Headlines

nagaraj11081993

ಇದನ್ನು ನಿರೀಕ್ಷಿಸಿರಲಿಲ್ಲ; ‘ಲವ್ ಮಾಕ್ಟೇಲ್ 3’ ಸಿನಿಮಾ ಸೂಪರ್ ಎಂದ ಸೆಲೆಬ್ರಿಟಿಗಳು

‘ಲವ್ ಮಾಕ್ಟೇಲ್ 3’ ಸಿನಿಮಾದ ವಿಶೇಷ ಶೋಗಳನ್ನು ತಂಡದವರಿಗಾಗಿ ಆಯೋಜನೆ ಮಾಡಲಾಗಿತ್ತು. ಕೆಲ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದರು. ಇದನ್ನು ನೋಡಿದ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಸಿನಿಮಾ ಹೀಗೆ ಇರುತ್ತದೆ ಎಂದು ನಾನು ಊಹಿಸರಲಿಲ್ಲ’ ಎಂದು ಅನೇಕರು ಹೇಳಿದ್ದಾರೆ. ಮೊದಲ ಭಾಗದಲ್ಲಿ ಕಥಾ ನಾಯಕನ ಪತ್ನಿ ಸಾಯುತ್ತಾಳೆ. ಎರಡನೇ ಭಾಗದಲ್ಲಿ ಆತನ ಜೀವನದಲ್ಲಿ ಒಂದು ಮಗು ಬರುತ್ತದೆ. ಮೂರನೇ ಭಾಗ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಮೂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ರಾಯಚೂರಿನಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ; ದಿಗಿಲು ಹುಟ್ಟಿಸುವ ದೃಶ್ಯ!

ರಾಯಚೂರು, ಮಾ.18: ಜಿಲ್ಲೆಯ ಅರಕೇರಾ ತಾಲ್ಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಂಭವಿಸಿದ ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೈತ ಶರೀಫ್ ಸಾಬ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುತ್ತಿತ್ತು. ಈ ವೇಳೆ ಜಮೀನಿನಲ್ಲಿದ್ದ ಎತ್ತರದ ತೆಂಗಿನ ಮರಕ್ಕೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲು ಬಡಿದ…

Read More

42 ಸಿಕ್ಸ್, 30 ಫೋರ್: ವಿಶ್ವ ದಾಖಲೆಯ ಚತುಃಶತಕ ಸಿಡಿಸಿದ ಸ್ಯಾಮ್ ಚೀಕ್

ಅಡಿಲೇಡ್ ಮತ್ತು ಸಬರ್ಬನ್ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ ಗ್ರೇಡ್ ಕ್ರಿಕೆಟ್‌ ಟೂರ್ನಿಯಲ್ಲಿ ಸ್ಯಾಮ್ ಚೀಕ್ ವಿಶ್ವ ದಾಖಲೆಯ ಚತುಃಶತಕ ಸಿಡಿಸಿದ್ದಾರೆ. ಅದು ಸಹ ಕೇವಲ 137 ಎಸೆತಗಳಲ್ಲಿ ಎಂಬುದು ವಿಶೇಷ. ಮಾರ್ಫೆಟ್‌ವಿಲ್ಲೆ ಪಾರ್ಕ್ ವಿರುದ್ಧದ ಈ ಪಂದ್ಯದಲ್ಲಿ ಕೊರೊಮ್ಯಾಂಡಲ್ ಕ್ರಿಕೆಟ್ ಕ್ಲಬ್ ಕಣಕ್ಕಿಳಿದ ಸ್ಯಾಮ್ ಚೀಕ್ ತಂದೆಯೊಂದಿಗೆ ಇನಿಂಗ್ಸ್ ಆರಂಭಿಸಿದ್ದರು. ಅಂದರೆ ತಂದೆ ಮತ್ತು ಮಗ ಜೊತೆಯಾಗಿ ಕಣಕ್ಕಿಳಿದಿದ್ದರು. ಇತ್ತ ತಂದೆ ಡ್ಯಾರೆನ್ ಚೀಕ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರೆ, ಇತ್ತ ಮಗ ಸ್ಯಾಮ್ ಚೀಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು….

Read More

ಟಾಲಿವುಡ್​​ಗೂ ಮಾದರಿ ಆಯ್ತು ವಿಜಯಲಕ್ಷ್ಮೀ, ರಮ್ಯಾ ನಿರ್ಧಾರ

ನಟಿ ರಮ್ಯಾ (Ramya) ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಅಶ್ಲೀಲ ಕಮೆಂಟ್ ಹಾಕಿದವರ ವಿರುದ್ಧ ದೂರು ನೀಡಿದ್ದರು. ಈ ಮೂಲಕ ಇಂಥವರ ವಿರುದ್ಧ ಸುಮ್ಮನೆ ಇರಬಾರದು ಎಂಬ ಸಂದೇಶ ರವಾನಿಸಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಅಶ್ಲೀಲ ಕಮೆಂಟ್​​ಗಲಿಂದ ಕಂಗೆಟ್ಟಿದ್ದ ಎಲ್ಲರಿಗೂ ಇದೊಂದು ಮಾದರಿ ಆಯಿತು. ಈಗ ಪರಭಾಷೆಯಲ್ಲೂ ನಟಿಯರು ಈ ರೀತಿ ನಿರ್ಧಾರ ಮಾಡುತ್ತಿದ್ದಾರೆ. ನಟಿಯರು ಮುಂದೆ ಬಂದು ಕೇಸ್ ದಾಖಲಿಸುತ್ತಿದ್ದಾರೆ….

Read More

ಮೈಸೂರು ಪಾಲಿಕೆಯಿಂದಲೇ ಫುಟ್​ಪಾತ್ ಒತ್ತುವರಿ! ಅರಮನೆ ಮುಂಭಾಗದ ರಾಜಮಾರ್ಗ ಒಡೆದು ಟಾಂಗಾ ಸ್ಟ್ಯಾಂಡ್​

ಮೈಸೂರು, ಮಾರ್ಚ್ 18: ಮೈಸೂರು (Mysuru) ಅಂದರೆ ಅದು ಪಾರಂಪರಿಕ ಕಟ್ಟಡಗಳ ತವರು. ಇಲ್ಲಿನ ಪ್ರತಿ ರಸ್ತೆಯಿಗೂ ಒಂದು ಇತಿಹಾಸವಿದೆ. ಆದರೆ ಈಗ ಅದೇ ಇತಿಹಾಸಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ‘ಸ್ವದೇಶ್ ದರ್ಶನ 2.0’ ಯೋಜನೆಯಡಿ ನಗರದ 10 ಕಡೆ ಟಾಂಗಾ ಸ್ಟ್ಯಾಂಡ್ ನಿರ್ಮಿಸಲು ಪಾಲಿಕೆ ಮುಂದಾಗಿದೆ. ಆದರೆ ಈ ಯೋಜನೆ ಈಗ ವಿವಾದದ (Tonga stand controversy) ಕೇಂದ್ರಬಿಂದುವಾಗಿದೆ. ಅರಮನೆ ಮುಂಭಾಗದ ಚಾಮರಾಜೇಂದ್ರ ವೃತ್ತದ ಬಳಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಾಜಮಾರ್ಗವನ್ನು ಒಡೆದು, ಫುಟ್‌ಪಾತ್…

Read More

‘ಸನ್​ರೈಸರ್ಸ್’ ಪರ ಪಾಕ್ ಆಟಗಾರ ಕಣಕ್ಕಿಳಿಯುವುದು ಡೌಟ್!

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ಗೆ ಆಯ್ಕೆಯಾಗಿರುವ ಪಾಕಿಸ್ತಾನ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಮುಂಬರುವ ಟೂರ್ನಿಯಲ್ಲಿ ಸನ್​ರೈಸರ್ಸ್​ ಲೀಡ್ಸ್ ಪರ ಕಣಕ್ಕಿಳಿಯುವುದು ಅನುಮಾನ. ದಿ ಹಂಡ್ರೆಡ್ ಲೀಗ್​​ ಟೂರ್ನಿಗೆ ದಿನಾಂಕ ನಿಗದಿಯಾಗಿದ್ದು, ಇದೇ ವೇಳೆ ಪಾಕಿಸ್ತಾನ್ ತಂಡ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೆ ಅಬ್ರಾರ್ ಆಯ್ಕೆಯಾದರೆ ಅವರು ಸನ್​ರೈಸರ್ಸ್ ಲೀಡ್ಸ್​ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ…

Read More

ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು; ಕಮಿಷನ್ ಆಸೆಗಾಗಿ ಈ ವ್ಯವಸ್ಥೆ ಎಂದ ಪ್ರತಾಪ್ ಸಿಂಹ

ಮೈಸೂರು, ಮಾ.18: ನಗರದಲ್ಲಿ ನೂತನವಾಗಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುಮಾರು 108 ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು, ಇದು ಅವೈಜ್ಞಾನಿಕವಾಗಿದೆ. ಕೇವಲ 1.5 ರಿಂದ 2 ಕಿಲೋಮೀಟರ್ ಅಂತರದಲ್ಲಿ 9-10 ಸಿಗ್ನಲ್‌ಗಳಿದ್ದು, ವಾಹನ ದಟ್ಟಣೆ ಇಲ್ಲದ ರಸ್ತೆಗಳಲ್ಲೂ ಸಿಗ್ನಲ್‌ಗಳನ್ನು ಅಳವಡಿಸಿರುವುದು ಜನರಿಗೆ ಅನಾನುಕೂಲ ಉಂಟುಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ರಿಂಗ್ ರೋಡ್‌ಗೆ ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳು ಪರಿಹಾರವೇ ಹೊರತು ಸಿಗ್ನಲ್‌ಗಳಲ್ಲ ಎಂದು…

Read More

ಯುಗಾದಿಗೆ ಗಣೇಶ್ ಕಡೆಯಿಂದ ಸಿಗಲಿದೆ ದೊಡ್ಡ ಸರ್​ಪ್ರೈಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ಯುಗಾದಿ, ಹೊಸ ವರ್ಷ ಮಾತ್ರ ಅಲ್ಲ, ಹೊಸ ಟೈಟಲ್, ಹೊಸ ಸಂಚಲನ, ಹೊಸ ಸಿನಿಮಾ, ಹಲವು ತಿಂಗಳ ಪರಿಶ್ರಮ, ಅನೇಕ ಕನಸುಗಳ ಶ್ರಮ’ ಎಂದು ಕ್ಯಾಪ್ಶನ್ ಹಾಕಿದ್ದಾರೆ. ಈ ವಿಡಿಯೋದಲ್ಲಿ ಮಂಜು ಪಾವಗಡ ಟೈಟಲ್ ಹೇಳಿ ಅಂತ ದುಂಬಾಲು ಬೀಳ್ತಾರೆ. ಕೊನೆಗೆ ಗಣೇಶ್ ಬಳಿಯೂ ಬರ್ತಾರೆ. ಯುಗಾದಿಗೆ ಟೈಟಲ್ ಹೇಳೋದಾಗಿ ಅವರು ತಿಳಿಸ್ತಾರೆ. ಇದರಿಂದ ಯುಗಾದಿಗೆ ಸರ್​​ಪ್ರೈಸ್ ಸಿಗೋದು ಪಕ್ಕಾ ಆಗಿದೆ. ಇನ್ನಷ್ಟು ಸಿನಿಮಾ…

Read More

ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಈಗ ಸುದ್ದಿಯಲ್ಲಿದ್ದಾರೆ. ಅವರ ನಿರ್ದೇಶನದ ‘ಧುರಂಧರ್’ ಸಿನಿಮಾ ಅದ್ಭುತ ಯಶಸ್ಸು ಕಂಡಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1300 ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಮೂಲಕ ಹಲವು ದಾಖಲೆಗಳನ್ನು ಬರೆಯಿತು. ಹಿಂದಿ ಚಿತ್ರವೊಂದು ವಿಶ್ವ ಮಟ್ಟದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಿದ್ದು ಇದೇ ಮೊದಲು. ಇನ್ನು, ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮಾಡಲು ರೆಡಿ ಆಗಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ…

Read More

ನಮ್ಮನ್ನು ಕೇಳಿ ಈ ಯುದ್ಧ ಆರಂಭಿಸಿಲ್ಲ: ಟ್ರಂಪ್‌ಗೆ ನ್ಯಾಟೋ ರಾಷ್ಟ್ರಗಳ ಶಾಕ್; ಏಕಾಂಗಿಯಾದ ಅಮೆರಿಕ?

ಟೆಹ್ರಾನ್, ಮಾ.18: ಇರಾನ್‌ನಲ್ಲಿ ಹೊಸ ಆಡಳಿತ ತರುವ ಅಮೆರಿಕ ಮತ್ತು ಇಸ್ರೇಲ್ ಪ್ಲ್ಯಾನ್‌ಗೆ ಈಗ ಇರಾನ್ ಸೇನೆ ಮತ್ತು ಹೊಸ ನಾಯಕ ಮೊಜ್ತಾಬಾ ಖಮನೈ ಮರ್ಮಾಘಾತ ನೀಡಿದ್ದಾರೆ. ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ (NATO) ದೇಶಗಳು ಈಗ ಯುದ್ಧದಿಂದ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಹಾರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಟ್ರಂಪ್ ನ್ಯಾಟೋ ದೇಶಗಳ ಸಹಾಯ ಕೋರಿದ್ದರು. ಆದರೆ ನ್ಯಾಟೋ ರಾಷ್ಟ್ರಗಳು ಕಡಾತುಂಡಾಗಿ ನಿರಾಕರಿಸಿವೆ. ನ್ಯಾಟೋಗೆ ಈ ಯುದ್ಧಕ್ಕೂ ಸಂಬಂಧವಿಲ್ಲ ಎಂದು…

Read More