All posts by nagaraj11081993

SA vs NZ: 18 ರನ್​ಗೆ 5 ವಿಕೆಟ್; ಹೀನಾಯವಾಗಿ ಸೋತ ಆಫ್ರಿಕಾ

SA vs NZ: 18 ರನ್​ಗೆ 5 ವಿಕೆಟ್; ಹೀನಾಯವಾಗಿ ಸೋತ ಆಫ್ರಿಕಾ

2026 ರ ಟಿ20 ವಿಶ್ವಕಪ್ ಸೆಮಿಫೈನಲ್ ಹಾಗೂ ಫೈನಲ್​ನಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ (South Africa vs New Zealand) ಪ್ರಸ್ತುತ 5 ಪಂದ್ಯಗಳ ಟಿ20 ಸರಣಿಯನ್ನಾಡುತ್ತಿವೆ. ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ ಪಂದ್ಯ ಗೆದ್ದಿದ್ದ ದಕ್ಷಿಣ ಆಫ್ರಿಕಾ, ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾವನ್ನು 68 ರನ್‌ಗಳಿಂದ ಸೋಲಿಸಿ, ಐದು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ 175 ರನ್‌ ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೇವಲ 107 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಬ್ಯಾಟಿಂಗ್ ಎಷ್ಟು ಕಳಪೆಯಾಗಿತ್ತೆಂದರೆ ಕೇವಲ 18 ರನ್‌ಗಳಿಗೆ 5 ಕಳೆದುಕೊಂಡಿತು. ಮಾತ್ರವಲ್ಲದೆ ತಂಡದ ಅಗ್ರ ಆರು ಬ್ಯಾಟ್ಸ್‌ಮನ್‌ಗಳಿಗೆ 20 ರನ್​ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ.

ಕಾನ್ವೇ ಅರ್ಧಶತಕ

ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಪರ ಆರಂಭಿಕ ಡೆವೊನ್ ಕಾನ್ವೇ 60 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್‌ನಲ್ಲಿ ಅವರು ಐದು ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ಜೋಶ್ ಕ್ಲಾರ್ಕ್ಸನ್ 9 ಎಸೆತಗಳಲ್ಲಿ ಅಜೇಯ 26 ರನ್ ಗಳಿಸಿದರೆ, ನಾಯಕ ಸ್ಯಾಂಟ್ನರ್ 20 ಹಾಗೂ ನಿಕ್ ಕೆಲ್ಲಿ 21 ರನ್​ಗಳ ಕಾಣಿಕೆ ನೀಡಿದರು. ಈ ಮೂವರನ್ನು ಹೊರತುಪಡಿಸಿ ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರಲಿಲ್ಲ.

ಐದು ವಿಕೆಟ್‌ಗಳು 18 ರನ್‌ಗಳಿಗೆ ಪತನ

ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ಬೌಲರ್‌ಗಳ ಅದ್ಭುತ ಪ್ರದರ್ಶನಕ್ಕೆ ಮಕಾಡೆ ಮಲಗಿತು. ಆಫ್ರಿಕಾ ಪರ ಅಗ್ರ 6 ಬ್ಯಾಟ್ಸ್‌ಮನ್​ಗಳು 20 ರ ಗಡಿ ದಾಟುವಲ್ಲಿ ವಿಫಲರಾದರು. ಇದರ ಪರಿಣಾಮವಾಗಿ ಆಫ್ರಿಕಾ ತಂಡದ ಸೋಲು ಆರಂಭದಲ್ಲೇ ಖಚಿತವಾಯಿತು. ಆದಾಗ್ಯೂ ಜಾರ್ಜ್ ಲಿಂಡೆ 33 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಉಳಿದಂತೆ ತಂಡದ ಕೊನೆಯ ಮೂವರು ಬ್ಯಾಟ್ಸ್‌ಮನ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಮಧ್ಯಮ ಕ್ರಮಾಂಕ ಕುಸಿದ ನಂತರ ಕೊನೆಯ ಐದು ವಿಕೆಟ್‌ಗಳು ಕೇವಲ 18 ರನ್‌ಗಳಿಗೆ ಪತನಗೊಂಡವು. 13ನೇ ಓವರ್‌ನಲ್ಲಿ 89 ರನ್‌ಗಳಿಗೆ ಆರನೇ ವಿಕೆಟ್ ಕಳೆದುಕೊಂಡ ದಕ್ಷಿಣ ಆಫ್ರಿಕಾ 15.3 ಓವರ್‌ಗಳಲ್ಲಿ 107 ರನ್‌ಗಳಿಗೆ ಆಲೌಟ್ ಆಯಿತು.

ಕಿವೀಸ್ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಬೆನ್ ಸಿಯರ್ಸ್ 14 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರೆ, ಮಿಚೆಲ್ ಸ್ಯಾಂಟ್ನರ್ 2 ವಿಕೆಟ್‌ಗಳನ್ನು ಮತ್ತು ಲಾಕಿ ಫರ್ಗುಸನ್ 3 ವಿಕೆಟ್‌ಗಳನ್ನು ಪಡೆದರು. ಮೆಕ್‌ಕಾಂಚಿ ಮತ್ತು ನೀಶಮ್ ತಲಾ 1 ವಿಕೆಟ್ ಪಡೆದರು. ಹ್ಯಾಮಿಲ್ಟನ್ ಪಿಚ್ ಬ್ಯಾಟಿಂಗ್‌ಗೆ ಕಷ್ಟಕರವಾಗಿದ್ದರಿಂದ ಕಿವೀಸ್ ಇದರ ಸಂಪೂರ್ಣ ಲಾಭವನ್ನು ಪಡೆದುಕೊಂಡಿತು.

ಕಿವೀಸ್​ಗೆ ಮೊದಲ ಪಂದ್ಯದಲ್ಲಿ ಸೋಲು

ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ 7 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತು. ಬೇ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ 14.3 ಓವರ್‌ಗಳಲ್ಲಿ ಕೇವಲ 91 ರನ್‌ಗಳಿಗೆ ಆಲೌಟ್ ಆಯಿತು. ದಕ್ಷಿಣ ಆಫ್ರಿಕಾ 3 ವಿಕೆಟ್‌ಗಳ ನಷ್ಟಕ್ಕೆ ಗುರಿ ತಲುಪಿತು. ಸರಣಿ ಈಗ 1-1 ರಲ್ಲಿ ಸಮಬಲಗೊಂಡಿದ್ದು, ಮೂರನೇ ಟಿ20 ಪಂದ್ಯ ಮಾರ್ಚ್ 20 ರಂದು ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Apprentice Recruitment 2026: ರೈಲ್ವೆ ನೇಮಕಾತಿ; 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು

ರೈಲ್ವೆ ನೇಮಕಾತಿ ಕೋಶ (RRC) ದಕ್ಷಿಣದ ದಕ್ಷಿಣ ಮಧ್ಯ ರೈಲ್ವೆ (SCR) ಪ್ರದೇಶಗಳಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ವಿವಿಧ ಇಲಾಖೆಗಳಲ್ಲಿ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಖಾಲಿ ಹುದ್ದೆಗಳನ್ನು ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿಬ್ಬಂದಿ, S&T ಮತ್ತು ಇತರ ಇಲಾಖೆಗಳಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 11 ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಕನಿಷ್ಠ ಶೇಕಡಾ 50 ಅಂಕಗಳೊಂದಿಗೆ ಅರ್ಹತೆ ಪಡೆದಿರಬೇಕು. ಅಲ್ಲದೆ, ಅವರು ಎಸಿ ಮೆಕ್ಯಾನಿಕ್, ಕಾರ್ಪೆಂಟರ್, ಸಿಒಪಿಎ, ಡೀಸೆಲ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್, ಮೆಷಿನಿಸ್ಟ್, ಎಂಎಂಟಿಎಂ, ಮೋಟಾರ್ ಮೆಕ್ಯಾನಿಕ್, ಪೇಂಟರ್, ವೆಲ್ಡರ್ ವಿಭಾಗಗಳಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು. ಅಭ್ಯರ್ಥಿಗಳ ವಯಸ್ಸಿನ ಮಿತಿ ಏಪ್ರಿಲ್ 11, 2026 ರಂತೆ 15 ರಿಂದ 24 ವರ್ಷಗಳ ನಡುವೆ ಇರಬೇಕು. ಎಸ್‌ಸಿ, ಎಸ್‌ಟಿಗಳಿಗೆ ಐದು ವರ್ಷಗಳು, ಒಬಿಸಿಗಳಿಗೆ ಮೂರು ವರ್ಷಗಳು ಮತ್ತು ಪಿಡಬ್ಲ್ಯೂಬಿಡಿ ಮತ್ತು ಇಎಸ್‌ಎಂ ಅಭ್ಯರ್ಥಿಗಳಿಗೆ ಹತ್ತು ವರ್ಷಗಳವರೆಗೆ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಈ ಅರ್ಹತೆಗಳನ್ನು ಹೊಂದಿರುವ ಯಾರಾದರೂ ಏಪ್ರಿಲ್ 11 ರಂದು ರಾತ್ರಿ 11.59 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ 100 ರೂ. ನೋಂದಣಿ ಶುಲ್ಕವನ್ನು ಪಾವತಿಸಬೇಕು. ಆದಾಗ್ಯೂ, ಎಸ್‌ಸಿ, ಎಸ್‌ಟಿ, ಮಹಿಳೆಯರು ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಆಯ್ಕೆಯಾದವರಿಗೆ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳ ವಿವಿಧ ರೈಲ್ವೆ ಘಟಕಗಳಲ್ಲಿ ಒಂದು ವರ್ಷದ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿಯ ಸಮಯದಲ್ಲಿ ನಿಯಮಗಳ ಪ್ರಕಾರ ಪ್ರತಿ ತಿಂಗಳು ಸ್ಟೈಫಂಡ್ ಪಾವತಿಸಲಾಗುತ್ತದೆ. ಇತರ ವಿವರಗಳನ್ನು ಕೆಳಗಿನ ಲಿಂಕ್‌ನಲ್ಲಿ ಕಾಣಬಹುದು.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್​ ಮಾಡಿ

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

ಮಂಗಳೂರು, (ಮಾರ್ಚ್ 17): ದಕ್ಷಿಣ ಕನ್ನಡದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ (moodabidri inspector Sandesh case) ಬಗೆದಷ್ಟು ಬಯಲಾಗುತ್ತಿದೆ. ರಕ್ಷಣೆ ಕೋರಿ ಬಂದ ಮಹಿಳೆಯರಿಗೆ ಲೈಂಗಿಕ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋಗಳು ವೈರಲ್ ಆಗಿವೆ. ಆದರೆ, ಇನ್ಸ್‌ಪೆಕ್ಟರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಇನ್ನು ಇದೀಗ ಇನ್ಸ್‌ಪೆಕ್ಟರ್ ಸಂದೇಶ್ ಮೇಲೆ ಲೈಂಗಿಕ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಸಹೋದರಿ (victim Sister) ಗಂಭೀರ ಆರೋಪ ಮಾಡಿ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಅಲ್ಲದೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಇನ್ಸ್ ಪೆಕ್ಟರ್ ಸಂದೇಶ್ ವಿರುದ್ದ ಗೃಹ ಸಚಿವರಿಗೆ ಮಹತ್ವದ ಪತ್ರ ಬರೆದಿದ್ದಾರೆ.

ಪ್ರಕರಣಕ್ಕೆ ಟ್ವಿಸ್ಟ್​ ಕೊಟ್ಟ ಸಂತ್ರಸ್ತೆ ಸಹೋದರಿ

ಮೂಡುಬಿದಿರಿ ಇನ್ಸ್‌ಪೆಕ್ಟರ್ ಸಂದೇಶ್ ಮೇಲಿನ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಂತ್ರಸ್ತೆ ಸಹೋದರಿ, ಇಡೀ ಪ್ರಕರಣದಲ್ಲಿ ಸಂದೇಶ್ ನಿರಪರಾಧಿ ಎಂದಿದ್ದಾರೆ. ಕುಟುಂಬ ಕಲಹದ ಮೇಲಿನ ದ್ವೇಷದಿಂದ ಇನ್ಸ್‌ಪೆಕ್ಟರ್ ಮೇಲೆ ಸಂತ್ರಸ್ತೆ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಸಂದೇಶ್ ಉತ್ತಮ ವ್ಯಕ್ತಿ, ನನ್ನ ಸಹೋದರಿ ಇಲ್ಲ ಸಲ್ಲದ ದ್ವೇಷದಿಂದ ಹಗೆತನ ಸಾಧಿಸುತ್ತಿದ್ದಾರೆ. ಸಂದೇಶ್ ನ್ಯಾಯದ ಪರವಾಗಿದ್ದಾರೆ. ನಾನು ಸ್ವಯಂ ಆಗಿ ಹೇಳುತ್ತಿದ್ದೇನೆ, ನನಗೆ ಯಾರೂ ಈ ರೀತಿ ಹೇಳುವಂತೆ ಸೂಚಿಸಿಲ್ಲ ಎಂದು ಸಂತ್ರಸ್ತೆ ಸಹೋದರಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!

ಇನ್ಸ್ಪೆಕ್ಟರ್ ಸಂದೇಶ್ ಮೊದಲು ಪರಿಚಯ ಇರಲಿಲ್ಲ. ಸ್ಟೇಷನ್ ಗೆ ಹೋದಾಗಲೇ ಮಾತನಾಡಿರುವುದು. ಕೌಟುಂಬಿಕ ಕಲಹದ ವಿಚಾರದಲ್ಲಿ ನಾನು ದೂರು ಕೊಟ್ಟಿದ್ದು. ಈ ವಿಚಾರದಲ್ಲಿ ಸಹೋದರಿ (ಪ್ರಕರಣದ ಸಂತ್ರಸ್ತೆ) ಪ್ರವೇಶ ಮಾಡುವ ಅವಶ್ಯಕತೆ ಇರಲಿಲ್ಲ. ನನ್ನ ಗಂಡ ಮತ್ತು ಮಗನನ್ನು ಸಹೋದರಿ ಮನೆಯಿಂದ ಕರೆದುಕೊಂಡು ಬರುವಂತೆ ದೂರು ನೀಡಿದ್ದೆ. ನನ್ನ ತಾಯಿಯನ್ನು ನೋಡಲು ಹೋದ ನನ್ನ ಗಂಡ ಮತ್ತು ಮಗನನ್ನು ವಾಪಸು ಬರೋದಕ್ಕೆ ಬಿಟ್ಟಿಲ್ಲ.ನನ್ನ ಗಂಡ,ಮಗ ಬೇಕು‌ ಎಂದಯ ದೂರು ಕೊಟ್ಟಿದ್ದು‌ ತಪ್ಪಾ? ಇನ್ಸ್ಪೆಕ್ಟರ್ ನ ಕೆಲಸ ತೆಗಿಸುವುದಾಗಿ ಆಕೆ ಶಪಥ ಮಾಡಿ ಹೋಗಿದ್ದಾಳೆ. ಇನ್ಸ್ಪೆಕ್ಟರ್ ಮೇಲೆ ನನಗೆ ಬೇರೆ ರೀತಿಯ ಭಾವನೆ ಇಲ್ಲ. ನನಗೆ ಅಣ್ಣ, ಅವರಿಗೆ ನಾನು‌ ಅಕ್ಕ ಇದ್ದಂತೆ ಎಂದು ಸಂತ್ರಸ್ತೆ ಸಹೋದರಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ನಮ್ಮ ಪ್ರಕರಣದಿಂದ ಇನ್ಸ್​ಪೆಕ್ಟರ್ ಹೆಸರು ಹಾಳಾಗಬಾರದು

ಮೇಲೆ ಇರುವ ದೇವರು ನೋಡುತ್ತಾನೆ. ಸುಳ್ಳು ಆರೋಪ ಮಾಡಬಾರದು. ಠಾಣೆಯಲ್ಲಿನ ಸಿಸಿ ಕ್ಯಾಮರಾ ಬೇಕಾದರೂ ನೋಡಲಿ‌ ಸತ್ಯ ಗೊತ್ತಾಗುತ್ತೆ. ಇನ್ಸ್ಪೆಕ್ಟರ್ ಮೇಲೆ ಒಂದಾದ ಮೇಲೆ ಒಂದು ಕೇಸು ಹಾಕುತ್ತಿದ್ದಾಳೆ. ನನ್ನ ಗಂಡ ಈಗ ಬಾಂಬೆಯಲ್ಲಿದ್ದಾರೆ. ಮಗ ಸಹೋದರಿ ಜೊತೆ ಇದ್ದಾನೆ. ಮಗನಿಗೆ ಹಲವು‌ ಆಮಿಷ ನೀಡಿದ್ದಾಳೆ. ಸಹೋದರಿ ಹೇಳಿಕೊಟ್ಟು ಬೇರೆ ಮಹಿಳೆಯರಿಂದ ಸುಳ್ಳು ಹೇಳಿಸಿದ್ದಾಳೆ. ಹಣ ಕೊಟ್ರೆ ಏನು‌ ಬೇಕಾದರೂ ಮಾಡುತ್ತಾರೆ. ಇವಳ ಹಿಂದೆ ಬೇರೆಯವರು ಇದ್ದಾರೆ. ಹೋದ ಎಲ್ಲಾ ಕಡೆಯು‌ ಅಧಿಕಾರಿಗಳ ವಿರುದ್ಧ ದೂರು ಕೊಡುತ್ತಾಳೆ. ಆಕೆಯ ವಿಚಾರದಲ್ಲಿ ಮಾತ್ರ ನಾನು ಮಾತನಾಡಬಹುದು. ಉಳಿದ ವಿಚಾರದಲ್ಲಿ ನಾನು ಹೇಳಲು ಸಾಧ್ಯವಿಲ್ಲ. ಸಂದೇಶ್ ನನ್ನು ಕೆಲಸದಿಂದ ಕೆಲಗಿಳಿಸಬೇಕೆಂದು ಇವಳಿಗೆ ಹಠ. ಅದಕ್ಕಾಗಿ ತಂಡ ಮಾಡಿಕೊಂಡು ಈ ರೀತಿ ಮಾಡುತ್ತಿದ್ದಾರೆ. ಸಂದೇಶ್ ಮೇಲೆ ಬಂದಿರುವ ಆರೋಪಗಳೆಲ್ಲ ಸುಳ್ಳು. ನಮ್ಮ ಪ್ರಕರಣದಿಂದಾಗಿ ಸಂದೇಶ್ ಅವರ ಹೆಸರು ಹಾಳಾಗಬಾರದು ಎಂದಿದ್ದಾರೆ.

ಇದನ್ನೂ ನೋಡಿ: ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಮೂಡಬಿದ್ರೆ ಇನ್ಸ್‌ಪೆಕ್ಟರ್?: ಸಂತ್ರಸ್ತೆ ಗಂಭೀರ ಆರೋಪ

ಗೃಹ ಸಚಿವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಪತ್ರ

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಮಹಿಳೆಯರಿಗೆ ಕಿರುಕುಳ ಆರೋಪ ಸಂಬಂಧ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವರಿಗೆ ಪತ್ರ ಬರೆದಿದ್ದು, ಸಂದೇಶ್ ಅವರನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ. ಇದೊಂದು ಗಂಭೀರ ಪ್ರಕರಣ. ಈ ಪ್ರಕರಣದಿಂದ ಇಲಾಖೆಯ ಘನತೆಗೆ ಚ್ಯುತಿ ಬಂದಿದೆ. ಸಂದೇಶ್ ವಿರುದ್ದ ಇಲಾಖಾ ತನಿಖೆ‌ ನಡೆಸಿ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಚ್ಚರಿ ಮೂಡಿಸಿದ ಪೊಲೀಸ್ ಅಧಿಕಾರಿಗಳ ನಡೆ

ಈಗಾಗಲೇ ಸಂತ್ರಸ್ತೆ ಮಹಿಳೆ ಎಸಿಪಿ ಶ್ರೀಕಾಂತ್ ಕೃಪಾಕಟಾಕ್ಷ ಇನ್ಸ್​ಪೆಕ್ಟರ್​​ ಸಂದೇಶ್ ಮೇಲಿದೆ ಎಂದು ಬಹಿರಂಗವಾಗಿಯೇ ಆರೋಪ ಮಾಡಿದ್ದಾರೆ. ಆದರೂ ಸಹ ಈ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಎಸಿಪಿ ಶ್ರೀಕಾಂತ್‌ಗೆ ವಹಿಸಲಾಗಿದ್ದು, ಪೊಲೀಸ್ ಅಧಿಕಾರಿಗಳ ನಡೆ ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಮತ್ತಷ್ಟು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.

ಒಟ್ಟಿನಲ್ಲಿ ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಎದುರಿಸುತ್ತಿರುವ ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದು, ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಹೋಗಲಿದೆ ಎನ್ನುವುದು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿದ್ದು, ಆರೋಪಿಗಳ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ (ಎ3) ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು.

ಬಳಿಕ ನ್ಯಾಯಾಲವು ವಿಚಾರಣೆ ಮುಂದೂಡಿತ್ತು. ಪವನ್ ಪರ ವಕೀಲರ ಅರ್ಜಿ ಕುರಿತು ಆದೇಶ ನೀಡಿರುವ ನ್ಯಾಯಾಲಯವು, ಪವನ್ ಪರ ವಕೀಲರಿಗೆ ದಂಡ ವಿಧಿಸಿದೆ. ಆರೋಪಿಗಳ ಮೊಬೈಲ್ ಗಳನ್ನು ವಶಕ್ಕೆ ಪಡೆಯುವಾಗ ಪೊಲೀಸರು ಫೋಟೋ ತೆಗೆದಿದ್ದರು. ಆ ಫೋಟೊನಲ್ಲಿರುವ ಟೈಲ್ಸ್​​ನ ಬಣ್ಣವನ್ನು ಉಲ್ಲೇಖಿಸಿ, ತನಿಖಾಧಿಕಾರಿಗಳ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ, ಸಾಕ್ಷ್ಯ ತಿದ್ದಿದ ಆರೋಪಗಳನ್ನು ಪವನ್ ಪರ ವಕೀಲರು ಮಾಡಿದ್ದರು. ಆದರೆ ನ್ಯಾಯಾಲವು ಅರ್ಜಿಯನ್ನು ತಿರಸ್ಕರಿಸಿದ್ದು ಮಾತ್ರವೇ ಅಲ್ಲದೆ, ನ್ಯಾಯಾಲಯದ ಸಮಯ ಹಾಳು ಮಾಡಿದ್ದಕ್ಕೆ ವಕೀಲರಿಗೆ ಐದು ಸಾವಿರ ರೂಪಾಯಿ ದಂಡ ಸಹ ಹೇರಿದೆ. ಈ ಹಣವನ್ನು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಲು ಸೂಚನೆ ನೀಡಿದೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆ ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು

ಕುಟುಂಬ ಸದಸ್ಯರ ಭೇಟಿ ಮಾಡಲು ಕೋರಿ ಆರೋಪಿ ದರ್ಶನ್ ಅರ್ಜಿ ಸಲ್ಲಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. ಕುಟುಂಬ ಸದಸ್ಯರು, ಸ್ನೇಹಿತರ ಭೇಟಿಗೆ ಕೋರ್ಟ್ ಅನುಮತಿ ನೀಡಿದೆ. ಜೈಲು ಕೈಪಿಡಿಗನುಗುಣವಾಗಿ ಭೇಟಿಗೆ ಅವಕಾಶ ನೀಡಲು ನ್ಯಾಯಾಲಯವು ಆದೇಶ ನೀಡಿದೆ. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ನ್ಯಾಯಾಲಯವು ನಿರ್ದೇಶನವನ್ನು ನೀಡಿದೆ. ದರ್ಶನ್ ಸೆಲೆಬ್ರಿಟಿ ಎಂಬ ಕಾರಣಕ್ಕೆ ಆರೋಪಿಯ ಭೇಟಿಯ ಕುರಿತು ಕೆಲವು ನಿಯಮಗಳನ್ನು ಜೈಲು ಅಧಿಕಾರಿಗಳು ಹೇರಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ನಡೆದು ಎರಡು ವರ್ಷವಾಗುತ್ತಾ ಬಂದಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳು ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ದರ್ಶನ್, ಜೈಲು ಸೇರಿ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಸುಪ್ರೀಂಕೋರ್ಟ್ ಮತ್ತೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಪರಪ್ಪನ ಅಗ್ರಹಾರ ಸೇರಿದಂತೆ ಇತರೆ ಕೆಲವು ಜೈಲುಗಳಲ್ಲಿ ಇದ್ದಾರೆ. ದರ್ಶನ್ ಪರ ವಕೀಲರು ಮತ್ತೆ ಜಾಮೀನಿಗೆ ಅರ್ಜಿ ಹಾಕಿಲ್ಲ ಆದರೆ ವಿಚಾರಣೆಯನ್ನು ಬೇಗನೆ ನಡೆಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದ್ದಾರೆ. ಆದರೆ ಎಸ್​​ಪಿಪಿ ಅವರು ಸತತ ವಿಚಾರಣೆ ಅಥವಾ ತ್ವರಿತ ವಿಚಾರಣೆಗೆ ಒಪ್ಪಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರೈಲ್ವೆ ಇಲಾಖೆಯಿಂದ ಮತ್ತೊಮ್ಮೆ ಕನ್ನಡಕ್ಕೆ ಮಲತಾಯಿ ಧೋರಣೆ: ಸಿಡಿದೆದ್ದ ಕರವೇ

ಹುಬ್ಬಳ್ಳಿ, ಮಾರ್ಚ್​​ 17: ರೈಲ್ವೆ ಪರೀಕ್ಷೆಗಳಲ್ಲಿ (Railway Exam) ಮೇಲಿಂದ ಮೇಲೆ ಕನ್ನಡಿಗರಿಗೆ ಅನ್ಯಾಯವಾಗುತ್ತಲೇ ಇದೆ. ಈ ಹಿಂದೆ ಅನೇಕ ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡುವಂತೆ ಹೋರಾಟ ಮಾಡಿ ಅವಕಾಶ ಪಡೆಯಲಾಗಿತ್ತು. ಇದೀಗ ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆಯಲ್ಲಿ ಕೂಡ ಕನ್ನಡಕ್ಕೆ ಮಲತಾಯಿ ಧೋರಣೆ ಮಾಡಲಾಗಿದೆ. ಕೇವಲ ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಇದನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಂಘಟನೆ ರೈಲ್ವೆ ನೇಮಕಾತಿ ಕಚೇರಿಗೆ ಮುತ್ತಿಗೆ ಹಾಕಿತ್ತು. ಹೋರಾಟಕ್ಕೆ ಮಣಿದ ಇಲಾಖೆ, ಪರೀಕ್ಷೆಯನ್ನು ಮುಂದೂಡಿದೆ.

ರೈಲ್ವೆ ಇಲಾಖೆ ಕನ್ನಡಿಗರನ್ನು ತಾತ್ಸಾರದಿಂದ ನೋಡುತ್ತಿರುವು ಮುಂದುವರಿಸಿದೆ. ಈ ಹಿಂದೆ ನಡೆದ ಅನೇಕ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್​​ನಲ್ಲಿ ನಡೆಸಿ ಕನ್ನಡಿಗರ ಕೆಂಗಣ್ಣಿಗೆ ಇಲಾಖೆ ಗುರಿಯಾಗಿತ್ತು. ಹೀಗಾಗಿ ರೈಲ್ವೆ ಇಲಾಖೆ ವಿರುದ್ಧ ಅನೇಕ ಹೋರಾಟಗಳು ನಡೆದಿದ್ದವು. ಹೋರಾಟಕ್ಕೆ ಮಣಿದು ವಿವಿಧ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಹುಬ್ಬಳ್ಳಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ನೈರುತ್ಯ ರೈಲ್ವೆ ವಿಭಾಗದಲ್ಲಿ ಈಗಾಗಲೇ ಕೆಲಸ ಮಾಡ್ತಿರುವ ಗ್ರೂಪ್ ಡಿ ಮತ್ತು ಸಿ ದರ್ಜೆಯ ನೌಕರರಿಗೆ ಮುಂಬಡ್ತಿ ನೀಡಲು ಇಲಾಖಾವಾರು ಪರೀಕ್ಷೆಗಳನ್ನು ರೈಲ್ವೆ ನೇಮಕಾತಿ ಕೋಶ ಇಂದು ನಿಗದಿ ಮಾಡಿತ್ತು.

ಇದನ್ನೂ ಓದಿ: ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ

ಹುಬ್ಬಳ್ಳಿಯ ರೈಲ್ವೆ ನೇಮಕಾತಿ ಕೋಶದ ಕಚೇರಿಯಲ್ಲಿ ಕಂಪ್ಯೂಟರ್ ಮೂಲಕ ಪರೀಕ್ಷೆಗೆ ತಯಾರಿ ನಡೆದಿತ್ತು. ಅನೇಕರು ಪರೀಕ್ಷಾ ಕೇಂದ್ರಕ್ಕೆ ಕೂಡ ಆಗಮಿಸಿದ್ದರು. ಆದರೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿರಲಿಲ್ಲ. ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಇಂದು ಹುಬ್ಬಳ್ಳಿಯಲ್ಲಿರುವ ರೈಲ್ವೆ ನೇಮಕಾತಿ ಕೋಶದ ಕಚೇರಿಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದರು.

ರೈಲ್ವೆ ಇಲಾಖೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಪರೀಕ್ಷೆ ನಡೆಸಲು ಅವಕಾಶ ನೀಡಲ್ಲ. ಪದೋನ್ನತಿ ಪರೀಕ್ಷೆಯನ್ನು ಮುಂದೂಡಬೇಕು. ಅದನ್ನು ಕನ್ನಡದಲ್ಲಿಯೇ ನಡೆಸಬೇಕು ಅಂತ ಕರವೇ ಹೋರಾಟಗಾರ ಹನುಮಂತಪ್ಪ ಅಬ್ಬಿಗೇರಿ ಆಗ್ರಹಿಸಿದರು.

ಪರೀಕ್ಷೆ ಮಂದೂಡಿಕೆ

ಬೇರೆ ಬೇರೆ ಕಡೆಗಳಿಂದ ಬಂದಿದ್ದ ನೂರಾರು ಅಭ್ಯರ್ಥಿಗಳ ಪೈಕಿ ಕೆಲವರು ಪರೀಕ್ಷಾ ಕೇಂದ್ರದೊಳಗೆ ಹೋದರೆ ಕೆಲವರು ಪರೀಕ್ಷಾ ಕೇಂದ್ರದ ಹೊರಗೆ ನಿಂತಿದ್ದರು. ಕೆಲಹೊತ್ತು ಪರೀಕ್ಷಾ ಕೇಂದ್ರದ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಆರ್​ಪಿಎಫ್ ಪೊಲೀಸರ ಮತ್ತು ನಗರದ ವಿವಿಧ ಠಾಣೆ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಕಚೇರಿಯ ಪ್ರವೇಶ ದ್ವಾರದ ಮುಂದೆಯೇ ಹೋರಾಟ ಮಾಡುತ್ತಿದ್ದ ಕರವೇ ಕಾರ್ಯಕರ್ತರು, ತಮ್ಮ ಪಟ್ಟು ಸಡಿಲಿಸದೇ ಇದ್ದಿದ್ದರಿಂದ, ನೇಮಕಾತಿ ಕೋಶದ ಅಧಿಕಾರಿಗಳು ಮೇಲಾಧಿಕಾರಿಗಳ ಜೊತೆ ಮಾತನಾಡಿ, ಪರೀಕ್ಷೆಯನ್ನು ಮಂದೂಡಿಕೆ ಮಾಡಿರುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಅಭ್ಯರ್ಥಿಗಳನ್ನು ಮರಳಿ ಕಳುಹಿಸಿದರು. ಇಂದಿನ ಪರೀಕ್ಷೆ ಮುಂದೂಡಿದ್ದೇವೆ ಅಂತ ಅಭ್ಯರ್ಥಿಗಳಿಗೆ ಕೂಡ ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲಿ ರೆಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ: ರೊಚ್ಚಿಗೆದ್ದ ಕನ್ನಡಪರ ಹೋರಾಟಗಾರರು

ಸದ್ಯ ರೈಲ್ವೆ ಇಲಾಖೆ, ಪದೋನ್ನತಿ ಪರೀಕ್ಷೆಯನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ತಿಳಿಸೋದಾಗಿ ಅಭ್ಯರ್ಥಿಗಳಿಗೆ ಹೇಳಿದೆ. ಆದರೆ ಮುಂದೂಡಿಕೆ ಆಗಿರುವ ಪರೀಕ್ಷೆಯನ್ನು ಕನ್ನಡದ ಅಭ್ಯರ್ಥಿಗಳಿಗೆ ಕನ್ನಡದಲ್ಲಿಯೇ ಬರೆಯಲು ತೀರ್ಮಾನವನ್ನು ಆದಷ್ಟು ಬೇಗನೆ ಮೇಲಾಧಿಕಾರಿಗಳು ಕೈಗೊಳ್ಳಬೇಕಿದೆ. ಜೊತೆಗೆ ಮುಂದೆ ಈ ರೀತಿಯ ಭಾಷಾ ತಾರತಮ್ಯವಾಗದಂತೆ ರೈಲ್ವೆ ಇಲಾಖೆ ಕಟ್ಟೆಚ್ಚರ ವಹಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಾಗಲಕೋಟೆ ಬೈ ಎಲೆಕ್ಷನ್: ಕಾಂಗ್ರೆಸ್​​ ಟಿಕೆಟ್​​ಗಾಗಿ ಹೆಚ್​​.ವೈ. ಮೇಟಿ ಮಕ್ಕಳ ನಡುವೆಯೇ ಪೈಪೋಟಿ

ಬಾಗಲಕೋಟೆ, ಮಾರ್ಚ್​ 17: ಹೆಚ್​.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ ಎಂದು ಆಯೋಗ ಘೋಷಿಸಿದ ಬೆನ್ನಲ್ಲೇ ಟಿಕೆಟ್​​ ಆಕಾಂಕ್ಷಿಗಳ ನಡುವಿನ ಪೈಪೋಟಿ ಜೋರಾಗಿದೆ. ಕಾಂಗ್ರೆಸ್​​ ಮತ್ತು ಬಿಜೆಪಿ ಸೇರಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್​​ಗಾಗಿ ಲಾಬಿಯೂ ಜೋರಾಗಿದೆ. ಕಾಂಗ್ರೆಸ್​​ನಿಂದ ಸ್ಫರ್ಧೆಗಾಗಿ ದಿವಂಗತ ಶಾಸಕ ಮೇಟಿ ಕುಟುಂಬದಲ್ಲಿಯೇ ಗುದ್ದಾಟ ನಡೆಯುತ್ತಿದ್ದರೆ, ಇತ್ತ ಬಿಜೆಪಿಯಲ್ಲಿ ವಿವಿಧ ಸಮುದಾಯಗಳ ಮುಖಂಡರು ನಮಗೊಂದು ಅವಕಾಶ ಕೊಡಿ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ.

ಕಾಂಗ್ರೆಸ್​​ ಟಿಕೆಟ್​​ಗಾಗಿ ಮೇಟಿ ಮಗಳ ಪಟ್ಟು

ತಂದೆಯ ನಿಧನದ ಹಿನ್ನೆಲೆ ತೆರವಾಗಿರುವ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿರುವ ಕಾರಣ ಕಾಂಗ್ರೆಸ್​​ ಟಿಕೆಟ್​​ಗಾಗಿ ಹೆಚ್​. ವೈ. ಮೇಟಿ ಅವರ ಕಿರಿಯ ಮಗಳು ಮಹಾದೇವಿ ಮೇಟಿ ಪಟ್ಟು ಹಿಡಿದ್ದಾರೆ. ಈ ನಡುವೆ ಕುಟುಂಬದ ನಡುವೆಯೇ ನಡೆಯುತ್ತಿರುವ ಟಿಕೆಟ್ ಫೈಟ್ ವಿಚಾರವಾಗಿ ಮಾತುಕತೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಮೇಟಿ‌ ಮಕ್ಕಳನ್ನು ಕರೆದಿದ್ದಾರೆ.  ಮಲ್ಲಿಕಾರ್ಜುನ ಮೇಟಿ, ಬಾಯಕ್ಕ ಮೇಟಿ, ಉಮೇಶ್ ಮೇಟಿ ಸೇರಿದಂತೆ ಮಹಾದೇವಿ ಮೇಟಿ ಮುಖ್ಯಮಂತ್ರಿಗಳನ್ನು ನಾಳೆ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಈ ನಡುವೆಯೂ ಪ್ರತಿಕ್ರಿಯಿಸಿರುವ ಮಹಾದೇವಿ ಮೇಟಿ, ನನಗೆ ಟಿಕೆಟ್​​ ಕೊಟ್ಟರೆ ಕಾಂಗ್ರೆಸ್​​ನಿಂದ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಬಂಡಾಯ ಸ್ಪರ್ಧೆ ಖಚಿತವಾಗಿದ್ದು, ಮಾರ್ಚ್​​ 20ರಂದು ನಾಮಪತ್ರ ಸಲ್ಲಿಸೋದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು; ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಸಿಎಂ ಹಾಗೂ ಮೇಟಿ ಅವರ ಆಪ್ತ ಹೊಳೆಬಸು ಶೆಟ್ಟರ್ ಹೆಸರು ಹೇಳದೇ, ನಮ್ಮ ತಂದೆಯವರ ಆಪ್ತನಿಂದ ಕ್ಷೇತ್ರ ಹಾಳಾಗಿದೆ. ಆ ಆಪ್ತನನ್ನು ಮಟ್ಟ ಹಾಕಲು ನನ್ನಿಂದ ಸಾಧ್ಯ. ಆತ ನನ್ನ ಹೆಸರು ಕಡೆಗಣಿಸಿ ಮೇಟಿಯವರಿಗೆ ಮೂರು ಜನ ಮಕ್ಕಳು ಎಂದು ಸಿಎಂ ಸಿದ್ಧರಾಮಯ್ಯನವರಿಗೆ ಮಾಹಿತಿ ನೀಡಿದ್ದಾನೆ. ಕ್ಷೇತ್ರದಲ್ಲಿ ಆತನ ‌ಹಸ್ತಕ್ಷೇಪ ಅತಿಯಾಗಿದ್ದು, ಆ ಕಾರಣ ನಾನು ಅಖಾಡಕ್ಕೆ ಇಳಿಯುತ್ತಿದ್ದೇನೆ. ಮೊನ್ನೆ ಸಿಎಂ ಮತ್ತು ಡಿಸಿಎಂ ಬಾಗಲಕೋಟೆಗೆ ಬಂದಾಗಲೂ ಅವರ ಜೊತೆ ಮಾತಾಡಿದ್ದೇನೆ. ನಾನು ಆಕಾಂಕ್ಷಿ ಎಂಬ ವಿಚಾರ ಅವರಿಗೆ ಅದಾಗಲೇ ತಿಳಿಸಿರೋದಾಗಿ ಮಹಾದೇವಿ ಮೇಟಿ ಹೇಳಿದ್ದಾರೆ.

ಬಿಜೆಪಿ ಟಿಕೆಟ್​​ಗೆ ಡಾ. ಶೇಖರ್ ಮಾನೆ ಡಿಮ್ಯಾಂಡ್​

ಇತ್ತ ಬಿಜೆಪಿಯಲ್ಲೂ ಟಿಕೆಟ್​​ಗಾಗಿ ಪೈಪೋಟಿ ಜೋರಾಗಿದ್ದು, ಮರಾಠಾ ಸಮಾಜದ ರಾಜ್ಯ ಉಪಾಧ್ಯಕ್ಷ ಡಾ. ಶೇಖರ್ ಮಾನೆ ತಾನು ಕೂಡ ಆಕಾಂಕ್ಷಿ ಎಂದು ಘೋಷಿಸಿದ್ದಾರೆ. ಮರಾಠಾ ಸಮಾಜ ಬಿಜೆಪಿ ಪರ ಸದಾ ನಿಂತಿದೆ. ಹೀಗಾಗಿ ಈ ಸಮಾಜಕ್ಕೆ ಪ್ರಾತಿನಿಧ್ಯ ನೀಡಿ ತನಗೆ ಟಿಕೆಟ್ ಕೊಡಬೇಕು. ಈ ಬಗ್ಗೆ ಹೈಕಮಾಂಡ್​​ ಮಟ್ಟದಲ್ಲಿ ಮಾತನಾಡಿದ್ದೇನೆ. ಒಂದೊಮ್ಮೆ ತನಗೆ ಅವಕಾಶ ಸಿಗದಿದ್ದರೆ ಪಕ್ಷ ನಿರ್ಧರಿಸುವ ಅಭ್ಯರ್ಥಿ ಪರ ಪ್ರಚಾರ ಮಾಡಿ, ಗೆಲುವಿಗೆ ಶ್ರಮಿಸೋದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕತ್ರಿನಾ ಕೈಫ್ ಜತೆಗಿನ ಸಂಸಾರ ವಿಕ್ಕಿ ಕೌಶಲ್​ಗೆ ಬೋರ್ ಆಯ್ತಾ? ವಿಡಿಯೋ ವೈರಲ್

ಬಾಲಿವುಡ್‌ನ ಅತ್ಯಂತ ಪ್ರೀತಿಪಾತ್ರ ಜೋಡಿಗಳಲ್ಲಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ (Katrina Kaif) ಕೂಡ ಇದ್ದಾರೆ. ಪರಸ್ಪರರ ಮೇಲಿರುವ ಗೌರವ ಮತ್ತು ಪ್ರೀತಿಯಿಂದಲೇ ಈ ಜೋಡಿ ಅಭಿಮಾನಿಗಳ ಮನ ಗೆದ್ದಿದೆ. ಆದರೆ, ಇತ್ತೀಚೆಗೆ ವಿಕ್ಕಿ ಕೌಶಲ್ ಅವರು ಮದುವೆ ಸಮಾರಂಭವೊಂದರಲ್ಲಿ ಮಾಡಿದ ಹಾಸ್ಯವು ವಿವಾದಕ್ಕೆ ಈಡಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಇಷ್ಟು ದಿನ ಉತ್ತಮ ನಡವಳಿಕೆಗಳ ಕಾರಣದಿಂದ ಮೆಚ್ಚುಗೆ ಪಡೆಯುತ್ತಿದ್ದ ವಿಕ್ಕಿ ಕೌಶಲ್ (Vicky Kaushal) ಅವರು ಈಗ ವಿವಾದಾತ್ಮಕ ಜೋಕ್ ಮಾಡಿ ಜನರಿಂದ ಟೀಕೆ ಎದುರಿಸುವಂತಾಗಿದೆ.

ಇತ್ತೀಚೆಗೆ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ವಿಕ್ಕಿ ಕೌಶಲ್ ಅವರು ವರನ ತಂದೆಯ ಬಳಿ ಮಾತನಾಡುತ್ತಾ, ವರನಿಗೆ ‘How’s the josh?’ (ಜೋಶ್ ಹೇಗಿದೆ?) ಎಂದು ಕೇಳುವಂತೆ ತಿಳಿಸುತ್ತಾರೆ. ಇದಕ್ಕೆ ನೆರೆದಿದ್ದವರು ‘High, sir’ ಎಂದು ಕೂಗಿದಾಗ, ವಿಕ್ಕಿ ಕೌಶಲ್ ಅವರು ಜೋಕ್ ಮಾಡಿದರು. ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣ ಆಗಿದೆ.

‘ಮದುವೆ ಆಗದೇ ಇರುವವರಿಗೆ ಯಾವಾಗಲೂ ಹೆಚ್ಚಿನ ಜೋಶ್ ಇರುತ್ತದೆ ಎಂಬುದನ್ನು ನಾನು ಗಮನಿಸಿದ್ದೇನೆ. ಆದರೆ ನಮ್ಮಂತಹ ವಿವಾಹಿತರಲ್ಲಿ, ಆ ಜೋಶ್ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಹೋಗುತ್ತದೆ. ಆದರೆ ಚಿಂತಿಸಬೇಡಿ, ಕೇವಲ ನಾಲ್ಕು ದಿನಗಳಲ್ಲಿ ಜೋಶ್ ಮಾಯವಾಗುವುದಿಲ್ಲ’ ಎಂದು ವಿಕ್ಕಿ ತಮಾಷೆ ಮಾಡಿದ್ದರು. ಅವರ ಈ ಮಾತಿಗೆ ವಿರೋಧ ವ್ಯಕ್ತವಾಗಿದೆ.

Vicky is turning into the wife jokes guy
by
u/yours_truly_Davina in
BollyBlindsNGossip

ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಹರಿದಾಡುತ್ತಿದೆ. ಹೆಂಡತಿ ಅಥವಾ ಮದುವೆ ಬಗ್ಗೆ ವಿಕ್ಕಿ ಕೌಶಲ್ ಅವರು ಈ ರೀತಿ ಜೋಕ್ ಮಾಡಿದ್ದು ಅನೇಕರಿಗೆ ಸರಿ ಎನಿಸಿಲ್ಲ. ‘2026ರಲ್ಲೂ ನಾವು ಇಂತಹ ಸ್ತ್ರೀದ್ವೇಷದ ಮದುವೆ ಜೋಕ್‌ಗಳನ್ನು ಮಾಡುತ್ತಿದ್ದೇವಾ? ಇವುಗಳನ್ನು 2016ರಲ್ಲೇ ಬಿಡಬೇಕಿತ್ತು’ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ವಿಕ್ಕಿ ಕೌಶಲ್ ಜೊತೆ ರುಕ್ಮಿಣಿ ವಸಂತ್ ಬರ್ತ್​ಡೇ ಸಂಭ್ರಮ

‘ಪುರುಷರು ಸಾರ್ವಜನಿಕವಾಗಿ ತಮ್ಮ ವೈವಾಹಿಕ ಜೀವನವನ್ನು ಲೇವಡಿ ಮಾಡುವುದು ನನಗೆ ಇಷ್ಟವಿಲ್ಲ. ಇದು ಪರೋಕ್ಷವಾಗಿ ಹೆಂಡತಿಗೆ ಮಾಡುವ ಅವಮಾನ’ ಎಂದು ಇನ್ನೊಬ್ಬರು ಕಮೆಂಟ್ ಹಾಕಿದ್ದಾರೆ. ‘ಜೋಶ್ ಕಡಿಮೆ ಆಗಿದೆ ಎಂದರೆ ಕತ್ರಿನಾ ಕೈಫ್ ಜೊತೆಗಿನ ಸಂಸಾರ ವಿಕ್ಕಿ ಕೌಶಲ್ ಅವರಿಗೆ ಬೇಸರ ಆಗಿದೆಯಾ’ ಎಂದು ಕೂಡ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ವಿಕ್ಕಿ ಏನು ಉತ್ತರ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

ಬೆಂಗಳೂರು, ಮಾ.17: “ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ” ಎಂಬ ಮಾತನ್ನು ಕೇವಲ ಮಾತಾಗಿ ಉಳಿಸದೆ, ಪ್ರಾಯೋಗಿಕವಾಗಿ ಅಮೂಲ್ಯ ಜೀವವೊಂದನ್ನು ಉಳಿಸುವ ಮೂಲಕ ಯಲಹಂಕ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಮೂರ್ತಿ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈಶಾನ್ಯ ವಿಭಾಗದ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಮೇಲೆ ವ್ಯಕ್ತಿಯೊಬ್ಬರು ಮಲಗಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆ ಎಂಬ ತುರ್ತು ಕರೆ ಪೊಲೀಸ್ ನಿಯಂತ್ರಣ ಕೊಠಡಿಗೆ (Namma 112) ಬಂದಿತ್ತು. ಈ ಮಾಹಿತಿಯನ್ನು ಸ್ವೀಕರಿಸಿದ ಕೂಡಲೇ ಗಸ್ತು ವಾಹನದಲ್ಲಿದ್ದ ಶ್ರೀ ಶ್ರೀಧರ್ ಮೂರ್ತಿ (HC-13669) ಅವರು ತಕ್ಷಣ ಸ್ಥಳಕ್ಕೆ ಧಾವಿಸಿದರು. ರೈಲು ಬರುವ ಮುನ್ನವೇ ಹಳಿಯ ಬಳಿಗೆ ತಲುಪಿದ ಶ್ರೀಧರ್ ಮೂರ್ತಿ ವ್ಯಕ್ತಿಯನ್ನು ಸುರಕ್ಷಿತವಾಗಿ ಅಲ್ಲಿಂದ ಪಾರು ಮಾಡಿದರು. ಕೇವಲ ರಕ್ಷಣೆ ಮಾಡುವುದಕ್ಕೆ ಸೀಮಿತವಾಗದ ಅವರು, ಆ ವ್ಯಕ್ತಿಯೊಂದಿಗೆ ಸಮಾಲೋಚನೆ ನಡೆಸಿದರು. ಜೀವನದಲ್ಲಿ ಎದುರಾಗುವ ಸಂಕಷ್ಟಗಳಿಗೆ ಆತ್ಮಹತ್ಯೆ ಅಂತಿಮ ನಿರ್ಧಾರವಲ್ಲ ಎಂದು ಮನವರಿಕೆ ಮಾಡಿಕೊಟ್ಟು, ಆತನಲ್ಲಿ ಧೈರ್ಯ ತುಂಬಿದರು.ಬಳಿಕ ವ್ಯಕ್ತಿಯ ಕುಟುಂಬದವರನ್ನು ಸಂಪರ್ಕಿಸಿ, ನಡೆದ ಘಟನೆಯ ಬಗ್ಗೆ ವಿವರಿಸಿ ಸುರಕ್ಷಿತವಾಗಿ ಕುಟುಂಬಸ್ಥರ ಒಪ್ಪಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಳಪತಿಯಿಂದ ಬಿಜೆಪಿ ದೂರ ಉಳಿದಿದ್ದು ಯಾಕೆ? ರಜನೀ ವಿರುದ್ಧ ಟಿವಿಕೆ ಆಡಿದ ಆ ಒಂದು ಮಾತು ಕಾರಣವಾ?

ಚೆನ್ನೈ, ಮಾರ್ಚ್ 17: ಕಾಲಿವುಡ್ ಸ್ಟಾರ್ ದಳಪತಿ ವಿಜಯ್ ಕಟ್ಟಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಜೊತೆ ಎನ್​ಡಿಎ ಮೈತ್ರಿ ಮಾಡಿಕೊಳ್ಳಬಹುದು ಎಂದು ಹಲವು ದಿನಗಳ ಕಾಲ ಹರಿದಾಡಿದ್ದ ಸುದ್ದಿ, ಹಾಗೆಯೇ, ತಣ್ಣಗಾಗಿ ಹೋಗಿದೆ. ಯಾಕೆ ಈ ಮೈತ್ರಿ ಸಾಧ್ಯತೆಯ ಸುದ್ದಿ ನಿಂತು ಹೋಯಿತು ಎನ್ನುವುದು ಕುತೂಹಲದ ಸಂಗತಿ ಎನಿಸಿದೆ. ವರದಿಗಳ ಪ್ರಕಾರ, ಟಿವಿಕೆ ಪಕ್ಷದ ಮುಖಂಡರೊಬ್ಬರು ಸೂಪರ್​ಸ್ಟಾರ್ ರಜನೀಕಾಂತ್ ವಿಚಾರದಲ್ಲಿ ಆಡಿದ ಆ ಒಂದು ಮಾತು ಎನ್​ಡಿಎ ಪಾಳಯಕ್ಕೆ ಅಸಮಾಧಾನ ತಂದಿತು ಎನ್ನಲಾಗಿದೆ.

ರಜನೀಕಾಂತ್ ಬಗ್ಗೆ ಟಿವಿಕೆ ಮುಖಂಡ ಹೇಳಿದ್ದಿದು…

ಕೆಲ ದಿನಗಳ ಹಿಂದೆ ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆಧವ್ ಅರ್ಜುನ ಅವರು ರಜನೀಕಾಂತ್ ರಾಜಕೀಯ ಪ್ರಯತ್ನವನ್ನು ಲೇವಡಿ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಡಿಎಂಕೆ ಬಲಿಷ್ಠರಿಂದ ಬೆದರಿಕೆ ಬಂದಿದ್ದರಿಂದ ರಜನೀಕಾಂತ್ ಅವರು ರಾಜಕೀಯ ಪ್ರವೇಶದ ನಿರ್ಧಾರದಿಂದ ಹಿಂದಕ್ಕೆ ಸರಿದಿದ್ದರು ಎಂದು ಟಿವಿಕೆ ಮುಖಂಡ ಹೇಳಿದ್ದರು. ಡಿಎಂಕೆಯ ಬೆದರಿಕೆಗೆ ರಜನೀಕಾಂತ್ ಬಗ್ಗಿದರೂ, ತಮ್ಮ ನಾಯಕ ದಳಪತಿ ವಿಜಯ್ ಬಗ್ಗಿಲ್ಲ ಎಂಬಂತೆ ಆ ಹೇಳಿಕೆ ಬಿಂಬಿತವಾಗಿತ್ತು.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರ, ಒಡಿಶಾದಲ್ಲಿ ಎನ್​ಡಿಎಗೆ ಭರ್ಜರಿ ಗೆಲುವು; ಕಾಂಗ್ರೆಸ್​ಗೆ ಮುಖಭಂಗ

ದಳಪತಿ ವಿಜಯ್ ಅವರನ್ನು ಹೊಗಳುವ ಭರದಲ್ಲಿ ರಜನೀಕಾಂತ್​ಗೆ ಅವಹೇಳನ ಮಾಡಲಾಗಿದೆ ಎಂಬುದು ಎನ್​ಡಿಎ ಮೈತ್ರಿಕೂಟದ ಬಿಜೆಪಿ ಹಾಗೂ ಎಐಎಡಿಎಂ ಪಕ್ಷಗಳ ಮುಖಂಡರ ಅಸಮಾಧಾನ. ‘ರಜನೀಕಾಂತ್ ಬಹಳ ಗೌರವ ಪಡೆದಿರುವ ವ್ಯಕ್ತಿ. ಅವರ ಘನತೆಗೆ ಕುಂದು ತರುವ ರೀತಿಯಲ್ಲಿ ಮಾತನಾಡಿರುವುದನ್ನು ಸ್ವೀಕರಿಸಲು ಆಗುವುದಿಲ್ಲ. ರಾಜಕೀಯ ಪ್ರವೇಶಿಸುವುದು ಒಬ್ಬ ವ್ಯಕ್ತಿಯ ಹಕ್ಕು. ರಾಜಕೀಯ ಪ್ರವೇಶ ಮಾಡದಿರುವುದೂ ಕೂಡ ಅವರ ಹಕ್ಕೇ. ಅವರು ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ತಿಳಿಸಿದ್ದಾರೆ. ಅದನ್ನು ಗೌರವಿಸಬೇಕು’ ಎಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ಹೇಳಿದ್ದಾರೆ.

ಬಿಜೆಪಿ ನಾಯಕ ಕೆ ಅಣ್ಣಾಮಲೈ ಕೂಡ ಟಿವಿಕೆ ಮುಖಂಡನ ಹೇಳಿಕೆಯನ್ನು ಖಂಡಿಸಿದ್ದಾರೆ. ಒಬ್ಬ ಸೂಪರ್​​ಸ್ಟಾರ್ 50ಕ್ಕೂ ಹೆಚ್ಚು ವರ್ಷ ತನ್ನ ಸ್ಟಾರ್ ಪಟ್ಟವನ್ನು ಉಳಿಸಿಕೊಳ್ಳುತ್ತಿರುವುದು ಆತನ ಮಾನಸಿಕ ಸ್ಥೈರ್ಯವನ್ನು ತೋರಿಸುತ್ತದೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಿಂದ ಗುಜರಾತ್​ಗೆ ಬಂದ ಭಾರತದ ಎರಡನೇ ಎಲ್​ಪಿಜಿ ಟ್ಯಾಂಕರ್ ನಂದಾದೇವಿ

ರಜನೀಕಾಂತ್ ಅವರು ಕೆಲ ವರ್ಷಗಳ ಹಿಂದೆ ಸಕ್ರಿಯ ರಾಜಕಾರಣ ಪ್ರವೇಶ ಮಾಡಲು ಯೋಚಿಸುತ್ತಿರುವುದಾಗಿ ಹೇಳಿದ್ದರು. ಆದರೆ, ಕೆಲ ದಿನಗಳ ನಂತರ ತಮ್ಮ ನಿರ್ಧಾರವನ್ನು ಕೈಬಿಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಲ್ಲು ತಂದೆ ಸಲೀಂ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಹಾಗೂ ಹಿರಿಯ ಕಥೆ ಬರಹಗಾರ ಸಲೀಮ್ ಖಾನ್ (Salim Khan) ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಮಿದುಳಿನಲ್ಲಿ ಉಂಟಾದ ರಕ್ತಸ್ರಾವದಿಂದ ಅವರು ಆಸ್ಪತ್ರೆ ಸೇರಿದ್ದರು. ಇಂದು ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದ ಅವರ ಅಭಿಮಾನಿಗಳು ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ.

ಸಲೀಮ್ ಖಾನ್ ಅವರಿಗೆ 90 ವರ್ಷ. ಚಿತ್ರರಂಗದಲ್ಲಿ ಸಲೀಮ್-ಜಾವೇದ್ ಜೋಡಿ ಎಂದೇ ಇದು ಫೇಮ್ ಆಗಿತ್ತು. ಶೋಲೆ, ದೀವಾರ್, ‘ಡಾನ್’ ಮೊದಲಾದ ಹಿಂದಿ ಚಿತ್ರಗಳಿಗೆ ಹಾಗೂ ಕನ್ನಡದ ಎರಡು ಸಿನಿಮಾಗಳಿಗೆ ಇವರು ಕಥೆ ಬರೆದಿದ್ದರು. ಫೆಬ್ರವರಿ 17ರಂದು ಲೀಲಾವತಿ ಆಸ್ಪತ್ರೆಗೆ ಇವರು ದಾಖಲಾಗಿದ್ದರು. ಈಗ ಮಾರ್ಚ್ 17ರಂದು ಅವರು ಬಿಡುಗಡೆ ಹೊಂದಿದ್ದಾರೆ ಎಂದು ಹೇಳಲಾಗುತ್ತಾ ಇದೆ.

ಮಿದಿಳಿನ ಭಾಗದಲ್ಲಿ ಉಂಟಾದ ರಕ್ತಸ್ರಾವ ಆತಂಕ ಮೂಡಿಸಿತ್ತು.ಈ ವಯಸ್ಸಿನಲ್ಲಿ ಅವರಿಗೆ ಈ ರೀತಿ ಆಗಿದೆ ಎಂದಾಗ ಸಹಜವಾಗಿಯೇ ಆತಂಕ ಹೆಚ್ಚಿತ್ತು. ಅವರನ್ನು ವೆಂಟಿಲೇಟರ್ ಸಪೋರ್ಟ್​​ನೊಂದಿಗೆ ನೋಡಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ. ಇಂದೇ ಅವರನ್ನು ಮನೆಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

ಸಲೀಂ ಖಾನ್ ಆಸ್ಪತ್ರೆಯಲ್ಲಿ ಇರುವಾಗ ಸಲ್ಮಾನ್ ಖಾನ್, ಅರ್ಬಾಜ್ ಖಾನ್, ಮಲ್ವಿರಾ, ಅರ್ಪಿತಾ, ಅಳಿಯ ಅತುಲ್ ಅಗ್ನಿಹೋತ್ರಿ, ಆಯುಷ್ ಶರ್ಮಾ ಸೇರಿದಂತೆ ಅನೇಕರು ನಿತ್ಯವೂ ಬಂದು ಹೋಗುತ್ತಿದ್ದರು. ವೃತ್ತಿ ಜೀವನದಲ್ಲಿ ಬೆಂಬಲವಾಗಿ ನಿಂತ ಜಾವೇದ್ ಅಖ್ತರ್ ಕೂಡ ಆಗಾಗ ಬಂದು ಹೋಗುತ್ತಿದ್ದರು.

ಇದನ್ನೂ ಓದಿ: ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಲೀಮ್ ಖಾನ್; ಆಸ್ಪತ್ರೆಗೆ ದೌಡಾಯಿಸಿದ ಸಲ್ಮಾನ್ ಖಾನ್

ಸಲೀಮ್ ಖಾನ್ ಅವರು ಜಾವೇದ್ ಜೊತೆ ಸೇರಿ ಅದ್ಭುತ ಕಥೆಗಳನ್ನು ಬರೆಯುತ್ತಿದ್ದರು.70ರ ದಶಕದಲ್ಲಿ ಈ ಜೋಡಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿದೆ ಎಂಬುದು ವಿಶೇಷ.ಸಲೀಮ್ ಖಾನ್ ಅವರಿಗೆ ಕನ್ನಡದ ನಂಟೂ ಇದೆ. 1976ರಲ್ಲಿ ಬಂದ ‘ಪ್ರೇಮದ ಕಾಣಿಕೆ’ ಹಾಗೂ ‘ರಾಜ ನನ್ನ ರಾಜ’ ಸಿನಿಮಾಗಳಿಗೆ ಸಲೀಮ್ ಹಾಗೂ ಜಾವೇದ್ ಅವರೇ ಕಥೆ ನೀಡಿದರು. ಈ ಎರಡೂ ಸಿನಿಮಾಗಳು ಹಿಟ್ ಆದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link