Headlines

nagaraj11081993

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು, ಮಾ.19: ರಾಜ್ಯದಾದ್ಯಂತ ಬೇಸಿಗೆಯ ಬಿಸಿಲು ಏರುತ್ತಿದ್ದರೂ, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನೆನ್ನೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿತ್ತು. ಇಂದು ಕೂಡ ಮಳೆ ಬರುವ ಸಾಧ್ಯ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ (ಸುಮಾರು 55% ಮಳೆಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರೇ ತಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುವರು

ಯುಗಾದಿ ಹೊಸ ವರ್ಷದ ಆರಂಭ. ಹೊಸ ಹರ್ಷಕ್ಕೂ ಆರಂಭ. ಹಳೆಯ ನೋವನ್ನು ಮರೆತು ಹೊಸ ಹರ್ಷಕ್ಕೆ ಸಿದ್ಧರಾಗಿ. ವರ್ಷವಿಡೀ ಸಂತೋಷವಿರಲಿ. ಮೇಷ ರಾಶಿ: ನಿಮ್ಮ ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅದೃಷ್ಟ ಇದ್ದರೂ ನಿಮ್ಮನ್ನು ನಂಬಿಯೇ ಕೆಲಸ ಮಾಡಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ಯಾವುದೇ ಜವಾಬ್ದಾರಿಯನ್ನು ದೂರದಿಂದಲೇ ತಳ್ಳಿಹಾಕುವಿರಿ. ಸುಬ್ರಹ್ಮಣ್ಯನ ಉಪಾಸನೆಯು ಸಂತಸಪ್ರದವಾಗಲಿದೆ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ

ಈ ದಿನ ಕಾತ್ಯಾಯಿನಿ ದೇವಿಯ ಸ್ಮರಣೆ ಮಾಡಿ. ಮನಸ್ಸಿನ ಗೊಂದಲ, ತಳಮಳಗಳ ನಿವಾರಣೆಗೆ ಕಾತ್ಯಾಯಿನಿ ದೇವಿಯ ಮಂತ್ರ ಜಪಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಹೊಂದಾಣಿಕೆಗೆ ಅವಕಾಶ ಇರುವಂಥದ್ದನ್ನು ನಿಮ್ಮ ಮಾತಿನ ಕಾರಣದಿಂದ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಈ ದಿನ ಸಮಯ ಸಿಕ್ಕಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿ. ಯಾವುದೇ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಗೆ ಹೊರಡುವ ಮುನ್ನ ಕಾತ್ಯಾಯಿನಿ ದೇವಿಯನ್ನು ಮನಸ್ಸಿನಲ್ಲಿ ಸ್ಮರಣೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 19ರ ದಿನಭವಿಷ್ಯ

ದುರ್ಗಾ ಸಪ್ತಶತಿ ಶ್ರವಣವನ್ನು ಮಾಡಿ. ಆಸ್ತಿ ಖರೀದಿ ಮೊದಲಾದ ವಿಚಾರಗಳಲ್ಲಿ ಕಾಡುತ್ತಿರುವ ಅಡೆತಡೆ ನಿವಾರಣೆಗೆ ದುರ್ಗಾ ದೇವಿಯನ್ನು ಪ್ರಾರ್ಥಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಉದ್ಯೋಗ ಸ್ಥಳದಲ್ಲಿ ನಿಮ್ಮ ಕೈ ಮೇಲಾಗುತ್ತದೆ. ಯಾರು ನಿಮ್ಮ ಸಾಮರ್ಥ್ಯ, ಶಕ್ತಿ ಹಾಗೂ ಪ್ರಭಾವದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾ ಬಂದಿರುತ್ತಾರೋ ಅಂಥವರೇ ಬೆರಗಾಗುವಂಥ ಸಾಧನೆಗಳು ನಿಮ್ಮಿಂದ ಆಗಲಿದೆ. ಇತರರು ತಮ್ಮಿಂದ ಸಾಧ್ಯವೇ ಇಲ್ಲ ಎಂದು ಕೈ ಚೆಲ್ಲಿ, ಅಸಹಾಯಕರಾದ ಸಂದರ್ಭದಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 19ರ ದಿನಭವಿಷ್ಯ

ನಿಮ್ಮ ಮನೆಯಲ್ಲಿ ಇರುವಂಥ ಈಶ್ವರ ವಿಗ್ರಹ ಅಥವಾ ಚಿತ್ರಪಟಕ್ಕೆ ಸಕ್ಕರೆ ಅಥವಾ ಹಣ್ಣನ್ನು ನೈವೇದ್ಯ ಮಾಡಿ ಪ್ರಸಾದವಾಗಿ ಸ್ವೀಕರಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮುಂದೆ ನಡೆಯುವ ಸಂಗತಿಗಳ ಬಗ್ಗೆ ಸುಳಿವು ದೊರೆಯಲಿದೆ. ನಿಮ್ಮ ಮಾತು ಬಹಳ ಪ್ರಭಾವಿ ಆಗಿರುತ್ತದೆ. ಹಲವರು ಅದರಿಂದ ಸಹಾಯ ಪಡೆಯುವ ಅವಕಾಶಗಳಿವೆ. ರಾಜಕೀಯ ಕ್ಷೇತ್ರದಲ್ಲಿ ಇರುವಂಥವರಾದರೆ ನಿಮ್ಮ ಬೆಂಬಲಿಗರು, ಅನುಯಾಯಿಗಳು ಹಲವು ರೀತಿಯಲ್ಲಿ ಅನುಕೂಲ ಮಾಡಿಕೊಡಲಿದ್ದೀರಿ. ಅದು ಉತ್ತಮ ಹುದ್ದೆಗಳನ್ನು…

Read More

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?

ನವದೆಹಲಿ, ಮಾರ್ಚ್ 18: ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಚಲಿಸುವ ರೈಲನ್ನು ಹತ್ತಲು ಅಥವಾ ಇಳಿಯಲು ಪ್ರಯತ್ನಿಸಬೇಡಿ ಎಂದು ಎಚ್ಚರಿಸುತ್ತಲೇ ಇರುತ್ತಾರೆ. ಆ ರೀತಿ ಮಾಡುವುದರಿಂದ ಜೀವಕ್ಕೇ ಅಪಾಯವಾಗಬಹುದು. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಆಘಾತಕಾರಿ ವೀಡಿಯೊವೊಂದು ವೈರಲ್ (Viral Video) ಆಗುತ್ತಿದೆ. ಅದರಲ್ಲಿ, ಚಲಿಸುವ ರೈಲನ್ನು ಹತ್ತಲು ವ್ಯಕ್ತಿಯೊಬ್ಬ ಪ್ರಯತ್ನಿಸಿ ಕಾಲು ಜಾರಿ ಬೀಳುತ್ತಾನೆ. ತಕ್ಷಣ ಅಲ್ಲಿದ್ದ ಮಹಿಳಾ ಕಾನ್‌ಸ್ಟೆಬಲ್ ಆತನನ್ನು ಮೇಲೆತ್ತಿ ಪ್ರಾಣ ಉಳಿಸಿದ್ದಾರೆ. ಇದರಿಂದ ಆತ ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾನೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

Dhurandhar 2 Review: ಒಂದು ಸೇಡಿನ ಕಥೆ; ‘ಧುರಂಧರ್ 2’ ಸಿನಿಮಾ ವಿಮರ್ಶೆ

‘ಧುರಂಧರ್’ ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಇದಾದ ಕೇವಲ ಮೂರೇ ತಿಂಗಳಿಗೆ ‘ಧುರಂಧರ್ 2’ ರಿಲೀಸ್ ಆಗಿದೆ. ಈ ಸಿನಿಮಾದ ರನ್​​ಟೈಮ್ 3 ಗಂಟೆ 49 ನಿಮಿಷ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಗಳನ್ನು ಸಿನಿಮಾ ತಲುಪಿತೇ? ಆ ಬಗ್ಗೆ ಇಲ್ಲಿದೆ ವಿವರ. ‘ಧುರಂಧರ್’ ಸಿನಿಮಾ ಕ್ಲೈಮ್ಯಾಕ್ಸ್​​​ನಲ್ಲಿ ಹಮ್ಜಾ ಅಲಿ ಮಜಾರಿ, ರೆಹ್ಮಾನ್ ಡಕಾಯಿತ್​​ನ ಹತ್ಯೆ ಮಾಡುತ್ತಾನೆ. ಆ ಬಳಿಕ ನಡೆಯುವ ಕಥೆಯೇ ‘ಧುರಂಧರ್ 2’. ಸಿನಿಮಾದ ಹೆಸರೇ…

Read More

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun Mutya)  ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಬಾಲಕಿ…

Read More

3D ತಂತ್ರಜ್ಙಾನದಲ್ಲಿ ಬರಲಿದೆ ‘ಕೊರಗಜ್ಜ’ ಚಿತ್ರ: ಜೊತೆಗೆ ಮತ್ತೊಂದು ಸಾಹಸ

ಸುಧೀರ್ ಅತ್ತಾವರ್ ನಿರ್ದೇಶನ ಮಾಡಿರುವ ‘ಕೊರಗಜ್ಜ’ (Koragajja) ಸಿನಿಮಾ ಚಿತ್ರೀಕರಣದ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೇ ಇದೆ. ಸಿನಿಮಾ ಈಗಾಗಲೇ ಬಿಡುಗಡೆ ಆಗಬೇಕಿತ್ತು ಆದರೆ ಇದೀಗ ಮತ್ತೊಮ್ಮೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಬಾರಿ ಕೆಲವು ವಿಶೇಷ ಕಾರಣಗಳಿಗೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಸಿನಿಮಾ ತಂಡದಿಂದ ಹೊರಬಿದ್ದಿರುವ ಹೊಸ ಅಪ್​​ಡೇಟ್ ಎಂದರೆ ‘ಕೊರಗಜ್ಜ’ ಸಿನಿಮಾ ಇದೀಗ 3ಡಿ ತಂತ್ರಜ್ಙಾನದೊಂದಿಗೆ ಬಿಡುಗಡೆ ಆಗಲಿದೆ. ಸಾಮಾನ್ಯವಾಗಿ ಚಿತ್ರೀಕರಣದ ವೇಳೆಯಲ್ಲೇ 3ಡಿ ಶೂಟಿಂಗ್ ಮಾಡುವುದು ಸಂಪ್ರದಾಯ….

Read More

IPL: ಐಪಿಎಲ್​ನಲ್ಲಿ ಅತಿ ಹೆಚ್ಚು ನಾಯಕರನ್ನು ಕಂಡ ತಂಡಗಳು ಯಾವ್ಯಾವು ಗೊತ್ತಾ?

ಮಾರ್ಚ್ 28 ರಂದು 2026 ರ ಐಪಿಎಲ್ (IPL 2026) ಆರಂಭವಾಗಲಿದ್ದು, 19 ನೇ ಸೀಸನ್ ಆರಂಭವಾಗುವ ಮುನ್ನ ಸನ್‌ರೈಸರ್ಸ್ ಹೈದರಾಬಾದ್ (SRH) ತನ್ನ ಹೊಸ ನಾಯಕನನ್ನು ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ (Ishan Kishan) ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಚುಕ್ಕಾಣಿ ಹಿಡಿದ 11 ನೇ ನಾಯಕ ಇಶಾನ್ ಕಿಶನ್. ಕೆಲವು ಫ್ರಾಂಚೈಸಿಗಳು ನಾಯಕರನ್ನು ಬದಲಿಸುವುದನ್ನೇ ಕಾಯಕ ಮಾಡಿಕೊಂಡಿವೆ. ಪ್ರತಿ ಸೀಸನ್​ಗೂ ಒಬ್ಬೊಬ್ಬರನ್ನು ನಾಯಕನಾಗಿ ನೇಮಿಸಿದ ನಿದರ್ಶನಗಳು ಇವೆ. ಹಾಗಿದ್ದರೆ,…

Read More