LPG ಸಿಲಿಂಡರ್ಗಳ ಕೊರತೆ: ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಪತ್ರ
ಬೆಂಗಳೂರು, ಮಾರ್ಚ್ 19: ರಾಜ್ಯದಲ್ಲಿ ಕಮರ್ಷಿಯಲ್ ಸಿಲಿಂಡರ್ಗಳ ಅಭಾವದಿಂದಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಹಲವು ರೆಸ್ಟೋರೆಂಟ್ಗಳು ಈಗಾಗಲೇ ಬಂದ್ ಆಗಿವೆ. ಪರಿಣಾಮ ಅದನ್ನೇ ನಂಬಿಕೊಂಡಿದ್ದ ಲಕ್ಷಾಂತರ ಕಾರ್ಮಿಕರು ಮತ್ತು ಕುಟುಂಬ ಬೀದಿಗೆ ಬಿದ್ದಿದೆ. ಹೀಗಾಗಿ ಸಿಲಿಂಡರ್ಗಳ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅದಾಗಲೇ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಅಸೋಸಿಯೇಷನ್ ಪತ್ರ ಬರೆದಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಸ್ಥಗಿತದಿಂದ ಉದ್ಭವಿಸಿರುವ ಸಮಸ್ಯೆ ಬಗ್ಗೆ…