Headlines

nagaraj11081993

ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ – Kannada News | Pavithra Gowda Bail Denied in Renukaswamy Murder Case: Interim Plea Fails, Jail Continues

ರೇಣುಕಾ ಸ್ವಾಮಿ (Renukaswamy ) ಕೊಲೆ ಕೇಸ್​​ನಲ್ಲಿ ಎ1 ಆಗಿರೋ ಪವಿತ್ರಾ ಗೌಡ ಅವರು ಜಾಮೀನು ಪಡೆಯಬೇಕು ಎಂದು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈಗ ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್​​ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜೈಲುವಾಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಪವಿತ್ರಾ ಗೌಡ ಅವರು ದರ್ಶನ್ ಆಪ್ತೆ ಎನಿಸಿಕೊಂಡಿದ್ದರು. ಇಬ್ಬರೂ ಲಿವಿನ್ ರಿಲೇಶನ್​ಶಿಪ್​​ನಲ್ಲಿ ಇದ್ದ ಬಗ್ಗೆ ಚಾರ್ಜ್​ಶಿಟ್​​ನಲ್ಲಿ ಉಲ್ಲೇಖಿಸಲಾಗಿದೆ….

Read More

Gold Rate Today: ಚಿನ್ನದ ಬೆಲೆ 10 ಗ್ರಾಮ್​ಗೆ 1,200 ರೂ ಇಳಿಕೆ; ಬೆಳ್ಳಿಯೂ ಕುಸಿತ – Kannada News | Gold Price Today on 16th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯಾಗುವುದು ಮುಂದುವರಿದಿದೆ. ವಾರಾಂತ್ಯದಲ್ಲಿ ಸುಮಾರು 200 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 120 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 7 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,400 ರುಪಾಯಿ ಇದೆ. 24…

Read More

ಆಡಿದ್ದು ಸಾಕು, ಮೂವರಿಗೆ ಗೇಟ್ ಪಾಸ್ ನೀಡಿ: ಅಫ್ರಿದಿ ಆಗ್ರಹ – Kannada News | Drop Babar Azam, Shaheen afridi, Shadab Khan: Shahid Afridi

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಮತ್ತೊಮ್ಮೆ ಮುಗ್ಗರಿಸಿದೆ. ಅದು ಸಹ ತನ್ನ ಬದ್ಧವೈರಿ ಭಾರತದ ವಿರುದ್ಧ. ಇತ್ತ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ 8ನೇ ಬಾರಿ ಗೆಲುವಿನ ನಗೆ ಬೀರಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ…

Read More

ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್: ಹಳೇ ಸಂದೇಶ ಮುಂದಿಟ್ಟು ಖರ್ಗೆಗೆ ಖಡಕ್ ಉತ್ತರ ಕೊಟ್ಟ RSS – Kannada News | RSS Responds to Priyank Kharge Row: Gurudakshina Is Devotion, Not Donation, Mohan Bhagwat old video circulating again

ಮೋಹನ್ ಭಾಗವತ್ ಹಾಗೂ ಪ್ರಿಯಾಂಕ್ ಖರ್ಗೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ‘ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್’ ಎಂಬ ಮೋಹನ್ ಭಾಗವತ್ (Mohan Bhagwat) ಅವರ ಹೇಳಿಕೆಯನ್ನು ಮತ್ತೆ ಮುನ್ನೆಲೆಗೆ ತರುವ ಮೂಲಕವೇ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಟೀಕಾಕಾರರಿಗೆ ಆರ್​ಎಸ್​ಎಸ್ (RSS) ಖಡಕ್ ಉತ್ತರ ನೀಡಿದೆ. ಆರ್​ಎಸ್​ಎಸ್​ನ ಆರ್ಥಿಕ ಮೂಲ ಯಾವುದು ಮತ್ತು ಅದು ತೆರಿಗೆ ಪಾವತಿಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಈವರೆಗೆ ಉತ್ತರ ಸಿಕ್ಕಿಲ್ಲ ಎಂದು…

Read More

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ – Kannada News | Sabarimala Women Entry: Supreme Courts 9 Judge Bench to Rehear Case from April 7

ದೆಹಲಿ, ಫೆಬ್ರವರಿ 16: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ನೀಡಿದೆ. ಏಪ್ರಿಲ್ 7ರಿಂದ ಈ ವಿಚಾರಣೆ ಆರಂಭವಾಗಲಿದ್ದು, ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಇದನ್ನು ನಡೆಸಲಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಮಹಿಳೆಯರಿಗೆ ಶಬರಿಮಲೆಗೆ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿತ್ತು. ಆದರೆ, ಈ ತೀರ್ಪಿನ ನಂತರ ಭಕ್ತರು ಮತ್ತು ಧಾರ್ಮಿಕ ಹೋರಾಟಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಿಂದಿನ ತೀರ್ಪನ್ನು ಸಾಂವಿಧಾನಿಕ ಪೀಠವೇ ನೀಡಿರುವುದರಿಂದ,…

Read More

ಭಾರತದ ಎಐ ಇಂಪ್ಯಾಕ್ಟ್ ಸಮಿಟ್​ಗೆ ಇಡೀ ಜಗತ್ತು ಆಕರ್ಷಿತವಾಗಿರುವುದು ಯಾಕೆ? ಅಂಥದ್ದೇನು ವಿಶೇಷತೆ ಇದೆ? – Kannada News | AI Impact Summit 2026, how this benefits India and the world

ನವದೆಹಲಿ, ಫೆಬ್ರುವರಿ 16: ಈ ಬಾರಿಯ ಎಐ ಇಂಪ್ಯಾಕ್ಟ್ ಸಭೆಗೆ (India AI Impact Summit) ಭಾರತ ಆತಿಥ್ಯ ವಹಿಸಿದೆ. ಇದು ನಾಲ್ಕನೇ ಎಐ ಸಭೆಯಾಗಿದೆ. 2023ರಲ್ಲಿ ಬ್ರಿಟನ್​ನಲ್ಲಿ ಮೊದಲ ಎಐ ಇಂಪ್ಯಾಕ್ಟ್ ಸಭೆ ನಡೆದಿತ್ತು. ನಂತರದ ವರ್ಷಗಳಲ್ಲಿ ದಕ್ಷಿಣ ಕೊರಿಯಾ ಮತ್ತು ಫ್ರಾನ್ಸ್ ದೇಶಗಳಲ್ಲಿ ಶೃಂಗಸಭೆಗಳು ನಡೆದಿವೆ. ಈ ಬಾರಿಯ ಎಐ ಸಮಿಟ್ ಅನ್ನು ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಥೀಮ್​ನಲ್ಲಿ ರೂಪಿಸಲಾಗಿದೆ. ಅಂದರೆ, ಎಲ್ಲರಿಗೂ ಎಐ ಅಭಿವೃದ್ಧಿಫಲ ಸಿಗಲಿ ಎಂಬುದು ಭಾರತದ ಆಶಯ. ಆ…

Read More

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಸಾವು! – Kannada News | Chikkamagaluru: Coffee Worker Dies in Elephant Attack; Karnataka Conflict Escalates

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಸಾವು! ಚಿಕ್ಕಮಗಳೂರು, ಫೆಬ್ರವರಿ 16: ಚಿಕ್ಕಮಗಳೂರು ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50 ವರ್ಷದ ಕಾರ್ಮಿಕ ಯಲ್ಲಪ್ಪ ಆನೆ ದಾಳಿಗೆ (elephant attack) ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿರುವಳ್ಳಿ ಗ್ರಾಮದ ನಿವಾಸಿ ಯಲ್ಲಪ್ಪ, ನಾಗೇಶ್ ಗೌಡ ಅವರ ತೋಟದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ. ಬಾಳೆಹೊನ್ನೂರು ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುತ್ತಾಡುತ್ತಿದ್ದ ಕಾಡಾನೆ…

Read More

ಹಾಸನದಲ್ಲಿ ತಪ್ಪಿದ ಭಾರಿ ದುರಂತ: ಕೆರೆ ಪಕ್ಕದ ಮರಕ್ಕೆ ಗುದ್ದಿ ನಿಂತ ಸ್ಕೂಲ್ ​​ಬಸ್​​ – Kannada News | Seven Students Injured in Separate School Bus Accidents in Hassan and Dakshina Kannada

ಕೆರೆ ಬಳಿ ಮರಕ್ಕೆ ಗುದ್ದಿರುವ ಶಾಲಾ ಬಸ್​​Image Credit source: Tv9 Kannada ಹಾಸನ/ಮಂಗಳೂರು, ಫೆಬ್ರವರಿ 16: ಖಾಸಗಿ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​​ ಕೆರೆಯ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕೆರೆ ಕಡೆಗೆ ವಾಲಿನಿಂತ ಘಟನೆ ಅರಕಲಗೂಡು ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಮುಕ್ಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಬಸ್​​ ಕೆರೆಗೆ ಬೀಳುವುದು ತಪ್ಪಿದ್ದು, 40 ವಿದ್ಯಾರ್ಥಿಗಳು ಈ ಶಾಲಾ ಬಸ್​​ನಲ್ಲಿದ್ದರು ಎನ್ನಲಾಗಿದೆ. ಅಪಘಾತಕ್ಕೀಡಾಗಿರುವ ಬಸ್​​ ಶ್ರೀ ಸಿದ್ದರಾಮೇಶ್ವರ…

Read More

ಮದುವೆಗೂ ಮುನ್ನ ಮ್ಯಾಚಿಂಗ್ ಡ್ರೆಸ್ ಹಾಕಿ ಮುಂಬೈನಿಂದ ಹಾರಿದ ವಿಜಯ್-ರಶ್ಮಿಕಾ – Kannada News | Vijay Deverakonda and Rashmika Mandanna Fly from Mumbai Ahead of Wedding

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರು ಫೆಬ್ರವರಿ 26ರಂದು ವಿವಾಹ ಆಗಲಿದ್ದಾರೆ ಎಂಬ ಸುದ್ದಿ ಜೋರಾಗಿದೆ. ಈ ವಿವಾಹದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಇದೆ. ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರೂ ಆ ವಿಷಯವನ್ನು ಈ ಜೋಡಿ ಮುಚ್ಚಿಡತ್ತಾ ಬಂದಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಇವರ ಪ್ರೀತಿಗೆ ಮದುವೆ ಎಂಬ ಮುದ್ರೆ ಬೀಳಲಿದೆ. ಅದಕ್ಕೂ ಮೊದಲು ವಿಜಯ್ ಹಾಗೂ ರಶ್ಮಿಕಾ ಮಂಬೈನಿಂದ ಹಾರಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮೊದಲು ಭೇಟಿ…

Read More

ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ – Kannada News | Woman Passenger Injured in Dog Bite Incident at Jaipur Airport

ಜೈಪುರ, ಫೆಬ್ರವರಿ 16: ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ(Dog Attack) ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಕಾಲಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು. ಈ ಘಟನೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದವರಲ್ಲಿ ಭಯ ಸೃಷ್ಟಿಯಾಗಿತ್ತು. ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಭಾನುವಾರ ಮಧ್ಯಾಹ್ನ 2.20ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೊಬ್ಬರು ವಿಮಾನದಿಂದ ಇಳಿದು…

Read More