ವಿಚ್ಛೇದನ ನೀಡಿದ್ದಕ್ಕೆ ಪತ್ನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆಸಿಡ್ ಹಾಕಿದ ಪತಿ; ಭಯಾನಕ ವಿಡಿಯೋ ವೈರಲ್
ಚೆನ್ನೈ, ಮಾ.18: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಜೀವನವನ್ನು ಅಂಧಕಾರಕ್ಕೆ ತಳ್ಳಿದ ಘಟನೆ ಪಲ್ಲವರಂನ ಭಾರತಿ ನಗರದಲ್ಲಿ ನಡೆದಿದೆ. 29 ವರ್ಷದ ಸನಾ ಫಾತಿಮಾ ಸಂತ್ರಸ್ತ ಮಹಿಳೆಯಾಗಿದ್ದು, ಪತಿ ಮೊಹಮ್ಮದ್ ಅಲಿ ಸದ್ಯ ತಲೆಮರೆಸಿಕೊಂಡಿದ್ದಾನೆ.ಸನಾ ಫಾತಿಮಾ ಮತ್ತು ಅನಾಕಪುತ್ತೂರು ನಿವಾಸಿ ಮೊಹಮ್ಮದ್ ಅಲಿ 2020ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಇವರಿಗೆ ನಾಲ್ಕು ವರ್ಷದ ಮಗನಿದ್ದಾನೆ.ಮೊಹಮ್ಮದ್ ಅಲಿ ಮದ್ಯವ್ಯಸನಿಯಾಗಿದ್ದು, ಪ್ರತಿದಿನ ಕುಡಿದು ಬಂದು ಪತ್ನಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಫಾತಿಮಾ ಪತಿಯಿಂದ ದೂರವಾಗಿ…