3 ಗಂಟೆಗಳ ಕಾಲ ಚಿತ್ರಹಿಂಸೆ, ಎಲೆಕ್ಟ್ರಿಕ್ ಶಾಕ್ ಕೊಟ್ಟು, ವಿಷ ಕುಡಿಸಿ, ಪ್ರಿಯಕರನ ಜತೆ ಸೇರಿ ಗಂಡನ ಹತ್ಯೆಗೈದ ಪತ್ನಿ – Kannada News | UP: Husband Tortured, Electrocuted, Poisoned by Wife and Lover for Questioning Affair
ಮೊರಾದಾಬಾದ್, ಮೇ 26: ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತಿ(Husband)ಯನ್ನು ಪತ್ನಿಯೇ ತನ್ನ ಪ್ರಿಯಕರ ಮತ್ತು ತಂಗಿಯ ಸಹಾಯದಿಂದ ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ(Murder) ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ.ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ದುರ್ದೈವಿಯನ್ನು ಪವನ್ ಎಂದು ಗುರುತಿಸಲಾಗಿದೆ. ಪವನ್ ಮತ್ತು ಆಂಚಲ್ (24) ದಂಪತಿಗೆ 6 ವರ್ಷಗಳ ಹಿಂದೆ ಮದುವೆಯಾಗಿದ್ದು, 3 ವರ್ಷದ ಹೆಣ್ಣು ಮಗಳಿದ್ದಾಳೆ. ಆದರೆ,…