ಕತ್ರಿನಾ ಕೈಫ್ ಜತೆಗಿನ ಸಂಸಾರ ವಿಕ್ಕಿ ಕೌಶಲ್ಗೆ ಬೋರ್ ಆಯ್ತಾ? ವಿಡಿಯೋ ವೈರಲ್
ಬಾಲಿವುಡ್‌ನ ಅತ್ಯಂತ ಪ್ರೀತಿಪಾತ್ರ ಜೋಡಿಗಳಲ್ಲಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ (Katrina Kaif) ಕೂಡ ಇದ್ದಾರೆ. ಪರಸ್ಪರರ ಮೇಲಿರುವ ಗೌರವ ಮತ್ತು ಪ್ರೀತಿಯಿಂದಲೇ ಈ ಜೋಡಿ ಅಭಿಮಾನಿಗಳ ಮನ ಗೆದ್ದಿದೆ. ಆದರೆ, ಇತ್ತೀಚೆಗೆ ವಿಕ್ಕಿ ಕೌಶಲ್ ಅವರು ಮದುವೆ ಸಮಾರಂಭವೊಂದರಲ್ಲಿ ಮಾಡಿದ ಹಾಸ್ಯವು ವಿವಾದಕ್ಕೆ ಈಡಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಇಷ್ಟು ದಿನ ಉತ್ತಮ ನಡವಳಿಕೆಗಳ ಕಾರಣದಿಂದ ಮೆಚ್ಚುಗೆ ಪಡೆಯುತ್ತಿದ್ದ ವಿಕ್ಕಿ ಕೌಶಲ್ (Vicky Kaushal) ಅವರು ಈಗ ವಿವಾದಾತ್ಮಕ ಜೋಕ್ ಮಾಡಿ…