ಯುಗಾದಿ ದಿನವೇ ಧಾರವಾಡದಲ್ಲಿ ರಕ್ತಪಾತ: ಆಸ್ತಿಗಾಗಿ ಒಡ ಹುಟ್ಟಿದ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ!
ಧಾರವಾಡ, ಮಾರ್ಚ್ 19: ಇಂದು ರಾಜ್ಯದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ. ನಾಡಿನ ಜನ ಬೇವು-ಬೆಲ್ಲ ಸವಿದು ಖುಷಿಪಟ್ಟರೆ, ಇತ್ತ ಧಾರವಾಡದಲ್ಲಿ ಯುಗಾದಿ ದಿನವೇ ರಕ್ತಪಾತವಾಗಿದೆ. ಆಸ್ತಿ ವಿಚಾರಕ್ಕೆ ಅಣ್ಣನಿಂದ ತಂಗಿಯ ಬರ್ಬರ ಕೊಲೆ (kill) ನಡೆದಿರುವಂತಹ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿಯಲ್ಲಿ ನಡೆದಿದೆ. ಶಿವಕ್ಕ(45) ಮೃತ ತಂಗಿ. ಹನುಮಂತ ಯಲಿವಾಳ ಹತ್ಯೆಗೈದ ಅಣ್ಣ. ಸದ್ಯ ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಹನುಮಂತ ಯಲಿವಾಳ ಮತ್ತು ಶಿವಕ್ಕ ಅಣ್ಣ-ತಂಗಿ. ತಂದೆಯ ಆಸ್ತಿಯಲ್ಲಿ ನನಗೂ ಪಾಲಿದೆ,…