ಇನ್ನೆರಡು ದಿನ ಕಳೆದ್ರೆ ನಂದಿನಿ ಉತ್ಪನ್ನಗಳೂ ಸಿಗೋದು ಡೌಟ್! ಕೆಎಂಎಫ್ಗೂ ಎದುರಾಯ್ತು ಸಂಕಷ್ಟ
ಬೆಂಗಳೂರು, ಮಾರ್ಚ್ 19: ಯುಗಾದಿ (Ugadi) ಹಬ್ಬದ ಸಮಯದಲ್ಲೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಆಗಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತಕ್ಕೂ (KMF) ಸಂಕಷ್ಟ ಎದುರಾಗಿದೆ. ಇರಾನ್-ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮವಾಗಿ ದೇಶಾದ್ಯಂತ ಉಂಟಾಗಿರುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ಪರಿಣಾಮ ಇದೀಗ ನಂದಿನಿ ಉತ್ಪನ್ನಗಳ (Nandini Products) ಮೇಲೂ ತಟ್ಟತೊಡಗಿದೆ. ಕಳೆದ ಕೆಲ ದಿನಗಳಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಸರಬರಾಜು ವ್ಯತ್ಯಯಗೊಂಡಿರುವುದರಿಂದ ಕೆಎಂಎಫ್ ಉತ್ಪಾದನಾ ಘಟಕಗಳು ಒತ್ತಡಕ್ಕೆ ಸಿಲುಕಿವೆ. ಉತ್ಪನ್ನಗಳ ತಯಾರಿಗೆ ಕೆಎಂಎಫ್ ಸಾಮಾನ್ಯವಾಗಿ…