ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ
ಬೆಂಗಳೂರು, ಮಾರ್ಚ್ 17: ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಕರ್ನಾಟಕ (Karnataka) ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಅಸಮಾಧಾನಗೊಂಡು ಕಲಾಪ ಮುಂದೂಡಿದ ಘಟನೆಗೆ ಈಗ ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣುತ್ತಿವೆ. ಸ್ಪೀಕರ್ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಲಾಖಾವಾರು ಲಿಖಿತ ಉತ್ತರಗಳನ್ನು ಸಲ್ಲಿಸಲು ಆರಂಭಿಸಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಖಾದರ್, ಪರವಾಗಿಲ್ಲ ಈಗ ಸ್ವಲ್ಪ ಸುಧಾರಿಸಿದಂತೆ ಕಾಣುತ್ತಿದೆ ಎಂದಿದ್ದಾರೆ. ಮಂಗಳವಾರದ ಕಲಾಪದಲ್ಲಿ ಇಲಾಖಾವಾರು ಉತ್ತರಗಳ ಅಂಕಿ-ಅಂಶಗಳನ್ನು ಪ್ರಸ್ತಾಪಿಸಿದ…