ಮಗಳೇ ಹೋಗಿದ್ದಾಳೆ, ಇನ್ಯಾರ ಮೇಲೆ ದೂರೋಣ!’: ನೀಟ್ ಪರೀಕ್ಷೆಯ ಒತ್ತಡಕ್ಕೆ ಬಲಿಯಾಯ್ತಾ ಮತ್ತೊಂದು ಜೀವ? ಕಣ್ಣೀರಿಟ್ಟ ತಂದೆ – Kannada News | Kalaburagi Student Suicide: NEET Dream Crushed by Exam Pressure, Awaits Results
ಕಲಬುರಗಿ, ಮೇ,23: ವೈದ್ಯಕೀಯ ಶಿಕ್ಷಣದ (Medical Education) ದೊಡ್ಡ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಅತ್ಯಂತ ದಾರುಣ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಮೇ 2ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಬರೆದಿದ್ದ ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ. ಕಲಬುರಗಿ ನಗರದ ಕೋರ್ಟ್ ವೃತ್ತದ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಮೃತ ಭಾಗ್ಯಶ್ರೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯಕೀಯ…