿನಲ್ಲೂ ಜನರಿಗೆ ರಕ್ಷಣೆಯಿಲ್ಲವೇ? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WITT Summit 2026: WITT ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯಿಂದ ಭಾರತದ ಅಭಿವೃದ್ಧಿಯ ದಿಕ್ಕಿನ ಕುರಿತು ಮಹತ್ವದ ಚರ್ಚೆ

ನವದೆಹಲಿ, ಮಾರ್ಚ್ 19: ಟಿವಿ9 ನೆಟ್​ವರ್ಕ್ ಆಯೋಜಿಸುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ತನ್ನ ನಾಲ್ಕನೇ ಆವೃತ್ತಿಯೊಂದಿಗೆ ಶೀಘ್ರದಲ್ಲೇ ಶುರುವಾಗಲು ಸಜ್ಜಾಗಿದೆ. ಮಾರ್ಚ್ 23 ಮತ್ತು 24ರಂದು ದೆಹಲಿಯಲ್ಲಿ ಈ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮುಖ್ಯ ಭಾಷಣ ಮಾಡಲಿದ್ದಾರೆ. ಸತತ ಮೂರನೇ ಬಾರಿಗೆ ಈ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಪ್ರಧಾನಿ ಮೋದಿ ಭಾರತದ ಅಭಿವೃದ್ಧಿಯ ದಿಕ್ಕಿನ ಕುರಿತು ಮಾತನಾಡಲಿದ್ದಾರೆ.

ಈ ಶೃಂಗಸಭೆಯು ದೇಶದ ಪ್ರಮುಖ ಸಮಸ್ಯೆಗಳು ಮತ್ತು ಅವಕಾಶಗಳ ಕುರಿತು ಉನ್ನತ ಮಟ್ಟದ ಚರ್ಚೆಗಳಿಗೆ ವೇದಿಕೆಯಾಗಲಿದೆ. “ಭಾರತ ಮತ್ತು ವಿಶ್ವ” ಎಂಬ ವಿಷಯವಿರುವ ಈ ಕಾರ್ಯಕ್ರಮವು ಆರ್ಥಿಕ ಗುರಿಗಳು, ರಾಜಕೀಯ ಬದಲಾವಣೆಗಳು, ತಾಂತ್ರಿಕ ಪ್ರಗತಿಗಳ ಬಗ್ಗೆ ಬೆಳಕು ಚೆಲ್ಲಲಿದೆ.

ಇದನ್ನೂ ಓದಿ: WITT Summit: 2025ರ ಅಂತ್ಯದೊಳಗೆ ಸ್ವದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಈ ಶೃಂಗಸಭೆಯ ಮೂಲಕ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಅಗತ್ಯವಾದ ಮಾರ್ಗಸೂಚಿಗಳನ್ನು ರೂಪಿಸಲು ಪ್ರಮುಖ ಚಿಂತಕರು, ಉದ್ಯಮಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಒಂದೇ ವೇದಿಕೆಯಲ್ಲಿ ಒಟ್ಟುಗೂಡಲಿದ್ದಾರೆ. ಕಳೆದ ಆವೃತ್ತಿಯಲ್ಲಿ “ಹೊಸ ವಿಶ್ವ ಕ್ರಮದಲ್ಲಿ ಭಾರತ” ಎಂಬ ವಿಷಯದ ಕುರಿತು ಚರ್ಚೆಗಳು ನಡೆದಿದ್ದರೆ, ಈ ವರ್ಷ ಚರ್ಚೆಗಳು 2047ರಲ್ಲಿ ಭಾರತ ಹೇಗಿರುತ್ತದೆ ಎಂಬುದರ ಮೇಲೆ ಕೇಂದ್ರೀಕರಿಸುತ್ತವೆ.

ಇದನ್ನೂ ಓದಿ: ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ; WITT ಶೃಂಗಸಭೆಯಲ್ಲಿ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಈ ಶೃಂಗಸಭೆಯಲ್ಲಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅಶ್ವಿನಿ ವೈಷ್ಣವ್ ಭಾಗವಹಿಸುವ ನಿರೀಕ್ಷೆಯಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಾದ ಮೋಹನ್ ಯಾದವ್, ಪುಷ್ಕರ್ ಸಿಂಗ್ ಧಾಮಿ, ಭಜನ್ ಲಾಲ್ ಶರ್ಮಾ, ನಯಾಬ್ ಸಿಂಗ್ ಸೈನಿ, ಭಗವಂತ್ ಮಾನ್ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ. ರಾಜಕೀಯ ನಾಯಕರಾದ ಸ್ಮೃತಿ ಇರಾನಿ, ಅಖಿಲೇಶ್ ಯಾದವ್ ಮತ್ತು ಅಸಾದುದ್ದೀನ್ ಓವೈಸಿ ಕೂಡ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಯುವರಾಜ್ ಗರಡಿಯಲ್ಲಿ ಪಳಗಿದ 7 ಆಟಗಾರರು ಅಬ್ಬರಿಸಲು ರೆಡಿ

Source link

Eid al-Fitr: ಒಂದು ದಿನ ಮೊದಲೇ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬ ಆಚರಣೆ: ಮಾ 20ರಂದು ಸಾರ್ವತ್ರಿಕ ರಜೆ ಘೋಷಣೆ

ಮಂಗಳೂರು, ಮಾರ್ಚ್​ 19: ರಾಜ್ಯದ ಕರಾವಳಿ ಭಾಗದಲ್ಲಿ ನಾಳೆ ಅಂದರೆ ಮಾರ್ಚ್​​ 20ರಂದು ‘ಈದುಲ್ ಫಿತ್ರ್’ ಹಬ್ಬ (eid-ul-fitr) ಆಚರಣೆ ಮಾಡಲಾಗುತ್ತಿದೆ. ಆ ಮೂಲಕ ಒಂದು ದಿನ ಮೊದಲೇ ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಇಂದು ಶವ್ವಾಲ್ ಮಾಸದ ಚಂದ್ರದರ್ಶನ ಹಿನ್ನೆಲೆ ಶುಕ್ರವಾರ ರಂಜಾನ್ ಹಬ್ಬ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಘೋಷಣೆ ಮಾಡಿದ್ದಾರೆ. ಆ ಮೂಲಕ ಕಳೆದ ಒಂದು ತಿಂಗಳಿಂದ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದ ಉಪವಾಸ ವ್ರತ ಮುಕ್ತಾಯವಾಗಲಿದೆ.

ಇಂದಿಗೆ ಉಪವಾಸ ವ್ರತ ಕೊನೆ

ಕಳೆದ ಒಂದು ತಿಂಗಳಿಂದ ಮುಸ್ಲಿಂ ಬಾಂಧವರು ಉಪವಾಸ ವ್ರತ ಆಚರಿಸುತ್ತಿದ್ದರು. ಚಂದ್ರದರ್ಶನ ಹಿನ್ನೆಲೆಯಲ್ಲಿ ಇಂದಿಗೆ ಉಪವಾಸ ವ್ರತ ಕೊನೆಯಾಗಿದೆ. ಹೀಗಾಗಿ ನಾಳೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಹಬ್ಬ ಆಚರಣೆ ಮಾಡಲಾಗುತ್ತದೆ. ಇತ್ತ ಮನೆಗಳಲ್ಲಿ ಹಬ್ಬದ ಅಡುಗೆಯ ತಯಾರಿ ಕೂಡ ಜೋರಾಗಿದೆ.

ಇದನ್ನೂ ಓದಿ: ಪುಂಡರ ಅಟ್ಟಹಾಸ ನೋಡಿ! ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಚೆನ್ನೈ ಎಕ್ಸ್​ಪ್ರೆಸ್ ವೇನಲ್ಲಿ ವ್ಹೀಲಿಂಗ್

ಶುಕ್ರವಾರ ಬೆಳಗಿನ ವೇಳೆ ಜಿಲ್ಲೆಯ ಪ್ರಮುಖ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ನಡೆಯಲಿದೆ. ಸಾವಿರಾರು ಭಕ್ತರು ಒಂದೇ ಸ್ಥಳದಲ್ಲಿ ಸೇರಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುತ್ತಾರೆ. ಬಳಿಕ ಪರಸ್ಪರ ಹಸ್ತಲಾಘವ ಮತ್ತು ಆಲಿಂಗಿಸಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.

ನಾಳೆ ಸಾರ್ವತ್ರಿಕ ರಜೆ

ಇನ್ನು ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅವರಿಂದ ರಂಜಾನ್ ಹಬ್ಬ ಘೋಷಣೆ ಆಗುತ್ತಿದ್ದಂತೆ ಇತ್ತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ.ದರ್ಶನ್, ನಾಳೆ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಸದ್ಯ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಗಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಫೇಸ್​​ಬುಕ್​ನಲ್ಲಿ ‘ನೀಲಿ ಡ್ರಮ್’ ಪೋಸ್ಟ್ ನೋಡಿ ಹೆಂಡತಿಯನ್ನು ಪ್ರೇಮಿ ಜೊತೆ ಹೋಗಲು ಬಿಟ್ಟ ಗಂಡ!

ಬುಲಂದ್‌ಶಹರ್, ಮಾರ್ಚ್ 19: ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ಹೆಂಡತಿ ಫೇಸ್​​ಬುಕ್​ನಲ್ಲಿ ಹಾಕಿದ್ದ “ಸಿಮೆಂಟ್ ಔರ್ ಡ್ರಮ್” (ಸಿಮೆಂಟ್ ಮತ್ತು ಡ್ರಮ್) ಎಂಬ ಪೋಸ್ಟ್ ಆ ವ್ಯಕ್ತಿಯನ್ನು ಎಷ್ಟು ಹೆದರಿಸಿದೆಯೆಂದರೆ ಅವರು ತನ್ನ ಹೆಂಡತಿಯನ್ನು ತನ್ನ ಪ್ರೇಮಿಯೊಂದಿಗೆ ಹೋಗಲು ಬಿಟ್ಟಿದ್ದಾರೆ. ಇದು ಉತ್ತರ ಪ್ರದೇಶದ ಬುಲಂದ್‌ಶಹರ್‌ನ ರಾಜ್‌ಕುಮಾರ್ ಅವರ ಕಥೆ. ಅವರು ತಮ್ಮ ಜೀವವನ್ನು ಉಳಿಸಿಕೊಳ್ಳಲು ಪತ್ನಿಯನ್ನು ಆಕೆಯ ಪ್ರಿಯಕರನಿಗೆ (Love Story) ಬಿಟ್ಟುಕೊಟ್ಟಿದ್ದಾರೆ.

ರಾಜ್‌ಕುಮಾರ್ ಅವರ ಪತ್ನಿಗೆ ಅನೈತಿಕ ಸಂಬಂಧವಿತ್ತು. ಆಕೆ ತನ್ನ ಪ್ರೇಮಿಯೊಂದಿಗೆ ಇರಲು ಆಗಾಗ ಗಂಡನೊಂದಿಗೆ ಜಗಳವಾಡುತ್ತಿದ್ದರು. ಕಳೆದ ವರ್ಷ ಜುಲೈನಿಂದ ಅವರ ಹೆಂಡತಿ ಗಂಡ ಮತ್ತು ಅವರ 6 ತಿಂಗಳ ಮಗುವನ್ನು ಬಿಟ್ಟು ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದರು. ಅವರು 1 ತಿಂಗಳ `ಕಾಲ ತಮ್ಮ ಪ್ರೇಮಿಯೊಂದಿಗೆ ವಾಸಿಸುತ್ತಿದ್ದರು. ಆಕೆ ಬೇರೊಬ್ಬನೊಂದಿಗೆ ಸಂಬಂಧವಿಟ್ಟುಕೊಂಡಿದ್ದನ್ನು ಮನೆಯವರಿಗೆ ಹೇಳುತ್ತೇನೆ ಎಂದಾಗ ಆಕೆ ಅದಕ್ಕೆ ಸಾಕ್ಷಿಯೇನಿದೆ? ಎಂದು ಕೇಳುತ್ತಿದ್ದರು ಎಂದು ರಾಜ್‌ಕುಮಾರ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ದೇಹದ ತುಂಬ 18 ಗಾಯ; 4 ವರ್ಷದ ಮಗುವನ್ನು ಹೊಡೆದು, ಕ್ರೂರವಾಗಿ ಸುಟ್ಟು ಕೊಂದ ತಂದೆ, ಮಲತಾಯಿ

ಇತ್ತೀಚೆಗೆ, ಅವರ ಪತ್ನಿ ತನ್ನ ಪ್ರಿಯಕರನೊಂದಿಗೆ ಫೋನ್ ಮಾಡುತ್ತಿದ್ದಾಗ ರಾಜ್‌ಕುಮಾರ್ ಆಕೆಯ ಫೋನ್ ಅನ್ನು ಕಸಿದುಕೊಂಡು ಸತ್ಯವನ್ನು ಎಲ್ಲರಿಗೂ ಬಹಿರಂಗಪಡಿಸಲು ಪ್ರಯತ್ನಿಸಿದರು. ಆಕೆಯ ಫೋನ್ ಪರಿಶೀಲಿಸಿದಾಗ ಅದರಲ್ಲಿ ಕೆಲವು ನಗ್ನ ಫೋಟೋಗಳು, “ಸಿಮೆಂಟ್ ಔರ್ ಡ್ರಮ್” (ಸಿಮೆಂಟ್ ಮತ್ತು ಡ್ರಮ್) ಎಂಬ ಕ್ಯಾಪ್ಷನ್​​ನೊಂದಿಗೆ ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಕೊಲೆ ಸ್ಟೋರಿಗಳು ಮತ್ತು “ನೀಲಾ ಡ್ರಮ್ ಔರ್ ಸಿಮೆಂಟ್” (ನೀಲಿ ಡ್ರಮ್ ಮತ್ತು ಸಿಮೆಂಟ್) ಎಂಬ ಕ್ಯಾಪ್ಷನ್​ ಹಾಕಿರುವ ಒಂದು ಫೋಟೋ ಇರುವುದು ಕಂಡುಬಂದಿತ್ತು. ರಾಜ್‌ಕುಮಾರ್ ಇದನ್ನು ತನ್ನನ್ನು ಕೊಲ್ಲಲು ಸಂಚು ರೂಪಿಸುವ ಗುಪ್ತ ಸಂದೇಶವೆಂದು ಭಯಭೀತರಾದರು.

“ನೀಲಿ ಡ್ರಮ್ ಮತ್ತು ಸಿಮೆಂಟ್” ಎಂಬ ಶೀರ್ಷಿಕೆ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ನಡೆದ ಕೊಲೆ ಪ್ರಕರಣವನ್ನು ನೆನಪಿಸುತ್ತದೆ. ಆ ಕೊಲೆ ಪ್ರಕರಣದಲ್ಲಿ ಮಹಿಳೆ ಮುಸ್ಕಾನ್ ರಸ್ತೋಗಿ ತನ್ನ ಪ್ರಿಯಕರ ಸಾಹಿಲ್ ಶುಕ್ಲಾ ಜೊತೆಗೂಡಿ ತನ್ನ ಪತಿ ಸೌರಭ್ ರಜಪೂತ್​​ನನ್ನು ಕೊಂದು, ಸೌರಭ್‌ನ ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಮೀರತ್‌ನ ಬ್ರಹ್ಮಪುರಿ ಪ್ರದೇಶದ ಅವರ ಮನೆಯಲ್ಲಿ ನೀಲಿ ಡ್ರಮ್​ನೊಳಗೆ ತುಂಬಿ ಸಿಮೆಂಟ್ ಹಾಕಿ ಮುಚ್ಚಿದ್ದರು.

ಇದನ್ನೂ ಓದಿ: ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ

ಈ ಸುದ್ದಿ ಇಡೀ ದೇಶದಲ್ಲಿ ಹರಡಿದ್ದರಿಂದ ರಾಜಕುಮಾರ್​ಗೂ ಈ ಕತೆ ಗೊತ್ತಿತ್ತು. ಅವರು ಹೆಂಡತಿಯೊಂದಿಗೆ ಜಗಳವಾಡಿದಾಗ ಆಕೆ ಅವರನ್ನು ನೀಲಿ ಡ್ರಮ್‌ನಲ್ಲಿ ಪ್ಯಾಕ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಳು ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಜ್‌ಕುಮಾರ್ ಪೊಲೀಸರಿಗೆ ದೂರು ನೀಡಿದರು. ಸಂಧಾನ ಪ್ರಕ್ರಿಯೆಯ ಸಮಯದಲ್ಲಿ, ಅವರ ಪತ್ನಿ ತನ್ನ ಪ್ರೇಮಿಯೊಂದಿಗೆ ವಾಸಿಸಲು ಬಯಸುವುದಾಗಿ ಸ್ಪಷ್ಟಪಡಿಸಿದರು. ನಂತರ ರಾಜಕುಮಾರ್ ಆಕೆ ತನ್ನ ಪ್ರಿಯಕರನ ಜೊತೆಯೇ ಇರಲಿ ಎಂದು ಹೇಳಿ ತನ್ನ ಹೆಂಡತಿಯನ್ನು ಬಿಟ್ಟುಕೊಟ್ಟರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾತ್ರಿ ಮಲಗುವ 3 ಗಂಟೆ ಮುಂಚಿತವಾಗಿ ಊಟ ಮಾಡಿ; ಈ ರೋಗ ಬೇಕು ಅಂದ್ರು ಬರುವುದಿಲ್ಲ!

ನೀವು ರಾತ್ರಿ ಮಲಗುವ ಮೊದಲು ಸೇವನೆ ಮಾಡುವ ಆಹಾರ ಆರೋಗ್ಯ ಕಾಪಾಡಿಕೊಳ್ಳಲು ತುಂಬಾ ಮುಖ್ಯವಾಗುತ್ತದೆ. ಅದರಲ್ಲಿಯೂ ಆಹಾರವನ್ನು 3 ಗಂಟೆಗಳ ಮೊದಲು ಸೇವನೆ ಮಾಡಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಒಂದು ಅಭ್ಯಾಸ ಅನೇಕ ರೀತಿಯ ರೋಗಗಳನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಅಷ್ಟು ಮಾತ್ರವಲ್ಲ, ಇದಕ್ಕೆ ಪೂರಕವಾಗಿ ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧನೆ ನಡೆಸಿದ್ದು, ವ್ಯಕ್ತಿ ಮಲಗುವ 3 ಗಂಟೆಗಳ ಮೊದಲು ಆಹಾರ ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡದಿಂದ (Hypertension) ಹೃದಯ ಸಂಬಂಧಿ ಕಾಯಿಲೆಯ ವರೆಗೆ ಎಲ್ಲದರ ಅಪಾಯ ಕಡಿಮೆಯಾಗುತ್ತದೆ ಎಂದು ಹೇಳಿದೆ.

ಸಂಶೋಧನೆಯ ಪ್ರಕಾರ, ರಾತ್ರಿ ಮಲಗುವ ಮುನ್ನ ಹಲವಾರು ಗಂಟೆಗಳ ಮೊದಲು ಆಹಾರವನ್ನು ಸೇವಿಸುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ ಮತ್ತು ನಿದ್ರೆ ಸರಿಯಾಗಿ ಆಗಲು ಸಹಾಯವಾಗುತ್ತದೆ. ಅಷ್ಟು ಮಾತ್ರವಲ್ಲ, ಇದು ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೇಹವು ಸಿರ್ಕಾಡಿಯನ್ ಲಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ಆದರೆ ತಡವಾಗಿ ಊಟ ಮಾಡಿದಲ್ಲಿ, ದೇಹದ ಸಿರ್ಕಾಡಿಯನ್ ಲಯ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಜೊತೆಗೆ ಸಮಯವಲ್ಲದ ಸಮಯಕ್ಕೆ ಊಟ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆಯು ರಾತ್ರಿಯಿಡೀ ಸಕ್ರಿಯವಾಗಿದ್ದು ಕೆಲಸ ಮಾಡುತ್ತದೆ. ಆಗ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ಪರಿಣಾಮವಾಗಿ, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದ್ರೋಗದಂತಹ ಅಪಾಯ ಕೂಡ ಹೆಚ್ಚಾಗುತ್ತದೆ.

ಇದನ್ನೂ ಓದಿ: ಒತ್ತಡ, ಸ್ಕ್ರೀನ್‌ ಸಮಯದ ಹೆಚ್ಚಳದಿಂದ ಉಂಟಾಗುತ್ತಿದೆ ನಿದ್ರೆ ಸಮಸ್ಯೆ: ನಗರದ ಜನರಿಗೆ ವೈದ್ಯರ ಎಚ್ಚರಿಕೆ

ಅಧ್ಯಯನ ಹೇಗೆ ನಡೆದಿದೆ?

ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯದ ವಿಜ್ಞಾನಿಗಳು 36 ರಿಂದ 75 ವರ್ಷದ 139 ಓವರ್‌ವೆಟ್ ವ್ಯಕ್ತಿಗಳನ್ನು ಅಧ್ಯಯನದಲ್ಲಿ ಸೇರಿಸಿಕೊಂಡಿದ್ದು, ಅವರಲ್ಲಿ ಡಯಾಬಿಟಿಸ್ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿದ್ದು ಅವರನ್ನು ಎರಡು ಗುಂಪುಗಳಲ್ಲಿ ವಿಂಗಡನೆ ಮಾಡಿದ್ದಾರೆ. ಅದರಲ್ಲಿ ಒಂದು ಗುಂಪು 16 ಗಂಟೆಗಳ ಉಪವಾಸ, ಮತ್ತೊಂದು ಗುಂಪು 13 ಗಂಟೆಗಳ ಉಪವಾಸವಿದ್ದು, ಎರಡೂ ಗುಂಪುಗಳಿಗೂ ಮಲಗುವ 3 ಗಂಟೆಗಳ ಮೊದಲು ಊಟ ಕೊಟ್ಟು ಬೆಳಕು ಕಡಿಮೆ ಇರುವಂತಹ ಜಾಗದಲ್ಲಿರಲು ಸಲಹೆ ನೀಡಲಾಗಿತ್ತು. ಹೆಚ್ಚು ಉಪವಾಸ ಮಾಡಿದ ಗುಂಪಿನಲ್ಲಿ ರಕ್ತದ ಒತ್ತಡ ಕಡಿಮೆಯಾಯಿತು, ಶುಗರ್ ನಿಯಂತ್ರಣಕ್ಕೆ ಬಂದಿತು ಮತ್ತು ಇನ್ಸುಲಿನ್ ಸಂವೇದನಾಶೀಲತೆ ಹಾಗೂ ಗ್ಲೂಕೋಸ್ ಟಾಲರೆನ್ಸ್ ಕೂಡ ಉತ್ತಮವಾಯಿತು.

ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು:

ರಾತ್ರಿ ಊಟವನ್ನು ಸಂಜೆ 8 ಗಂಟೆಗೂ ಮುಂಚೆ ಮುಗಿಸಿಕೊಳ್ಳಿ, ರಾತ್ರಿ 11 ಗಂಟೆಗೂ ಮುಂಚೆ ಮಲಗಲು ಪ್ರಯತ್ನಿಸಿ, ಈ ನಿಯಮವನ್ನು ಪಾಲಿಸುವ ಮೊದಲು ಡಾಕ್ಟರ್ ಸಲಹೆ ಪಡೆಯುವುದು ಅತ್ಯಗತ್ಯ. ಈ ಸರಳ ಕ್ರಮದಿಂದ ಉತ್ತಮ ನಿದ್ರೆ, ಹೈ ಬ್ಲಡ್ ಪ್ರೆಶರ್ ನಿಯಂತ್ರಣ ಮತ್ತು ಪಚನ ವ್ಯವಸ್ಥೆಯನ್ನು ಸುಧಾರಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Explainer: ಬೆಂಗಳೂರಿಗೆ ಮಳೆ ತಂದಿದ್ದೇ ಬಿಲ್ ಗೇಟ್ಸ್ ಅಂತೆ; ಈ ವೈರಲ್ ಸುದ್ದಿ ಎಷ್ಟು ನಿಜ?

ನವದೆಹಲಿ, ಮಾರ್ಚ್ 19: ಅಮೆರಿಕದ ಅತಿ ಶ್ರೀಮಂತ ಉದ್ಯಮಿ ಬಿಲ್ ಗೇಟ್ಸ್ (Bill Gates) ಮಳೆಯ ಸುದ್ದಿ ಭಾರೀ ವೈರಲ್ ಆಗಿದೆ. ಕರ್ನಾಟಕದ ಹಲವೆಡೆ ಸುರಿಯುತ್ತಿರುವ ದಿಢೀರ್ ಮಳೆಗೆ ಹಾಗೂ ಹವಾಮಾನ ಬದಲಾವಣೆಯ ಹಿಂದೆ ಅವರದೇ ಕೈವಾಡವಿದೆಯೇ? ಎಂಬ ಚರ್ಚೆಗಳು ಶುರುವಾಗಿವೆ. ಮೋಡ ಬಿತ್ತನೆಯ ಬಗ್ಗೆ ನಿಮಗೆಷ್ಟು ಗೊತ್ತು? ಬಿಲ್ ಗೇಟ್ಸ್ ಬಗ್ಗೆ ಭಾರೀ ಸುದ್ದಿಗಳು ಹರಿದಾಡುತ್ತಿವೆ. ಸುದ್ದಿಗಳು ಮತ್ತು ರೀಲ್ಸ್​ಗಳಲ್ಲಿ ಮೋಡ ಬಿತ್ತನೆ, ಬಿಲ್ ಗೇಟ್ಸ್ ಮಳೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

“ಕಳೆದ ವಾರ ಕರ್ನಾಟಕದಲ್ಲಿ ಇದ್ದಕ್ಕಿದ್ದಂತೆ ಮಳೆ ಸುರಿಯಲು ಇದೇ ಕಾರಣವೇ?” ಎಂಬ ಚರ್ಚೆಗಳೂ ನಡೆಯುತ್ತಿವೆ. 2007ರಿಂದ ಬಿಲ್ ಗೇಟ್ಸ್ ತಮ್ಮ ಸ್ವಂತ ಹಣವನ್ನು ವಿಜ್ಞಾನದ ಅಸಾಂಪ್ರದಾಯಿಕ ಬ್ರಾಂಚ್​ನಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ವಾತಾವರಣಕ್ಕೆ ರಾಸಾಯನಿಕವನ್ನು ಚುಚ್ಚುವ ಮೂಲಕ ಮನುಷ್ಯರು ಉದ್ದೇಶಪೂರ್ವಕವಾಗಿ ಭೂಮಿಯನ್ನು ತಂಪಾಗಿಸಬಹುದೇ ಎಂಬ ಬಗ್ಗೆ ಅನ್ವೇಷಿಸುವ ಸಂಶೋಧನೆಯನ್ನು ಅವರು ಬೆಂಬಲಿಸುತ್ತಿದ್ದಾರೆ. ಹೀಗಾಗಿ, ಈ ಬಿಲ್ ಗೇಟ್ಸ್ ಮಳೆಯ ಕಾರಣದಿಂದಲೇ ಕರ್ನಾಟಕದಲ್ಲಿ ಈ ರೀತಿ ಆಲಿಕಲ್ಲು ಮಳೆಯಾಗುತ್ತಿದೆಯೇ? ಎಂಬ ಚರ್ಚೆಗಳೂ ಶುರುವಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಅಬ್ಬರ: ಕಾಶ್ಮೀರದಂತಾದ ಮಲೆನಾಡು; ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

ವಾತಾವರಣಕ್ಕೆ ರಾಸಾಯನಿಕವನ್ನು ಚುಚ್ಚುವ ಈ ಸಂಶೋಧನೆಗೆ ಬಳಸಲಾದ ವೈಜ್ಞಾನಿಕ ಪದವನ್ನು ಸ್ಟ್ರಾಟೋಸ್ಫಿಯರಿಕ್ ಏರೋಸಾಲ್ ಇಂಜೆಕ್ಷನ್ (SAI) ಎಂದು ಕರೆಯಲಾಗುತ್ತದೆ. ಇದು ಮೂಲಭೂತವಾಗಿ ಸೂರ್ಯನ ಬೆಳಕು ನಮ್ಮ ಗ್ರಹವನ್ನು ತಲುಪುವ ಪ್ರಯತ್ನವಾಗಿದೆ. ಬಿಲ್ ಗೇಟ್ಸ್ ಅವರ ರಾಸಾಯನಿಕ ಸಿಂಪಡಣೆಯಿಂದಾಗಿಯೇ ಇತ್ತೀಚಿನ ಭಾರೀ ಮಳೆ ಉಂಟಾಗಿದೆ ಎಂದು ಹೇಳಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ವೀಡಿಯೊಗಳನ್ನು ಪ್ರಸಾರ ಮಾಡಲಾಗುತ್ತಿದೆ. “ಸನ್-ಡಿಮ್ಮಿಂಗ್” ತಂತ್ರಜ್ಞಾನ ಎಂಬ ವಿದ್ಯಮಾನಕ್ಕೆ ವ್ಯತಿರಿಕ್ತವಾಗಿ ಬಿಲ್ ಗೇಟ್ಸ್​ ಈ ರಾಸಾಯನಿಕ ಸಿಂಪಡಣೆ ಅಥವಾ ರಾಸಾಯನಿಕವನ್ನು ಇಂಜೆಕ್ಟ್ ಮಾಡುತ್ತಿದ್ದಾರೆ ಎಂಬ ಚರ್ಚೆಗಳು ಕೂಡ ನಡೆದಿವೆ.

ಈ ವದಂತಿ ಎಷ್ಟು ನಿಜ?:

ಬಿಲ್ ಗೇಟ್ಸ್ ಹವಾಮಾನ ಬದಲಾವಣೆ ಪರಿಹಾರಗಳನ್ನು ಅಧ್ಯಯನ ಮಾಡಲು SCoPExನಂತಹ ಕೆಲವು ಯೋಜನೆಗಳ ಮೂಲಕ ಸೌರ ಭೂ ಎಂಜಿನಿಯರಿಂಗ್ ಸಂಶೋಧನೆಗೆ ಹಣಕಾಸು ಒದಗಿಸಿದ್ದರೂ ಈ ಯಾವುದೇ ಪ್ರಯೋಗಗಳು ಭಾರತದಲ್ಲಿ ನಡೆದಿಲ್ಲ. ಹೀಗಾಗಿ, ಕರ್ನಾಟಕದಲ್ಲಿ ಬರುತ್ತಿರುವ ಮಳೆಗೂ ಬಿಲ್ ಗೇಟ್ಸ್​ಗೂ ಸಂಬಂಧವಿಲ್ಲ. ಅಷ್ಟಕ್ಕೂ ಈಗಾಗಲೇ ಈ ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಬಿಲ್ ಗೇಟ್ಸ್ ಕೃಷಿ ಉಪಕ್ರಮಗಳಿಗಾಗಿ ಭಾರತದ ಹವಾಮಾನ-ಸ್ಥಿತಿಸ್ಥಾಪಕ ಸಂಶೋಧನೆಯನ್ನು ಬೆಂಬಲಿಸಿದರು ಮತ್ತು ಕೃಷಿಗೆ ಬಳಸುವ ಸಾಧನಗಳ ಕುರಿತು ಸಂಶೋಧನೆಗೆ ಹಣಕಾಸು ಒದಗಿಸಿದರು. ಆದರೆ, ಕೆಲವು ಸಾಮಾಜಿಕ ಮಾಧ್ಯಮಗಳು ಈ ಕೃಷಿ ಸಂಶೋಧನಾ ನಿಧಿಯನ್ನು ಬಿಲ್ ಗೇಟ್ಸ್ ಮಾನ್ಸೂನ್ ಅನ್ನು ನಿಯಂತ್ರಿಸುತ್ತಿದ್ದಾರೆ ಎಂದು ಸುದ್ದಿಗಳನ್ನು ಹರಡುತ್ತಿದ್ದಾರೆ. ಇದೆಲ್ಲ ಸಂಪೂರ್ಣವಾಗಿ ಕಟ್ಟುಕಥೆ.

ಇದನ್ನೂ ಓದಿ: ಭಾರತವನ್ನು ಪ್ರಯೋಗಶಾಲೆ ಎಂದ ಬಿಲ್ ಗೇಟ್ಸ್; ಸೋಷಿಯಲ್ ಮೀಡಿಯಾದಲ್ಲಿ ಟೀಕೆಗಳ ಸುರಿಮಳೆ

ವಾಸ್ತವದ ಸಂಗತಿಯೆಂದರೆ, ಬಿಲ್ ಗೇಟ್ಸ್ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಪ್ರಾಥಮಿಕ ಸಂಶೋಧನೆಗೆ ಹಣಕಾಸು ಒದಗಿಸಿದರು, ಇದು ಸೂರ್ಯನ ಬೆಳಕನ್ನು ಪ್ರತಿಬಿಂಬಿಸಲು ವಾತಾವರಣಕ್ಕೆ ಕ್ಯಾಲ್ಸಿಯಂ ಕಾರ್ಬೋನೇಟ್ ಕಣಗಳನ್ನು ಬಿಡುಗಡೆ ಮಾಡುವ ಸಾಮರ್ಥ್ಯವನ್ನು ಅಧ್ಯಯನ ಮಾಡಿತು, ಇದನ್ನು ‘ಸನ್-ಡಿಮ್ಮಿಂಗ್’ ಎಂದು ಕರೆಯಲಾಗುತ್ತಿತ್ತು. ಈ ಯೋಜನೆಯು ಭಾರೀ ಟೀಕೆಗಳನ್ನು ಎದುರಿಸಿತು. ಹೀಗಾಗಿ, ಇದನ್ನು ಸದ್ಯಕ್ಕೆ ರದ್ದುಗೊಳಿಸಲಾಗಿದೆ.ಈ ಸಂಶೋಧನೆಗಳನ್ನು ಎಂದಿಗೂ ದೊಡ್ಡ ಪ್ರಮಾಣದ ಪ್ರಯೋಗಗಳನ್ನು ನಡೆಸಲಿಲ್ಲ. ಹೀಗಾಗಿ ಖಂಡಿತವಾಗಿಯೂ ಭಾರತದಲ್ಲಿ ಮಳೆಯ ಮೇಲೆ ಬಿಲ್ ಗೇಟ್ಸ್ ಯಾವುದೇ ಪರಿಣಾಮ ಬೀರುವುದಿಲ್ಲ.

ಆದರೆ, ಭಾರತ ಸರ್ಕಾರ ಮತ್ತು ಐಐಟಿ ಕಾನ್ಪುರದಂತಹ ಸಂಸ್ಥೆಗಳು ದೆಹಲಿಯಂತಹ ನಗರಗಳಲ್ಲಿನ ಮಾಲಿನ್ಯ ಬಿಕ್ಕಟ್ಟನ್ನು ನಿಭಾಯಿಸಲು ಕೃತಕ ಮಳೆಯನ್ನು ಉಂಟುಮಾಡಲು ಮೋಡ ಬಿತ್ತನೆಯನ್ನು ಮಾಡುತ್ತಿವೆ. ಇದು ಬಿಲ್ ಗೇಟ್ಸ್ ಯೋಜನೆಗಿಂತ ಸಂಪೂರ್ಣವಾಗಿ ಭಿನ್ನವಾದುದು. ಹೀಗಾಗಿ, ಬಿಲ್ ಗೇಟ್ಸ್ ಬೆಂಗಳೂರಿನಲ್ಲಿ ಮಳೆ ತರಿಸುತ್ತಿದ್ದಾರೆ, ಕರ್ನಾಟಕದಾದ್ಯಂತ ಆಲಿಕಲ್ಲು ಮಳೆ ಬರುತ್ತಿರುವುದಕ್ಕೆ ಬಿಲ್ ಗೇಟ್ಸ್ ಕಾರಣ, ಬಿಲ್ ಗೇಟ್ಸ್ ಅಮೆರಿಕದಲ್ಲಿ ಕುಳಿತುಕೊಂಡು ಭಾರತದ ಹವಾಮಾನವನ್ನು ನಿಯಂತ್ರಿಸುತ್ತಿದ್ದಾರೆ ಎಂಬ ಸುದ್ದಿಗಳನ್ನೆಲ್ಲ ಯಾರೂ ನಂಬಬೇಡಿ. ಇದು ಸಂಪೂರ್ಣವಾಗಿ ಸುಳ್ಳು ಸುದ್ದಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link