All posts by nagaraj11081993

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 18ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 18ರ ದಿನಭವಿಷ್ಯ

ಈ ದಿನ ದಕ್ಷಿಣಾಮೂರ್ತಿ ಸ್ತೋತ್ರವನ್ನು ಪಠಿಸಿ. ಜ್ಞಾನ ಮತ್ತು ವೃತ್ತಿ ಏಳಿಗೆಗಾಗಿ ಗುರು ದಕ್ಷಿಣಾಮೂರ್ತಿಯನ್ನು ಪ್ರಾರ್ಥನೆಯಿಂದ ಅನುಕೂಲ ಆಗುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಯಾವುದೇ ಪ್ರಯತ್ನದಲ್ಲಿ ಗೆಲುವು ಕಾಣಲಿದ್ದೀರಿ. ಅಚಾನಕ್ ಸಿಗುವಂತಹ ಹಳೆಯ ಸ್ನೇಹಿತರು ಹೇಳುವ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿ. ಅವರೇನಾದರೂ ವ್ಯಾಪಾರ ಅಥವಾ ವೃತ್ತಿಗೆ ಸಂಬಂಧಿಸಿದ ಯಾವುದಾದರೂ ಅವಕಾಶಗಳ ಬಗ್ಗೆ ತಿಳಿಸಿದಲ್ಲಿ ಆ ಬಗ್ಗೆ ಕೂಡಲೇ ಸ್ಪಂದಿಸಿ. ಯಾವುದೇ ಕಾರಣಕ್ಕೂ ಆಮೇಲೆ ಮಾಡಿದರಾಯಿತು, ನೋಡಿದರಾಯಿತು ಎಂಬ ಧೋರಣೆಯನ್ನು ತೋರಿಸಬೇಡಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನೀವು ಈ ದಿನ ಇತರರ ಹಣಕಾಸಿನ ವ್ಯವಹಾರಗಳನ್ನು ನೋಡಿಕೊಳ್ಳುತ್ತೀರಿ ಅಥವಾ ಅವರ ಪರವಾಗಿ ಮಾತುಕತೆಯನ್ನು ಮಾಡುತ್ತೀರಿ ಎಂದಾದಲ್ಲಿ ಯಶಸ್ಸು ಕಾಣುವ ಸಾಧ್ಯತೆಗಳು ಬಹಳ ಹೆಚ್ಚಿದೆ. ನಿಮ್ಮ ಪ್ರಭಾ ವಲಯ ವಿಸ್ತರಣೆ ಆಗಲಿದೆ. ಮಕ್ಕಳ ಸಲುವಾಗಿ ವಾಹನಗಳನ್ನು ಖರೀದಿ ಮಾಡುವಂಥ ಯೋಗ ಇದೆ. ಇನ್ನು ಅವರ ಸಲುವಾಗಿ ಪ್ರವಾಸಗಳ ಯೋಜನೆಯನ್ನು ರೂಪಿಸಲಿದ್ದೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನಿಮ್ಮಲ್ಲಿ ಕೆಲವರು ಬಸ್, ರೈಲು, ವಿಮಾನದಲ್ಲಿ ಸೀಟ್ ಇಂಥದ್ದನ್ನು ಬುಕ್ ಮಾಡಬಹುದು ಅಥವಾ ಪ್ಯಾಕೇಜ್ ಪ್ರವಾಸಗಳನ್ನು ಸಹ ಬುಕ್ ಮಾಡುವಂಥ ಸಾಧ್ಯತೆಗಳು ಈ ದಿನ ಇದೆ. ಸಂಗಾತಿಯ ಕಡೆ ಸಂಬಂಧಿಕರು ಸಹಾಯ ಕೇಳಿಕೊಂಡು ಬರಬಹುದು. ನಿಮ್ಮಲ್ಲಿ ಕೆಲವರು ಈಗ ಮಾಡುತ್ತಿರುವ ಉದ್ಯೋಗ, ವೃತ್ತಿ ಅಥವಾ ವ್ಯಾಪಾರದ ಜತೆಗೆ ಇನ್ನೊಂದು ವ್ಯವಹಾರ ಮಾಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

15 ದಿನ ಮಗು ಅನುಮಾಸ್ಪದ ಸಾವು:ತಂದೆಯೇ ಮಗುವಿಗೆ ವಿಷ ಪ್ರಾಶನ ಶಂಕೆ

ಬೆಳಗಾವಿ, (ಮಾರ್ಚ್ 17): 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಏಕಾಏಕಿ ಸಾವನ್ನಪ್ಪಿದ್ದು, ತಂದೆ ಮೇಲೆ ಅನುಮಾನ ವ್ಯಕ್ತವಾಗಿದೆ. ಹೌದು…ಳಗಾವಿ (Belagavi) ತಾಲೂಕಿನ ಉಕ್ಕಡ ಗ್ರಾಮದಲ್ಲಿ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಪ್ರಿಯಾಂಕಾ ಇಂದು (ಮಾರ್ಚ್ 17) ಏಕಾಏಕಿ ಸಾವನ್ನಪ್ಪಿದ್ದು, ತಂದೆಯೇ ಮಗುವಿಗೆ ವಿಷ ಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಬಿಮ್ಸ್ ಆಸ್ಪತ್ರೆ ಮುಂದೆ ಮಗುವಿನ ಶವವಿಟ್ಟುಕೊಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ಮಗುವಿನ ತಂದೆ ಭೀಮರಾಯ ತಲೆಮರೆಸಿಕೊಂಡಿದ್ದಾನೆ. ಬಿಮ್ಸ್ ಆಸ್ಪತ್ರೆಗೆ ಡಿಸಿಪಿ ನಾರಾಯಣ್ ಬರಮನಿ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ವರದಿ ಬಳಿಕ ಮುಂದಿನ ಕ್ರಮದ ಭರವಸೆ ನೀಡಿದ್ದಾರೆ.

ಹೆರಿಗೆ ಹಿನ್ನೆಲೆ ಶೀಲಾ ತವರುಮನೆ ಉಕ್ಕಡ ಗ್ರಾಮದಲ್ಲಿ ಇದ್ದಳು. ಹೀಗಾಗಿ ಭೀಮರಾಯ ಇಂದು (ಮಾರ್ಚ್ 17) ಮಧ್ಯಾಹ್ನ ಉಕ್ಕಡ ಗ್ರಾಮ ಆಗಮಿಸಿ ಪತ್ನಿ ಹಾಗೂ ಮಗು ಪ್ರಿಯಾಂಕಾಳನ್ನ ನೋಡಿಕೊಂಡು ವಾಪಸ್ ತಮ್ಮೂರು ಕಡೆ ಹೋಗಿದ್ದಾನೆ. ಆದ್ರೆ, ಏಕಾಏಕಿ ಮಗು ಸಾವನ್ನಪ್ಪಿದೆ. ಇದರಿಂದ ಪೋಷಕರು ಕಂಗಾಲಾಗಿದ್ದು, ಮಗು ಚೆನ್ನಾಗಿತ್ತು ದಿಢೀರ್ ಏನಾಯ್ತು ಎಂದು ಯೋಚಿಸುವಾಗ ಮೃತ ಮಗುವಿನ ತಂದೆ ಭೀಮರಾಯನ ಮೇಲೆ ಅನುಮಾನ ಬಂದಿದೆ.

ಇದನ್ನೂ ಓದಿ: ಒಂದೇ ರೂಮ್​ನಲ್ಲಿದ್ದ ಸ್ನೇಹಿತರ ನಡುವೆ ಗಲಾಟೆ: ಸುತ್ತಿಗೆಯಿಂದ ಹೊಡೆದು ಗೆಳೆಯನ ಬರ್ಬರ ಹತ್ಯೆ

ಸಣ್ಣದೊಂದು ಟ್ಯೂಬ್ ಹಿಡಿದುಕೊಂಡು ಬಂದಿದ್ದ. ಅದೇ ಟ್ಯೂಬ್​ನಿಂದ ಮಗುವಿಗೆ ಕುಡಿಸಿದ್ದಾನೆ ಎಂದು ಪತ್ನಿ ಶೀಲಾ ಹಾಗೂ ಆಕೆಯ ಪೋಷಕರಿಂದ ಗಂಭೀರ ಆರೋಪ ಮಾಡಿದ್ದಾರೆ. ಇನ್ನೊಂದೆಡೆ ಭೀಮರಾಯ ಸಹ ನಾಪತ್ತೆಯಾಗಿದ್ದು, ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಬಿಮ್ಸ್ ಆಸ್ಪತ್ರೆ ಮುಂದೆ ಮಗುವಿನ ಶವವಿಟ್ಟುಕೊಂಡು ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ  ಡಿಸಿಪಿ ನಾರಾಯಣ್ ಬರಮನಿ ಆಗಮಿಸಿ ಪರಿಶೀಲನೆ ಮಾಡಿದ್ದು, ಮೃತ ಮಗುವಿನ ಮರಣೋತ್ತರ ಪರೀಕ್ಷೆ ಬಳಿಕ ಸತ್ಯ ಆಚೆ ಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ

ವಾಷಿಂಗ್ಟನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಜೊತೆ ಕೈಜೋಡಿಸಿ ಅಮೆರಿಕ ಯುದ್ಧ ಸಾರಿದ ನಂತರ ಟ್ರಂಪ್ (Donald Trump) ಸರ್ಕಾರದ ಪ್ರಮುಖ ಅಧಿಕಾರಿಯಾದ ಜೋ ಕೆಂಟ್ ರಾಜೀನಾಮೆ ನೀಡಿದ್ದಾರೆ. ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನಾಗಿರುವ ಜೋ ಕೆಂಟ್ ಇಂದು ರಾಜೀನಾಮೆ ನೀಡಿದ್ದಾರೆ. ಈ ವೇಳೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ ಅವರು ಅಮೆರಿಕಕ್ಕೆ ಇರಾನ್ ಬೆದರಿಕೆಯೊಡ್ಡಿರಲಿಲ್ಲ ಎಂದು ಹೇಳಿದ್ದರು.

ಈ ಬಗ್ಗೆ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. “ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ಜೋ ಕೆಂಟ್ ರಾಜೀನಾಮೆ ನೀಡಿರುವುದು ಒಳ್ಳೆಯದೇ ಆಯಿತು. ನಾನು ಅವರ ಹೇಳಿಕೆಯನ್ನು ಓದಿದೆ. ಅವರು ಬಹಳ ಒಳ್ಳೆಯ ವ್ಯಕ್ತಿ ಎಂದು ನಾನು ಭಾವಿಸಿದ್ದೆ. ಆ ವ್ಯಕ್ತಿ ಒಳ್ಳೆಯವರೇ. ಆದರೆ ಅವರು ಯಾವಾಗಲೂ ಭದ್ರತೆಯ ವಿಚಾರದಲ್ಲಿ ದುರ್ಬಲರಾಗಿದ್ದರು. ಅವರು ರಾಜೀನಾಮೆ ನೀಡಿದ್ದೇ ಒಳ್ಳೆಯದಾಯಿತು” ಎಂದು ಶ್ವೇತಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಟ್ರಂಪ್​ಗೆ ಭಾರೀ ಹೊಡೆತ; ಇರಾನ್ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕದ ಅಧಿಕಾರಿ ರಾಜೀನಾಮೆ

“ನಾನು ಅವರ ಹೇಳಿಕೆಯನ್ನು ಓದಿದಾಗ ಅವರು ಹೊರಗೆ ಹೋಗಿದ್ದೇ ಒಳ್ಳೆಯದು ಎಂದುಕೊಂಡೆ. ಏಕೆಂದರೆ ಇರಾನ್ ಬೆದರಿಕೆಯೊಡ್ಡಿರಲಿಲ್ಲ ಎಂದು ಅವರು ಹೇಳಿದ್ದರು. ಆದರೆ, ಇರಾನ್ ಅಮೆರಿಕಕ್ಕೆ ಮಾತ್ರವಲ್ಲ ಪ್ರತಿಯೊಂದು ದೇಶಕ್ಕೂ ಬೆದರಿಕೆ” ಎಂದು ಟ್ರಂಪ್ ಹೇಳಿದ್ದಾರೆ.

“ಇರಾನ್ ಅಮೆರಿಕಕ್ಕೆ ಯಾವುದೇ ಬೆದರಿಕೆಯೊಡ್ಡಿರಲಿಲ್ಲ. ಇಸ್ರೇಲ್ ಪದೇಪದೆ ಒತ್ತಡ ಹೇರಿದ್ದರಿಂದ ಅಮೆರಿಕ ಇರಾನ್ ಮೇಲೆ ದಾಳಿ ನಡೆಸಲು ಕೈಜೋಡಿಸಿತು. ಬಹಳ ಯೋಚನೆಯ ಮಾಡಿ ನಾನು ಇಂದಿನಿಂದಲೇ ಜಾರಿಗೆ ಬರುವಂತೆ ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಜೋ ಕೆಂಟ್ ತಮ್ಮ ಎಕ್ಸ್​ ಪೇಜಿನಲ್ಲಿ ಪೋಸ್ಟ್‌ ಮಾಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಬೆಂಗಳೂರು, ಮಾರ್ಚ್​ 17: ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ವೃತ್ತದ ಬಳಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್​ಗೆ ತಂದಿದ್ದಾರೆ. ಪುಂಡರ ಹುಚ್ಚಾಟಕ್ಕೆ ಕೊರಿಯರ್ ಶಾಪ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಪ್ರೊಫೆಷನಲ್ ಕೊರಿಯರ್ ಶಾಪ್​ಗೆ ಬಂದ ಪುಂಡರು ಪ್ಲಾಸ್ಟಿಕ್ ಚೀಲದಲ್ಲಿರುವ ವ್ಯಕ್ತಿಯನ್ನು ಕೊರಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಈ ವೇಳೆ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದ್ದು, ಅದರೊಳಗೆ ಮನುಷ್ಯನೊಬ್ಬ ಇರುವುದು ಕಂಡುಬಂದಿದೆ. ಒಂದು ಕ್ಷಣ ಕೊರಿಯರ್ ಶಾಪ್ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಅವರು ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಪ್ರೇಮ್ ಬರೆದ ‘ಕೆಡಿ’ ಸಿನಿಮಾದ ಹಾಡಿನ ಅಶ್ಲೀಲತೆಗೆ ಕಂಗನಾ ರಣಾವತ್ ಆಕ್ರೋಶ

ಧ್ರುವ ಸರ್ಜಾ ನಟನೆಯ, ಜೋಗಿ ಪ್ರೇಮ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ (KD: The Devil) ನೆಗೆಟಿವ್ ಕಾರಣಕ್ಕೆ ಸುದ್ದಿ ಆಗುತ್ತಿದೆ. ಈ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಸದ್ಯ ದೇಶಾದ್ಯಂತ ಭಾರಿ ವಿವಾದಕ್ಕೆ ಸಿಲುಕಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಅಭಿನಯದ ಈ ಹಾಡಿನ ಸಾಹಿತ್ಯ ಮತ್ತು ನೃತ್ಯ ಸಂಯೋಜನೆ ಬಗ್ಗೆ ಈಗ ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ತೀವ್ರವಾಗಿ ಕಿಡಿಕಾರಿದ್ದಾರೆ. ಈ ಹಾಡಿನ ಹಿಂದಿ ವರ್ಷನ್ ‘ಸರ್ಕೆ ಚುನರ್ ತೇರಿ ಸರ್ಕೆ’ ಈಗಾಗಲೇ ಡಿಲೀಟ್ ಆಗಿದೆ.

ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಕಂಗನಾ ರಣಾವತ್, ‘ಬಾಲಿವುಡ್ ಅಶ್ಲೀಲತೆ, ಗಿಮಿಕ್ ಮತ್ತು ಅಟೆನ್ಷನ್ ಪಡೆಯುವ ತಂತ್ರಗಳಲ್ಲಿ ಎಲ್ಲ ಮಿತಿಗಳನ್ನು ಮೀರಿದೆ. ಇಡೀ ದೇಶವೇ ಇವರನ್ನು ಖಂಡಿಸುತ್ತಿದೆ. ಆದರೆ ಇವರಿಗೆ ಯಾವುದೇ ನಾಚಿಕೆ ಇಲ್ಲ ಎಂದು ನನಗನ್ನಿಸುತ್ತದೆ. ಇಂತಹ ಅಸಭ್ಯ ಪ್ರದರ್ಶನಗಳ ಬಗ್ಗೆ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗಳು ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಬಾಲಿವುಡ್‌ಗೆ ಸರಿಯಾದ ಲಗಾಮು ಹಾಕುವ ಸಮಯ ಬಂದಿದೆ’ ಎಂದು ಗುಡುಗಿದ್ದಾರೆ.

ಈ ಹಾಡಿನ ಸಾಹಿತ್ಯ ಕೇಳಿ ಖ್ಯಾತ ಗಾಯಕ ಅರ್ಮಾನ್ ಮಲಿಕ್ ಕೂಡ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ನನ್ನ ಟೈಮ್‌ಲೈನ್‌ನಲ್ಲಿ ಈ ಹಾಡು ಕಂಡಾಗ, ನಾನು ಕೇಳಿದ್ದು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮತ್ತೊಮ್ಮೆ ಪ್ಲೇ ಮಾಡಿದೆ. ಕಮರ್ಷಿಯಲ್ ಹಾಡುಗಳ ಸಾಹಿತ್ಯ ಇಷ್ಟು ಕೀಳುಮಟ್ಟಕ್ಕೆ ತಲುಪಿರುವುದು ನಿಜಕ್ಕೂ ಬೇಸರದ ಸಂಗತಿ’ ಎಂದು ಬೇಸರ ಹಂಚಿಕೊಂಡಿದ್ದಾರೆ.

‘ಕೆಡಿ: ದಿ ಡೆವಿಲ್’ ಚಿತ್ರದ ಈ ಹಾಡಿನ ಆರಂಭಿಕ ಸಾಲುಗಳು ಲೈಂಗಿಕತೆಯನ್ನು ಬಿಂಬಿಸುವ ದ್ವಂದ್ವಾರ್ಥದ ಪದಗಳಿಂದ ಕೂಡಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ‘ಆನಂದ್ ಆಡಿಯೋ’ ಈ ಹಾಡನ್ನು ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಮಾಡಿದೆ. ತೀವ್ರ ಪ್ರತಿರೋಧ ಮತ್ತು ಸಾರ್ವಜನಿಕರ ಆಕ್ರೋಶದ ಬೆನ್ನಲ್ಲೇ, ಈ ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್‌ನಿಂದ ಅಧಿಕೃತವಾಗಿ ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಎ.ಆರ್. ರೆಹಮಾನ್ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿ: ಕಂಗನಾ ಆರೋಪ

ನಿರ್ದೇಶಕ ಪ್ರೇಮ್ ಅವರ ಈ ಮಹತ್ವಾಕಾಂಕ್ಷೆಯ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ, ಈ ಹಾಡಿನ ವಿವಾದವು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಿಂದಿ ವರ್ಷನ್ ಮಾತ್ರ ಡಿಲೀಟ್ ಆಗಿದ್ದು, ದಕ್ಷಿಣ ಭಾರತದ ಭಾಷೆಗಳಲ್ಲಿ ಹಾಡು ಲಭ್ಯವಿದೆ. ಅವುಗಳ ವಿರುದ್ಧವೂ ದೂರುಗಳು ದಾಖಲಾಗುತ್ತಿವೆ. ಚಿತ್ರತಂಡ ಪ್ರತಿಕ್ರಿಯೆ ನೀಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಕನ್ನಡಿಗ ಕೆಎಲ್ ರಾಹುಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

Source link

ಮಳೆ ಅಂತ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿ ಮೇಲೆ ಕುಸಿದ ಗೋಡೆ: ಮುಂದಾಗಿದ್ದು ಘೋರ ದುರಂತ

ಬೆಳಗಾವಿ, ಮಾರ್ಚ್​ 17: ರಣ ರಣ ಬಿಸಿಲಿನ ನಡುವೆ ರಾಜ್ಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ (Rain). ಆ ಮೂಲಕ ಬಿಸಿಲಿಂದ ಬೆಂಡಾಗಿದ್ದ ಭೂಮಿಗೆ ವರುಣ ತಂಪೆರದಿದ್ದಾನೆ. ಸುಡುಬೇಸಿಗೆ ನಡುವೆ ಅಕಾಲಿಕ ಮಳೆ ಶುರುವಾಗಿದೆ. ಈ ಅಕಾಲಿಕ ಮಳೆಗೆ ದುರಂತಗಳು ಸಂಭವಿಸಿದೆ. ಮಳೆ ಹೆಚ್ಚಾದ ಹಿನ್ನೆಲೆ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿ ಮೇಲೆ ಗೋಡೆ ಕುಸಿದುಬಿದ್ದು ಪತ್ನಿ ಸಾವನ್ನಪ್ಪಿದ್ದು (death), ಪತಿ ಬಚಾವ್ ಆಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

ನಡೆದಿದ್ದೇನು?

ದಂಪತಿ ಕೋಳಿಗಳನ್ನು ಮಾರಾಟ ಮಾಡಲು ಬೈಕ್ ಮೇಲೆ ಹೊರಟಿದ್ದರು. ಮಳೆ ಹೆಚ್ಚಾದ ಹಿನ್ನೆಲೆ ಪಾಳು ಮನೆಯ ಕೆಳಗೆ ನಿಂತಿದ್ದಾರೆ. ಈ ವೇಳೆ ಗೋಡೆ ಕುಸಿದುಬಿದ್ದು ಪತ್ನಿ ಪರ್ವಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಪತಿ ಶರೀಫ್​ಗೆ ಗಂಭೀರ ಗಾಯವಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು, ಫುಲ್ ಟ್ರಾಫಿಕ್ ಜಾಮ್

ಮೃತ ಪರ್ವಿನ್ ಬೇಪಾರಿ(34) ವಂಟಮೂರಿ ಗ್ರಾಮದ ನಿವಾಸಿ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಕುಟುಂಬದವರು ಆಗ್ರಹಿಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವನ್ನಪ್ಪಿರುವಂತಹ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದಿದ. ರೈತ ನಿಂಗಪ್ಪ(58) ಮೃತ ದುರ್ದೈವಿ. ಜಮೀನಿಗೆ ಹೋಗಿ ವಾಪಸಾಗುವಾಗ ಅವಘಡ ಸಂಭವಿಸಿದೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

15 ವರ್ಷದ ಬಾಲಕ ಸಾವು

ಇನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಜರಕುಂಟಿ ಗ್ರಾಮದಲ್ಲಿ ಸಿಡಿಲು ಬಡಿದು 15 ವರ್ಷದ ಬಾಲಕ ಮಂಜುನಾಥ್ ಸಾವನಪ್ಪಿದ್ದಾನೆ. ನಿನ್ನೆ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲಿಗೆ ಬಲಿಯಾಗಿದ್ದಾನೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಯಂಬಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಪವನ್ ವಿದ್ಯುತ್ ಯಂತ್ರವೊಂದು ಧಗಧಗಿಸಿ ಉರಿದಿದೆ. ಇನ್ನು ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಯೋತ್ಪಾದನೆ ಆರೋಪದಡಿ ಭಾರತದಲ್ಲಿ 6 ಉಕ್ರೇನಿಯನ್ನರು, ಓರ್ವ ಅಮೆರಿಕನ್ ಬಂಧನ

ನವದೆಹಲಿ, ಮಾರ್ಚ್ 17: ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ಅಧಿಕಾರಿಗಳು 6 ಉಕ್ರೇನಿಯನ್ನರು ಮತ್ತು ಒಬ್ಬ ಅಮೇರಿಕನ್ ಪ್ರಜೆಯನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ 3 ವಿಮಾನ ನಿಲ್ದಾಣಗಳಲ್ಲಿ 7 ವಿದೇಶಿ ಪ್ರಜೆಗಳನ್ನು UAPA ಅಡಿಯಲ್ಲಿ ಬಂಧಿಸಿತ್ತು. ಆರೋಪಿಗಳು ಪ್ರಸ್ತುತ ಎನ್​ಐಎ ವಶದಲ್ಲಿದ್ದಾರೆ. ಅವರನ್ನು ಇಂದು ಪಟಿಯಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಜನಾಂಗೀಯ ಸಶಸ್ತ್ರ ಗುಂಪುಗಳಿಗೆ ಡ್ರೋನ್ ಯುದ್ಧದಲ್ಲಿ ತರಬೇತಿ ನೀಡುವ ಪಿತೂರಿಯ ತನಿಖೆಗಾಗಿ ದೆಹಲಿ ನ್ಯಾಯಾಲಯವು ಭಯೋತ್ಪಾದನಾ ನಿಗ್ರಹ ಸಂಸ್ಥೆಗೆ 11 ದಿನಗಳ ಕಾಲಾವಕಾಶ ನೀಡಿದ ನಂತರ ಒಬ್ಬ ಅಮೆರಿಕನ್, 6 ಮಂದಿ ಉಕ್ರೇನಿಯನ್ ಪ್ರಜೆಗಳು ಸೇರಿದಂತೆ 7 ವಿದೇಶಿ ಪ್ರಜೆಗಳು NIA ಕಸ್ಟಡಿಯಲ್ಲಿದ್ದಾರೆ. NIA 15 ದಿನಗಳ ಕಾಲಾವಕಾಶ ಕೋರಿತ್ತು. ಆದರೆ ನ್ಯಾಯಾಲಯವು 11 ದಿನಗಳ ಕಾಲಾವಕಾಶ ನೀಡಿತ್ತು. ಆ ಆರೋಪಿಗಳನ್ನು ಮಾರ್ಚ್ 27ರಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು.

ಇದನ್ನೂ ಓದಿ: ದೆಹಲಿ ಸ್ಫೋಟಕ್ಕೂ ಬೆಂಗಳೂರು ಜೈಲಿನಲ್ಲಿ ಉಗ್ರ ಮೊಬೈಲ್ ಬಳಸಿದ್ದಕ್ಕೂ ಇದೆಯಾ ನಂಟು? ಎನ್​ಐಎ ತೀವ್ರ ತನಿಖೆ

ಅಮೆರಿಕನ್ ಪ್ರಜೆ ಮ್ಯಾಥ್ಯೂ ವ್ಯಾನ್‌ಡೈಕ್ ಅವರನ್ನು ಕೋಲ್ಕತ್ತಾದಿಂದ ಬಂಧಿಸಲಾಯಿತು. ಮೂವರು ಉಕ್ರೇನಿಯನ್ನರನ್ನು ಲಕ್ನೋದಿಂದ ಮತ್ತು ಇತರ ಮೂವರನ್ನು ದೆಹಲಿಯಿಂದ ಬಂಧಿಸಲಾಗಿದೆ. ಅವರನ್ನು ಹುರ್ಬಾ ಪೆಟ್ರೋ, ಸ್ಲೈವಿಯಾಕ್ ತಾರಸ್, ಇವಾನ್ ಸುಕ್ಮನೋವ್ಸ್ಕಿ, ಸ್ಟೆಫನ್‌ಕಿವ್ ಮರಿಯನ್, ಹೊಂಚರುಕ್ ಮ್ಯಾಕ್ಸಿಮ್ ಮತ್ತು ಕಾಮಿನ್ಸ್ಕಿ ವಿಕ್ಟರ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಪ್ರತಿ 48 ಗಂಟೆಗಳಿಗೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ. ಒಂದು ದಿನ ಬಿಟ್ಟು ಮತ್ತೊಂದು ದಿನ 20 ನಿಮಿಷಗಳ ಕಾಲ ವಕೀಲರು ಅಥವಾ ಸಂಬಂಧಿಕರೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸಲು ಅವರಿಗೆ ಅವಕಾಶ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಹೆಸರಿನಲ್ಲಿ ಅವರ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು, ಕುಟುಂಬದವರು, ಅನೇಕ ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ನಟ ಪ್ರಥಮ್ (Pratham) ಅವರು ಈ ವೇಳೆ ಮಾತನಾಡಿದರು. ‘ಅಭಿಮಾನಿಗಳು ನೇತ್ರದಾನ ಮಹಾದಾನ ಎಂಬ ಈ ಕೆಲಸವನ್ನು ನಾಲ್ಕು ವರ್ಷಗಳಿಂದ ಶ್ರಮವಹಿಸಿ ಮಾಡುತ್ತಿದ್ದಾರೆ. ಅಪ್ಪು ಸರ್ ಹೆಸರಲ್ಲಿ ಇದು ಅದ್ಭುತವಾದ ಕೆಲಸ. ಇಂಥ ಒಳ್ಳೆಯ ಕೆಲಸ ಮಾಡುವ ಅಭಿಮಾನಿಗಳ ಬಗ್ಗೆ ನನಗೆ ಯಾವಾಗಲೂ ಖುಷಿ ಆಗುತ್ತದೆ. ಯಾರಿಗೋ ಬೈಯ್ಯಿರಿ, ಹೊಡೆಯಿರಿ ಅಂತ ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಹೇಳಲ್ಲ’ ಎಂದಿದ್ದಾರೆ ನಟ, ‘ಬಿಗ್ ಬಾಸ್ ಕನ್ನಡ 4’ ವಿನ್ನರ್ ಪ್ರಥಮ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಇತ್ತೀಚಿನ ವರ್ಷಗಳಲ್ಲಿ ಹೈ ಬಿಪಿ ಪ್ರಕರಣಗಳು ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಈ ರೀತಿ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ರಕ್ತದೊತ್ತಡದ ಮಟ್ಟ 120/80 ಎಂಎಂಎಚ್ಜಿ (mmHg) ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಇದು ನಿರಂತರವಾಗಿ 140/90 ಎಂಎಂಎಚ್ಜಿ ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ಹೈಪರ್‌ಟೆನ್ಶನ್ ಎಂದು ಕರೆಯಲಾಗುತ್ತದೆ. ಈ ಮಟ್ಟದಲ್ಲಿ ಬಿಪಿ ದೀರ್ಘಕಾಲ ಇದ್ದರೆ ಸ್ಟ್ರೋಕ್ ಅಪಾಯ ಬಹಳ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಹೈ ಬಿಪಿ (High Blood Pressure) ಇರುವವರಲ್ಲಿ ಸ್ಟ್ರೋಕ್ ಅಪಾಯ ಹೆಚ್ಚಾಗುವುದಕ್ಕೆ ಕಾರಣವೇನು, ಇದರ ಲಕ್ಷಣಗಳು ಹೇಗಿರುತ್ತವೆ, ಜೊತೆಗೆ ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸ್ಟ್ರೋಕ್ ಅಪಾಯ ಹೆಚ್ಚಾಗುವುದಕ್ಕೆ ಕಾರಣವೇನು?

ವೈದ್ಯರ ಪ್ರಕಾರ, ದೀರ್ಘಕಾಲ ಹೈ ಬಿಪಿ ಇದ್ದರೆ ಮೆದುಳಿಗೆ ರಕ್ತವನ್ನು ಸಾಗಿಸುವ ನರಗಳಿಗೆ ಹಾನಿಯಾಗುತ್ತದೆ. ಇದರಿಂದ ನರಗಳಲ್ಲಿ ಬ್ಲಾಕೇಜ್ ಉಂಟಾಗಬಹುದು. ಈ ಸಂದರ್ಭದಲ್ಲಿ ಮೆದುಳಿಗೆ ಸರಿಯಾದ ಆಮ್ಲಜನಕ ಸಿಗದೇ ಸ್ಟ್ರೋಕ್ ಸಂಭವಿಸಬಹುದು. ಕೆಲವು ಸಂದರ್ಭಗಳಲ್ಲಿ ರಕ್ತದೊತ್ತಡ ಹೆಚ್ಚಾಗಿ ಮೆದುಳಿನ ನರಗಳು ಸಿಡಿಯುವ ಸಾಧ್ಯತೆಯೂ ಇದೆ, ಇದು ಜೀವಕ್ಕೆ ಅಪಾಯಕಾರಿಯಾಗಬಹುದು. ಆದರೆ ಲಕ್ಷಣಗಳು ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ರೋಗ ಗಂಭೀರವಾದ ನಂತರ ಮಾತ್ರ ಸಮಸ್ಯೆ ತಿಳಿದುಬರುತ್ತದೆ. ಅದಕ್ಕಾಗಿಯೇ ಹೈ ಬಿಪಿಯನ್ನು ಸೈಲೆಂಟ್ ಕಿಲ್ಲರ್ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ನೀವು ಮಾಡುವ ಈ ತಪ್ಪುಗಳೇ ರಕ್ತದೊತ್ತಡ ಹೆಚ್ಚಾಗಲು ಕಾರಣ?

ರಕ್ತದೊತ್ತಡ ಹೆಚ್ಚಾದಾಗ ಕಂಡುಬರುವ ಲಕ್ಷಣಗಳು:

  • ತಲೆನೋವು (ವಿಶೇಷವಾಗಿ ತಲೆಯ ಹಿಂಭಾಗದಲ್ಲಿ)
  • ತಲೆ ಸುತ್ತುವುದು
  • ಉಸಿರಾಟದಲ್ಲಿ ತೊಂದರೆ
  • ನಿರಂತರ ದಣಿವು

ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು?

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅಗತ್ಯ. ಪ್ರತಿದಿನ ಕನಿಷ್ಠ ಅರ್ಧ ಗಂಟೆ ವ್ಯಾಯಾಮ ಮಾಡಬೇಕು. ಆಹಾರದಲ್ಲಿ ಉಪ್ಪಿನ ಪ್ರಮಾಣ ಕಡಿಮೆ ಮಾಡಬೇಕು. ದಿನಕ್ಕೆ ಕನಿಷ್ಠ 7 ಗಂಟೆ ನಿದ್ರೆ ಮಾಡಬೇಕು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು. ಜೊತೆಗೆ ನಿಯಮಿತವಾಗಿ ಬಿಪಿ ತಪಾಸಣೆ ಮಾಡಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link