ಬೆಂಗಳೂರು, ಮಾರ್ಚ್ 17: ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ವೃತ್ತದ ಬಳಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್ಗೆ ತಂದಿದ್ದಾರೆ. ಪುಂಡರ ಹುಚ್ಚಾಟಕ್ಕೆ ಕೊರಿಯರ್ ಶಾಪ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಪ್ರೊಫೆಷನಲ್ ಕೊರಿಯರ್ ಶಾಪ್ಗೆ ಬಂದ ಪುಂಡರು ಪ್ಲಾಸ್ಟಿಕ್ ಚೀಲದಲ್ಲಿರುವ ವ್ಯಕ್ತಿಯನ್ನು ಕೊರಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಈ ವೇಳೆ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದ್ದು, ಅದರೊಳಗೆ ಮನುಷ್ಯನೊಬ್ಬ ಇರುವುದು ಕಂಡುಬಂದಿದೆ. ಒಂದು ಕ್ಷಣ ಕೊರಿಯರ್ ಶಾಪ್ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಅವರು ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ.
ಧ್ರುವ ಸರ್ಜಾ ನಟನೆಯ, ಜೋಗಿ ಪ್ರೇಮ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ (KD: The Devil) ನೆಗೆಟಿವ್ ಕಾರಣಕ್ಕೆ ಸುದ್ದಿ ಆಗುತ್ತಿದೆ. ಈ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಸದ್ಯ ದೇಶಾದ್ಯಂತ ಭಾರಿ ವಿವಾದಕ್ಕೆ ಸಿಲುಕಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಅಭಿನಯದ ಈ ಹಾಡಿನ ಸಾಹಿತ್ಯ ಮತ್ತು ನೃತ್ಯ ಸಂಯೋಜನೆ ಬಗ್ಗೆ ಈಗ ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ತೀವ್ರವಾಗಿ ಕಿಡಿಕಾರಿದ್ದಾರೆ. ಈ ಹಾಡಿನ ಹಿಂದಿ ವರ್ಷನ್ ‘ಸರ್ಕೆ ಚುನರ್ ತೇರಿ ಸರ್ಕೆ’ ಈಗಾಗಲೇ ಡಿಲೀಟ್ ಆಗಿದೆ.
ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಕಂಗನಾ ರಣಾವತ್, ‘ಬಾಲಿವುಡ್ ಅಶ್ಲೀಲತೆ, ಗಿಮಿಕ್ ಮತ್ತು ಅಟೆನ್ಷನ್ ಪಡೆಯುವ ತಂತ್ರಗಳಲ್ಲಿ ಎಲ್ಲ ಮಿತಿಗಳನ್ನು ಮೀರಿದೆ. ಇಡೀ ದೇಶವೇ ಇವರನ್ನು ಖಂಡಿಸುತ್ತಿದೆ. ಆದರೆ ಇವರಿಗೆ ಯಾವುದೇ ನಾಚಿಕೆ ಇಲ್ಲ ಎಂದು ನನಗನ್ನಿಸುತ್ತದೆ. ಇಂತಹ ಅಸಭ್ಯ ಪ್ರದರ್ಶನಗಳ ಬಗ್ಗೆ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗಳು ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಬಾಲಿವುಡ್‌ಗೆ ಸರಿಯಾದ ಲಗಾಮು ಹಾಕುವ ಸಮಯ ಬಂದಿದೆ’ ಎಂದು ಗುಡುಗಿದ್ದಾರೆ.
ಈ ಹಾಡಿನ ಸಾಹಿತ್ಯ ಕೇಳಿ ಖ್ಯಾತ ಗಾಯಕ ಅರ್ಮಾನ್ ಮಲಿಕ್ ಕೂಡ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ನನ್ನ ಟೈಮ್‌ಲೈನ್‌ನಲ್ಲಿ ಈ ಹಾಡು ಕಂಡಾಗ, ನಾನು ಕೇಳಿದ್ದು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮತ್ತೊಮ್ಮೆ ಪ್ಲೇ ಮಾಡಿದೆ. ಕಮರ್ಷಿಯಲ್ ಹಾಡುಗಳ ಸಾಹಿತ್ಯ ಇಷ್ಟು ಕೀಳುಮಟ್ಟಕ್ಕೆ ತಲುಪಿರುವುದು ನಿಜಕ್ಕೂ ಬೇಸರದ ಸಂಗತಿ’ ಎಂದು ಬೇಸರ ಹಂಚಿಕೊಂಡಿದ್ದಾರೆ.
#WATCH | Delhi: On the controversy over the actress Nora Fatehi’s song, BJP MP Kangana Ranaut says, “Bollywood has crossed all limits with vulgarity, tactics, and attention-seeking. The entire country is condemning and reprimanding them. But I don’t think they have any… pic.twitter.com/o4cyShzoEY
‘ಕೆಡಿ: ದಿ ಡೆವಿಲ್’ ಚಿತ್ರದ ಈ ಹಾಡಿನ ಆರಂಭಿಕ ಸಾಲುಗಳು ಲೈಂಗಿಕತೆಯನ್ನು ಬಿಂಬಿಸುವ ದ್ವಂದ್ವಾರ್ಥದ ಪದಗಳಿಂದ ಕೂಡಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ‘ಆನಂದ್ ಆಡಿಯೋ’ ಈ ಹಾಡನ್ನು ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಮಾಡಿದೆ. ತೀವ್ರ ಪ್ರತಿರೋಧ ಮತ್ತು ಸಾರ್ವಜನಿಕರ ಆಕ್ರೋಶದ ಬೆನ್ನಲ್ಲೇ, ಈ ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್‌ನಿಂದ ಅಧಿಕೃತವಾಗಿ ತೆಗೆದುಹಾಕಲಾಗಿದೆ.
ನಿರ್ದೇಶಕ ಪ್ರೇಮ್ ಅವರ ಈ ಮಹತ್ವಾಕಾಂಕ್ಷೆಯ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ, ಈ ಹಾಡಿನ ವಿವಾದವು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಿಂದಿ ವರ್ಷನ್ ಮಾತ್ರ ಡಿಲೀಟ್ ಆಗಿದ್ದು, ದಕ್ಷಿಣ ಭಾರತದ ಭಾಷೆಗಳಲ್ಲಿ ಹಾಡು ಲಭ್ಯವಿದೆ. ಅವುಗಳ ವಿರುದ್ಧವೂ ದೂರುಗಳು ದಾಖಲಾಗುತ್ತಿವೆ. ಚಿತ್ರತಂಡ ಪ್ರತಿಕ್ರಿಯೆ ನೀಡಬೇಕಿದೆ.
ರಣಜಿ ಅಂಗಳದಲ್ಲಿ ಕರ್ನಾಟಕ ತಂಡವನ್ನು ಫೈನಲ್ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಐಪಿಎಲ್ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕೆಎಲ್ ರಾಹುಲ್, ಈ ಬಾರಿಯ ಐಪಿಎಲ್ನಲ್ಲಿ ಡೆಲ್ಲಿ ತಂಡದಲ್ಲಿ ಹೊಸ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹಿಂದಿನ ತಪ್ಪುಗಳಿಂದ ಪಾಠ ಕಲಿತಿದ್ದು, ಕೆಎಲ್ ರಾಹುಲ್ ಅವರನ್ನು ಓಪನರ್ ಆಗಿ ಆಡಿಸಲು ನಿರ್ಧರಿಸಿದೆ. ಹೀಗಾಗಿ ಅವರು ಈ ಆವೃತ್ತಿಯ ಮೊದಲ ಪಂದ್ಯದಿಂದಲೇ ಡೆಲ್ಲಿ ಕ್ಯಾಪಿಟಲ್ಸ್ ಪರ ಇನ್ನಿಂಗ್ಸ್ ತೆರೆಯುವುದನ್ನು ಕಾಣಬಹುದು. ಇದು ಮಾತ್ರವಲ್ಲದೆ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕನಾಗುವುದರ ಜೊತೆಗೆ ವಿಕೆಟ್ ಕೀಪರ್ ಕೂಡ ಆಗಿರುತ್ತಾರೆ.
2025 ರ ಐಪಿಎಲ್ನಲ್ಲಿ ಕೆಎಲ್ ರಾಹುಲ್ ಮೊದಲ 11 ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದರು. ಆದಾಗ್ಯೂ, ಜ್ಯಾಕ್ ಫ್ರೇಸರ್ ಮೆಕ್ಗುರ್ಕ್ ಅವರ ಕಳಪೆ ಆರಂಭಿಕ ಪ್ರದರ್ಶನದಿಂದ ಬೇಸತ್ತ ಡೆಲ್ಲಿ ಫ್ರಾಂಚೈಸ್ ಕೆಎಲ್ ರಾಹುಲ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿತು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ರಾಹುಲ್ ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡಿದರು.
ಕಳೆದ ಐಪಿಎಲ್ ಋತುವಿನಲ್ಲಿ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅತ್ಯಂತ ಯಶಸ್ವಿ ಬ್ಯಾಟ್ಸ್ಮನ್ ಆಗಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧ 65 ಎಸೆತಗಳಲ್ಲಿ 112 ರನ್ ಸೇರಿದಂತೆ 13 ಪಂದ್ಯಗಳಲ್ಲಿ 149.72 ಸ್ಟ್ರೈಕ್ ರೇಟ್ನಲ್ಲಿ 539 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರನಾಗಿ ರಾಹುಲ್ ಆ ಶತಕ ಬಾರಿಸಿದ್ದರು.
ಐಪಿಎಲ್ 2026 ರಲ್ಲೂ ಕೆಎಲ್ ರಾಹುಲ್ ಅವರಿಂದ ಇದೇ ರೀತಿಯ ಉತ್ತಮ ಪ್ರದರ್ಶನವನ್ನು ಡೆಲ್ಲಿ ಕ್ಯಾಪಿಟಲ್ಸ್ ನಿರೀಕ್ಷಿಸುತ್ತದೆ, ಇದನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ಅವರನ್ನು ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುವ ಅಂತಿಮ ನಿರ್ಧಾರವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ.
ಕೆಎಲ್ ರಾಹುಲ್ ಅವರ ಐಪಿಎಲ್ ವೃತ್ತಿಜೀವನದಲ್ಲಿ 145 ಪಂದ್ಯಗಳ 136 ಇನ್ನಿಂಗ್ಸ್ಗಳಲ್ಲಿ 46.21 ಸರಾಸರಿ ಮತ್ತು 136.02 ಸ್ಟ್ರೈಕ್ ರೇಟ್ನಲ್ಲಿ 5222 ರನ್ ಗಳಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಪರ ಇದುವರೆಗೆ 13 ಪಂದ್ಯಗಳನ್ನು ಆಡಿರುವ ರಾಹುಲ್ 53.90 ಸರಾಸರಿಯಲ್ಲಿ 539 ರನ್ ಗಳಿಸಿದ್ದಾರೆ. ಕೆಎಲ್ ರಾಹುಲ್ ಇದುವರೆಗೆ ಡೆಲ್ಲಿ ಕ್ಯಾಪಿಟಲ್ಸ್ ಪರ ಕೇವಲ ಒಂದು ಸೀಸನ್ ಮಾತ್ರ ಆಡಿದ್ದಾರೆ.
ಬೆಳಗಾವಿ, ಮಾರ್ಚ್ 17: ರಣ ರಣ ಬಿಸಿಲಿನ ನಡುವೆ ರಾಜ್ಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ (Rain). ಆ ಮೂಲಕ ಬಿಸಿಲಿಂದ ಬೆಂಡಾಗಿದ್ದ ಭೂಮಿಗೆ ವರುಣ ತಂಪೆರದಿದ್ದಾನೆ. ಸುಡುಬೇಸಿಗೆ ನಡುವೆ ಅಕಾಲಿಕ ಮಳೆ ಶುರುವಾಗಿದೆ. ಈ ಅಕಾಲಿಕ ಮಳೆಗೆ ದುರಂತಗಳು ಸಂಭವಿಸಿದೆ. ಮಳೆ ಹೆಚ್ಚಾದ ಹಿನ್ನೆಲೆ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿ ಮೇಲೆ ಗೋಡೆ ಕುಸಿದುಬಿದ್ದು ಪತ್ನಿ ಸಾವನ್ನಪ್ಪಿದ್ದು (death), ಪತಿ ಬಚಾವ್ ಆಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ನಡೆದಿದ್ದೇನು?
ದಂಪತಿ ಕೋಳಿಗಳನ್ನು ಮಾರಾಟ ಮಾಡಲು ಬೈಕ್ ಮೇಲೆ ಹೊರಟಿದ್ದರು. ಮಳೆ ಹೆಚ್ಚಾದ ಹಿನ್ನೆಲೆ ಪಾಳು ಮನೆಯ ಕೆಳಗೆ ನಿಂತಿದ್ದಾರೆ. ಈ ವೇಳೆ ಗೋಡೆ ಕುಸಿದುಬಿದ್ದು ಪತ್ನಿ ಪರ್ವಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಶರೀಫ್ಗೆ ಗಂಭೀರ ಗಾಯವಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಪರ್ವಿನ್ ಬೇಪಾರಿ(34) ವಂಟಮೂರಿ ಗ್ರಾಮದ ನಿವಾಸಿ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಕುಟುಂಬದವರು ಆಗ್ರಹಿಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಿಡಿಲು ಬಡಿದು ರೈತ ಸಾವು
ಸಿಡಿಲು ಬಡಿದು ರೈತ ಸಾವನ್ನಪ್ಪಿರುವಂತಹ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದಿದ. ರೈತ ನಿಂಗಪ್ಪ(58) ಮೃತ ದುರ್ದೈವಿ. ಜಮೀನಿಗೆ ಹೋಗಿ ವಾಪಸಾಗುವಾಗ ಅವಘಡ ಸಂಭವಿಸಿದೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
15 ವರ್ಷದ ಬಾಲಕ ಸಾವು
ಇನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಜರಕುಂಟಿ ಗ್ರಾಮದಲ್ಲಿ ಸಿಡಿಲು ಬಡಿದು 15 ವರ್ಷದ ಬಾಲಕ ಮಂಜುನಾಥ್ ಸಾವನಪ್ಪಿದ್ದಾನೆ. ನಿನ್ನೆ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲಿಗೆ ಬಲಿಯಾಗಿದ್ದಾನೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಯಂಬಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಪವನ್ ವಿದ್ಯುತ್ ಯಂತ್ರವೊಂದು ಧಗಧಗಿಸಿ ಉರಿದಿದೆ. ಇನ್ನು ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು.
ನವದೆಹಲಿ, ಮಾರ್ಚ್ 17: ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು 6 ಉಕ್ರೇನಿಯನ್ನರು ಮತ್ತು ಒಬ್ಬ ಅಮೇರಿಕನ್ ಪ್ರಜೆಯನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ 3 ವಿಮಾನ ನಿಲ್ದಾಣಗಳಲ್ಲಿ 7 ವಿದೇಶಿ ಪ್ರಜೆಗಳನ್ನು UAPA ಅಡಿಯಲ್ಲಿ ಬಂಧಿಸಿತ್ತು. ಆರೋಪಿಗಳು ಪ್ರಸ್ತುತ ಎನ್ಐಎ ವಶದಲ್ಲಿದ್ದಾರೆ. ಅವರನ್ನು ಇಂದು ಪಟಿಯಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಜನಾಂಗೀಯ ಸಶಸ್ತ್ರ ಗುಂಪುಗಳಿಗೆ ಡ್ರೋನ್ ಯುದ್ಧದಲ್ಲಿ ತರಬೇತಿ ನೀಡುವ ಪಿತೂರಿಯ ತನಿಖೆಗಾಗಿ ದೆಹಲಿ ನ್ಯಾಯಾಲಯವು ಭಯೋತ್ಪಾದನಾ ನಿಗ್ರಹ ಸಂಸ್ಥೆಗೆ 11 ದಿನಗಳ ಕಾಲಾವಕಾಶ ನೀಡಿದ ನಂತರ ಒಬ್ಬ ಅಮೆರಿಕನ್, 6 ಮಂದಿ ಉಕ್ರೇನಿಯನ್ ಪ್ರಜೆಗಳು ಸೇರಿದಂತೆ 7 ವಿದೇಶಿ ಪ್ರಜೆಗಳು NIA ಕಸ್ಟಡಿಯಲ್ಲಿದ್ದಾರೆ. NIA 15 ದಿನಗಳ ಕಾಲಾವಕಾಶ ಕೋರಿತ್ತು. ಆದರೆ ನ್ಯಾಯಾಲಯವು 11 ದಿನಗಳ ಕಾಲಾವಕಾಶ ನೀಡಿತ್ತು. ಆ ಆರೋಪಿಗಳನ್ನು ಮಾರ್ಚ್ 27ರಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು.
ಅಮೆರಿಕನ್ ಪ್ರಜೆ ಮ್ಯಾಥ್ಯೂ ವ್ಯಾನ್‌ಡೈಕ್ ಅವರನ್ನು ಕೋಲ್ಕತ್ತಾದಿಂದ ಬಂಧಿಸಲಾಯಿತು. ಮೂವರು ಉಕ್ರೇನಿಯನ್ನರನ್ನು ಲಕ್ನೋದಿಂದ ಮತ್ತು ಇತರ ಮೂವರನ್ನು ದೆಹಲಿಯಿಂದ ಬಂಧಿಸಲಾಗಿದೆ. ಅವರನ್ನು ಹುರ್ಬಾ ಪೆಟ್ರೋ, ಸ್ಲೈವಿಯಾಕ್ ತಾರಸ್, ಇವಾನ್ ಸುಕ್ಮನೋವ್ಸ್ಕಿ, ಸ್ಟೆಫನ್‌ಕಿವ್ ಮರಿಯನ್, ಹೊಂಚರುಕ್ ಮ್ಯಾಕ್ಸಿಮ್ ಮತ್ತು ಕಾಮಿನ್ಸ್ಕಿ ವಿಕ್ಟರ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಪ್ರತಿ 48 ಗಂಟೆಗಳಿಗೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ. ಒಂದು ದಿನ ಬಿಟ್ಟು ಮತ್ತೊಂದು ದಿನ 20 ನಿಮಿಷಗಳ ಕಾಲ ವಕೀಲರು ಅಥವಾ ಸಂಬಂಧಿಕರೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸಲು ಅವರಿಗೆ ಅವಕಾಶ ನೀಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಟ ಪುನೀತ್ ರಾಜ್ಕುಮಾರ್ (Puneeth Rajkumar) ಹೆಸರಿನಲ್ಲಿ ಅವರ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು, ಕುಟುಂಬದವರು, ಅನೇಕ ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ನಟ ಪ್ರಥಮ್ (Pratham) ಅವರು ಈ ವೇಳೆ ಮಾತನಾಡಿದರು. ‘ಅಭಿಮಾನಿಗಳು ನೇತ್ರದಾನ ಮಹಾದಾನ ಎಂಬ ಈ ಕೆಲಸವನ್ನು ನಾಲ್ಕು ವರ್ಷಗಳಿಂದ ಶ್ರಮವಹಿಸಿ ಮಾಡುತ್ತಿದ್ದಾರೆ. ಅಪ್ಪು ಸರ್ ಹೆಸರಲ್ಲಿ ಇದು ಅದ್ಭುತವಾದ ಕೆಲಸ. ಇಂಥ ಒಳ್ಳೆಯ ಕೆಲಸ ಮಾಡುವ ಅಭಿಮಾನಿಗಳ ಬಗ್ಗೆ ನನಗೆ ಯಾವಾಗಲೂ ಖುಷಿ ಆಗುತ್ತದೆ. ಯಾರಿಗೋ ಬೈಯ್ಯಿರಿ, ಹೊಡೆಯಿರಿ ಅಂತ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಹೇಳಲ್ಲ’ ಎಂದಿದ್ದಾರೆ ನಟ, ‘ಬಿಗ್ ಬಾಸ್ ಕನ್ನಡ 4’ ವಿನ್ನರ್ ಪ್ರಥಮ್.
ಇತ್ತೀಚಿನ ವರ್ಷಗಳಲ್ಲಿ ಹೈ ಬಿಪಿ ಪ್ರಕರಣಗಳು ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಈ ರೀತಿ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ರಕ್ತದೊತ್ತಡದ ಮಟ್ಟ 120/80 ಎಂಎಂಎಚ್ಜಿ (mmHg) ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಇದು ನಿರಂತರವಾಗಿ 140/90 ಎಂಎಂಎಚ್ಜಿ ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ಹೈಪರ್‌ಟೆನ್ಶನ್ ಎಂದು ಕರೆಯಲಾಗುತ್ತದೆ. ಈ ಮಟ್ಟದಲ್ಲಿ ಬಿಪಿ ದೀರ್ಘಕಾಲ ಇದ್ದರೆ ಸ್ಟ್ರೋಕ್ ಅಪಾಯ ಬಹಳ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಹೈ ಬಿಪಿ (High Blood Pressure) ಇರುವವರಲ್ಲಿ ಸ್ಟ್ರೋಕ್ ಅಪಾಯ ಹೆಚ್ಚಾಗುವುದಕ್ಕೆ ಕಾರಣವೇನು, ಇದರ ಲಕ್ಷಣಗಳು ಹೇಗಿರುತ್ತವೆ, ಜೊತೆಗೆ ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಸ್ಟ್ರೋಕ್ ಅಪಾಯ ಹೆಚ್ಚಾಗುವುದಕ್ಕೆ ಕಾರಣವೇನು?
ವೈದ್ಯರ ಪ್ರಕಾರ, ದೀರ್ಘಕಾಲ ಹೈ ಬಿಪಿ ಇದ್ದರೆ ಮೆದುಳಿಗೆ ರಕ್ತವನ್ನು ಸಾಗಿಸುವ ನರಗಳಿಗೆ ಹಾನಿಯಾಗುತ್ತದೆ. ಇದರಿಂದ ನರಗಳಲ್ಲಿ ಬ್ಲಾಕೇಜ್ ಉಂಟಾಗಬಹುದು. ಈ ಸಂದರ್ಭದಲ್ಲಿ ಮೆದುಳಿಗೆ ಸರಿಯಾದ ಆಮ್ಲಜನಕ ಸಿಗದೇ ಸ್ಟ್ರೋಕ್ ಸಂಭವಿಸಬಹುದು. ಕೆಲವು ಸಂದರ್ಭಗಳಲ್ಲಿ ರಕ್ತದೊತ್ತಡ ಹೆಚ್ಚಾಗಿ ಮೆದುಳಿನ ನರಗಳು ಸಿಡಿಯುವ ಸಾಧ್ಯತೆಯೂ ಇದೆ, ಇದು ಜೀವಕ್ಕೆ ಅಪಾಯಕಾರಿಯಾಗಬಹುದು. ಆದರೆ ಲಕ್ಷಣಗಳು ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ರೋಗ ಗಂಭೀರವಾದ ನಂತರ ಮಾತ್ರ ಸಮಸ್ಯೆ ತಿಳಿದುಬರುತ್ತದೆ. ಅದಕ್ಕಾಗಿಯೇ ಹೈ ಬಿಪಿಯನ್ನು ಸೈಲೆಂಟ್ ಕಿಲ್ಲರ್ ಎಂದು ಕರೆಯಲಾಗುತ್ತದೆ.
ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅಗತ್ಯ. ಪ್ರತಿದಿನ ಕನಿಷ್ಠ ಅರ್ಧ ಗಂಟೆ ವ್ಯಾಯಾಮ ಮಾಡಬೇಕು. ಆಹಾರದಲ್ಲಿ ಉಪ್ಪಿನ ಪ್ರಮಾಣ ಕಡಿಮೆ ಮಾಡಬೇಕು. ದಿನಕ್ಕೆ ಕನಿಷ್ಠ 7 ಗಂಟೆ ನಿದ್ರೆ ಮಾಡಬೇಕು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು. ಜೊತೆಗೆ ನಿಯಮಿತವಾಗಿ ಬಿಪಿ ತಪಾಸಣೆ ಮಾಡಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಧಾರವಾಡ, (ಮಾರ್ಚ್ 17): ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
ಟೆಹ್ರಾನ್, ಮಾರ್ಚ್ 17: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ನಿಲ್ಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಮ್ಮ ಮುಂದೆ ಮಂಡಿಯೂರಬೇಕು, ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ ಎಂದು ಅವರು ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ ಬೆನ್ನಲ್ಲೇ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ರಾಯಿಟರ್ಸ್ ಉಲ್ಲೇಖಿಸಿದ ಇರಾನಿನ ಅಧಿಕಾರಿಯೊಬ್ಬರ ಪ್ರಕಾರ, ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಯುಎಸ್ ಮತ್ತು ಇಸ್ರೇಲ್ ವಿರುದ್ಧ ಟೆಹ್ರಾನ್‌ನ ಸೇಡು ಬಹಳ ಗಂಭೀರವಾದುದು ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾಗೇ, ಮೊಜ್ತಬಾ ಅವರು “ಶಾಂತಿಗೆ ಇದು ಸರಿಯಾದ ಸಮಯವಲ್ಲ” ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು, ಅವರ ತಂದೆಯಾದ ಅಯತೊಲ್ಲಾ ಖಮೇನಿಯ ಮರಣದ ನಂತರ ಇರಾನ್‌ನ ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ, ಖಮೇನಿ ಅವರ ಮರಣದ ನಂತರ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಬಲವಾದ ಸಂದೇಶವನ್ನು ನೀಡಿದ್ದರು. ಈ ಭಾಷಣವು ಅಮೆರಿಕ ಮತ್ತು ಇಸ್ರೇಲ್ ಕಡೆಗೆ ಇರಾನ್‌ನ ಕಠಿಣ ನಿಲುವನ್ನು ಒತ್ತಿಹೇಳಿತ್ತು. ಇರಾನ್ ಅನುಭವಿಸಿದ ಹಾನಿಗಳಿಗೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕ ಬೆಲೆ ತೆರಬೇಕಾಗುತ್ತದೆ ಎಂದು ಮೊಜ್ತಬಾ ಹೇಳಿದ್ದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
2026 ರ ಐಪಿಎಲ್ಗೆ ಎರಡು ವಾರಕ್ಕೂ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಈ ಲೀಗ್ನಲ್ಲಿ ಆಡುವ ವಿದೇಶಿ ಆಟಗಾರರು ತಮ್ಮ ತಮ್ಮ ತಂಡಗಳನ್ನು ಕೂಡಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಆರ್ಸಿಬಿ ಜೀವಾಳ ವಿರಾಟ್ ಕೊಹ್ಲಿ ಕೂಡ ಇಂದು ಮಡದಿಯೊಂದಿಗೆ ಭಾರತಕ್ಕೆ ಬಂದಿದ್ದಾರೆ. ಲೀಗ್ನ ಮೊದಲ ಪಂದ್ಯ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ.
ಆದರೆ ಈ ಪಂದ್ಯಕ್ಕೂ ಮುನ್ನ ಆರ್ಸಿಬಿ ಪಾಳಯಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರ ಎನಿಸಿಕೊಂಡಿರುವ ಆಸ್ಟ್ರೇಲಿಯಾದ ಅನುಭವಿ ವೇಗದ ಬೌಲರ್ ಜೋಶ್ ಹೇಜಲ್ವುಡ್ ಈ ಆವೃತ್ತಿಯ ಮೊದಲೆರಡು ಪಂದ್ಯಗಳಲ್ಲಿ ಆಡುವುದು ಅನುಮಾನ ಎಂದು ವರದಿಯಾಗಿದೆ. ಅಂದರೆ ಆರ್ಸಿಬಿ ತಮ್ಮ ಮೊದಲ ಎರಡು ಪಂದ್ಯಗಳನ್ನು ಸನ್ರೈಸರ್ಸ್ ಹೈದರಾಬಾದ್ ಹಾಗೂ ಸಿಎಸ್ಕೆ ವಿರುದ್ಧ ಆಡಲಿದೆ. ಈ ಪಂದ್ಯಗಳಲ್ಲಿ ಹೇಜಲ್ವುಡ್ ಆಡುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.
ಗಾಯದಿಂದಾಗಿ ಬಹಳ ದಿನಗಳಿಂದ ಕ್ರಿಕೆಟ್ನಿಂದ ದೂರ ಉಳಿದಿರುವ ಹೇಜಲ್ವುಡ್ ಟಿ20 ವಿಶ್ವಕಪ್ನಲ್ಲಿಯೂ ಆಡಿರಲಿಲ್ಲ. ಆದಾಗ್ಯೂ ಐಪಿಎಲ್ಗೂ ಮುನ್ನ ಹೇಜಲ್ವುಡ್ ಚೇತರಿಸಿಕೊಂಡಿದ್ದು ಫಿಟ್ನೆಸ್ ಸರ್ಟಿಫಿಕೆಟ್ ಕೂಡ ಪಡೆದಿದ್ದಾರೆ ಎಂದು ವರದಿಯಾಗಿದೆ. ಆದಾಗ್ಯೂ ಹೇಜಲ್ವುಡ್ ಮೊದಲ ಎರಡು ಪಂದ್ಯಗಳಲ್ಲಿ ಆಡಲಾಗುವುದಿಲ್ಲ ಎನ್ನಲಾಗುತ್ತಿದೆ.
ಈ ಸುದ್ದಿ ನಿಜವಾದರೆ, ಅದು ಆರ್ಸಿಬಿಗೆ ದೊಡ್ಡ ಹೊಡೆತವಾಗುತ್ತದೆ. ಏಕೆಂದರೆ ಕಳೆದ ಆವೃತ್ತಿಯಲ್ಲಿ ಆರ್ಸಿಬಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹೇಜಲ್ವುಡ್ 22 ವಿಕೆಟ್ಗಳನ್ನು ಕಬಳಿಸಿದ್ದರು. ಹೀಗಾಗಿ ಅವರ ಅನುಪಸ್ಥಿತಿ ತಂಡವನ್ನು ಕೂಡುವುದು ಸತ್ಯ. ಆದಾಗ್ಯೂ ಅವರ ಬದಲಿಯಾಗಿ ತಂಡದಲ್ಲಿ ಬೌಲರ್ಗಳಿದ್ದು, ಅವರ ಸ್ಥಾನವನ್ನು ಯಾರು ತುಂಬುತ್ತಾರೆ ಎಂಬುದನ್ನು ನೋಡುವುದಾದರೆ..
ಹೇಜಲ್ವುಡ್ ಸ್ಥಾನವನ್ನು ತುಂಬುವುದು ಕಷ್ಟವಾದರೂ, ನ್ಯೂಜಿಲೆಂಡ್ನ ವೇಗದ ಬೌಲರ್ ಜಾಕೋಬ್ ಡಫಿ ತಂಡಕ್ಕೆ ನೆರವಾಗಬಲ್ಲರು. ನ್ಯೂಜಿಲೆಂಡ್ನ ಈ ಬಲಗೈ ವೇಗದ ಬೌಲರ್ ಟಿ20 ಕ್ರಿಕೆಟ್ನಲ್ಲಿ ನಂ. 1 ಬೌಲರ್ ಆಗಿದ್ದು, ಆಡಿರುವ 48 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 62 ವಿಕೆಟ್ಗಳನ್ನು ಕಬಳಿಸಿದ್ದಾರೆ, ಪ್ರತಿ ಓವರ್ಗೆ ಕೇವಲ 8 ರನ್ಗಳ ಎಕಾನಮಿ ದರವನ್ನು ಹೊಂದಿದ್ದಾರೆ.
ಇದು ಡಫಿಗೆ ಚೊಚ್ಚಲ ಐಪಿಎಲ್ ಆವೃತ್ತಿಯಾಗಿದೆ. ಆದಾಗ್ಯೂ ಜಾಕೋಬ್ ಡಫಿಯವರ ದೊಡ್ಡ ಶಕ್ತಿ ಎಂದರೆ ಪವರ್ಪ್ಲೇ ಮತ್ತು ಡೆತ್ ಓವರ್ಗಳಲ್ಲಿ ಮಿತವ್ಯಯದಿಂದ ಬೌಲಿಂಗ್ ಮಾಡುವ ಸಾಮರ್ಥ್ಯ ಹಾಗೂ ವಿಕೆಟ್ ಪಡೆಯುವ ಸಾಮರ್ಥ್ಯ. ಅವರು ತಮ್ಮ ಎತ್ತರವನ್ನು ಬಳಸಿಕೊಂಡು ಬೌನ್ಸರ್ ಎಸೆಯುವುದರಲ್ಲಿ ನಿಸ್ಸೀಮರು ಹಾಗೆಯೇ ಬ್ಯಾಟ್ಸ್ಮನ್ಗಳನ್ನು ಮೋಸಗೊಳಿಸುವ ನಿಧಾನಗತಿಯ ಎಸೆತವನ್ನು ಸಹ ಹೊಂದಿದ್ದಾರೆ. ಆದಾಗ್ಯೂ ಢಪಿ ಆರ್ಸಿಬಿಯ ನಿರೀಕ್ಷೆಗಳನ್ನು ಪೂರೈಸುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.