nagaraj11081993

ಮುಗಿಯದ ಓವರ್… ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದ ಮೂಲಕ ಪಂಜಾಬ್ ಕಿಂಗ್ಸ್ ತಂಡದ ಎಡಗೈ ವೇಗಿ ಅರ್ಷದೀಪ್ ಸಿಂಗ್ (Arshdeep singh) ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ದೀರ್ಘಾವಧಿ ಬೌಲಿಂಗ್ ಮಾಡುವ ಮೂಲಕ ಎಂಬುದು ವಿಶೇಷ.  ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 19 ಓವರ್​ಗಳಲ್ಲಿ 150 ರನ್ ಕಲೆಹಾಕಿದ್ದರು. ಅದರಂತೆ 20ನೇ ಓವರ್ ಎಸೆಯಲು ಬಂದ ಅರ್ಷದೀಪ್ ಸಿಂಗ್ ಮೊದಲ ಎಸೆತವನ್ನು ವೈಡ್ ಮಾಡಿದರು….

Read More

ಬೀದಿನಾಯಿಗಳ ದಾಳಿಗೆ ಬೆಚ್ಚಿಬಿದ್ದ ಸೂರ್ಯನಗರ ಜನ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಕಿಡಿ

ಆನೇಕಲ್​​, ಏಪ್ರಿಲ್​​ 01: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಸೂರ್ಯನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಶ್ವಾನಗಳ ಕಾಟಕ್ಕೆ ಸ್ಥಳೀಯ ನಿವಾಸಿಗಳು ಹೈರಾಣಾಗಿದ್ದಾರೆ. ಗುಂಪು ಗುಂಪಾಗಿ ರಸ್ತೆಗಳಲ್ಲಿ ಬೀಡುಬಿಟ್ಟಿರುವ ರಕ್ಕಸ ಬೀದಿನಾಯಿಗಳು ಮನೆ ಮುಂದೆ ಆಟವಾಡುವ ಮಕ್ಕಳು, ವಾಕಿಂಗ್ ಮಾಡುವ ಮಹಿಳೆಯರು ಸೇರಿದಂತೆ ಪಾದಚಾರಿಗಳ ಮೇಲೆ ದಾಳಿ ನಡೆಸುತ್ತಿವೆ. ಬೈಕ್ ಸವಾರರನ್ನೂ ಅಡ್ಡಗಟ್ಟಿ ಅಟ್ಯಾಕ್​​ ಮಾಡುತ್ತಿವೆ. ದಿನನಿತ್ಯ ಇವುಗಳ ದಾಳಿಯಿಂದ ಸಾರ್ವಜನಿಕರು ಆಸ್ಪತ್ರೆಗೆ ಅಲೆದಾಡುವಂತಾಗಿದೆ. ಆದರೆ ಪುರಸಭೆ ಅಧಿಕಾರಿಗಳು ಮಾತ್ರ ಈ ಬಗ್ಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಬುದ್ಧಿಯಿಂದ ಬದಲಾಗಲಾರರು..

ಮೇಷ ರಾಶಿ: ನಿಮ್ಮ ಆತ್ಮವಿಶ್ವಾಸದಿಂದ ಆಗಬೇಕಾದ ಕಾರ್ಯವನ್ನು ಸಾಧಿಸಿಕೊಳ್ಳಬಹುದು.‌ ಹಳೆಯ ಯೋಜನೆಗಳನ್ನು ಇಂದು ಕಾರ್ಯಕ್ಕೆ ತರುವಿರಿ. ವಿದೇಶ ಪ್ರವಾಸವು ನಿಶ್ಚಯವಾಗಲಿದೆ. ನಿಷ್ಠುರವಾಗಿ ವರ್ತಿಸುವುದು ಅವಶ್ಯಕವಾಗಿದೆ. ನಿಮ್ಮವರನ್ನು ಭಿನ್ನಾಭಿಪ್ರಾಯ ಬರದಂತೆ ಇಟ್ಟುಕೊಳ್ಳುವುದೂ ನಿಮ್ಮ ಮುಖ್ಯ. ನೀವು ಕೆಲವು ಪ್ರಮುಖ ವಿಷಯಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಮಾನಸಿಕ ನೋವಿನಿಂದ ಹೊರಬರಲು ನಿಮಗೆ ಕಷ್ಟವಾದೀತು. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ವೃಷಭ ರಾಶಿ: ಯಾವುದೋ ಕಾರಣಕ್ಕೆ ಮಾಡಿದ ಪ್ರಯಾಣ ಇನ್ನಾವುದೋ ವಿಚಾರಕ್ಕೆ ಅನುಕೂಲವಾಗಿರುವುದು. ಉತ್ತಮ ಫಲಿತಾಂಶಗಳನ್ನು ಪರೀಕ್ಷೆಯಲ್ಲಿ ಪಡೆಯುತ್ತೀರಿ. ವ್ಯವಹಾರದಲ್ಲಿ ಒಂದು ಹೆಜ್ಜೆ…

Read More

PBKS vs GT: ಸೂಪರ್ ಕೊನೊಲಿ: ಪಂಜಾಬ್ ಕಿಂಗ್ಸ್​ಗೆ ರೋಚಕ ಜಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ ಕೇವಲ 13 ರನ್​​ಗಳಿಸಿ ವಿಕೆಟ್ ಒಪ್ಪಿಸಿದ್ದರು….

Read More

ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸವಾಲು: ವಿಜಯೇಂದ್ರಗೆ ಸಿಎಂ ಅಂಕಿ-ಸಂಖ್ಯೆ ಸಮೇತ ತಿರುಗೇಟು

ಬೆಂಗಳೂರು, (ಮಾರ್ಚ್ 31): ಕರ್ನಾಟಕದ ಆರ್ಥಿಕ (karnataka economy) ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  (BY Vijayendra) ಆಗ್ರಹಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸಹ ಅಂಕಿ-ಸಂಖ್ಯೆ ಸಮೇತ ಮಾಧ್ಯಮ ಪ್ರಕಟಣೆ ಮೂಲಕ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ. ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ ಹತಾಶೆಯನ್ನು ತೋರಿಸುತ್ತೆ. ಕಳೆದ ತಿಂಗಳಷ್ಟೇ ಈ ಆರ್ಥಿಕ ವರ್ಷದ ಆಯವ್ಯಯಪತ್ರವನ್ನು ಮಂಡಿಸಿದ್ದೇನೆ. ಅದು ಅಂಕಿ-ಅಂಶಗಳ ಕಾಗದದ ಕಂತೆ…

Read More

ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್​ಡೇ ವಿಡಿಯೋ ನೋಡಿ..

ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಯ ಪುತ್ರಿ ರಾಧ್ಯಾ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ರಿಷಬ್ ಶೆಟ್ಟಿ (Rishab Shetty) ಅವರು ಸಿನಿಮಾದ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಕುಟುಂಬಕ್ಕೆ ಸಮಯ ನೀಡುತ್ತಾರೆ. ಮಕ್ಕಳ ಹುಟ್ಟುಹಬ್ಬವನ್ನು ಅವರು ಸಂಭ್ರಮದಿಂದ ಆಚರಿಸುತ್ತಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ದೊಡ್ಡ ಯಶಸ್ಸಿನ ಬಳಿಕ ಅವರಿಗೆ ಇನ್ನಷ್ಟು ಬೇಡಿಕೆ ಹೆಚ್ಚಿದೆ. ಹೊಸ ಸಿನಿಮಾದ ಕೆಲಸಗಳತ್ತ ಅವರು ಗಮನ…

Read More

ಯಾದಗಿರಿ: ಎರಡು ಎಕರೆ ಜಮೀನಿಗಾಗಿ ರಕ್ತಚರಿತ್ರೆ; ದೊಡ್ಡಪ್ಪನ ಕುಟುಂಬದಿಂದಲೇ ಯುವಕನ ಬರ್ಬರ ಹತ್ಯೆ!

ಸುರಪುರ, ಮಾ.31: ಕೇವಲ ಎರಡು ಎಕರೆ ತುಂಡು ಭೂಮಿಗಾಗಿ ದಶಕಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹವೊಂದು ಯುವಕನ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ 27 ವರ್ಷದ ಪರಮೇಶ್ವರ ಎಂಬ ಯುವಕನನ್ನು ಆತನ ದೊಡ್ಡಪ್ಪ ಹನುಮಂತರಾಯ ಮತ್ತು ಆತನ ಮಕ್ಕಳು ಸೇರಿ ತಲ್ವಾರ್, ಬರ್ಚಿ ಹಾಗೂ ಕಲ್ಲುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ಪರಮೇಶ್ವರನ ತಂದೆ ಮಲ್ಲಪ್ಪ ಮತ್ತು ಆರೋಪಿ ಹನುಮಂತರಾಯ ಸಹೋದರರು. ತಲಾ 13 ಎಕರೆ ಜಮೀನು ಹಂಚಿಕೆಯಾಗಿದ್ದರೂ, ಮಲ್ಲಪ್ಪನ ಹೆಸರಿಗಿದ್ದ ಹೆಚ್ಚುವರಿ…

Read More

ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್; ಹಾಡು ಬಳಸಿದ್ದಕ್ಕೆ 25 ಲಕ್ಷ ರೂ. ದಂಡ

ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ (Rakshit Shetty) ಅವರ ನಿರ್ಮಾಣ ಸಂಸ್ಥೆಯಾದ ‘ಪರಂವಾ ಸ್ಟುಡಿಯೋಸ್‌’ಗೆ ದೆಹಲಿ ಹೈಕೋರ್ಟ್ ದೊಡ್ಡ ಮೊತ್ತದ ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ (Bachelor Party) ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ ಎಂದು ‘ಬಾರ್​ ಆ್ಯಂಡ್ ಬೆಂಚ್’ ವರದಿ ಮಾಡಿದೆ. ಖ್ಯಾತ ಮ್ಯೂಸಿಕ್ ಕಂಪನಿ ‘ಎಮ್‌ಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ…

Read More

ವಾಹನ ಸವಾರರ ಗಮನಕ್ಕೆ: ಕರಗ ಶಕ್ತ್ಯೋತ್ಸವ ಅಂಗವಾಗಿ ಈ ರಸ್ತೆಯ ಮಾರ್ಗ ಬದಲಾವಣೆ

ಬೆಂಗಳೂರು, (ಮಾರ್ಚ್ 31): ಈಗಾಗಲೇ ಬೆಂಗಳೂರು ಕರಗ ಶಕ್ತ್ಯೋತ್ಸವ (Bengaluru Karaga 2026) ಶುರುವಾಗಿದ್ದು, ನಾಳೆ (ಏ.1) ಕರ್ಪೂರ ಪೂಜೆ ನೆರವೇರಲಿದ್ದು, ಬಳಿಕ ಬುಧವಾರ ಮಧ್ಯರಾತ್ರಿ 12.30ರಿಂದ ಹೂವಿನ ಕರಗದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 1ರ ರಾತ್ರಿ 9 ರಿಂದ ಮರುದಿನ ಅಂದರೆ ಏಪ್ರಿಲ್ ಬೆಳಗ್ಗೆ 7 ರವರೆಗೆ ಕರಗ ಉತ್ಸವ ಹೊರಡುವ ಕೆಲವು ರಸ್ತೆಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಹೀಗಾಗಿ ವಾಹನ ಸವಾರರು ಈ ಕೆಳಗೆ…

Read More

‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2: ದ ರಿವೆಂಜ್’ (Dhurandhar 2: The Revenge) ಚಿತ್ರ ಈಗ ಕಾನೂನು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈ ಚಿತ್ರದ ಕಥೆಯು ತಾವು 2023ರಲ್ಲಿ ಬರೆದ ಸ್ಕ್ರಿಪ್ಟ್ ಅನ್ನು ಆಧರಿಸಿದೆ ಎಂದು ನಿರ್ದೇಶಕ ಸಂತೋಷ್ ಕುಮಾರ್ ಆರ್.ಎಸ್. ಅವರು ಆರೋಪಿಸಿದ್ದಾರೆ. ಅಲ್ಲದೇ ‘ಧುರಂಧರ್ 2’ (Dhurandhar 2) ಚಿತ್ರತಂಡದ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅವರು ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ…

Read More