Headlines

nagaraj11081993

ಪ್ರಜ್ವಲ್ ವಿಡಿಯೋ ವೈರಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?

ಹಾಸನ, ಮಾರ್ಚ್​​ 18: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್​ಐಟಿ ಚಾರ್ಜ್​​ಶೀಟ್​​ ಬಗ್ಗೆ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೇಸ್​​ನ ಆರನೇ ಆರೋಪಿಯೂ ಆಗಿರುವ ದೇವರಾಜೇಗೌಡ, ಪ್ರಕರಣದಲ್ಲಿ ಯಾರ್ಯಾರು ಇದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ ಪ್ರಕರಣ ಇದು. ಪ್ರಮುಖ ಆರೋಪಿ ಸ್ಥಾನದಲ್ಲಿರುವ ಪ್ರೀತಂಗೌಡ, ಡಿ.ಕೆ. ಶಿವಕುಮಾರ್, ಶ್ರೇಯಸ್‌ ಪಟೇಲ್, ಕ್ವಾಲಿಟಿ ಬಾರ್ ಶರತ್, ಹಲವು ರಾಜಕಾರಣಿಗಳ ಹೆಸರಿಲ್ಲ. ಶಿವಲಿಂಗೇಗೌಡ…

Read More

ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ

ರಾಯಚೂರು, ಮಾರ್ಚ್ 18: ಆಕಸ್ಮಿಕ ಅಗ್ನಿ ಅವಘಡದಿಂದ 300 ಕ್ಕೂ ಹೆಚ್ಚು ಭತ್ತದ ಚೀಲಗಳು ಸುಟ್ಟು ಭಸ್ಮವಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಹೊರವಲಯದಲ್ಲಿ ನಡೆದಿದೆ. ಉತ್ತಮ ಬೆಲೆ ಸಿಗಲೆಂದು ಭತ್ತವನ್ನು ಶೇಖರಿಸಿ ಕಾಯುತ್ತಿದ್ದ ರೈತ ಇದೀಗ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿ ಕಂಗಾಲಾಗಿದ್ದಾನೆ. ಮಹಮ್ಮದ್ ಯೂಸಫ್ ಎಂಬ ರೈತನಿಗೆ ಸೇರಿದ ಈ ಭತ್ತವನ್ನು ಜಮೀನಿನಲ್ಲಿರುವ ದನದ ಶೆಡ್‌ನಲ್ಲಿ ಸಂಗ್ರಹಿಸಲಾಗಿತ್ತು. ಆರ್‌ಎನ್‌ಆರ್ ಜಾತಿಯ ಭತ್ತಕ್ಕೆ ಉತ್ತಮ ದರ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಅವರು 300 ಕ್ಕೂ…

Read More

ಯುಗಾದಿ ಹಬ್ಬಕ್ಕೆ ಎಎಂಬಿ ಸಿನಿಮಾಸ್ ಆಫರ್; ಬೆಳಗಿನ ಶೋನಲ್ಲಿ ಉಚಿತ ಪಾಪ್​ಕಾರ್ನ್

ಬೆಂಗಳೂರಿನ ಗಾಂಧಿನಗರದಲ್ಲಿರುವ ಹೊಚ್ಚ ಹೊಸ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್’ (AMB Cinemas) ಕಡೆಯಿಂದ ಸಿನಿಮಾ ಪ್ರೇಮಿಗಳಿಗಾಗಿ ಯುಗಾದಿ ಹಬ್ಬದ ವಿಶೇಷ ಆಫರ್ ನೀಡಲಾಗುತ್ತಿದೆ. ಕೆಲವೇ ತಿಂಗಳುಗಳ ಹಿಂದೆ ‘ಕಪಾಲಿ’ ಚಿತ್ರಮಂದಿರವನ್ನು ಅತ್ಯಾಧುನಿಕ ಮಲ್ಟಿಪ್ಲೆಕ್ಸ್ ಆಗಿ ಪರಿವರ್ತಿಸಿದ ಎಎಂಬಿ ಸಿನಿಮಾಸ್ ನೀಡಲಿರುವ ಆಫರ್​​ಗಳು ಪ್ರೇಕ್ಷಕರಿಗೆ ಸಿನಿಮಾದ ಮೋಜನ್ನು ಹೆಚ್ಚಿಸಲಿದೆ. ಈ ವಿಶೇಷ ಆಫರ್‌ಗಳು ಬಹುನಿರೀಕ್ಷಿತ ಚಿತ್ರಗಳಾದ ‘ಲವ್ ಮಾಕ್ಟೇಲ್ 3’, ‘ಧುರಂಧರ್ 2’ (Dhurandhar 2) ಮತ್ತು ‘ಉಸ್ತಾದ್ ಭಗತ್ ಸಿಂಗ್’ ಚಿತ್ರಗಳಿಗೆ ಅನ್ವಯವಾಗಲಿವೆ. ಏನಿದು ಆಫರ್? ಮುಂದೆ…

Read More

ಮತ್ತೆ ಮುನ್ನೆಲೆಗೆ ಬಂದ ಅನುಷ್ಕಾ ಶೆಟ್ಟಿ ಮದುವೆ ವಿಷಯ; ಹುಡುಗ ಯಾರು?

ಅನುಷ್ಕಾ ಶೆಟ್ಟಿ ಅವರಿಗೆ ಈಗ 44 ವರ್ಷ. ಅವರು ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅವರು ವಿವಾಹದ ಕಾರಣಕ್ಕೆ ಸುದ್ದಿ ಆಗೋದಕ್ಕಿಂತ ಹೆಚ್ಚಾಗಿ, ವಿವಾಹದ ಕಾರಣಕ್ಕೆ ಸುದ್ದಿ ಆಗುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅವರ ವಿವಾಹ ಆಗುತ್ತದೆ ಎನ್ನುವ ಸುದ್ದಿ ಕೇಳಿ ಬರುತ್ತಲೇ ಇದೆ. ಈಗ ಮತ್ತೊಮ್ಮೆ ಅನುಷ್ಕಾ ವಿವಾಹ ವಿಷಯ ಚರ್ಚೆಗೆ ಕಾರಣ ಆಗಿದೆ. ಸೆಲೆಬ್ರಿಟಿಗಳ ಜೀವನದ ಬಗ್ಗೆ ಅಭಿಮಾನಿಗಳು ಕಣ್ಣಿಡುತ್ತಾರೆ. ಸಾರ್ವಜನಿಕವಾಗಿ ಯಾರದ್ದಾದರೂ ಜೊತೆಗೆ ಕಾಣಿಸಿಕೊಂಡರೆ ವದಂತಿ ಹೆಚ್ಚುತ್ತದೆ. ಸೋಶಿಯಲ್ ಮೀಡಿಯಾದಲ್ಲಿ…

Read More

ಬೆಂಗಳೂರಿನಲ್ಲಿ ಮನೆ ಹುಡುಕಾಟದಿಂದ ಬೇಸತ್ತು ಕೆಲಸಕ್ಕೆ ರಾಜೀನಾಮೆ ನೀಡಿದ ಯುವಕ

ಬೆಂಗಳೂರು, ಮಾ.18: ಬೆಂಗಳೂರಿನಲ್ಲಿ ಮನೆ ಹುಡುಕುವುದು ಅಷ್ಟೊಂದು ಸುಲಭದ ಮಾತಲ್ಲ, ಅದರಲ್ಲೂ ಬ್ಯಾಚುಲರ್ಸ್​​​​ ಕಥೆ ಕೇಳುವುದೇ ಬೇಡ. ಈಗ ಇಲ್ಲೊಂದು ಅಂತಹದೇ ಪೋಸ್ಟ್​​​ವೊಂದು ವೈರಲ್​​ ಆಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಎಂ.ಜಿ. ರಸ್ತೆಯ ಕಚೇರಿಗೆ ಪ್ರತಿದಿನ 52 ಕಿ.ಮೀ ಪ್ರಯಾಣಿಸಿ ಸುಸ್ತಾದ ಯುವಕನೊಬ್ಬ, ಮನೆ ಹುಡುಕಲಾರದೆ ಬೆಸತ್ತು ಕೆಲಸವನ್ನೇ ಬಿಡಲು ನಿರ್ಧರಿಸಿರುವ ಘಟನೆಯ ಬಗ್ಗೆ ಹಂಚಿಕೊಂಡಿದ್ದಾರೆ. ಇದೀಗ ಈ ವೈರಲ್​​ ಪೋಸ್ಟ್​​ ಹೊಸ ಚರ್ಚೆಗೆ ಕಾರಣವಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ಈ ವ್ಯಕ್ತಿ ಎಂ.ಜಿ. ರಸ್ತೆ ಹತ್ತಿರ ಕೆಲಸಕ್ಕೆ…

Read More

“ರಾಜಕೀಯದಲ್ಲಿ ಪೂರ್ಣವಿರಾಮವಿಲ್ಲ”: ನಿವೃತ್ತಿ ಹೊಂದುತ್ತಿರುವ ಸಂಸದರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ದೆಹಲಿ, ಮಾ.18: ರಾಜ್ಯಸಭೆಯ 37 ಸದಸ್ಯರ ನಿವೃತ್ತಿಯ ಹಿನ್ನೆಲೆಯಲ್ಲಿ ಸದನವು ಇಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿತ್ತು. ನಿವೃತ್ತರಾಗುತ್ತಿರುವ ಸದಸ್ಯರ ಸೇವೆಯನ್ನು ಶ್ಲಾಘಿಸಿದ (Rajya Sabha farewell) ಪ್ರಧಾನಿ ಮೋದಿ, ಸದನಕ್ಕೆ ಅವರು ನೀಡಿದ ಕೊಡುಗೆಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಿರುತ್ತವೆ ಎಂದು ತಿಳಿಸಿದರು. “ಜ್ಞಾನಕ್ಕಿಂತ ಅನುಭವಕ್ಕೆ ಶಕ್ತಿ ಹೆಚ್ಚು. ಶೈಕ್ಷಣಿಕ ಜ್ಞಾನವು ಸೀಮಿತವಾಗಿರಬಹುದು, ಆದರೆ ಸದಸ್ಯರು ಇಲ್ಲಿ ಕಳೆದ ಸಮಯ ಮತ್ತು ಪಡೆದ ಅನುಭವವು ದೇಶದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಧಾನಿ ಹೇಳಿದರು. ರಾಜ್ಯಸಭೆಯು…

Read More

ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ

ಕೋಲಾರ, ಮಾರ್ಚ್ 18: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದಾಳೆ. ಈ ಮೂಲಕ ಆಕೆ, ಅಸಾಧಾರಣ ಧೈರ್ಯ ಮತ್ತು ಮನೋಬಲಕ್ಕೆ ಮಾದರಿಯಾಗಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ. ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಾಳೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು,…

Read More

BOB Capital Markets: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣಕಾಶ

ಬ್ಯಾಂಕ್ ಆಫ್ ಬರೋಡಾದ ಅಂಗಸಂಸ್ಥೆಯಾದ ‘ಬಿಒಬಿ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್’ (BOB Capital Markets Ltd), ದೇಶಾದ್ಯಂತ ಖಾಲಿ ಇರುವ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 103 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಮತ್ತು ಬಂಡವಾಳ ಮಾರುಕಟ್ಟೆ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯಡಿ ಉತ್ತರ ವಲಯಕ್ಕೆ 37, ಪಶ್ಚಿಮ ವಲಯಕ್ಕೆ 44 ಹಾಗೂ ದಕ್ಷಿಣ ಮತ್ತು ಪೂರ್ವ ವಲಯಗಳಿಗೆ ಒಟ್ಟು…

Read More

ದೆಹಲಿಯಲ್ಲಿ ಕಟ್ಟಡಕ್ಕೆ ಬೆಂಕಿ; ಮೂರು ಮಕ್ಕಳು ಸೇರಿ ಆರು ಮಂದಿ ಬಲಿ

ನವದೆಹಲಿ, ಮಾರ್ಚ್ 18: ದೆಹಲಿಯ ಪಲಮ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ತಗುಲಿರುವ ದುರ್ಘಟನೆ (Fire Accident) ಸಂಭವಿಸಿದೆ. ಆರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಮಾಹಿತಿ ಸದ್ಯಕ್ಕೆ ತಿಳಿದುಬಂದಿದೆ. ಇನ್ನೂ ಹಲವಾರು ಜನರಿಗೆ ಗಾಯಗಳಾಗಿವೆ. ದುರಂತದಲ್ಲಿ ಮೃತಪಟ್ಟಿರುವವರ ಪೈಕಿ ಮೂವರು ಮಕ್ಕಳಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಕಿ ದುರಂತಕ್ಕೆ ಏನು ಕಾರಣ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ. ಕಟ್ಟಡಕ್ಕೆ ಬೆಂಕಿ ತಗುಲಿರುವ ಬಗ್ಗೆ ಅಗ್ನಿಶಾಮಕ ವಿಭಾಗಕ್ಕೆ ಬೆಳಗ್ಗೆ 7:30ಕ್ಕೆ ಮಾಹಿತಿ ಹೋಗಿದೆ. ಕೂಡಲೇ 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ…

Read More

‘ಧುರಂಧರ್ 2’ ಸಿನಿಮಾದ ಭೀಕರ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ: ತಗ್ಗಿತು ಚಿತ್ರದ ಅವಧಿ

ರಣವೀರ್ ಸಿಂಗ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್, ಆರ್. ಮಾಧವನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಧುರಂಧರ್ 2’ (Dhurandhar 2) ಸಿನಿಮಾದ ಹೈಪ್ ಹೆಚ್ಚಾಗಿದೆ. ನಿರ್ದೇಶಕ ಆದಿತ್ಯ ಧಾರ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರದ ಪೇಯ್ಡ್ ಪ್ರಿವ್ಯೂಗಳು ಇಂದು (ಮಾರ್ಚ್ 18) ಆರಂಭ ಆಗುತ್ತಿವೆ. ಅದಕ್ಕೂ ಮುನ್ನ ಸೆನ್ಸಾರ್ ಮಂಡಳಿಯ (CBFC) ವರದಿ ಹೊರಬಿದ್ದಿದ್ದು, ಸಿನಿಮಾದಲ್ಲಿನ ಹಲವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಸದಸ್ಯರು ‘ಎ’ ಸರ್ಟಿಫಿಕೇಟ್ ನೀಡಿ, 21 ಬದಲಾವಣೆಗಳನ್ನು ಮಾಡುವಂತೆ…

Read More