ಶಿರಸಿಯಲ್ಲಿ ನಡುರಸ್ತೆಯಲ್ಲೇ ನಡುಕ ಹುಟ್ಟಿಸಿದ ಗ್ಯಾಂಗ್‌ವಾರ್!: 6 ಯುವಕರ ವಿರುದ್ಧ ಪ್ರಕರಣ ದಾಖಲು – Kannada News | Sirsi Youth Brawl: After Bike Accident, Gang War Erupts; Police Take Action
ಶಿರಸಿ, ಮೇ.23: ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪಟ್ಟಣವಾದ ಶಿರಸಿಯಲ್ಲಿ ಕೇವಲ ಒಂದು ಬೈಕ್ ಅಪಘಾತದ ವಿಚಾರವಾಗಿ ಎರಡು ಗುಂಪುಗಳ ನಡುವೆ ಭೀಕರ ಗ್ಯಾಂಗ್‌ವಾರ್ ನಡೆದಿದೆ. ನಗರದ ಸಿಂಪಿಗಲ್ಲಿಯ ನಡುರಸ್ತೆಯಲ್ಲೇ ಯುವಕರ ಎರಡು ಗುಂಪುಗಳು ಪರಸ್ಪರ ಅಟ್ಟಾಡಿಸಿಕೊಂಡು ಮಾರಾಮಾರಿ ನಡೆಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಶಿರಸಿ ಟೌನ್ ಪೊಲೀಸ್ ಠಾಣೆಯಲ್ಲಿ 6 ಯುವಕರ ವಿರುದ್ಧ ಗಂಭೀರ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೇ 21ರ ರಾತ್ರಿ ಶಿರಸಿಯ ದೇವಿಕೆರೆ ಬಳಿ ದ್ವಿಚಕ್ರ ವಾಹನಗಳ ನಡುವೆ ಸಣ್ಣದೊಂದು…