ಯುಗಾದಿ ಹಬ್ಬದ ಖರೀದಿಗೆ ಕೆಆರ್ ಮಾರ್ಕೆಟ್ಗೆ ಮುಗಿಬಿದ್ದ ಗ್ರಾಹಕರು
ಬೆಂಗಳೂರು, ಮಾರ್ಚ್ 19: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ಬೆಂಗಳೂರಿನ ಹೃದಯಭಾಗದಲ್ಲಿರುವ ಕೆಆರ್ ಮಾರ್ಕೆಟ್‌ನಲ್ಲಿ ಭಾರಿ ಖರೀದಿ ಭರಾಟೆ ಕಂಡುಬಂದಿದೆ. ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಸಿಲಿಕಾನ್ ಸಿಟಿ ಜನರು ಮಧ್ಯರಾತ್ರಿಯಿಂದಲೇ ಮಾರುಕಟ್ಟೆಗೆ ಧಾವಿಸಿದ್ದಾರೆ. ಕೆ.ಆರ್. ಮಾರ್ಕೆಟ್‌ನಲ್ಲಿ ತಾಜಾ ಮತ್ತು ವೈವಿಧ್ಯಮಯ ಹೂವುಗಳು ಹೋಲ್‌ಸೇಲ್ ದರದಲ್ಲಿ ಲಭ್ಯವಿರುವುದರಿಂದ ಜನರು ಹೆಚ್ಚಾಗಿ ಇಲ್ಲಿಗೆ ಆಗಮಿಸುತ್ತಾರೆ. ಬೆಂಗಳೂರಿನ ಸುತ್ತಮುತ್ತಲಿನ ರೈತರು ಮತ್ತು ಹೂವಿನ ವ್ಯಾಪಾರಿಗಳು ನೇರವಾಗಿ ಇಲ್ಲಿಗೆ ಬಂದು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಾರೆ….