ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ಕೊಟ್ಟ ಶಿಕ್ಷೆ ಎಂತಹದ್ದು ನೋಡಿ
ಚಿಕ್ಕಮಗಳೂರು, ಮಾರ್ಚ್ 17: ಅದೆಷ್ಟೇ ಜಾಗೃತಿ ಕೆಲಸಗಳನ್ನು ಸಂಚಾರಿ ಪೊಲೀಸರು ಮಾಡಿದರೂ ಕೆಲ ವಾಹನ ಸವಾರರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ಚಾಲನೆ ಹಲವರ ಅಭ್ಯಾಸವಾಗಿಹೋಗಿದೆ. ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಹೆಚ್ಚೆಂದರೆ ದಂಡ ಹಾಕಬಹುದು ಎಂಬ ಉಡಾಫೆಯ ಮನಸ್ಥಿತಿಗೆ ಜನ ತಲುಪುತ್ತಿದ್ದಾರೆ. ಆದರೆ ಚಿಕ್ಕಮಗಳೂರಿನಲ್ಲಿ ನಡೆದ ಪ್ರಕರಣವೊಂದು ಅಂತವರಿಗೆ ಪಾಠವಾಗುವಂತಿದೆ. ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಶಾಕ್ ಕೊಟ್ಟಿದ್ದು, ಟ್ರಾಫಿಕ್ ರೂಲ್ಸ್ ಇರುವ ಬೋರ್ಡ್ ಹಿಡಿದು ನಿಲ್ಲುವಂತೆ ಆದೇಶ ಮಾಡಿದೆ….