ಬೆಂಗಳೂರು, (ಮಾರ್ಚ್ 17): ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೊಟ್ಟೆ ವ್ಯಾಪಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿವೆ. ಯುದ್ಧದ ಪರಿಣಾಮ, ಗ್ಯಾಸ್ ದರ ಏರಿಕೆ, ಹಾಗೂ ರಂಜಾನ್ ಸಮಯದಲ್ಲಿ ಹೋಟೆಲ್‌ಗಳ ಕಾರ್ಯಾಚರಣೆ ಕಡಿಮೆಯಾಗಿರುವುದು ಮೊಟ್ಟೆ ಮಾರುಕಟ್ಟೆಗೆ ನೇರ ಹೊಡೆತ ನೀಡಿದೆ. ಇದರಿಂದ ಮೊಟ್ಟೆ ಬೇಡಿಕೆ ಕುಸಿತ ಕಂಡಿದ್ದು, ಮೊಟ್ಟೆಯ ದರ ಕುಸಿತವಾಗಿದೆ. ಇದರಿಂದ ವ್ಯಾಪಾರಸ್ಥರು ಆತಂಕದಲ್ಲಿ ಮುಳುಗಿದ್ದಾರೆ. ಇನ್ನು ಈ ಬಗ್ಗೆ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ್ ಅವರು ಟಿವಿ9 ಜೊತೆ ಮಾತನಾಡಿ, ಕೋಳಿ ಮೊಟ್ಟೆ ಬೆಳೆಯ ರೈತರಿಗೆ ಆಗುತ್ತರುವ ಸಮಸ್ಯೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
IPL 2026: ಐಪಿಎಲ್ 2026ರ ಆರಂಭಿಕ ಪಂದ್ಯಗಳಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತವಾಗಿದೆ. ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಅವರು ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.
ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆರಂಭಿಕ ನಾಲ್ಕು ಪಂದ್ಯಗಳಿಗೆ ಹೊಸ ನಾಯಕನನ್ನು ಆಯ್ಕೆ ಮಾಡಲಿದೆ. ಇತ್ತ ನಾಯಕತ್ವದ ರೇಸ್ನಲ್ಲಿ ಯುವ ದಾಂಡಿಗರಿಬ್ಬರು ಮುಂಚೂಣಿಯಲ್ಲಿರುವುದು ವಿಶೇಷ. ಅವರೆಂದರೆ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ.
ಇಶಾನ್ ಕಿಶನ್ ಈ ಹಿಂದೆ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಜಾರ್ಖಂಡ್ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ 2026 ರಲ್ಲಿ ಇಶಾನ್ ಕಿಶನ್ ನಾಯಕತ್ವದಲ್ಲಿ ಜಾರ್ಖಂಡ್ ತಂಡವು ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ. ಅಷ್ಟೇ ಅಲ್ಲದೆ 2016 ರ ಅಂಡರ್-19 ವಿಶ್ವಕಪ್ನಲ್ಲಿ ಭಾರತ ತಂಡವನ್ನು ಫೈನಲ್ವರೆಗೆ ಮುನ್ನಡೆಸಿದ್ದ ಅನುಭವ ಕೂಡ ಇಶಾನ್ ಬೆನ್ನಿಗಿದೆ.
ಇತ್ತ ಅಭಿಷೇಕ್ ಶರ್ಮಾ ಕೂಡ ಈ ಹಿಂದೆ ನಾಯಕನಾಗಿ ಕಾಣಿಸಿಕೊಂಡಿದ್ದರು. 2016 ರಲ್ಲಿ ಅಭಿಷೇಕ್ ಮುಂದಾಳತ್ವದಲ್ಲಿ ಭಾರತ ತಂಡ ಯೂತ್ ಏಷ್ಯಾ ಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇನ್ನು ವಿಜಯ್ ಹಝಾರೆ ಮತ್ತು ಇತರ ದೇಶೀಯ ಪಂದ್ಯಗಳಲ್ಲಿ ಪಂಜಾಬ್ ತಂಡದ ನಾಯಕತ್ವದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.
ಹೀಗಾಗಿ ಇವರಿಬ್ಬರಲ್ಲಿ ಒಬ್ಬರಿಗೆ ಕ್ಯಾಪ್ಟನ್ ಪಟ್ಟ ನೀಡಲು ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಚಿಂತಿಸಿದೆ. ಒಂದು ವೇಳೆ ಇಶಾನ್ ಕಿಶನ್ ಅವರನ್ನು ಹಂಗಾಮಿ ನಾಯಕನನ್ನಾಗಿ ಆಯ್ಕೆ ಮಾಡಿದರೆ, ಅಭಿಷೇಕ್ ಶರ್ಮಾ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಇವರಿಬ್ಬರೂ ನಾಯಕತ್ವದಿಂದ ಹಿಂದೆ ಸರಿದರೆ ಮಾತ್ರ ಟ್ರಾವಿಸ್ ಹೆಡ್ಗೆ ಕ್ಯಾಪ್ಟನ್ ಪಟ್ಟ ಸಿಗಬಹುದು.
ಏಕೆಂದರೆ ಟ್ರಾವಿಸ್ ಹೆಡ್ ಈ ಹಿಂದೆ ಆಸ್ಟ್ರೇಲಿಯಾ ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಉಪನಾಯಕತ್ವದ ಜವಾಬ್ದಾರಿಯನ್ನು ಸಹ ನಿರ್ವಹಿಸಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ನಾಯಕತ್ವದ ರೇಸ್ನಿಂದ ಹಿಂದೆ ಸರಿದರೆ ಮಾತ್ರ ಹೆಡ್ಗೆ ಕ್ಯಾಪ್ಟನ್ ಪಟ್ಟ ನೀಡುವ ಸಾಧ್ಯತೆಯಿದೆ.
ಬೆಂಗಳೂರು/ ಗದಗ, ಮಾರ್ಚ್ 17: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನೇ ವ್ಯಕ್ತಿಯೋರ್ವ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಡೆದಿದೆ. ಯುವತಿ ಜೋಯಾಯಳ ಕತ್ತುಕೊಯ್ದು ಕೊಂದು ಶಬೀಲ್(20) ಪರಾರಿಯಾಗಿದ್ದು, ಬೆಳಗ್ಗೆ 6.30ರ ಸುಮಾರಿಗೆ ಘಟನೆ ನಡೆದಿದೆ. ಆರೋಪಿ ಶಬೀಲ್ ಕುಟುಂಬ ಸದಸ್ಯರಿಂದಲೇ ಪ್ರಕರಣ ಬೆಳಕಿಗೆ ಬಂದಿದ್ದು, ಡಿ.ಜೆ.ಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಶಬೀಲ್ಗಾಗಿ ಶೋಧ ಮುಂದುವರಿದಿದೆ. ಬಾಲಕಿ ಹತ್ಯೆಯಾಗಿರುವ ಬಗ್ಗೆ ಬೆಳಗ್ಗೆ 11 ಗಂಟೆಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಅಮಟೆ, ಹತ್ಯೆಯಾದ ಸ್ಥಳದಲ್ಲಿ ಸೋಕೋ ಟೀಮ್ ಪರಿಶೀಲನೆ ನಡೆಸಿದೆ. ಕೊಲೆಮಾಡಿರುವುದು ಯಾರು ಎಂದು ಈಗಾಗಲೇ ಗೊತ್ತಾಗಿದ್ದು, ಆರೋಪಿ ಶಬೀಲ್ ಬಂಧಿಸಿದ ನಂತರ ಕೊಲೆಗೆ ಕಾರಣ ತಿಳಿಯಲಿದೆ. ಘಟನೆ ನಡೆದ ಸ್ಥಳ ಶಬೀಲ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಈ ಮನೆಯಲ್ಲಿ ಯಾರೂ ವಾಸ ಇರಲಿಲ್ಲ. ಆಗಾಗ ಇಬ್ಬರು ಇಲ್ಲಿ ಬಂದು ಸೇರುತ್ತಿದ್ದರೂ ಎಂಬ ಮಾಹಿತಿಯಿರೋದಾಗಿ ಅವರು ತಿಳಿಸಿದ್ದಾರೆ.
ಯುವತಿ ಜೊತೆ ಮದುವೆ ವಿಚಾರಕ್ಕೆ ತಮ್ಮನನ್ನೇ ಅಣ್ಣ ಕೊಲೆಗೈದಿರುವ ಆಘಾತಕಾರಿ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಫಕ್ಕೀರಪ್ಪ(19) ಬರ್ಬರ ಹತ್ಯೆ ಮಾಡಲಾಗಿದ್ದು, ಆರೋಪಿ ಅಶೋಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಕ್ಕಮೊಲಂಗಿ ನಿವಾಸಿಗಳಾಗಿದ್ದ ಸಹೋದರರು ಕುರಿ ಮೇಯಿಸಲು ಹಿರೇಕೊಪ್ಪ ಗ್ರಾಮಕ್ಕೆ ಬಂದಿದ್ದರು. ತಮ್ಮನಿಗೆ ಫಿಕ್ಸ್ ಆಗಿದ್ದ ಹುಡುಗಿ ಜತೆ ತಾನು ಮದುವೆ ಆಗಬೇಕೆಂದು ಬಯಸಿದ್ದ ಅಶೋಕ್, ಕುರಿದೊಡ್ಡಿಯಲ್ಲಿ ಮಲಗಿದ್ದ ಸಹೋದರನನ್ನು ಕೊಲೆಗೈದ್ದಾನೆ. ಬಳಿಕ ಬೇರೆಯವರು ಹತ್ಯೆ ಮಾಡಿರೋದು ಎಂದು ಕತೆ ಕಟ್ಟಿದ್ದ ಆರೋಪಿಯ ನಿಜ ಬಣ್ಣ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
9 ಮಂದಿ ಆರೋಪಿಗಳ ಬಂಧನ
ಹಫ್ತಾ ಕೊಡದಿದ್ದಕ್ಕೆ ಬೆಂಗಳೂರಿನ ಸಿದ್ದಯ್ಯ ರಸ್ತೆ ಸಮೀಪದ ಬಡಮಕಾನ್ ಬಳಿ ಪುಡಿರೌಡಿಗಳಿಂದ ಮೆಕ್ಯಾನಿಕ್ ಹತ್ಯೆ ಪ್ರಕರಣ ಸಂಬಂಧ 9 ಆರೋಪಿಗಳನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರ್ವೇಜ್, ಅಫ್ರಿದಿ, ಸಮೀರ್, ಶಬ್ಬೀರ್, ಮುನ್ನಾವರ್, ಸಾದಿಕ್ ಸೇರಿದಂತೆ 9 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಡೆದಿದ್ದ ರಶೀದ್ ಕೊಲೆ ಪ್ರಕರಣ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ನವದೆಹಲಿ, ಮಾರ್ಚ್ 17: ಎಲ್ಪಿಜಿ ಗ್ರಾಹಕರು ಇಕೆವೈಸಿ (Biometric Aadhaar Authentication) ಮಾಡುವುದು ಕಡ್ಡಾಯ ಎನ್ನುವಂತಹ ಸುದ್ದಿ ಎರಡು ದಿನಗಳಿಂದ ಕೇಳಿಬರುತ್ತಿದೆ. ಇದೇ ವೇಳೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಆಧಾರ್ ಬಯೋಮೆಟ್ರಿಲ್ ದೃಢೀಕರಣ ಅಥವಾ ಇಕೆವೈಸಿಯು ಎಲ್ಲಾ ಎಲ್ಪಿಜಿ ಗ್ರಾಹಕರಿಗೂ ಕಡ್ಡಾಯವೇನಲ್ಲ. ಇಕೆವೈಸಿ ಮಾಡಿಸಿಲ್ಲದ ಎಲ್ಪಿಜಿ ಗ್ರಾಹಕರು ಮಾತ್ರ ಈ ಗ್ಯಾಸ್ ಪಡೆಯಲು ಇಕೆವೈಸಿ ಮಾಡುವುದು ಕಡ್ಡಾಯ ಎಂದು ಸಚಿವಾಲಯವು ಹೇಳಿದೆ.
ಎಲ್ಪಿಜಿ ಗ್ರಾಹಕರು ಆಧಾರ್ ದೃಢೀಕರಣ ಮಾಡುವ ವಿಚಾರದಲ್ಲಿ ಹೊಸದೇನೂ ನಿರ್ದೇಶನ ಹೊರಡಿಸಲಾಗಿಲ್ಲ. ಬಯೋಮೆಟ್ರಿಕ್ ಆಧಾರ್ ದೃಢೀಕರಣ ಪೂರ್ಣಗೊಳಿಸುವಂತೆ ಎಲ್ಪಿಜಿ ಗ್ರಾಹಕರನ್ನು ಪ್ರೋತ್ಸಾಹಿಸುವ ಕ್ರಮ ಜಾರಿಯಲ್ಲಿದೆ.
ಎಲ್ಪಿಜಿ ಇಕೆವೈಸಿ ವಿಚಾರದಲ್ಲಿ ತಿಳಿಯಬೇಕಾದ ಸಂಗತಿಗಳಿವು…
ಎಲ್ಪಿಜಿ ಗ್ರಾಹಕರು ಇದೂವರೆಗೆ ಇಕೆವೈಸಿ ಮಾಡಿಸಿಲ್ಲದೇ ಇದ್ದರೆ ಅವರು ಈಗ ಮಾಡಿಸುವುದು ಕಡ್ಡಾಯ.
ಪಿಎಂ ಉಜ್ವಲ್ ಯೋಜನೆಯ ಫಲಾನುಭವಿಗಳು ಪ್ರತೀ ಹಣಕಾಸು ವರ್ಷಕ್ಕೆ ಒಮ್ಮೆ ಇಕೆವೈಸಿ ಅಪ್ಡೇಟ್ ಮಾಡಬೇಕು. ಅದೂ 7 ಸಿಲಿಂಡರ್ ಪೂರೈಕೆಗೆ ಸಬ್ಸಿಡಿ ಪಡೆದು, 8 ಮತ್ತು 9ನೇ ಸಿಲಿಂಡರ್ ಪಡೆಯುವಾಗ ಇಕೆವೈಸಿ ಅಪ್ಡೇಟ್ ಮಾಡಬೇಕು.
ಪಿಎಂ ಉಜ್ವಲ್ ಯೋಜನೆಗೆ ಒಳಪಡದ ಇತರ ಎಲ್ಪಿಜಿ ಗ್ರಾಹಕರು ಒಮ್ಮೆ ಇಕೆವೈಸಿ ಮಾಡಿಸಿದ್ದರೆ ಸಾಕು, ಮತ್ತೆ ಅಪ್ಡೇಟ್ ಮಾಡುವ ಅಗತ್ಯ ಇಲ್ಲ.
Clarification: LPG Biometric Aadhaar Authentication (eKYC) only required for unauthenticated LPG customers and not all customers pic.twitter.com/oySbhPgJ47
— Ministry of Petroleum and Natural Gas #MoPNG (@PetroleumMin) March 17, 2026
ಎಲ್ಪಿಜಿ ಗ್ರಾಹಕರು ಇಕೆವೈಸಿ ಅಪ್ಡೇಟ್ ಮಾಡುವುದು ಹೇಗೆ?
ಎಲ್ಪಿಜಿ ಗ್ರಾಹಕರು ತಮ್ಮ ವಿತರಕರ ಕಚೇರಿಗೆ ಹೋಗಿ ಅಲ್ಲಿ ಬಯೋಮೆಟ್ರಿಕ್ ಆಧಾರ್ ಅಥೆಂಟಿಕೇಶನ್ ಕೊಡಬಹುದು. ಇದು ಒಂದು ವಿಧಾನ.
ಮತ್ತೊಂದು ವಿಧಾನ ಆನ್ಲೈನ್ನದ್ದು. ಆಧಾರ್ ಫೇಸ್ಆರ್ಡಿ ಆ್ಯಪ್ ಅನ್ನು ಡೌನ್ಲೋಡ್ ಮಾಡಬೇಕು. ನಿಮ್ಮ ಗ್ಯಾಸ್ನ ಕಂಪನಿಯ ಆ್ಯಪ್ ಅನ್ನೂ ಡೌನ್ಲೋಡ್ ಮಾಡಬೇಕು. ಉದಾಹರಣೆಗೆ, ಇಂಡೇನ್ ಗ್ರಾಹಕರು ಐಒಸಿಎಲ್ನ ಆ್ಯಪ್ ಡೌನ್ಲೋಡ್ ಮಾಡಬೇಕು. ಹಾಗೆಯೇ, ಬಿಪಿಸಿಲ್ ಅಥವಾ ಎಚ್ಪಿಸಿಎಲ್ ಬಳಕೆದಾರರು ಆಯಾ ಕಂಪನಿಗಳ ಆ್ಯಪ್ಗಳನ್ನು ಬಳಸಿ ಬಯೋಮೆಟ್ರಿಕ್ ಆಧಾರ್ ಅಥೆಂಟಿಕೇಶನ್ ಮಾಡಿಸಬಹುದು.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಗಳ ಪ್ರಕಾರವೇ ಅಭ್ಯಾಸ ನಡೆಸಬೇಕೆಂದು ತಿಳಿಸಲಾಗಿದೆ. ಬಿಸಿಸಿಐ ಮುಂದಿಟ್ಟಿರುವ ಮಾರ್ಗಸೂಚಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
ತಾಜಾ ಪಿಚ್‌ಗಳ ಬಳಕೆ: ಯಾವುದೇ ತಂಡವು ಅಭ್ಯಾಸದ ವೇಳೆ ತನ್ನ ಪ್ರತಿಸ್ಪರ್ಧಿ ತಂಡ ಬಳಸಿದ ಪಿಚ್ ಅಥವಾ ನೆಟ್‌ಗಳನ್ನು ಬಳಸುವಂತಿಲ್ಲ. ಪ್ರತಿ ಸೆಷನ್‌ಗೂ ಹೊಸದಾಗಿ ಸಿದ್ಧಪಡಿಸಿದ ಪಿಚ್‌ಗಳನ್ನೇ ನೀಡಬೇಕು. ಉದಾಹರಣೆಗೆ, ಬೆಳಿಗ್ಗೆ ‘ತಂಡ ಎ’ ಅಭ್ಯಾಸ ಮಾಡಿದ ಪಿಚ್‌ನಲ್ಲಿ ಸಂಜೆ ‘ತಂಡ ಬಿ’ ಅಭ್ಯಾಸ ಮಾಡುವಂತಿಲ್ಲ.
ನೆಟ್‌ಗಳ ಹಂಚಿಕೆಗೆ ನಿಷೇಧ: ಒಂದರ ನಂತರ ಒಂದರಂತೆ ತಂಡಗಳು ಅಭ್ಯಾಸ ನಡೆಸುತ್ತಿದ್ದರೂ ಸಹ, ಮೊದಲ ತಂಡ ಬಳಸಿದ ನೆಟ್‌ಗಳನ್ನು ಎರಡನೇ ತಂಡಕ್ಕೆ ನೀಡಲಾಗುವುದಿಲ್ಲ. ಇದು ‘ರೇಂಜ್ ಹಿಟ್ಟಿಂಗ್’ ಪಿಚ್‌ಗಳಿಗೂ ಅನ್ವಯಿಸುತ್ತದೆ.
ಅಭ್ಯಾಸ ಪಂದ್ಯಗಳ ಮಿತಿ: ಪ್ರತಿ ತಂಡವು ಗರಿಷ್ಠ 2 ಅಭ್ಯಾಸ ಪಂದ್ಯಗಳನ್ನು ಮಾತ್ರ ಆಡಬಹುದು ಮತ್ತು ಅದಕ್ಕಾಗಿ ಮಂಡಳಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ.
ಸಮಯದ ಮಿತಿ: ಫ್ಲಡ್‌ಲೈಟ್‌ಗಳ ಅಡಿಯಲ್ಲಿ ನಡೆಯುವ ಅಭ್ಯಾಸ ಪಂದ್ಯಗಳು 3.5 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಾರದು.
ಮುಖ್ಯ ಪಿಚ್‌ಗಳ ರಕ್ಷಣೆ: ತಂಡದ ಮೊದಲ ಹೋಮ್ ಮ್ಯಾಚ್‌ಗಿಂತ 4 ದಿನಗಳ ಮೊದಲು ಮುಖ್ಯ ಪಿಚ್ ಅಥವಾ ಸೆಂಟ್ರಲ್ ಸ್ಕ್ವೇರ್‌ನಲ್ಲಿ ಯಾವುದೇ ರೀತಿಯ ಅಭ್ಯಾಸ ಅಥವಾ ತರಬೇತಿ ಪಂದ್ಯಗಳನ್ನು ನಡೆಸುವಂತಿಲ್ಲ. ಈ ಅವಧಿಯಲ್ಲಿ ಹೋಮ್ ತಂಡಕ್ಕೆ ಬೇರೆ ಅಭ್ಯಾಸ ಮೈದಾನದ ಅಗತ್ಯವಿದ್ದರೆ, ರಾಜ್ಯ ಕ್ರಿಕೆಟ್ ಸಂಸ್ಥೆಗಳು ಅದನ್ನು ಉಚಿತವಾಗಿ ಒದಗಿಸಬೇಕು.
ಸಮಯ ಮತ್ತು ಆದ್ಯತೆ: ಅಭ್ಯಾಸದ ಸ್ಲಾಟ್‌ಗಳನ್ನು ಆರಿಸುವಾಗ ಹೋಮ್ ತಂಡಕ್ಕೆ ಮೊದಲ ಆದ್ಯತೆ ಇರುತ್ತದೆ.
ಆದರೆ, ಹಿಂದಿನ ದಿನ ಪಂದ್ಯವಿದ್ದಲ್ಲಿ ಅಥವಾ ಪ್ರಯಾಣದ ಒತ್ತಡವಿದ್ದಲ್ಲಿ ಪ್ರವಾಸಿ ತಂಡಗಳ ವಿನಂತಿಯನ್ನೂ ಪರಿಗಣಿಸಲಾಗುತ್ತದೆ.
ಜವಾಬ್ದಾರಿಗಳು: ಅಭ್ಯಾಸದ ಸಮಯದಲ್ಲಿ ಊಟ, ವೈದ್ಯಕೀಯ ಸೇವೆ ಮತ್ತು ಸುರಕ್ಷತೆಯ ಸಂಪೂರ್ಣ ಜವಾಬ್ದಾರಿ ಆಯಾ ಹೋಮ್ ತಂಡದ್ದೇ ಆಗಿರುತ್ತದೆ.
ರೇಂಟ್ ಹಿಟ್ಟಿಂಗ್ ಅಭ್ಯಾಸ: ಎಲ್ಲಾ ತಂಡಗಳಿಗೆ ನಿಗದಿತ ಮೈದಾನಗಳಲ್ಲಿ ಎರಡು ನೆಟ್ಸ್ ಅಭ್ಯಾಸ ಮತ್ತು ರೇಂಜ್-ಹಿಟ್ಟಿಂಗ್‌ಗಾಗಿ ಮುಖ್ಯ ಮೈದಾನದಲ್ಲಿ ಅವಕಾಶ ಒದಗಿಸಲು ಬಿಸಿಸಿಐ ಸೂಚಿಸಿದೆ.
ಸಮಾನ ಅವಕಾಶ: ಮೊದಲು ಅಭ್ಯಾಸ ಮಾಡುವ ತಂಡಕ್ಕೆ ಪಿಚ್ ಚೆನ್ನಾಗಿರುತ್ತದೆ, ನಂತರ ಬರುವ ತಂಡಕ್ಕೆ ಪಿಚ್ ಹಾಳಾಗಿರುತ್ತದೆ . ಇದನ್ನು ತಡೆಗಟ್ಟಿ ಎರಡೂ ತಂಡಗಳಿಗೆ ಸಮಾನ ಗುಣಮಟ್ಟದ ಪಿಚ್ ಸಿಗಲಿ ಎಂಬುದು ಉದ್ದೇಶ.
ಗಾಯದ ಮುನ್ನೆಚ್ಚರಿಕೆ: ಬಳಸಿದ ಪಿಚ್‌ಗಳಲ್ಲಿ ಅಸಮತೋಲಿತ ಬೌನ್ಸ್ ಇರಬಹುದು, ಇದು ಬ್ಯಾಟರ್‌ಗಳಿಗೆ ಗಾಯ ಮಾಡುವ ಸಾಧ್ಯತೆ ಇರುತ್ತದೆ.
ನಿಖರ ಸಿದ್ಧತೆ: ಪಂದ್ಯದ ದಿನದ ಪಿಚ್ ಹೇಗಿರುತ್ತದೆ ಎಂಬ ನಿಖರ ಕಲ್ಪನೆ ಸಿಗಲು ತಾಜಾ ಪಿಚ್‌ಗಳ ಅಗತ್ಯವಿರುತ್ತದೆ.
ಬೆಂಗಳೂರು, ಕೋಲಾರ ಮಾರ್ಚ್ 17: ಕರ್ನಾಟಕದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಕಳೆದ ಎಂಟು ದಿನಗಳಿಂದ ಈ ಸಮಸ್ಯೆ ಬಗೆಹರಿದಿಲ್ಲ. ಇದರ ಬಿಸಿ ಬೆಂಗಳೂರಿನಾದ್ಯಂತ ಪಬ್‌ಗಳಿಗೂ ತಟ್ಟಿದೆ. ವಿಶೇಷವಾಗಿ ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ, ಸಿಲಿಂಡರ್ ಕೊರತೆಯಿಂದ ಪಬ್ಗಳ ಮಾಲಕರು ಕಂಗಾಲಾಗಿದ್ದಾರೆ. ಹಲವು ಪಬ್‌ಗಳಲ್ಲಿ ‘ಫೈರ್‌ಲೆಸ್ ಕುಕಿಂಗ್’ ಅಂದರೆ ಬೆಂಕಿ ಬಳಸದೆ ತಯಾರಿಸುವ ಸಲಾಡ್, ಹಣ್ಣುಗಳಂತಹ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ.
ಕೋಲಾರ ಜಿಲ್ಲೆಯಲ್ಲೂ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್ ಕೊರತೆಯಿಂದ ಪರದಾಡುತ್ತಿವೆ. ವಾಣಿಜ್ಯ ಸಿಲಿಂಡರ್ ಸಿಗದೆ ಇರುವ ಕಾರಣ ಪಂಚವಟಿಯಂತಹ ಹಳೆಯ ಹೋಟೆಲ್‌ಗಳು ಸೌದೆ ಒಲೆಯ ಮೊರೆ ಹೋಗಿವೆ. ಹೊಗೆಯ ಸಮಸ್ಯೆ, ಗ್ರಾಹಕರ ಸಂಖ್ಯೆಯಲ್ಲಿ ಇಳಿಕೆ, ಮತ್ತು ಮೆನು ನಿರ್ಬಂಧಗಳಿಂದಾಗಿ ಹೋಟೆಲ್ ಮಾಲೀಕರು ನಷ್ಟ ಅನುಭವಿಸುತ್ತಿದ್ದಾರೆ. ಹೋಟೆಲ್ ಸಿಬ್ಬಂದಿಯೂ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ಹೋಟೆಲ್‌ಗಳು ಕಲ್ಯಾಣ ಮಂಟಪಗಳಲ್ಲಿ ಅಡುಗೆ ಮಾಡಿ ಹೋಟೆಲ್‌ಗಳಿಗೆ ತಂದು ಗ್ರಾಹಕರಿಗೆ ಬಡಿಸುವಂತಹ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಮಾ.17: ಸತತ ನಾಲ್ಕು ದಿನಗಳ ರಜೆ ಮತ್ತು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮೂರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ (Bengaluru private bus ) ಮಾಲೀಕರು ದರ ಏರಿಕೆಯ ಬಿಸಿ ಮುಟ್ಟಿಸಿದ್ದಾರೆ. ಯುಗಾದಿ ಮತ್ತು ರಂಜಾನ್ ಹಬ್ಬವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಿವೆ.
ಖಾಸಗಿ ಬಸ್ ದರ ಏರಿಕೆಯ ಕಟು ಸತ್ಯ (ನಾರ್ಮಲ್ vs ಹಬ್ಬದ ದರ):
ಬೆಂಗಳೂರು-ಮಂಗಳೂರು: 600 ರೂ. ಇದ್ದ ದರ ಈಗ 2,999 ರೂ. ವರೆಗೆ ಏರಿಕೆಯಾಗಿದೆ.
ಬೆಂಗಳೂರು-ಧಾರವಾಡ/ಹುಬ್ಬಳ್ಳಿ: 400-1,300 ರೂ. ಇದ್ದ ದರ ಭರ್ಜರಿ 4,500 ರೂ. ತಲುಪಿದೆ.
ಬೆಂಗಳೂರು-ಶಿವಮೊಗ್ಗ: 400 ರೂ. ಇದ್ದ ಸಾಮಾನ್ಯ ದರ ಹಬ್ಬದ ವೇಳೆ 2,799 ರೂ.ಕ್ಕೆ ಜಿಗಿದಿದೆ.
ಬೆಂಗಳೂರು-ಧರ್ಮಸ್ಥಳ: 500 ರೂ. ರಿಂದ 3,600 ರೂ.ಕ್ಕೆ ಏರಿಕೆ ಕಂಡುಬಂದಿದೆ.
ಬೆಂಗಳೂರು-ಮೈಸೂರು: ಕೇವಲ 350 ರೂ. ಇದ್ದ ದರ ಈಗ 2,500 ರೂ. ವರೆಗೆ ವಸೂಲಿ ಮಾಡಲಾಗುತ್ತಿದೆ.
ಆದರೆ ಇದರ ನಡುವೆ ಖಾಸಗಿ ಬಸ್‌ಗಳ ದರ ಏರಿಕೆಯಿಂದ ಕಂಗಾಲಾದ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೆರವಾಗಲಿದೆ.ಮಾರ್ಚ್ 18, 19 ಮತ್ತು 20 ರಂದು ಬೆಂಗಳೂರಿನ ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್), ಮೈಸೂರು ರಸ್ತೆ ಸ್ಯಾಟಲೈಟ್ ಮತ್ತು ಶಾಂತಿನಗರ ನಿಲ್ದಾಣಗಳಿಂದ ರಾಜ್ಯದ ವಿವಿಧ ಮೂಲೆಗಳಿಗೆ 2,000 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ.
“ಡೀಸೆಲ್ ದರ ಏರಿಕೆ ಮತ್ತು ಸರ್ಕಾರದ ತೆರಿಗೆ ಹೊರೆಯಿಂದಾಗಿ ಅನಿವಾರ್ಯವಾಗಿ ದರ ಹೆಚ್ಚಿಸಬೇಕಾಗಿದೆ. ಯುದ್ಧದಂತಹ ಪರಿಸ್ಥಿತಿಯಿಂದ ಡೀಸೆಲ್ ಬೆಲೆಯಲ್ಲಿ ಏರಿಳಿತವಾಗುತ್ತಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ದರ ಏರಿಕೆ ಅಷ್ಟೊಂದು ಹೆಚ್ಚಿಲ್ಲ” ಎಂದು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ. ಇನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆಯ ( ಸ್ಯಾಟ್ ಲೈಟ್ )ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಿಂದ ಸಂಚಾರ ಮಾಡಲಿವೆ.
ವಾಹನ ಚಲಾಯಿಸುವ ವೇಳೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ (helmet) ಧರಿಸುವುದು ಕಡ್ಡಾಯ. ಆದರೆ ಕೆಲವರು ಈ ರೂಲ್ಸ್ ಬ್ರೇಕ್ ಮಾಡ್ತಾರೆ. ಕೆಲವೊಮ್ಮೆ ಪೊಲೀಸರ ಕೈಯಲ್ಲಿ ತಗಲಾಕಿ ಕೊಳ್ತಾರೆ. ಆದರೆ ಇಲ್ಲೊಬ್ಬ ಯುವಕ ಪೋಲೀಸರ ಕೈಯಲ್ಲಿ ಅಲ್ಲ, ಪುಟಾಣಿಯ (little girl) ಕೈಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಹೌದು, ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದ ಯುವಕನಿಗೆ ಪುಟ್ಟ ಹುಡುಗಿಯೂ ಸುರಕ್ಷತೆಯ ಪಾಠ ಮಾಡಿದ್ದು, ಹೆಲ್ಮೆಟ್ ಧರಿಸುವಂತೆ ಹೇಳಿದ್ದಾಳೆ. ಈ ಪುಟಾಣಿಯ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.
instaviral.inm ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಯುವಕನೊಬ್ಬ ಹೆಲ್ಮೆಟ್ ಧರಿಸದೇ ವಾಹನ ಓಡಿಸುವುದನ್ನು ಕಾಣಬಹುದು. ಹೆತ್ತವರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ಪುಟ್ಟ ಹುಡುಗಿಯೂ ಅದನ್ನು ಗಮನಿಸಿದ್ದಾಳೆ. ತಕ್ಷಣವೇ ಈ ಯುವಕನನ್ನು ಕರೆದು, ಹೆಲ್ಮೆಟ್ ಹಾಕುವಂತೆ ಹೇಳುವುದನ್ನು ಕಾಣಬಹುದು. ಈ ಪುಟಾಣಿ ಹೆತ್ತವರು, ಈ ಮಗಳ ಮಾತು ಕೇಳಿ ಜೋರಾಗಿ ನಗುತ್ತಿರುವುದನ್ನು ಕಾಣಬಹುದು.
ಈ ವಿಡಿಯೋ ಆರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಈ ಪುಟಾಣಿಯನ್ನು ಬ್ರಾಂಡ್ ಅಂಬಾಸಿಡರ್ ಮಾಡಿ ಎಂದಿದ್ದಾರೆ. ಇನ್ನೊಬ್ಬರು, ಹೇ ಬಾಬು, ಜೈ ಬಾಬು ಎಂದು ಕಾಲೆಳೆದಿದ್ದಾರೆ. ಮತ್ತೊಬ್ಬರು, ತುಂಬಾ ಮುದ್ದಾಗಿದೆ ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯದಲ್ಲಿ ಆರ್ಸಿಬಿ ತಂಡದ ಪ್ರಮುಖ ಆಟಗಾರ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್ವುಡ್ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯನ್ ಪತ್ರಕರ್ತ ಡೇನಿಯಲ್ ಚೆರ್ನಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಅವರು ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಾತ್ರ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
ಜೋಶ್ ಹೇಝಲ್ವುಡ್ ಕಾಲಿನ ಹಿಮ್ಮಡಿಯ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಗಾಯದ ಕಾರಣ ಅವರು ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಈ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಐಪಿಎಲ್ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ಹೀಗಾಗಿ ಆರ್ಸಿಬಿ ತಂಡದ ಮೊದಲ ಹಂತದ ಪಂದ್ಯಗಳಲ್ಲಿ ಜೋಶ್ ಹೇಝಲ್ವುಡ್ ಕಾಣಿಸಿಕೊಳ್ಳವುದಿಲ್ಲ. ಅಂದರೆ ಸನ್ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳಿಂದ ಹೇಝಲ್ವುಡ್ ಹೊರಗುಳಿಯಲಿದ್ದಾರೆ.
ಇನ್ನು ಏಪ್ರಿಲ್ ಎರಡನೇ ವಾರದೊಳಗೆ ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಜೋಶ್ ಹೇಝಲ್ವುಡ್ ಐಪಿಎಲ್ನಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಆಸ್ಟ್ರೇಲಿಯನ್ ವೇಗಿ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದಕ್ಕೆ ಕನ್ಫರ್ಮ್ ಆಗಲು ಮುಂದಿನ ತಿಂಗಳವರೆಗೆ ಕಾಯಲೇಬೇಕು.
ಧ್ರುವ ಸರ್ಜಾ (Dhrva Sarja) ನಟಿಸಿ, ಪ್ರೇಮ್ ನಿರ್ದೇಶನ ಮಾಡಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ದ ಹಾಡೊಂದು ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ನೋರಾ ಫತೇಹಿ ನಟಿಸಿರುವ ಹಾಡನ್ನು ಬಲು ಅದ್ಧೂರಿಯಾಗಿ ಚಿತ್ರತಂಡೆ ಬಿಡುಗಡೆ ಮಾಡಿತು. ಹಾಡು ಕನ್ನಡದಲ್ಲಿ ಮಾತ್ರವೇ ಅಲ್ಲದೆ, ಹಿಂದಿ, ತೆಲುಗು ಇನ್ನೂ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಯೂಟ್ಯೂಬ್ನಲ್ಲಿ ರಿಲೀಸ್ ಆಯ್ತು. ಆದರೆ ಈ ಹಾಡು ಇದೀಗ ವಿವಾದಕ್ಕೆ ಸಿಲುಕಿದೆ. ಕನ್ನಡದಲ್ಲಿ ‘ಸರ್ಸೆ ಸೆರಗ ಸರ್ಸೆ’ ಎಂದಿರುವ ಈ ಹಾಡು ಹಿಂದಿಯಲ್ಲಿ ‘ಸರ್ಕೆ ಚುನರ್’ ಎಂದಿದೆ. ಆದರೆ ಈ ಹಾಡಿನ ಸಾಹಿತ್ಯ ತೀವ್ರ ಟೀಕೆಗೆ ಗುರಿ ಆಗಿದ್ದು, ಹಾಡಿನ ವಿರುದ್ಧ ದೂರುಗಳು ದಾಖಲಾಗಿವೆ.
ನೋರಾ ಫತೇಹಿ ಮತ್ತು ಸಂಜಯ್ ದತ್ ಅಭಿನಯದ ಈ ಐಟಂ ಸಾಂಗ್ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಾಡಿನಲ್ಲಿರುವ ನೋರಾ ಫತೇಹಿ ಅವರ ನೃತ್ಯದ ಭಂಗಿಗಳು ‘ಅತಿರೇಕದ ಅಶ್ಲೀಲತೆ’ಯಿಂದ ಕೂಡಿವೆ ಎನ್ನಲಾಗಿತ್ತು. ಅದರಲ್ಲೂ ಹಾಡಿನ ಸಾಹಿತ್ಯವಂತೂ ತೀರ ಅಶ್ಲೀಲವಾಗಿದೆ ಎನ್ನಲಾಗುತ್ತಿದೆ. ವಿಶೇಷವಾಗಿ ಹಿಂದಿ ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗಿದ್ದು, ಇದೀಗ ದೆಹಲಿಯಲ್ಲಿ ಈ ಬಗ್ಗೆ ದೂರು ಸಹ ದಾಖಲಾಗಿದೆ.
ದೆಹಲಿಯ ವಕೀಲ ವಿನೀತ್ ಜಿಂದಾಲ್ ಎಂಬುವರು ಹಾಡಿನ ವಿರುದ್ಧ ಸಿಬಿಎಫ್ಸಿಗೆ ದೂರು ನೀಡಿದ್ದು, ಈ ಕೂಡಲೇ ಹಾಡನ್ನು ತೆಗೆಸಬೇಕು ಎಂದು ಮನವಿ ಮಾಡಿದ್ದಾರೆ. ವಕೀಲ ವಿನೀತ್ ಅವರು ದೆಹಲಿ ಸೈಬರ್ ಪೊಲೀಸರಿಗೂ ಸಹ ದೂರು ನೀಡಿದ್ದು, ಈ ಹಾಡಿನ ಸಾಹಿತ್ಯ ಬರೆದವರು, ಸಂಗೀತ ನಿರ್ದೇಶಕ, ಸಿನಿಮಾ ನಿರ್ದೇಶಕ ಮತ್ತು ನಿರ್ಮಾಪಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 294 (ಮಹಿಳೆಯ ಮಾನಕ್ಕೆ ಧಕ್ಕೆ) ಮತ್ತು ಪೋಕ್ಸೊ ಕಾಯ್ದೆಯ ಅಡಿ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಕೀಲ ವಿನೀತ್ ಮಾತ್ರವೇ ಅಲ್ಲದೆ ಕೆಲವು ಗಾಯಕರು ಸಹ ಈ ಹಾಡಿನ ಸಾಹಿತ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿಯೂ ಸಹ ಹಾಡಿನ ಅಶ್ಲೀಲ ಸಾಹಿತ್ಯದ ಬಗ್ಗೆ ವಿರೋಧ ವ್ಯಕ್ತವಾಗಿದೆ. ಇದರ ಗಂಭೀರತೆಯನ್ನು ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದೆ. ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ದೃಶ್ಯಗಳನ್ನು ಪ್ರದರ್ಶಿಸಿರುವುದನ್ನು ಆಯೋಗವು ಆಕ್ಷೇಪಿಸಿದೆ ಎನ್ನಲಾಗಿದೆ.
‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ ಸರ್ಸೆ’ ಹಾಡು ಐಟಂ ಹಾಡಾಗಿದ್ದು, ನೋರಾ ಫತೇಹಿ ಗ್ಲಾಮರಸ್ ಆಗಿ ಕುಣಿದಿದ್ದಾರೆ. ಸಂಜಯ್ ದತ್ ಸಹ ಹಾಡಿನಲ್ಲಿದ್ದಾರೆ. ನೋರಾ ಫತೇಹಿ ಮದ್ಯದ ಕುರಿತಾಗಿ ಹಾಡುವ ಹಾಡು ಅದಾಗಿದೆ ಆದರೆ ಹಾಡಿನಲ್ಲಿ ಸಾಕಷ್ಟು ದ್ವಂದ್ವಾರ್ಥಗಳಿವೆ. ಇದೇ ಕಾರಣಕ್ಕೆ ಇದೀಗ ಹಾಡು ವಿವಾದಕ್ಕೆ ಕಾರಣವಾಗಿದೆ.