ರಾಜ್ಯಕ್ಕೆ ಇದು ಗುಡ್ ನ್ಯೂಸ್: ಮಹತ್ವದ ಸಿದ್ಧತೆ ನಡೆಸುತ್ತಿರುವ ಡಿಕೆ ಶಿವಕುಮಾರ್
ಬೆಂಗಳೂರು, ಮೇ,26: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನವದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದು ಕರ್ನಾಟಕದ ಜನತೆಗೆ ಸಿಕ್ಕ ಜಯ ಎಂದು ಹೇಳಿದರು. ಸುಪ್ರೀಂ ಕೋರ್ಟ್ನ ತೀರ್ಪಿನ ಪ್ರತಿಯು ತಮಗೆ ಕ್ಷಣಮಾತ್ರದಲ್ಲಿ ದೊರೆತಿದ್ದು, ಮೂವರು ನ್ಯಾಯಾಧೀಶರ ಪೀಠವು ಈ ಅರ್ಜಿಯನ್ನು ಪರಿಶೀಲಿಸಿ ತಿರಸ್ಕರಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ತೀರ್ಪು ಕರ್ನಾಟಕದ ಪಾಲಿಗೆ ಶುಭಸುದ್ದಿಯಾಗಿದ್ದು, ರಾಜ್ಯದ ಪರವಾಗಿ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು…