ಮುಸ್ಲಿಮರಿಗೆ ಕಾಂಗ್ರೆಸ್ ಮಣೆ ಹಾಕಿದ್ರೆ, ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ?: ಯತ್ನಾಳ್ ಹೊಸ ಬಾಂಬ್
ದಾವಣಗೆರೆ, ಮಾರ್ಚ್ 19: ಬಾಗಲಕೋಟೆ ಸೇರಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ನಡುವೆ ವಿಜಯಪುರದಲ್ಲಿ ಮಾತನಾಡಿದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿಕೊಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯಡಿಯೂರಪ್ಪ ಕುಟುಂಬ ಹಾಗೂ ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ. ಹಿಂದೆ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಮತ ಹಾಕುವಂತೆ ಶಾಮನೂರು…