Headlines

nagaraj11081993

ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪತ್ರ ಬಲಿ

ಹುಬ್ಬಳ್ಳಿ, (ಮಾರ್ಚ್ 19): ರೀಲ್ಸ್  (Reels) ಹುಚ್ಚಾಟಕ್ಕೆ ಬಿದ್ದು ಬಿಜೆಪಿ ಮುಖಂಡನ ಪುತ್ರ ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ  (Hubballi) ನಡೆದಿದೆ. ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ(15) ಮೃತಟ್ಟಿದ್ದಾನೆ. ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿಯಾಗಿರುವ ನಮೀಷ ಸಂಗಳದ, ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಆದ್ರೆ, ಯುಗಾದಿ ಹಬ್ಬಕ್ಕೆಂದು ಹುಬ್ಬಳ್ಳಿಗೆ ಬಂದಿದ್ದು, ಈ ವೇಳೆ ಅಪಯಕಾರಿ ರೀಲ್ಸ್ ಮಾಡಲು ಹೋಗಿ ದುರಂತ ಸಾವು ಕಂಡಿದ್ದಾನೆ. ಇದರಿಂದ…

Read More

IPL: ಐಪಿಎಲ್ ಇತಿಹಾಸದಲ್ಲಿ ಪರ್ಪಲ್ ಕ್ಯಾಪ್ ಗೆಲ್ಲದ ಐವರು ಲೆಜೆಂಡರಿ ಬೌಲರ್​ಗಳಿವರು

19ನೇ ಆವೃತ್ತಿಯ ಐಪಿಎಲ್​ ಆರಂಭಕ್ಕೂ ಮುನ್ನ ಕಳೆದ 18 ಆವೃತ್ತಿಗಳ ಸ್ವಾರಸ್ಯಕರ ಸಂಗತಿಗಳ ಮೇಲೆ ಕಣ್ಣು ಹಾಯಿಸೋಣ. ಅದರಂತೆ ಐಪಿಎಲ್‌ನ 18 ಆವೃತ್ತಿಗಳ ಇತಿಹಾಸದಲ್ಲಿ ಒಟ್ಟು 15 ಬೌಲರ್‌ಗಳು ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಒಂದು ಆವೃತ್ತಿಯಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಈ ಪಟ್ಟಿಯಲ್ಲಿ, ಭುವನೇಶ್ವರ್ ಕುಮಾರ್ , ಹರ್ಷಲ್ ಪಟೇಲ್ ಮತ್ತು ಡ್ವೇನ್ ಬ್ರಾವೋ ಎಂಬ ಮೂವರು ಕ್ರಿಕೆಟಿಗರು ಮಾತ್ರ ಎರಡು ಬಾರಿ ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ. ಇವರ…

Read More

ಯುಗಾದಿ ದಿನವೇ ಧಾರವಾಡದಲ್ಲಿ ರಕ್ತಪಾತ: ಆಸ್ತಿಗಾಗಿ ಒಡ ಹುಟ್ಟಿದ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ!

ಧಾರವಾಡ, ಮಾರ್ಚ್​ 19: ಇಂದು ರಾಜ್ಯದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ. ನಾಡಿನ ಜನ ಬೇವು-ಬೆಲ್ಲ ಸವಿದು ಖುಷಿಪಟ್ಟರೆ, ಇತ್ತ ಧಾರವಾಡದಲ್ಲಿ ಯುಗಾದಿ ದಿನವೇ ರಕ್ತಪಾತವಾಗಿದೆ. ಆಸ್ತಿ ವಿಚಾರಕ್ಕೆ ಅಣ್ಣನಿಂದ ತಂಗಿಯ ಬರ್ಬರ ಕೊಲೆ (kill) ನಡೆದಿರುವಂತಹ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿಯಲ್ಲಿ ನಡೆದಿದೆ. ಶಿವಕ್ಕ(45) ಮೃತ ತಂಗಿ. ಹನುಮಂತ ಯಲಿವಾಳ ಹತ್ಯೆಗೈದ ಅಣ್ಣ. ಸದ್ಯ ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಹನುಮಂತ ಯಲಿವಾಳ ಮತ್ತು ಶಿವಕ್ಕ ಅಣ್ಣ-ತಂಗಿ. ತಂದೆಯ ಆಸ್ತಿಯಲ್ಲಿ ನನಗೂ ಪಾಲಿದೆ,…

Read More

‘ಅಧ್ಯಾಯ ಎರಡು’: ‘ಕಾಂತಾರ: ಚಾಪ್ಟರ್ 2’ ಆರಂಭಿಸಿದರೇ ರಿಷಬ್ ಶೆಟ್ಟಿ?

ರಿಷಬ್ ಶೆಟ್ಟಿ (Rishab Shetty) ನಟಿಸಲಿರುವ, ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ನ ಮುಹೂರ್ತ ಹಂಪಿಯಲ್ಲಿ ನೆರವೇರಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಪೌರಾಣಿಕ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಸದ್ಯಕ್ಕೆ ನನ್ನ ಕೈಯಲ್ಲಿ ‘ಜೈ ಹನುಮಾನ್’ ಸಿನಿಮಾ ಮಾತ್ರವೇ ಇದೆ ಎಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಸಮಯದಲ್ಲಿ ಹೇಳಿದ್ದರು. ಆದರೆ ಇದೀಗ ಯುಗಾದಿಯಂದು ರಿಷಬ್ ಶೆಟ್ಟಿ ಹೊಸ ಸಿನಿಮಾ ಪ್ರಾರಂಭ ಮಾಡಿದಂತಿದ್ದಾರೆ. ಇಂದು ಯುಗಾದಿ ಹಬ್ಬದ…

Read More

ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ, ಮೆರಗು ನೀಡಿದ ಮಂಗಳವಾದ್ಯಗಳು

ಹಾಸನ, (ಮಾರ್ಚ್ 19): ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ (Ugadi Festival) ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ ಮೊದಲ‌ ದಿನ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಹಾಸನ (Hassan) ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ರೈತರ, ಹಸುಗಳಿಗೆ ಅಲಂಕಾರ ಮಾಡಿ ನೇಗಿಲು ಹೂಡಿ ಉಳುಮೆ ಮಾಡಿ ಸಂಭ್ರಮಿಸಿದರು. ಅಲ್ಲದೇ…

Read More

IPL 2026: ಕಿಂಗ್ ಕೊಹ್ಲಿ 2.0.. ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌; ವಿಡಿಯೋ ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್‌ ಮಾರ್ಚ್​ 28 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಇನ್ನ 9 ದಿನಗಳು ಮಾತ್ರ ಉಳಿದಿವೆ. ಹೀಗಾಗಿ ಉಭಯ ತಂಡಗಳು ಮೈದಾನದಲ್ಲಿ ಬೆವರು ಹರಿಸುತ್ತಿವೆ. ಇತ್ತ ಆರ್​ಸಿಬಿ ಕೂಡ ತಯಾರಿಯನ್ನು ಚುರುಕುಗೊಳಿಸಿದ್ದು, ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ತಂಡವನ್ನು ಕೂಡಿಕೊಂಡ ಬಳಿಕ ಮೊದಲ ಬಾರಿಗೆ ನೆಟ್ಸ್​ನಲ್ಲಿ ಬ್ಯಾಟ್ ಹಿಡಿದು ಅಬ್ಬರಿಸಿದ್ದಾರೆ….

Read More

ಯುಗಾದಿ ಹೊಸತೊಡಕು: ನಾಟಿ ಕೋಳಿಗೆ ಭಾರೀ ಡಿಮ್ಯಾಂಡ್, ರೇಟ್ ಎಷ್ಟು ಗೊತ್ತಾ?

ಚಿಕ್ಕಬಳ್ಳಾಫುರ, ಮಾರ್ಚ್ 19: ಇಂದು ಯುಗಾದಿ (Ugadi) ಹೊಸತೊಡಕು, ನಾನ್ ವೆಜ್ ಪ್ರಿಯರು ಚಿಕನ್, ಮಟನ್ ತಿನ್ನದಿದ್ದರೇ ಸಮಾಧಾನವಾಗಲ್ಲ. ಆದರೆ ಫಾರಂ ಕೋಳಿ ಬದಲು ಈಗ ನಾಟಿ ಕೋಳಿ (Nati Koli) ಹಾಗೂ ನಾಟಿ ಕೋಳಿ ಮೊಟ್ಟೆ ಮೊರೆ ಹೋಗಿದ್ದಾರೆ. ಹೀಗಾಗಿ ನಾಟಿ ಕೋಳಿಗೆ ಸಖತ್​​ ಡಿಮ್ಯಾಂಡ್​​ ಬಂದಿದ್ದು, ಜನರು ಹುಡುಕಾಡಿ ಕೇಳಿದಷ್ಟು ಹಣ ನೀಡಿ ಖರೀದಿ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಾಟಿ ಕೋಳಿ ಸಾಕಾಣಿಕೆ ಆರೋಗ್ಯ ಕಾಳಜಿ ವಹಿಸುತ್ತಿರುವ ಕೆಲವರು, ಹೈಬ್ರಿಡ್ ಆಹಾರದ ಬದಲು ನಾಟಿ, ಜವಾರಿ…

Read More

ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ: ಸಿಎಂಗೆ ಹೈಕೋರ್ಟ್ ತರಾಟೆ

ಬೆಂಗಳೂರು, (ಮಾರ್ಚ್ 19): ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ (government employees transfer) ಸಿಎಂ ಹಸ್ತಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ಆಕ್ಷೇಪ ವ್ಯಕ್ತಪಡಿಸಿದೆ. ಬೆಸ್ಕಾಂ ಎಇ ಎಸ್.ಚೇತನ್ ಎಂಬುವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್, ಹಾಗೂ ಟಿ.ಎಂ.ನದಾಫ್ ಅವರಿದ್ದ ಹೈಕೋರ್ಟ್ ಪೀಠ, ಸಿಎಂ ಸಿದ್ದರಾಮಯ್ಯಗೆ (siddaramaiah )ಚಾಟಿ ಬೀಸಿದೆ. ಸಿಎಂಗೆ ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ. ಸರ್ಕಾರಿ ನೌಕರರ ವರ್ಗಾವಣೆ ವಿಚಾರ ಆಯಾ ಇಲಾಖೆಗೇ ಬಿಡಬೇಕು. ಮುಖ್ಯಮಂತ್ರಿಗಳ ಕಚೇರಿ ವರ್ಗಾವಣೆಯ ಮನವಿ…

Read More

ಗಂಟೆಗಳ ಕಾಲ ಕುಳಿತು ಕೆಲಸ ಮಾಡ್ತೀರಾ? ಹಾಗಿದ್ರೆ ಇನ್ನಾದರೂ ತಪ್ಪದೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಇಂದಿನ ಜೀವನಶೈಲಿಯಲ್ಲಿ, ಆಫೀಸ್, ಮನೆ ಕೆಲಸ ಅಥವಾ ಆನ್‌ಲೈನ್ ಅಧ್ಯಯನಕ್ಕಾಗಿ ಹಲವು ಗಂಟೆಗಳ ಕಾಲ ಕುಳಿತುಕೊಂಡು ಕೆಲಸ ಮಾಡುವುದು ಬಹಳ ಸಾಮಾನ್ಯವಾಗಿದೆ. ಜನರು ಕಂಪ್ಯೂಟರ್, ಲ್ಯಾಪ್‌ಟಾಪ್ ಅಥವಾ ಮೊಬೈಲ್ ಮುಂದೆ ನಿರಂತರವಾಗಿ ಕುಳಿತುಕೊಂಡಿರುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸವನ್ನು ನಿರ್ಲಕ್ಷ್ಯ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹೌದು, ಡಾ. ಅಜಯ್ ಕುಮಾರ್ ಹೇಳುವ ಪ್ರಕಾರ, ದೀರ್ಘಕಾಲ ಕುಳಿತುಕೊಳ್ಳುವುದರಿಂದ ಸ್ನಾಯುಗಳು ದುರ್ಬಲವಾಗುತ್ತವೆ ಮತ್ತು ಬೆನ್ನುಹುರಿಯ ಮೇಲೆ ಒತ್ತಡ ಹೆಚ್ಚುತ್ತದೆ. ಇದರಿಂದ ಬೆನ್ನು ನೋವು (Back Pain) ಸಾಮಾನ್ಯವಾಗುತ್ತದೆ. ರಕ್ತ…

Read More

ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಸಂಜೆ ಹೊತ್ತಲ್ಲಿ ತಪ್ಪದೇ ಈ ಕೆಲಸಗಳನ್ನು ಮಾಡಿ

ಇಂದಿನ ಈ ಬ್ಯುಸಿ ಜೀವನದಲ್ಲಿ ಅನೇಕರಿಗೆ ನೆಮ್ಮದಿ ಅನ್ನೋದೇ ಇಲ್ಲದಾಗಿದೆ. ಹೆಚ್ಚಿನವರು ಒತ್ತಡದ  ಜೀವನವನ್ನೇ (stressful Life) ನಡೆಸುತ್ತಿದ್ದಾರೆ. ಮನಸ್ಸು ನಿರಾಳವಾಗಿದ್ದರೆ ಮಾತ್ರ ಸಂತೋಷ, ನೆಮ್ಮದಿ, ಶಾಂತಿ ಜೀವನದಲ್ಲಿ ನೆಲೆಸುತ್ತದೆ. ಹಾಗಾಗಿ ಮನಸ್ಸನ್ನು ನಿರಾಳವಾಗಿಸಲು ಶಾಂತಿ ನೆಮ್ಮದಿಯನ್ನು ಪಡೆಯಲು ಹಲವರು ಸಾಕಷ್ಟು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಏನೇ ಮಾಡಿದ್ರೂ ನೆಮ್ಮದಿ ಅನ್ನೋದೇ ಸಿಗುತ್ತಿಲ್ಲ ಅಂತ ಅನೇಕರು ಹೇಳುತ್ತಿರುತ್ತಾರೆ. ನೀವು ಕೂಡ ಇದೇ ರೀತಿ ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಹಂಬಲಿಸುತ್ತಿದ್ದೀರಾ? ಹಾಗಿದ್ರೆ ಸಂಜೆಯ ಹೊತ್ತಲ್ಲಿ ತಪ್ಪದೆ ಈ ಕೆಲವು ಕೆಲಸಗಳನ್ನು…

Read More