Headlines

nagaraj11081993

ನೆಲಮಂಗಲ ಬಳಿ ಭೀಕರ ಅಪಘಾತ: ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​

ನೆಲಮಂಗಲ, ಮಾರ್ಚ್​​ 17: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 30 ವರ್ಷದ ಗೃಹಿಣಿ ಲಕ್ಷ್ಮಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಯಾದಗಿರಿ ಮೂಲದ ಲಕ್ಷ್ಮಿ ಬೆಂಗಳೂರಿನ ಕಾಚೊಹಳ್ಳಿಯಲ್ಲಿ ವಾಸವಾಗಿದ್ದು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸುಮಾರು 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಲಕ್ಷ್ಮಿ ಅವರು ತಮ್ಮ ಅನಾರೋಗ್ಯ ಪೀಡಿತ ಮಗನನ್ನು ಗೊಲ್ಲರಹಟ್ಟಿ ಬಳಿಯ ಆಸ್ಪತ್ರೆಗೆ ಕರೆದೊಯ್ದು ಮನೆಗೆ ಮರಳುತ್ತಿದ್ದರು. ಗೊಲ್ಲರಹಟ್ಟಿ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಇವರಿಗೆ ಹಿಂದಿನಿಂದ ವೇಗವಾಗಿ…

Read More

ಹಾರ್ಮುಜ್ ಜಲಸಂಧಿಯಿಂದ ಗುಜರಾತ್​ಗೆ ಬಂದ ಭಾರತದ ಎರಡನೇ ಎಲ್​ಪಿಜಿ ಟ್ಯಾಂಕರ್ ನಂದಾದೇವಿ

ನವದೆಹಲಿ, ಮಾರ್ಚ್ 17: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಗ್ಯಾಸ್ ಹೊತ್ತ ಎರಡನೇ ಹಡಗೊಂದು ಭಾರತವನ್ನು ತಲುಪಿದೆ. 45,000 ಮೆಟ್ರಿಕ್ ಟನ್ ಎಲ್​ಪಿಜಿ ಹೊಂದಿರುವ ನಂದಾದೇವಿ ಎನ್ನುವ ಹಡಗು ಇಂದು ಗುರುವಾರ ಗುಜರಾತ್​ನ ವಡಿನಾರ್ ಬಂದರನ್ನು ತಲುಪಿದೆ. ಮೂಲ ಯೋಜನೆ ಪ್ರಕಾರ ಈ ಹಡಗು ಕಾಂಡ್ಲಾ ಪೋರ್ಟ್ ತಲುಪಬೇಕಿತ್ತು. ಆದರೆ, ಕಾರಣಾಂತರದಿಂದ ವಡಿನಾರ್ ಕಡೆಗೆ ತಿರುಗಿಸಲಾಯಿತು. ಇರಾನ್ ಯುದ್ಧ ಶುರುವಾದಾಗಿನಿಂದ ಹಾರ್ಮುಜ್ ಜಲಸಂಧಿಗೆ ತಡೆಯಾಗಿದೆ. ಆದರೆ, ಭಾರತ ನಡೆಸಿದ ಮಾತುಕತೆಯ ಫಲವಾಗಿ ಇರಾನ್ ದೇಶವು ಹಾರ್ಮುಜ್ ಜಲಸಂಧಿಯಿಂದ ಈವರೆಗೆ…

Read More

ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ

ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 51ನೇ ಜಯಂತಿಯಂದು ಕುಟುಂಬ ಸದಸ್ಯರು ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್, ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಇನ್ನೂ ಹಲವು ಕುಟುಂಬ ಸದಸ್ಯರು. ಅಪ್ಪು ಅವರ ಆಪ್ತರು ಇಂದು (ಮಾರ್ಚ್ 17) ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ವಿನಯ್ ರಾಜ್​ಕುಮಾರ್ ಮತ್ತು ಯುವ ರಾಜ್​ಕುಮಾರ್ ಅವರುಗಳು ಚಿಕ್ಕಪ್ಪ ಇದ್ದಾಗ ಆಚರಿಸುತ್ತಿದ್ದ ಅವರ ಹುಟ್ಟುಹಬ್ಬಗಳನ್ನು ನೆನಪು ಮಾಡಿಕೊಂಡರು. ಹೇಗೆ…

Read More

ಡ್ರಂಕ್​​ ಆ್ಯಂಡ್​​ ಡ್ರೈವ್​​ ಮಾಡಿದವನಿಗೆ ಕೋರ್ಟ್​​ ಕೊಟ್ಟ ಶಿಕ್ಷೆ ಎಂತಹದ್ದು ನೋಡಿ

ಚಿಕ್ಕಮಗಳೂರು, ಮಾರ್ಚ್​​ 17: ಅದೆಷ್ಟೇ ಜಾಗೃತಿ ಕೆಲಸಗಳನ್ನು ಸಂಚಾರಿ ಪೊಲೀಸರು ಮಾಡಿದರೂ ಕೆಲ ವಾಹನ ಸವಾರರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ಚಾಲನೆ ಹಲವರ ಅಭ್ಯಾಸವಾಗಿಹೋಗಿದೆ. ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಹೆಚ್ಚೆಂದರೆ ದಂಡ ಹಾಕಬಹುದು ಎಂಬ ಉಡಾಫೆಯ ಮನಸ್ಥಿತಿಗೆ ಜನ ತಲುಪುತ್ತಿದ್ದಾರೆ. ಆದರೆ ಚಿಕ್ಕಮಗಳೂರಿನಲ್ಲಿ ನಡೆದ ಪ್ರಕರಣವೊಂದು ಅಂತವರಿಗೆ ಪಾಠವಾಗುವಂತಿದೆ. ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಶಾಕ್​​ ಕೊಟ್ಟಿದ್ದು, ಟ್ರಾಫಿಕ್ ರೂಲ್ಸ್ ಇರುವ‌ ಬೋರ್ಡ್ ಹಿಡಿದು ನಿಲ್ಲುವಂತೆ ಆದೇಶ ಮಾಡಿದೆ….

Read More

ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ

ಹುಬ್ಬಳ್ಳಿ, ಮಾರ್ಚ್ 17: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸಿದ ಭಾರಿ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆ, ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ದರು. ಈ ಹೋರಾಟದ ಪರಿಣಾಮವಾಗಿ, ರೈಲ್ವೆ ಇಲಾಖೆಯು ಮುಂಬಡ್ತಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಹಲವು ದಿನಗಳಿಂದ ಕರವೇ ಮುಖಂಡರು ಮತ್ತು ಸದಸ್ಯರು…

Read More

ದಿನದ 24 ಗಂಟೆಯೂ ಪ್ರದರ್ಶನ ಕಾಣಲಿದೆ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ (Dhurandhar 2) ರಿಲೀಸ್ ಆಗೋಕೆ ಕೌಂಟ್​ಡೌನ್ ಶುರುವಾಗಿದೆ. ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್ ಆಗುತ್ತಿದ್ದರೂ, ಡಿಸೆಂಬರ್ 18ಕ್ಕೆ ಸಿನಿಮಾಗೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಇದಕ್ಕೆ ಬುಕ್ಕಿಂಗ್ ಜೋರಾಗಿದೆ. ಹೀಗಿರುವಾಗಲೇ ಸಿನಿಮಾ ಹೊಸ ಹೊಸ ದಾಖಲೆಗಳನ್ನು ಬರೆಯಲು ರೆಡಿ ಆಗಿದೆ. ಭಾರತದ ಕೆಲ ಭಾಗದಲ್ಲಿ ದಿನದ 24 ಗಂಟೆಯೂ ‘ಧುರಂಧರ್ 2’ಗೆ ಶೋ ನೀಡಲಾಗುತ್ತಿದೆ! ‘ಧುರಂಧರ್ 2’ ಸಿನಿಮಾದ ಅವಧಿ ಸರಿ ಸುಮಾರು ನಾಲ್ಕು ಗಂಟೆ ಇದೆ. ದಿನಕ್ಕೆ ಐದು ಶೋ ಮಾಡಬೇಕು ಎಂದರೆ…

Read More

ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಮೂಡಬಿದ್ರೆ ಇನ್ಸ್‌ಪೆಕ್ಟರ್?: ಸಂತ್ರಸ್ತೆ ಗಂಭೀರ ಆರೋಪ

ಮಂಗಳೂರು, ಮಾರ್ಚ್​​ 17: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್‌ ವಿರುದ್ಧ ಸಂತ್ರಸ್ತೆಯೊಬ್ಬರು ಗಂಭೀರ  ಆರೋಪಗಳನ್ನು ಮಾಡಿದ್ದಾರೆ. ತಮ್ಮ ಪತಿಯ ಮೇಲೆ ರೌಡಿಶೀಟರ್ ಹಾಕಿ ಬಂಧಿಸುವ ಬೆದರಿಕೆ ಹಾಕಿ ಲಂಚ ಹಾಗೂ ಲೈಂಗಿಕ ಕಿರುಕುಳಕ್ಕೆ ಒತ್ತಾಯಿಸಿದ್ದಾರೆ ಎಂದು ದೂರಿರುವ ಮಹಿಳೆ, ಇನ್ಸ್‌ಪೆಕ್ಟರ್ ಸಂದೇಶ್‌ ಅವರು ತಮ್ಮ ಹುದ್ದೆಗೆ ಬರಲು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಲಂಚ ನೀಡಿದ್ದಾರೆಂದು ಹೇಳಿಕೊಂಡಿದ್ದಾರೆ. ಹೀಗಾಗಿ 25 ಲಕ್ಷ ರೂಪಾಯಿ ನೀಡವ ಅಥವಾ ಲೈಂಗಿಕ ಸಂಪರ್ಕಕ್ಕೆ ಒಪ್ಪುವ ಆಯ್ಕೆಯನ್ನು ಅವರು ತನಗೆ ನೀಡಿದ್ದು, 50,000…

Read More

ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ: ರೊಚ್ಚಿಗೆದ್ದ ಕನ್ನಡಪರ ಹೋರಾಟಗಾರರು

ಹುಬ್ಬಳ್ಳಿ, ಮಾ.17: ರೇಲ್ವೆ ಇಲಾಖೆಯು ನಡೆಸುವ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದಿರುವ ಕುರಿತು ತೀವ್ರ ವಿರೋಧ ವ್ಯಕ್ತವಾಗಿದೆ. ಗೂಡ್ಸ್ ರೈಲ್ವೆ ಮ್ಯಾನೇಜರ್ ಹಾಗೂ LDCE ಹುದ್ದೆಗಳಿಗೆ ನಡೆಯುವ ಮುಂಬಡ್ತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿಲ್ಲದ ಕಾರಣ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ…

Read More

ಲೈಂಗಿಕ ಕಿರುಕುಳ ಆರೋಪಕ್ಕೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಸ್ಪಷ್ಟನೆ: ಮತ್ತೊಂದೆಡೆ ಸುಮೋಟೋ ಕೇಸ್​​ ದಾಖಲಿಸಿದ ಮಹಿಳಾ ಆಯೋಗ

ಮಂಗಳೂರು, ಮಾರ್ಚ್​​ 17:  ತಮ್ಮ ವಿರುದ್ಧದ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಹಣ ಕೇಳಿದ ಆರೋಪಗಳನ್ನು ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜೆ. ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು, ಈ ಎಲ್ಲಾ ಆರೋಪಗಳು ಸುಳ್ಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ಅವರ ಪತಿ ಹೇಳಿದ್ರು. ಹೀಗಾಗಿ ಆಕೆಯನ್ನು ರಕ್ಷಿಸಲು ನಾನು ಕಾಂಪೌಂಡ್ ಹಾರಿದ್ದು ನಿಜ ಎಂದಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿ ಸಂದೇಶ್ ಪಿ.ಜಿ. ವಿರುದ್ಧ ತನಿಖೆಗೆ ಮಂಗಳೂರು ಪೊಲೀಸ್​​ ಕಮಿಷನರ್​​ ಸುಧೀರ್​​ ರೆಡ್ಡಿ ಸೂಚನೆ ನೀಡಿದ್ದಾರೆ….

Read More

ಬೆಂಗಳೂರಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಅಡ್ವಾನ್ಸ್ ಬುಕಿಂಗ್ ಪ್ರಾರಂಭ: ಟಿಕೆಟ್ ಬೆಲೆ ಎಷ್ಟು?

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಮಾರ್ಚ್ 19ರಂದು ಆಗಲಿದೆ. ಸಾಮಾನ್ಯವಾಗಿ ಸಿನಿಮಾ ಬಿಡುಗಡೆಯ ಹಿಂದಿನ ದಿನ ಪ್ರೀಮಿಯರ್ ಶೋಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಮಾರ್ಚ್ 18ರಂದು ‘ಧುರಂಧರ್ 2’ ಪೇಯ್ಡ್ ಪ್ರೀಮಿಯರ್ ಶೋ ಆಯೋಜನೆ ಮಾಡಿರುವ ಕಾರಣ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸ್ಪೆಷನ್ ಶೋಗಳನ್ನು ಮಾತ್ರವೇ ಪ್ರದರ್ಶಿಸುತ್ತಿದೆ. ಬಿಡುಗಡೆಯ ದಿನ ಅಂದರೆ ಮಾರ್ಚ್ 19ರಂದು ಬೆಳಿಗಿನ ಜಾವ ಸಿನಿಮಾದ ಸ್ಪೆಷಲ್ ಶೋಗಳನ್ನು ಆಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ ಸಹ ಅಡ್ವಾನ್ಸ್…

Read More